ಮೆಹೆಂದಿ

ವಿಕಿಪೀಡಿಯ ಇಂದ
ಇಲ್ಲಿಗೆ ಹೋಗು: ಸಂಚರಣೆ, ಹುಡುಕು
Latest Mehndi Design

ಮದರಂಗಿ(ಮೆಹೆಂದಿ): ಮದುವೆಯ ಸಂದರ್ಭದಲ್ಲಿ ಮದುಮಗ ಅಥವಾ ಮದುಮಗಳಿಗೆ ಕೈಗೆ ಹಚ್ಚುವ ಪ್ರಾಕೃತಿಕ ಬಣ್ಣ.[೧] ಎಂದರೆ ಇದೊಂದು ಎಲ್ಲರಿಗೂ ಇಷ್ಟವಾಗುವ ನಿಸರ್ಗದ ಒಂದು ಗಿಡವಾಗಿದೆ. ಔಷಧೀಯ ಗುಣವುಳ್ಳ ಗಿಡವಾಗಿದ್ದು, ಇದರ ಸೊಪ್ಪನ್ನು ಔಷಧಕ್ಕೆ ಬಳಸುತ್ತಾರೆ. ಭಾರತೀಯ ಸಂಪ್ರದಾಯದಲ್ಲಿ ಕೈಗಳಿಗೆ ಬಣ್ಣವನ್ನು ಹಚ್ಚಿಕೊಳ್ಳುವ ರೂಢಿ ಇದೆ.[೨]

ಮದರಂಗಿ ತಯಾರಿಕೆ[ಬದಲಾಯಿಸಿ]

ಮದರಂಗಿಯನ್ನು ಕೈಗಳಿಗೆ ಹಚ್ಚಿಕೊಳ್ಳುವುದಾದರೆ, ಮದರಂಗಿಯ ಸೊಪ್ಪು, ನಿಂಬೆಹಣ್ಣಿನ ರಸವನ್ನು ಸೇರಿಸಿ ಚೆನ್ನಾಗಿ ಅರೆದು, ಕೈಗಳಿಗೆ ಹಚ್ಚಬೇಕು. ವಿಜ್ಞಾನ ಮುಂದುವರಿದ ಹಾಗೆ ಜನರು ಮದರಂಗಿಯನ್ನು ಬೇರೆ ವಿಧಾನದಲ್ಲಿ ಸುಲಭವಾಗಿ ತಯಾರಿಸಿಕೊಳ್ಳಲು ದಾರಿಯನ್ನು ಕಂಡುಕೊಂಡಿದ್ದಾರೆ. ಹೇಗೆಂದರೆ,ಮದರಂಗಿ ಸೊಪ್ಪನ್ನು ಒಣಗಿಸಿ ಪುಡಿಮಾಡಿ ಅದಕ್ಕೆ ನಿಂಬೆಹಣ್ಣಿನ ರಸವನ್ನು ಸೇರಿಸಿ ಕಲಸಿ ಹಚ್ಚುವ ವಿಧಾನವನ್ನು ಬಳಸಿದ್ದಾರೆ. ಹೀಗೆ ಮದರಂಗಿಯಲ್ಲಿ ಚಿತ್ರಗಳನ್ನು ಬಿಡಿಸಿಕೊಳ್ಳುವ ರೂಢಿಯನ್ನು ಮಾಡಿಕೊಂಡಿದ್ದಾರೆ. ಹೀಗೆ ಸಣ್ಣ ಸಣ್ಣ ಚಿತ್ರಗಳನ್ನು ಬರೆದು ಅದಕ್ಕೆ ಡಿಸೈನ್ ಎಂದು ಹೆಸರಿಸಿಕೊಂಡಿದ್ದಾರೆ. ಮದರಂಗಿಯ ಡಿಸೈನ್ ಗಳಿಗೆ ಕೆಲವು ಉದಹರಣೆ ಎಂದರೆ, ಇಂಡಿಯನ್ ಡಿಸೈನ್, ಅರೇಬಿಕ್ ಡಿಸೈನ್, ಶೈಲಿ ಅರೇಬಿಕ್ ಡಿಸೈನ್ ಇತ್ಯಾದಿ... ಈ ರೀತಿಯ ಡಿಸೈನ್ ಗಳ ಕೆಲವು ಚಿತ್ರಗಳನ್ನು ನಾವು ಕಾಣಬಹುದಾಗಿದೆ.[೩]

ಮದರಂಗಿ ಬ‍ಣ್ಣದ ಗುಟ್ಟು[ಬದಲಾಯಿಸಿ]

ಹಚ್ಚಿದ ಮದರಂಗಿಯನ್ನು ತುಂಬಾ ರಂಗಾಗಿಸಲು ಹಲವು ವಿಧಾನಗಳಿವೆ.

  1. ಒಂದು ವಿಧಾನ : ಸ್ವಲ್ಪ ಏಲಕ್ಕಿಯನ್ನು ಹುರಿದು ಅದರ ಶಾಖ ಕೊಡಬೇಕು.
  2. ಎರಡನೇ ವಿಧಾನ : ನಿಂಬೆ ಹಣ್ಣಿನ ರಸವನ್ನು ಹಚ್ಚಬೇಕು.
  3. ಮೂರನೇ ವಿಧಾನ : ಸ್ವಲ್ಪ ಸಕ್ಕರೆಯನ್ನು ನೀರಿನಲ್ಲಿ ಕರಗಿಸಿ, ಆ ನೀರನ್ನು ಹಚ್ಚಬೇಕು.

ಚಿತ್ರೊ ಸಮೂಹೊ[ಬದಲಾಯಿಸಿ]

ಬಾಹ್ಯ ಕೊಂಡಿ[ಬದಲಾಯಿಸಿ]

  1. https://www.youtube.com/watch?v=AJkJfsmlv-I
  2. https://en.wikipedia.org/wiki/Mehndi

ಉಲ್ಲೇಖ[ಬದಲಾಯಿಸಿ]

  1. http://dailytimes.com.pk/life-and-style/30-Apr-16/from-mehndi-to-marriage-vows-bipasha-and-karan-singh-grovers-wedding-celebrations-in-full-swing
  2. http://www.fashionsrunway.com/indian-bridal-mehndi-designs/
  3. https://in.pinterest.com/explore/mehndi-designs/
"https://kn.wikipedia.org/w/index.php?title=ಮೆಹೆಂದಿ&oldid=675162" ಇಂದ ಪಡೆಯಲ್ಪಟ್ಟಿದೆ