ವಿಕಿಪೀಡಿಯ:ಇತಿಹಾಸದಲ್ಲಿ ಈ ದಿನ/ಅಕ್ಟೋಬರ್
ಗೋಚರ
- ಅಕ್ಟೋಬರ್ ೧ : ವಿಶ್ವ ವೃದ್ಧರ ದಿನ, ವನ್ಯಜೀವಿ ಸಪ್ತಾಹ ದಿನ, ವಿಶ್ವ ಸಂಗೀತ ದಿನ, ರಾಷ್ಟ್ರೀಯ ಸ್ವಯಂಪ್ರೇರಿತ ರಕ್ತ ದಾನ ದಿನ.
- ಅಕ್ಟೋಬರ್ ೨ : ವಿಶ್ವ ಸಸ್ಯಾಹಾರಿಗಳ ದಿನ, ಗಾಂಧೀಜಿಯವರ ಜನ್ಮದಿನಾಚರಣೆ.
- ಅಕ್ಟೋಬರ್ ೨ : ಲಾಲ್ ಬಹಾದ್ದೂರ್ ಶಾಸ್ತ್ರಿಯವರ ಜನ್ಮದಿನಾಚರಣೆ.
- ಅಕ್ಟೋಬರ್ ೩ : ೧೯೯೦ರಲ್ಲಿ ಜರ್ಮನಿ ದೇಶದ ಪುನರೇಕೀಕರಣ. ವಿಶ್ವ ಪ್ರಾಕೃತಿಕ ದಿನ
- ಅಕ್ಟೋಬರ್ ೪ : ೧೮೮೪ರಲ್ಲಿ ಹುಯಿಲಗೋಳ ನಾರಾಯಣರಾಯರ ಜನನ, ೧೯೫೭ರಲ್ಲಿ ಸೋವಿಯೆಟ್ ಒಕ್ಕೂಟದ ಸ್ಪುಟ್ನಿಕ್ ೧ ಭೂಮಿಯನ್ನು ಪ್ರದಕ್ಷಿಣೆ ಮಾಡಿದ ಮೊದಲ ಕೃತಕ ಉಪಗ್ರಹವಾಯಿತು, ವಿಶ್ವ ಪ್ರಾಣಿದಯಾ/ಪ್ರಾಣಿ ಕ್ಷೇಮಾಭಿವೃದ್ಧಿ ದಿನ
- ಅಕ್ಟೋಬರ್ ೫ : ವಿಶ್ವ ಹವ್ಯಾಸ ದಿನ
- ಅಕ್ಟೋಬರ್ ೬ : ೧೯೭೩ರಲ್ಲಿ ಈಜಿಪ್ಟ್ನ ಸೇನೆ ಇಸ್ರೇಲ್ ದೇಶವನ್ನು ಪ್ರವೇಶಿಸಿ ಯೊಮ್ ಕಿಪ್ಪೂರ್ ಯುದ್ಧ ಪ್ರಾರಂಭವಾಯಿತು.
- ಅಕ್ಟೋಬರ್ ೮ : ವಾಯುಪಡೆ ದಿನ
- ಅಕ್ಟೋಬರ್ ೯ : ವಿಶ್ವ ಅಂಚೆ ದಿನ
- ಅಕ್ಟೋಬರ್ ೧೦: ೧೯೦೨ರಲ್ಲಿ ಶಿವರಾಮ ಕಾರಂತರ ಜನನ. (ಚಿತ್ರಿತ), ವಿಶ್ವ ಮರಣದಂಡನೆ ವಿರೋಧಿ ದಿನ
- ಅಕ್ಟೋಬರ್ ೧೨ : ೧೪೯೨ರಲ್ಲಿ ಕ್ರಿಸ್ಟೊಫರ್ ಕೊಲಂಬಸ್ ಕೆರಿಬಿಯನ್ ಪ್ರದೇಶದಲ್ಲಿ ಕಾಲಿಟ್ಟ ಮೊದಲ ಪಾಶ್ಚಾತ್ಯನಾದನು.
- ಅಕ್ಟೋಬರ್ ೧೪ : ವಿಶ್ವ ಗುಣಮಟ್ಟ ದಿನ
- ಅಕ್ಟೋಬರ್ ೧೬ : ವಿಶ್ವ ಆಹಾರ ದಿನ
- ಅಕ್ಟೋಬರ್ ೧೮ : ೧೯೨೨ರಲ್ಲಿ ಯುನೈಟೆಡ್ ಕಿಂಗ್ಡಮ್ನಲ್ಲಿ ಬ್ರಿಟಿಶ್ ಬ್ರಾಡ್ಕಾಸ್ಟಿಂಗ್ ಕಾರ್ಪೊರೇಶನ್ (ಬಿಬಿಸಿ)ಯ ಸ್ಥಾಪನೆ.
- ಅಕ್ಟೋಬರ್ ೧೯ : ನೊಬೆಲ್ ಪ್ರಶಸ್ತಿ ವಿಜೇತ ಡಾ. ಸುಬ್ರಮಣ್ಯಂ ಚಂದ್ರಶೇಖರ್ (1910-1995) ಅವರ ಜನ್ಮದಿನ.
- ಅಕ್ಟೋಬರ್ ೨೧ : ಪೋಲಿಸ್ ಹುತಾತ್ಮರ ದಿನ.
- ಅಕ್ಟೋಬರ್ ೨೩ : ಕಿತ್ತೂರು ರಾಣಿ ಚೆನ್ನಮ್ಮ ಜನ್ಮ ದಿನ.
- ಅಕ್ಟೋಬರ್ ೨೪ : ೧೯೪೫ರಲ್ಲಿ ಸಂಯುಕ್ತ ರಾಷ್ಟ್ರ ಸಂಸ್ಥೆ(ವಿಶ್ವಸಂಸ್ಥೆ)ಯ ಸ್ಥಾಪನೆ.
- ಅಕ್ಟೋಬರ್ ೨೯ : ೧೯೩೬ರಲ್ಲಿ ಕವಿ ಎನ್ ಎಸ್ ಲಕ್ಷ್ಮೀನಾರಾಯಣ ಭಟ್ಟ ಜನನ, ಟರ್ಕಿ ಗಣರಾಜ್ಯವಾಗಿ ೧೯೨೩ರಲ್ಲಿ ಮುಸ್ತಫ ಕೆಮಲ್ ಅಟಾತುರ್ಕ್ ಅದರ ಮೊದಲ ರಾಷ್ಟ್ರಪತಿಯಾದರು.
- ಅಕ್ಟೋಬರ್ ೩೦ : ವಿಶ್ವ ಉಳಿತಾಯ / ಮಿತವ್ಯಯ ದಿನ
- ಅಕ್ಟೋಬರ್ ೩೧ : ಸರ್ದಾರ್ ವಲ್ಲಭಭಾಯ್ ಪಟೇಲ್ ಜನ್ಮದಿನ, ೧೯೮೪ರಲ್ಲಿ ಇಂದಿರಾ ಗಾಂಧಿಯ ಹತ್ಯೆ.