ಮೂರ್ಕಲ್ ಆನೆ ಶಿಬಿರ

ವಿಕಿಪೀಡಿಯದಿಂದ, ಇದು ಮುಕ್ತ ಹಾಗೂ ಸ್ವತಂತ್ರ ವಿಶ್ವಕೋಶ

ಮೂರ್ಕಲ್ ಆನೆ ಶಿಬಿರ ನಾಗರಹೊಳೆ ರಾಷ್ಟ್ರೀಯ ಉದ್ಯಾನವನಲ್ಲಿದೆ.

ಅಭಿಮನ್ಯು[ಬದಲಾಯಿಸಿ]

ಆನೆ ಸುಂಕದಕಟ್ಟೆ ಶಿಬಿರದಲ್ಲಿದೆ. ಇದರ ವಯಸ್ಸು ೪೪. ಎತ್ತರ ೨.೬೬ ಮೀಟರ್. ಕಾಡಾನೆಯನ್ನು ಹಿಡಿದು ಪಳಗಿಸುವ ಹಾಗೂ ಚಿಕಿತ್ಸೆ ನೀಡುವ ಕಾರ್ಯದಲ್ಲಿ ನೈಪುಣ್ಯತೆ ಪಡೆದಿರುವ ಅಭಿಮನ್ಯು ಎಂತಹ ಬಲಿಷ್ಠ ಆನೆಯನ್ನು ಕೂಡ ಎದುರಿಸಿ ಹಿಡಿತದಲ್ಲಿಡುವ ಸಾಮರ್ಥ್ಯ ಹೊಂದಿದೆ. ಇದನ್ನು ೧೯೭೭ರಲ್ಲಿ ಕೊಡಗಿನ ಹೆಬ್ಬಳ್ಳ ಅರಣ್ಯ ಪ್ರದೇಶದಲ್ಲಿ ಖೆಡ್ಡಾದ ಮೂಲಕ ಸೆರೆಹಿಡಿಯಲಾಗಿತ್ತು. ೧೨ ಬಾರಿ ಮೈಸೂರು ದಸರಾ ಮಹೋತ್ಸವದಲ್ಲಿ ಭಾಗವಹಿಸಿರುವ ಅಭಿಮನ್ಯು, ಅರಮನೆ ವಾದ್ಯ ಸಂಗೀತದ ಗಾಡಿ ಎಳೆಯುವ ಜವಾಬ್ದಾರಿಯನ್ನು ನಿರ್ವಹಿಸುತ್ತಿದೆ.


ಇವನ್ನೂ ನೋಡಿ[ಬದಲಾಯಿಸಿ]