ಲೋಕಾಪುರ
ಲೋಕಾಪುರ
ಲೋಕಾಪುರ | |
---|---|
village | |
Population (೨೦೧೨) | |
• Total | ೧೫೦೦೦ |
ಲೋಕಾಪುರ ಒಂದು ಗ್ರಾಮ ಹಾಗೂ ಪುಣ್ಯಕ್ಷೇತ್ರ.ಇದು ಕರ್ನಾಟಕ ರಾಜ್ಯದ ಬಾಗಲಕೋಟ ಜಿಲ್ಲೆಯ ಮುಧೋಳ ತಾಲ್ಲೂಕಿನಲ್ಲಿದೆ. ಲೋಕಾಪುರ ಗ್ರಾಮವು ಜಿಲ್ಲಾ ಕೇಂದ್ರ ಬಾಗಲಕೋಟದಿಂದ ಸುಮಾರು ೩೫ ಕಿ. ಮಿ. ದೂರ ಇದೆ.
ಚರಿತ್ರೆ
[ಬದಲಾಯಿಸಿ]ಲೋಕಾಪುರಯಲ್ಲಿ ಒಳ್ಳೆಯ ಶಿಕ್ಷಣ ಕೇಂದ್ರ, ವ್ಯಾಪಾರ ಕೇಂದ್ರ, ಹಣಕಾಸು ಕೇಂದ್ರ,ನೆಮ್ಮದಿ ಕೇಂದ್ರ, ಬಿ.ಎಸ್.ಎನ್.ಎಲ್ ಕಚೇರಿ, ರೈತ ಸಂಪರ್ಕ ಕೇಂದ್ರ, ಬಸ್ ನಿಲ್ದಾಣ, ಅಂಚೆ ಕಚೇರಿ,ಪ್ರಾಥಮಿಕ ಆರೋಗ್ಯ ಕೇಂದ್ರ, ಪ್ರಾಥಮಿಕ ಪಶು ಆರೋಗ್ಯ ಕೇಂದ್ರ, ಬ್ಯಾಂಕಗಳು ಹಾಗೂ ಇತರೆ ಕಚೇರಿಗಳಿವೆ.
=='ದೇವಾಲಯಗಳು ಶ್ರೀ ಜ್ಞಾನೇಶ್ವರ ಮಠ, ಶ್ರೀ ಮಹಾಲಕ್ಷ್ಮಿದೇವಸ್ಥಾನ,ಪಾಂಡುರಂಗ - ವಿಠ್ಠಲ ದೇವಸ್ಥಾನ ಶ್ರೀ ಹಣಮಂತ ದೇವಾಲಯಗಳನ್ನು ಶ್ರೀ ಕಾಶೀಲಿಂಗೇಶ್ವರ ದೇವಸ್ಥಾನ ಹಾಗೂ ಶ್ರೀ ಲೋಕೇಶ್ವರ ದೇವಸ್ಥಾನ ಶ್ರೀ ದುರ್ಗಾದೇವಿ ದೇವಸ್ಥಾನ ಇವೆ.
ಮಸೀದಿಗಳು
[ಬದಲಾಯಿಸಿ]ಮುಸ್ಲಿಂ ಸಮುದಾಯದ ದರ್ಗಾ ಹಾಗೂ ಮಸೀದಿ ಇದೆ.
ನೀರಾವರಿ
[ಬದಲಾಯಿಸಿ]ಗ್ರಾಮದ ಪ್ರತಿಶತ ೫೦ ಭಾಗ ಭೂಮಿ ತೆರದ ಬಾವಿ, ಕೊಳವೆ ಬಾವಿಯಿಂದ ನೀರಾವರಿ ಇದ್ದು ಪ್ರಮುಖವಾಗಿ ಕಬ್ಬು , ಮೆಕ್ಕೆಜೋಳ, ಜೋಳ, ಉಳ್ಳಾಗಡ್ಡಿ (ಈರುಳ್ಳಿ), ನಿಂಬೆಹಣ್ಣು , ಪಪ್ಪಾಯ, ಅರಿಶಿನ, ನೆಲಕಡಲೆ, ಶೇಂಗಾ(ಕಡಲೆಕಾಯಿ), ಸೂರ್ಯಕಾಂತಿ , ದ್ರಾಕ್ಷಿ , ದಾಳಿಂಬೆ, ಗೋಧಿ ಹಾಗೂ ಇತರೆ ಬೆಳೆಗಳನ್ನು ಬೆಳೆಯುತ್ತಾರೆ.
ಹಬ್ಬಗಳು
[ಬದಲಾಯಿಸಿ]ಪ್ರತಿವರ್ಷ ಶ್ರೀ ಕ್ಷೇತ್ರ ಜ್ಞಾನೇಶ್ವರ ಮಠದ ಆರಾಧನ ಮಹೋತ್ಸವ ಲಕ್ಷ್ಮೀ ಜಾತ್ರಾ ಮಹೋತ್ಸ ವ, ಶ್ರೀ ಪಾಂಡುರಂಗ ಸಪ್ತಾಹ(ದಿಂಡಿ), ಕಾರ ಹುಣ್ಣುಮೆ, ಯುಗಾದಿ, ದಸರಾ, ದೀಪಾವಳಿ, ನಾಗರ ಪಂಚಮಿ, ಉರಸು ಹಾಗೂ ಮೊಹರಮ್ ಹಬ್ಬಗಳನ್ನು ಆಚರಿಸುತ್ತಾರೆ.
ಶಿಕ್ಷಣ
[ಬದಲಾಯಿಸಿ]- ಸರಕಾರಿ ಹಿರಿಯ ಗಂಡು ಮಕ್ಕಳ ಪ್ರಾಥಮಿಕ ಶಾಲೆ
- ಸರಕಾರಿ ಹಿರಿಯ ಹೆಣ್ಣು ಮಕ್ಕಳ ಪ್ರಾಥಮಿಕ ಶಾಲೆ
- ಸರಕಾರಿ ಹಿರಿಯ ಉರ್ದು ಪ್ರಾಥಮಿಕ ಶಾಲೆ
- ಪ್ರೌಡ ಶಾಲೆ
- ಪದವಿಪೂರ್ವ ಕಲಾ ಮಹಾವಿದ್ಯಾಲಯ
- ಸರ್ಕಾರಿ ಕಲಾ ಮಹಾವಿದ್ಯಾಲಯ
- ಕೈಗಾರಿಕಾ ತರಬೇತಿ ಕೇಂದ್ರ
ಆರಕ್ಷಕ (ಪೋಲೀಸ್) ಠಾಣೆ
[ಬದಲಾಯಿಸಿ]ಗ್ರಾಮದಲ್ಲಿ ಪೋಲೀಸ್ ಠಾಣೆ ಇದೆ.
- Pages with non-numeric formatnum arguments
- Orphaned articles from ಡಿಸೆಂಬರ್ ೨೦೧೫
- All orphaned articles
- Short description with empty Wikidata description
- Pages using infobox settlement with unknown parameters
- Pages using infobox settlement with missing country
- Pages using infobox settlement with no map
- Pages using infobox settlement with no coordinates
- ಬಾಗಲಕೋಟೆ ಜಿಲ್ಲೆ