ವಿಕಿಪೀಡಿಯ:ವಿಶೇಷ ಬರಹ/ಸಂಚಿಕೆ - ೩
ಲಾಲ್ ಬಹಾದುರ್ ಶಾಸ್ತ್ರಿ (ಅಕ್ಟೋಬರ್, ೧೯೦೪ - ಜನವರಿ ೧೧, ೧೯೬೬) ಸ್ವತಂತ್ರ ಭಾರತದ ಎರಡನೇ ಪ್ರಧಾನಿಯಾಗಿದ್ದರು. ಇವರು ಭಾರತದ ಸ್ವಾತಂತ್ರ್ಯಕ್ಕೆ ಹೋರಾಡಿದವರು.
- ಜೀವನ
ಲಾಲ್ ಬಹಾದುರ್ ಮೊಘಲ್‌ಸಾರಾಯ್‌ನಲ್ಲಿ ಜನಿಸಿದ್ದು. ೧೯೨೧ರಲ್ಲಿ ಮಹಾತ್ಮ ಗಾಂಧಿಯವರ ಅಸಹಕಾರ ಚಳುವಳಿಯಲ್ಲಿ ಭಾಗವಹಿಸಲು ಇವರು ತಮ್ಮ ಓದನ್ನು ಅರ್ಧದಲ್ಲೇ ಬಿಟ್ಟರು. ೧೯೨೬ರಲ್ಲಿ ಇವರಿಗೆ ಶಾಸ್ತ್ರಿ ಎಂಬ ಬಿರುದು ಕಾಶಿ ವಿದ್ಯಾ ಪೀಠದಿಂದ ಕೊಡಲ್ಪಟ್ಟಿತು. ಒಟ್ಟು ೯ ವರ್ಷಗಳ ಕಾಲ ಸ್ವಾತಂತ್ರ್ಯಕ್ಕಾಗಿ ಕಾರಾಗೃಹವಾಸ ಅನುಭವಿಸಿದ ಇವರು ಸತ್ಯಾಗ್ರಹ ಚಳುವಳಿ ಪ್ರಾರಂಭವಾದ ನಂತರ ೧೯೪೬ ರವರೆಗೂ ಜೈಲು ಶಿಕ್ಷೆ ಅನುಭವಿಸಿದರು.
- ಭಾರತ ಸರಕಾರದಲ್ಲಿ ಸಲ್ಲಿಸಿದ ಸೇವೆ
ಸ್ವಾತಂತ್ರ ದೊರಕಿದ ಬಳಿಕ ಇವರು ಗೋವಿ೦ದ ವಲ್ಲಭ ಪ೦ತ್ ಅವರ ಸರಕಾರದಲ್ಲಿ ಪೋಲಿಸ್ ಖಾತೆಯನ್ನು ವಹಿಸಿಕೊಂಡಿದ್ದರು. ೧೯೫೧ರಲ್ಲಿ ಇವರು ಲೋಕ ಸಭೆಗೆ ಜನರಲ್ ಸೆಕ್ರೆಟರಿ ಆಗಿ ಆಯ್ಕೆಯಾದರು. ಇದರ ಪರ್ಯಾಯ ಇವರು ರೈಲ್ವೆ ಖಾತೆಯನ್ನು ವಹಿಸಿಕೊಂಡಿದ್ದೂ ಉಂಟು. ಅರಿಯಳೂರು ಬಳಿ ಆದ ರೈಲ್ವೆ ದುರಂತದ ತರುವಾಯ ಇವರು ತಮ್ಮ ರಾಜೀನಾಮೆ ನೀಡಿದರು. ಮತ್ತೊಮ್ಮೆ ಇವರು ಕ್ಯಾಬಿನೆಟ್‌ಗೆ ಮರಳಿದರು, ಮೊದಲು ಸಾರಿಗೆ ಮಂತ್ರಿಯಾಗಿ, ಬಳಿಕ ೧೯೬೧ರಲ್ಲಿ ಗೃಹ ಮಂತ್ರಿಯಾಗಿ.
- ಪ್ರಧಾನಿಯಾಗಿ ಲಾಲ್ ಬಹಾದುರ್ ಶಾಸ್ತ್ರಿಗಳು
ಮೇ ೨೭, ೧೯೬೪ರಂದು ಜವಾಹರ್‌ಲಾಲ್ ನೆಹರು ತಮ್ಮ ಕಾರ್ಯಕಾಲದಲ್ಲಿ ಸಾವನ್ನಪ್ಪಿದರು. ಸ್ವಲ್ಪಮಟ್ಟಿಗೆ ಖಾಲಿ ಖಾಲಿಯಾದ ರಾಜಕೀಯ ರಂಗವನ್ನು ಬಿಟ್ಟು ಅಗಲಿದ್ದರು. ಕಾಂಗ್ರೆಸ್‌ನ ಕೆಲವು ಪ್ರಮುಖ ಹಸ್ತಿಗಳಿಗೆ ತಮಗೆ ಬೇಕಾದ ಬೆಂಬಲ ಸಿಗದ ಕಾರಣ ತುಂಬಾ ಸರಳ ಅಧಿಕಾರ ದಾಹಿಯೇ ಅಲ್ಲದ ಶಾಸ್ತ್ರಿಗಳಿಗೆ ಪ್ರಧಾನಿಯಾಗಲು ಅವಕಾಶ ಸಿಕ್ಕಿತು. ಇವರು ಅದೇ ವರ್ಷ ಜೂನ್ ೯ ರಂದು ಭಾರತದ ಪ್ರಧಾನಿಯಾದರು.
ಆಗಿನ ಪ್ರಮುಖ ಸಮಸ್ಯೆ ಪಾಕಿಸ್ತಾನವಾಗಿತ್ತು. ಕಚ್ ಬಳಿ ನಡೆದ ಯುದ್ಧ ಯುಎನ್ ಮಧ್ಯಸ್ಥಿಕೆಯಿಂದ ನಿಂತು ಜಮ್ಮು-ಕಾಶ್ಮೀರದಲ್ಲಿ ಮತ್ತೊಮ್ಮೆ ಪ್ರಾರಂಭವಾಯಿತು. ಎರಡನೇ ಭಾರತ-ಪಾಕ್ ಯುದ್ಧ ಪ್ರಾರಂಭವಾಗಿ ಭಾರತದ ಪಡೆ ಲಾಹೋರ್ ತಲುಪುತ್ತಲೇ ಶಾಂತಿ ಒಪ್ಪಂದ ಮಾಡಿಕೊಳ್ಳಲಾಯಿತು.
ಜನವರಿ ೧೯೬೬ರಲ್ಲಿ ಶಾಸ್ತ್ರಿ ಮತ್ತು ಮಹಮ್ಮದ್ ಆಯೂಬ್ ಖಾನ್ ಅಲೆಕ್ಸೈ ನಿಕೊಲಯೆವಿಚ್ ಕೊಸಿಜಿನ್ ಅವರಿಂದ ಆಯೋಜಿಸಲಾದ ಟಾಷ್ಕೆಂಟ್‌ನಲ್ಲಿ ನಡೆದ ಮಾತುಕತೆಯಲ್ಲಿ ಭಾಗವಹಿಸಿದರು. ಶಾಸ್ತ್ರಿಗಳು ಭಾರತದೊಂದಿಗೆ ಜನವರಿ ೧೦ ರಂದು ಒಂದು ಒಪ್ಪಂದಕ್ಕೆ ಸಹಿ ಹಾಕಿದರು, ಅದೇ ಟಾಶ್ಕೆಂಟ್ ಡಿಕ್ಲೆರೇಶನ್. ಆದರೆ, ಮರುದಿನವೇ ಅವರು ಹೃದಯಾಘಾತದಿಂದ ಸಾವನ್ನಪ್ಪಿದರು. ಇವರು ಕಾರ್ಯಕಾಲದಲ್ಲಿ ದೇಶದಾಚೆ ಸಾವನ್ನಪ್ಪಿದ ಏಕೈಕ ಭಾರತದ ಪ್ರದಾನ ಮಂತ್ರಿ ಹಾಗು ಈ ತರಹದ ಅಂತಕ್ಕೆ ತುತ್ತಾದ ಇತಿಹಾಸದ ಬಹುಶಃ ಕೆಲವೇ ಕೆಲವು ಸರಕಾರದ ಮುಖ್ಯಸ್ಥರಲ್ಲಿ ಒಬ್ಬರು.