ರಾಷ್ಟ್ರೀಯ ಕ್ರೀಡಾ ದಿನ
ಗೋಚರ
ರಾಷ್ಟ್ರೀಯ ಕ್ರೀಡಾ ದಿನ | |
---|---|
ಆಚರಿಸಲಾಗುತ್ತದೆ | ಭಾರತ |
ರೀತಿ | ರಾಷ್ಟ್ರೀಯ |
ದಿನಾಂಕ | ಆಗಸ್ಟ್ ೨೯ |
ಆವರ್ತನ | ವಾರ್ಷಿಕ |
ಭಾರತದ ಶ್ರೇಷ್ಠ ಹಾಕಿ ಆಟಗಾರರಾಗಿದ್ದ ಮೇಜರ್ ಧ್ಯಾನ್ ಚಂದ್ ರವರ ಸ್ಮರಣಾರ್ಥ ಪ್ರತಿ ವರ್ಷ ಆಗಸ್ಟ್ ೨೯ ರಂದು ರಾಷ್ಟ್ರೀಯ ಕ್ರೀಡಾ ದಿನವನ್ನು ಆಚರಿಸಲಾಗುತ್ತದೆ. ರಾಷ್ಟ್ರೀಯ ಕ್ರೀಡಾ ದಿನವನ್ನು ಭಾರತದಲ್ಲಿ ಮೊದಲ ಬಾರಿಗೆ 2012 ರಲ್ಲಿ ರಾಷ್ಟ್ರೀಯ ದಿನಗಳ ಪಟ್ಟಿಯಲ್ಲಿ ಸೇರಿಸಲಾಯಿತು.
ಹರಿಯಾಣ, ಪಂಜಾಬ್ ಮತ್ತು ಕರ್ನಾಟಕ ಇತರ ರಾಜ್ಯಗಳಲ್ಲಿ, ದೈಹಿಕ ಚಟುವಟಿಕೆಗಳು ಮತ್ತು ಜೀವನದಲ್ಲಿ ಕ್ರೀಡೆಗಳ ಮಹತ್ವದ ಬಗ್ಗೆ ಜಾಗೃತಿ ಮೂಡಿಸುವ ಉದ್ದೇಶದಿಂದ ವಿವಿಧ ಕ್ರೀಡಾಕೂಟಗಳು ಮತ್ತು ಸೆಮಿನಾರ್‌ಗಳನ್ನು ಆಯೋಜಿಸುತ್ತವೆ.[೧]
ರಾಷ್ಟ್ರೀಯ ಕ್ರೀಡಾ ದಿನದಂದು, ಭಾರತ ಸರ್ಕಾರವು ಕ್ರೀಡಾಪಟುಗಳನ್ನು ಮೇಜರ್ ಧ್ಯಾನ್‌ಚಂದ್ ಖೇಲ್ ರತ್ನ ಪ್ರಶಸ್ತಿ, ಅರ್ಜುನ ಪ್ರಶಸ್ತಿ ಮತ್ತು ದ್ರೋಣಾಚಾರ್ಯ ಪ್ರಶಸ್ತಿಯೊಂದಿಗೆ ಗೌರವಿಸುತ್ತದೆ. ರಾಷ್ಟ್ರಪತಿ ಭವನದಲ್ಲಿ ಪ್ರತಿವರ್ಷ ವಿಶೇಷ ಸಮಾರಂಭವನ್ನು ನಡೆಸಲಾಗುತ್ತದೆ ಮತ್ತು ಭಾರತದ ರಾಷ್ಟ್ರಪತಿಗಳು ಈ ಪ್ರಶಸ್ತಿಗಳನ್ನು ನೀಡುತ್ತಾರೆ.
ಉಲ್ಲೇಖಗಳು
[ಬದಲಾಯಿಸಿ]- ↑ "National Sports Day: More than just a day of celebration in India". Retrieved 18 August 2021.