ವಿಕಿಪೀಡಿಯ:ವಿಶೇಷ ಬರಹ/ಸಂಚಿಕೆ - ೩೪
ಗೋಚರ
ಪುಣೆ ಭಾರತದ ಮಹಾರಾಷ್ಟ್ರ ರಾಜ್ಯದ ಒಂದು ಪ್ರಮುಖ ನಗರ. ಮಹಾರಾಷ್ಟ್ರದ ಪಶ್ಚಿಮ ಭಾಗದಲ್ಲಿ, ಮುಳಾ ಮತ್ತು ಮುಠಾ ಎಂಬ ನದಿಗಳ ದಂಡೆಯಲ್ಲಿರುವ ಈ ನಗರವು ಪುಣೆ ಜಿಲ್ಲೆಯ ಜಿಲ್ಲಾ ಕೇಂದ್ರವೂ ಆಗಿದೆ. ಪುಣೆ ಮಹಾರಾಷ್ಟ್ರದ ಎರಡನೆಯ ಹಾಗೂ ಭಾರತದ ಏಳನೆಯ ಅತಿದೊಡ್ಡ ನಗರ. ಅನೇಕ ಪ್ರಸಿದ್ಧ ಶಿಕ್ಷಣ ಹಾಗೂ ಸಂಶೋಧನಾ ಸಂಸ್ಥೆಗಳು ಇಲ್ಲಿರುವ ಕಾರಣ ಇದನ್ನು " ಪೂರ್ವದ ಆಕ್ಸ್‍ಫರ್ಡ್" ಎಂದೂ ಕರೆಯಲಾಗುತ್ತದೆ. ಅನೇಕ ವಾಹನ ಹಾಗೂ ಇಂಜಿನಿಯರಿಂಗ್ ಸಂಬಂಧಪಟ್ಟ ದೊಡ್ಡ ಕೈಗಾರಿಕೆಗಳಿಗೆ ನೆಲೆಯಾಗಿರುವ ಪುಣೆ ದೊಡ್ಡ ಔದ್ಯಮಿಕ ಕೇಂದ್ರವೂ ಹೌದು. ಕಳೆದ ಒಂದೆರಡು ದಶಕಗಳಲ್ಲಿ ಪುಣೆ ಮಾಹಿತಿ ತಂತ್ರಜ್ಞಾನಕ್ಕೆ ಸಂಬಂಧಪಟ್ಟ ಉದ್ಯಮಕ್ಕಾಗಿಯೂ ಹೆಸರಾಗಿದೆ. ೨೦೦೧ರ ಜನಗಣತಿಯ ಪ್ರಕಾರ ಪುಣೆಯ ಜನಸಂಖ್ಯೆ ೪೫ ಲಕ್ಷ. ಬಹಳ ಹಳೆಯ ಇತಿಹಾಸವಿರುವ ಪುಣೆ ಮಹಾರಾಷ್ಟ್ರದ ಸಾಂಸ್ಕೃತಿಕ ರಾಜಧಾನಿ ಎಂದೂ ಹೆಸರಾಗಿದೆ. ಇಲ್ಲಿಯ ಮುಖ್ಯ ಭಾಷೆ ಮರಾಠಿ.