ವಿಕಿಪೀಡಿಯ:ವಿಶೇಷ ಬರಹ/ಸಂಚಿಕೆ - ೬೮

ವಿಕಿಪೀಡಿಯದಿಂದ, ಇದು ಮುಕ್ತ ಹಾಗೂ ಸ್ವತಂತ್ರ ವಿಶ್ವಕೋಶ
ಕರ್ನಾಟಕ ರಾಜ್ಯೋತ್ಸವದ ಭಾಗವಾಗಿ ಡೊಳ್ಳು ಕುಣಿತ ಸಾಂಪ್ರದಾಯಿಕ ನೃತ್ಯ

ಕರ್ನಾಟಕ ರಾಜ್ಯೋತ್ಸವ, ಕನ್ನಡ ರಾಜ್ಯೋತ್ಸವ ಅಥವಾ ಕರ್ನಾಟಕ ರಚನೆ ದಿನ ಪ್ರತಿ ವರ್ಷ ನವೆಂಬರ್ ೧ರಂದು ವಿಶ್ವದಾದ್ಯಂತ ಕನ್ನಡಿಗರು ನೆಲೆಸಿರುವ ಪ್ರದೇಶಗಳಲ್ಲಿ ಕನ್ನಡ ಭಾಷೆ ಮಾತನಾಡುವ ಜನರಿಂದ ಆಚರಿಸುವ ನಾಡ ಹಬ್ಬ. ೧೯೫೬ರ ರಾಜ್ಯಗಳ ಪುನರ್ ವಿಂಗಡಣಾ ಕಾಯಿದೆಯಂತೆ ೧೯೫೬ರ ನವೆಂಬರ್ ೧ರಂದು ಮೈಸೂರು ರಾಜ್ಯ (ಈಗಿನ ಕರ್ನಾಟಕ) ಗಡಿ ಭಾಗದಲ್ಲಿರುವ ಕನ್ನಡ ಭಾಷೆ-ಮಾತನಾಡುವ ಪ್ರದೇಶಗಳನ್ನು ಮೈಸೂರು ರಾಜ್ಯದಲ್ಲಿ ವಿಲೀನಗೊಳಿಸಿ ಕರ್ನಾಟಕ ರಾಜ್ಯ ರಚಿಸಲಾಯಿತು. ಇದರ ಸಂಕೇತವಾಗಿ ಕರ್ನಾಟಕ ರಾಜ್ಯೋತ್ಸವವನ್ನು ಆಚರಿಸಲಾಗುತ್ತದೆ. ರಾಜ್ಯೋತ್ಸವದ ದಿನ ಕರ್ನಾಟಕ ರಾಜ್ಯದಲ್ಲಿ ಸರ್ಕಾರಿ ರಜೆ ಇದ್ದು, ಕರ್ನಾಟಕ ಸರಕಾರ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಕನ್ನಡಿಗರನ್ನು ಗುರುತಿಸಿ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ ಮಾಡುತ್ತಿದೆ.