ವಿಕಿಪೀಡಿಯ:ವಿಶೇಷ ಬರಹ/ಸಂಚಿಕೆ - ೫೧
ಗೋಚರ
ಚಾರ್ಲ್ಸ್ ರಾಬರ್ಟ್ ಡಾರ್ವಿನ್ (ಫೆಬ್ರುವರಿ ೧೨ ೧೮೦೯ — ಏಪ್ರಿಲ್ ೧೯ ೧೮೮೨) ಇಂಗ್ಲೆಂಡ್ ದೇಶದ ಪ್ರಸಿದ್ಧ ಜೀವವಿಜ್ಞಾನಿ. ಈತನು ೧೮೫೮ರಲ್ಲಿ ಮಂಡಿಸಿದ ಜೀವ ವಿಕಾಸವಾದವು ಆಧುನಿಕ ಜೀವವಿಜ್ಞಾನದ ಬುನಾದಿಯಾಗಿದೆ. ಎಡಿನ್‍ಬ್ರೊ ಮತ್ತು ಕೇಂಬ್ರಿಡ್ಜ್ ವಿಶ್ವವಿದ್ಯಾಲಯಗಳಲ್ಲಿ ವ್ಯಾಸಂಗ ನಡಿಸಿದ ಇವರು ೧೮೩೧ರಿಂದ ೧೮೩೬ರ ಮಧ್ಯದಲ್ಲಿ ಎಚ್ ಎಮ್ ಎಸ್ ಬೀಗಲ್ ಹಡಗಿನಲ್ಲಿ ಭೂರಚನಶಾಸ್ತ್ರ ವಿಜ್ಞಾನಿಯಾಗಿ ಪ್ರವಾಸ ಕೈಗೊಂಡಾಗ ನಡೆಸಿದ ಸಂಶೊಧನೆಯಿಂದ ಮೊದಲು ಪ್ರಖ್ಯಾತರಾದರು. ಅದೇ ಸಮಯದಲ್ಲಿ ಅನೇಕ ಜೀವ ಪಳಯುಳಿಕೆಗಳನ್ನೂ ಸಂಗ್ರಹಿಸಿ, ಅನೇಕ ಜೀವವಿಧಗಳನ್ನು ವೀಕ್ಷಿಸಿದರು. ಇದೆಲ್ಲವನ್ನೂ ವಿವರಿಸಲು "ನೈಸರ್ಗಿಕ ಆಯ್ಕೆಯಿಂದ ಜೀವ ವಿಕಾಸವಾದ" ಸಿದ್ಧಾಂತವನ್ನು ೧೮೫೮ರಲ್ಲಿ ಮಂಡಿಸಿದರು. ೧೮೫೯ರಲ್ಲಿ ಈ ಸಿದ್ಧಾಂತವನ್ನು ವಿವರವಾಗಿ ಬಣ್ಣಿಸುವ ಆನ್ ದ ಆರಿಜಿನ್ ಆಫ್ ಸ್ಪೀಶೀಸ್ ಎಂಬ ಭವ್ಯಕೃತಿಯನ್ನು ಪ್ರಕಟಿಸಿದರು.