ವಿಷಯಕ್ಕೆ ಹೋಗು

ರಾಸ್ ಬಿಹಾರಿ ಬೋಸ್

ವಿಕಿಪೀಡಿಯದಿಂದ, ಇದು ಮುಕ್ತ ಹಾಗೂ ಸ್ವತಂತ್ರ ವಿಶ್ವಕೋಶ
(ರಾಶ್‌ಬಿಹಾರಿ ಬಸು ಇಂದ ಪುನರ್ನಿರ್ದೇಶಿತ)
ರಾಸ್ ಬಿಹಾರಿ ಬೋಸ್
Bornಮೇ ೨೫, ೧೮೮೬
ಪಶ್ಚಿಮ ಬಂಗಾಳದ ಬುರ್ದ್ವಾನಿನ ಸುಬಲ್ದಹಾ ಹಳ್ಳಿಯಲ್ಲಿ
Diedಜನವರಿ ೨೧, ೧೯೪೫
Organisation(s)ಜುಗಂತರ್, ಇಂಡಿಯನ್ ಇಂಡಿಪೆಂಡೆನ್ಸ್ ಲೀಗ್, ಇಂಡಿಯನ್ ನ್ಯಾಷನಲ್ ಆರ್ಮಿ
Movementಭಾರತೀಯ ಸ್ವಾತಂತ್ರ್ಯ ಹೋರಾಟ

ರಾಸ್ ಬಿಹಾರಿ ಬೋಸ್ (ಮೇ ೨೫, ೧೮೮೬ - ಜನವರಿ ೨೧, ೧೯೪೫) ಭಾರತದ ಕ್ರಾಂತಿಕಾರಿ ಸ್ವಾತಂತ್ರ್ಯ ಹೋರಾಟಗಾರರಲ್ಲಿ ಪ್ರಮುಖರು.

ಪ್ರಾರಂಭಿಕ ಜೀವನ

[ಬದಲಾಯಿಸಿ]

ಬೋಸ ರು ಮೇ ೨೫, ೧೮೮೬ರಂದು ಪಶ್ಚಿಮ ಬಂಗಾಳದ ಬುರ್ದ್ವಾನಿನ ಸುಬಲ್ದಹಾ ಹಳ್ಳಿಯಲ್ಲಿ ಜನಿಸಿದರು.[] ಬೋಸರು ತಮ್ಮ ಸಣ್ಣ ವಯಸ್ಸಿನಲ್ಲೇ ರೆವಲ್ಯೂಷನರಿ ಪಾರ್ಟಿಯನ್ನು ಸೇರಿದರು.

ಕ್ರಾಂತಿಕಾರಿ ಚಟುವಟಿಕೆ

[ಬದಲಾಯಿಸಿ]

ದೆಹಲಿ, ಉತ್ತರ ಪ್ರದೇಶ ಮತ್ತು ಪಂಜಾಬುಗಳಲ್ಲಿ ರಾಸ್ ಬಿಹಾರಿ ಬೋಸರು ಹಲವಾರು ಕ್ರಾಂತಿಕಾರಿಗಳೊಡನೆ ಬ್ರಿಟಿಷರ ವಿರುದ್ಧದ ಭೂಗತ ಚಟುವಟಿಕೆಗಳಲ್ಲಿ ನಿರತರಾಗಿದ್ದರು.[] ಭಾರತದ ವೈಸರಾಯ್ ಆಗಿದ್ದ ಲಾರ್ಡ್ ಹಾರ್ಡಿಂಜನ ಮೆರವಣಿಗೆಯ ಸಂದರ್ಭದಲ್ಲಿ ದೆಹಲಿಯ ಚಾಂದಿನಿ ಚೌಕದಲ್ಲಿ ಡಿಸೆಂಬರ್ ೨೩, ೧೯೧೨ರಂದು ಬಾಂಬ್ ಎಸೆದಾಗ ರಾಸ್ ಬಿಹಾರಿ ಬೋಸರ ಹೆಸರು ಪ್ರಖ್ಯಾತಿ ಪಡೆಯಿತು.

ಈ ಬಾಂಬ್ ಎಸೆದ ನಂತರದಲ್ಲಿ ಬೋಸರು ಚಾಣಾಕ್ಷತನದಿಂದ ಪೋಲೀಸರ ಕಣ್ಣು ತಪ್ಪಿಸಿಕೊಂಡು ವಾರಾಣಾಸಿಯಲ್ಲಿ ಅವಿತು, ಗದರ್ ಪಕ್ಷದ ಕಾರ್ಯಕರ್ತರೊಡನೆ ಏಕಕಾಲದಲ್ಲಿ ಉತ್ತರ ಭಾರತದಲ್ಲೆಲ್ಲಾ ಧ್ವನಿಸುವಂತೆ ವಿವಿಧ ಕ್ರಾಂತಿಕಾರಕ ಹೋರಾಟಗಳಿಗೆ ಸೂತ್ರಧಾರಿಯಾದರು.

ಜಪಾನಿನಲ್ಲಿ

[ಬದಲಾಯಿಸಿ]

ರಾಸ್ ಬಿಹಾರಿ ಬೋಸರ ಈ ಎಲ್ಲಾ ಯತ್ನಗಳನ್ನೂ ಬ್ರಿಟಿಷರು ಸದೆಬಡಿದು ಗದರ್ ಕ್ರಾಂತಿಕಾರರಲ್ಲಿ ಬಹಳಷ್ಟು ಜನರನ್ನು ಶಿಕ್ಷೆಗೆ ಒಳಪಡಿಸಿದರಾದರೂ ರಾಸ್ ಬಿಹಾರಿ ಬೋಸರನ್ನು ಮಾತ್ರ ಹಿಡಿಯಲಾಗಲಿಲ್ಲ. ಬ್ರಿಟಿಷರಿಗೆ ಚಳ್ಳೆಹಣ್ಣು ತಿನ್ನಿಸಿ ಜಪಾನಿಗೆ ತೆರಳಿದ್ದ ರಾಸ್ ಬಿಹಾರಿ ಬೋಸರ ಬಗ್ಗೆ ಆತಂಕಗೊಂಡ ಬ್ರಿಟಿಷರು ಅಂತಾರಾಷ್ಟ್ರೀಯ ಮಟ್ಟದಲ್ಲಿ ಆತನ ಬಂಧನಕ್ಕೆ ಯತ್ನಿಸಿಯೂ ವಿಫಲರಾದರು. ಇತ್ತ ಜಪಾನಿನಲ್ಲಿ ಭೂಗತನಾಗಿದ್ದುಕೊಂಡಿದ್ದ ಬೋಸರು ಬ್ರಿಟನ್ ವಿರೋಧಿ ದೇಶಗಳ ಸಖ್ಯ ಬೆಳೆಸಿಕೊಳ್ಳತೊಡಗಿದರು. ಜಪಾನಿನಲ್ಲಿ ಹಿಂದೂ ಮಹಸಭೆ ಶಾಖೆಯನ್ನು ಸ್ಥಾಪಿಸಿ, ಅದರವ ಅಧ್ಯಕ್ಷತೆ ವಹಿಸಿಕೊಂಡರು. ಇವರು ಸ್ಥಾಪಿಸಿದ ಇಂಡಿಯನ್ ನ್ಯಾಶನಲ್ ಆರ್ಮಿಯನ್ನು ಬಳಿಕ ಸುಭಾಷ್ ಚಂದ್ರ ಬೋಸರು ಮುಂದುವರಿಸಿದರು.[]

ಇಂಡಿಯನ್ ಇಂಡಿಪೆಂಡನ್ಸ್ ಲೀಗ್

[ಬದಲಾಯಿಸಿ]

ಮಾರ್ಚ್ ೧೯೪೨ರಲ್ಲಿ ಇಂಡಿಯನ್ ಇಂಡಿಪೆಂಡೆಂಟ್ಸ್ ಲೀಗ್ ಸ್ಥಾಪನೆಗಾಗಿ ಬೋಸರು ಒಂದು ಸಮಾವೇಶವನ್ನು ನಡೆಸಿದರು. ಈ ಸಂಸ್ಥೆಯ ಮೊದಲ ಅಧಿವೇಶನ ಜೂನ್ ೧೯೪೨ರಲ್ಲಿ ಬ್ಯಾಂಕಾಕಿನಲ್ಲಿ ಜರುಗಿತು. ಈ ಸಮಾವೇಶದಲ್ಲಿ ಅವರಿಗೆ ಇಂಡಿಯನ್ ನ್ಯಾಷನಲ್ ಆರ್ಮಿ ಸ್ಥಾಪನೆಗಾಗಿನ ಅಧಿಕಾರವನ್ನು ನೀಡಲಾಯಿತು. ಈ ನಿಟ್ಟಿನಲ್ಲಿ ಅವರು ಜಪಾನಿನಲ್ಲಿದ್ದ ಯುದ್ಧ ಖೈದಿಗಳನ್ನು ಬ್ರಿಟಿಷ್ ಸಾಮ್ರಾಜ್ಯದ ವಿರುದ್ಧ ಹೋರಾಟದ ಸೈನಿಕರನ್ನಾಗಿ ಸಂಘಟಿಸಿದರು. ೧೯೪೩ರಲ್ಲಿ ಸಿಂಗಪೂರಿನಲ್ಲಿ ಇಂಡಿಯನ್ ನ್ಯಾಷನಲ್ ಆರ್ಮಿಯ ನಾಯಕತ್ವವನ್ನು ರಾಸ್ ಬಿಹಾರಿ ಬೋಸರು ಸುಭಾಷ್ ಚಂದ್ರ ಬೋಸರಿಗೆ ವರ್ಗಾಯಿಸಿದರು.

ಸಂಗಾತಿಗಳು

[ಬದಲಾಯಿಸಿ]

ರಾಸ್ ಬಿಹಾರಿ ಬೋಸರು ತೊಷಿಕೋ ಎಂಬ ಜಪಾನಿನ ಮಹಿಳೆಯನ್ನು ವರಿಸಿದ್ದರು.

ರಾಸ್ ಬಿಹಾರಿ ಬೋಸರ ಕ್ರಾಂತಿಕಾರ ಸಂಘಟನೆಯಲ್ಲಿ ಸುಭಾಷ್ ಚಂದ್ರ ಬೋಸರಲ್ಲದೆ ಅರವಿಂದ್ ಘೋಷ್, ಖುದಿರಾಮ್ ಬೋಸ್ ಬಾಘಾ ಜತಿನ್ ಮುಂತಾದ ಪ್ರಮುಖರಿದ್ದರು.[]

ಸಂದ ಗೌರವ

[ಬದಲಾಯಿಸಿ]

ಲೇಖಕ, ಪತ್ರಕರ್ತರೂ ಆಗಿದ್ದ ರಾಸ್ ಬಿಹಾರಿ ಬೋಸರಿಗೆ ಜಪಾನ್ ಸರ್ಕಾರ Order of the Rising Sun ಎಂಬ ಗೌರವ ನೀಡಿತ್ತು.

ವಿದಾಯ

[ಬದಲಾಯಿಸಿ]

ದೇಶಕ್ಕಾಗಿ ತನ್ನ ಇಡೀ ಜೀವನವನ್ನು ಮುಡಿಪಾಗಿಟ್ಟು ಸ್ವಾರ್ಥರಹಿತ, ಕಷ್ಟಕರವಾದ ಕ್ರಾಂತಿಕಾರಕ ಮಾರ್ಗದಲ್ಲಿ ಬದುಕಿದ .ರಾಸ್ ಬಿಹಾರಿ ಬೋಸರು ಜನವರಿ ೨೧, ೧೯೪೫ರಂದು ಟೋಕಿಯೋದಲ್ಲಿ ನಿಧನರಾದರು.

ಉಲ್ಲೇಖಗಳು

[ಬದಲಾಯಿಸಿ]
  1. Sahai, Krishna N. (2001). Ambasth Kayastha. Commonwealth Publisher. p. 5. During the upsurge of national movement for freedom of India, Kayasthas were in the forefront . The great revolutionary Rash Behari Bose, Netaji Subhash Bose
  2. Uma Mukherjee (1966). Two great Indian revolutionaries: Rash Behari Bose & Jyotindra Nath Mukherjee. Firma K. L. Mukhopadhyay. p. 101.
  3. https://www.dailyo.in/politics/rashbehari-bose-indian-freedom-struggle-india-japan-ties-british-raj-mahatma-gandhi-toshiko-soma-netaji-subhas-chandra-bose-the-standard-bearer/story/1/10259.html. {{cite web}}: Missing or empty |title= (help)
  4. Uma Mukherjee (1966). Two great Indian revolutionaries: Rash Behari Bose & Jyotindra Nath Mukherjee. Firma K. L. Mukhopadhyay. p. 119.