ವರಾಹ ಪುರಾಣ

|
ಐತರೇಯ · ಬೃಹದಾರಣ್ಯಕ · ಈಶಾವಾಸ್ಯ · ತೈತ್ತಿರೀಯ · ಛಾಂದೋಗ್ಯ · ಕೇನ · ಮುಂಡಕ · ಮಾಂಡೂಕ್ಯ · ಕಠ · ಪ್ರಶ್ನ · ಶ್ವೇತಾಶ್ವತರ |
|
ಗರುಡ · ಅಗ್ನಿ . ನಾರದ . ಪದ್ಮ . ಸ್ಕಾಂದ . ಭವಿಷ್ಯ . ಬ್ರಹ್ಮ . ಭಾಗವತ . ಬ್ರಹ್ಮವೈವರ್ತ . ಬ್ರಹ್ಮಾಂಡ . ವಾಯು . ಲಿಂಗ . ವಿಷ್ಣು . ವಾಮನ . ಮಾರ್ಕಂಡೇಯ . ವರಾಹ . ಕೂರ್ಮ . ಮತ್ಸ್ಯ |
|
ಭಗವದ್ಗೀತೆ · ಆಗಮ· ಶೂನ್ಯ ಸಂಪಾದನ· ಶ್ರೀ ಸಿದ್ಧಾಂತ ಶಿಖಾಮಣಿ · ವೀರಶೈವ ಪುರಾಣ · ವಿಷ್ಣು ಸಹಸ್ರನಾಮ . ಬಸವರಾಜ ವಿಜಯಂ |

ವರಾಹ ಪುರಾಣ ಇದರಲ್ಲಿ ವಿಷ್ಣು ವರಾಹ ಅವತಾರ ಎತ್ತಿ ಜಗತ್ತಿನಲ್ಲಿ ಮಾಡಿದ ಲೀಲೆಗಳ ವಿವರ ಇದೆ. ವಿಷ್ಣು ವರಾಹಾವತಾರವನ್ನು ತಾಳಿ ಭೂದೇವಿಯನ್ನು ಉದ್ಧರಿಸುವ ಅಂಶವನ್ನು ಹೇಳುತ್ತದೆ. ಇದರಲ್ಲಿ ಸೃಷ್ಟಿಕ್ರಮ, ವಂಶ ವೃಕ್ಷಗಳ ವಿಷಯಗಳು ಬಂದಿದ್ದರೂ ಒಟ್ಟಿನಲ್ಲಿ ಇದು ವಿಷ್ಣುವಿನ ಸ್ತೋತ್ರ, ಪ್ರಾರ್ಥನೆ, ಪೂಜೆ ಪುರಸ್ಕಾರಗಳ ಬಗೆಯನ್ನು ಹೇಳಲು ಮೀಸಲಾದ ಪುರಾಣ. ಹೀಗಿದ್ದರೂ ಇದರಲ್ಲಿ ಶಿವ, ದುರ್ಗೆಯರ ಕಥೆಗಳಿವೆ. ಮಾತೃದೇವತೆಗಳ ಹಾಗೂ ಇತರ ಸ್ತ್ರೀದೇವತೆಗಳ ವಿಸ್ತಾರವನ್ನು ಅನೇಕ ಅಧ್ಯಾಯಗಳಲ್ಲಿ ವಿಶದಪಡಿಸಲಾಗಿದೆ. ಗಣೇಶೋತ್ಪತ್ತಿ, ಗಣೇಶಸ್ತೋತ್ರಗಳೂ ಇಲ್ಲಿವೆ. ಇಷ್ಟೇ ಅಲ್ಲ, ಶ್ರಾದ್ಧ, ಪ್ರಾಯಶ್ಚಿತ್ತ, ದೇವತಾಮೂರ್ತಿ ಪ್ರತಿಷ್ಠೆ, ಮಥುರಾಮಾಹಾತ್ಮ್ಯಗಳೂ, ನಚಿಕೇತ ವೃತ್ತಾಂತ. ಸ್ವರ್ಗ, ನರಕವರ್ಣನೆ ಮುಂತಾದವೂ ಪುರಾಣಕಕ್ಷೆಯಲ್ಲಿ ಬಂದಿವೆ. ಶ್ಲೋಕಸಂಖ್ಯೆ 24000ವೆಂದು ಪ್ರಸಿದ್ಧಿಯಿದ್ದರೂ ವಾಸ್ತವಿಕವಾಗಿ ಇದರಲ್ಲಿ 10000ಕ್ಕಿಂತ ಬಹಳ ಹೆಚ್ಚಾಗಿಲ್ಲ. ಪ್ರ.ಶ. 8ನೆಯ ಶತಮಾನದಲ್ಲಿದ್ದ ಇದರ ಮೂಲ ಸ್ವರೂಪ ಅನುಪಲಬ್ಧ. ಸದ್ಯದ ಸ್ವರೂಪದ ಕಾಲ ಪ್ರ.ಶ. 12ನೆಯ ಶತಮಾನದ ಆದಿಭಾಗವೆನ್ನಬಹುದು. ಇದು ಮೂಲದ ಕೆಲ ಅಧ್ಯಾಯಗಳನ್ನೊಳಗೊಂಡಿದೆ.
ಬಾಹ್ಯ ಸಂಪರ್ಕಗಳು
[ಬದಲಾಯಿಸಿ]ಉಲ್ಲೇಖಗಳು
[ಬದಲಾಯಿಸಿ]
{{