ವಿಷಯಕ್ಕೆ ಹೋಗು

ವಿಜಯಪುರ ಜಿಲ್ಲೆಯ ವಿಧಾನ ಸಭಾ ಕ್ಷೇತ್ರಗಳು

ವಿಕಿಪೀಡಿಯದಿಂದ, ಇದು ಮುಕ್ತ ಹಾಗೂ ಸ್ವತಂತ್ರ ವಿಶ್ವಕೋಶ

ರಾಜಕೀಯ

[ಬದಲಾಯಿಸಿ]

ವಿಜಯಪುರ ಜಿಲ್ಲೆಯಿಂದ 8 ಜನ ವಿಧಾನಸಭೆಗೆ (ಕೆಳಮನೆ), ಒಬ್ಬರು ಲೋಕಸಭೆಗೆ (ಸಂಸದರು) ಆಯ್ಕೆಗೊಳ್ಳುತ್ತಾರೆ.

ವಿಜಯಪುರ ಜಿಲ್ಲೆಯ ವಿಧಾನಸಭಾ ಚುನಾವಣಾ ಕ್ಷೇತ್ರಗಳು

ವಿಜಯಪುರ ನಗರ ವಿಧಾನಸಭಾ ಕ್ಷೇತ್ರವು ಕರ್ನಾಟಕ ರಾಜ್ಯದ ವಿಜಯಪುರ ಜಿಲ್ಲೆಯ 8 ವಿಧಾನ ಸಭಾ ಕ್ಷೆತ್ರಗಳಲ್ಲಿ ಒಂದಾಗಿದೆ. ವಿಜಯಪುರ ನಗರ ಮತಕ್ಷೇತ್ರ(2018)ದಲ್ಲಿ 1,21,753 ಪುರುಷರು, 1,19,882 ಮಹಿಳೆಯರು ಸೇರಿ ಒಟ್ಟು 2,41,635 ಮತದಾರರಿದ್ದಾರೆ.

ಕ್ಷೇತ್ರದ ಇತಿಹಾಸ

1957ರಲ್ಲಿ ಮೊದಲ ಚುನಾವಣೆಯಿಂದ ಚುನಾವಣೆ ಎದುರಾದಾಗ ಸ್ಪರ್ಧೆಯಲ್ಲಿದ್ದ ಮೊದಲ ಅವಧಿಯಲ್ಲೇ ಕಾಂಗ್ರೆಸ್‌ ಅಭ್ಯರ್ಥಿ ಮಹಾಲದಾರ ಗೌಸ್‌ ಮೊಹಿದ್ದೀನ್‌ ಅವರನ್ನು ಸೋಲಿಸಿ IND ಅಭ್ಯರ್ಥಿಯಾದ ಸರದಾರ ಡಾ||ಬಸವರಾಜ ನಾಗೂರ ಗೆದ್ದರೂ ನಗರದ ಕ್ಷೇತ್ರ ಕಾಂಗ್ರೆಸ್‌ ಭದ್ರ ಕೋಟೆ ಎನಿಸಿತ್ತು. ನಂತರ ನಡೆದ ಮೂರು ಚುನಾವಣೆಗಳಲ್ಲಿ 1972ರವರೆಗೆ ಕಾಂಗ್ರೆಸ್‌ನ ರೇವಣಸಿದ್ದಪ್ಪ ನಾವದಗಿ, ಪಿ.ಬಿ. ಮಲ್ಲನಗೌಡ, ಕೆ.ಟಿ.ರಾಠೋಡ ಗೆದ್ದಿದ್ದರು. 1978ರಲ್ಲಿ ಜೆಎನ್‌ಪಿ ಪಕ್ಷದ ಸೈಯದ್‌ ಹಬೀಬುದ್ದೀನ್‌ ಭಕ್ಷಿ ಆಯ್ಕೆ ಆಗುವ ಮೂಲಕ ಕ್ಷೇತ್ರದಲ್ಲಿ ಆಯ್ಕೆಯಾದ ಮೊದಲ ಮುಸ್ಲಿಂ ಶಾಸಕ ಎನಿಸಿದರು. 1983ರಲ್ಲಿ BJPಯ ಚಂದ್ರಶೇಖರ ಗಚ್ಚಿನಮಠ ಗೆದ್ದರೆ, 1985ರಲ್ಲಿ ಗೆದ್ದಿದ್ದ ಕಾಂಗ್ರೆಸ್‌ನ ಎಮ್.ಎಲ್.ಉಸ್ತಾದ 1989ರಲ್ಲೂ ಆಯ್ಕೆಯಾಗಿದ್ದರು. 1994ರಲ್ಲಿ ಬಸನಗೌಡ ಪಾಟೀಲ(ಯತ್ನಾಳ) ಮೂಲಕ BJP ಮೊದಲ ಬಾರಿಗೆ ಖಾತೆ ತೆರೆದರೆ, 1999ರಲ್ಲಿ BJPಯ ಅಪ್ಪು ಪಟ್ಟಣಶೆಟ್ಟಿಯವರನ್ನು ಸೋಲಿಸಿ ಎಮ್.ಎಲ್.ಉಸ್ತಾದ್‌ ಅವರು ಸೇಡು ತೀರಿಸಿಕೊಂಡರು. 2004 ಹಾಗೂ 2008ರಲ್ಲಿ ಅಪ್ಪು ಪಟ್ಟಣಶೆಟ್ಟಿ ಸತತ ಎರಡು ಬಾರಿ ಗೆದ್ದು ಬಿಗಿದ್ದರು. 2013ರಲ್ಲಿ ಕಾಂಗ್ರೆಸ್‌ನ ಡಾ| ಎಂ.ಎಸ್‌. ಬಾಗವಾನ ಆಯ್ಕೆಯಾದರು.

ವಿಜಯಪುರ ನಗರ ಕ್ಷೇತ್ರ ಕಾಂಗ್ರೆಸ್‌ ಮಟ್ಟಿಗೆ ಮುಸ್ಲಿಂ ಸಮುದಾಯಕ್ಕೆ ಇಲ್ಲಿ ಟಿಕೆಟ್‌ ಖಾತ್ರಿ ಮಾಡಿರುವ ಕ್ಷೇತ್ರ. ಇಸ್ಲಾಂ ಧರ್ಮೀಯರು ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ ಎಂಬ ಕಾರಣಕ್ಕೆ ಕಳೆದ ನಾಲ್ಕಾರು ದಶಕಗಳಿಂದ ಕಾಂಗ್ರೆಸ್‌ ಇಲ್ಲಿ ಮುಸ್ಲಿಂ ಸಮುದಾಯಕ್ಕೆ ಸೇರಿದವರಿಗೆ ಟಿಕೆಟ್‌ ಕೊಟ್ಟು ಗೆಲ್ಲಿಸಿಕೊಂಡು ಬರುತ್ತಿದೆ.

ಕ್ಷೇತ್ರದ ವಿಶೇಷತೆ

  • ಕೆ.ಟಿ.ರಾಠೋಡರವರು ದೇವರಾಜ ಅರಸುರವರ ಮಂತ್ರಿಮಂಡಳದಲ್ಲಿ ಮೀನುಗಾರಿಕೆ ಸಚಿವರಾಗಿದ್ದರು.
  • ಎಮ್.ಎಲ್.ಉಸ್ತಾದರವರು ಎಸ್.ಎಮ್.ಕೃಷ್ಣ ಮಂತ್ರಿಮಂಡಳದಲ್ಲಿ ಅಲ್ಪಸಂಖ್ಯಾತ ಅಭಿವೃದ್ಧಿ, ಭಾರತೀಯ ವ್ಯವಸ್ಥೆಯ ಔಷಧಿ ಮತ್ತು ಹೋಮಿಯೋಪತಿ ಖಾತೆಯ ಸಚಿವರಾಗಿದ್ದರು.
  • ಮಾಜಿ ಶಾಸಕರು, ವಿಧಾನ ಪರಿಷತ್ ಸದಸ್ಯರು, ಸಂಸದರು ಮತ್ತು ಕೇಂದ್ರ ಸಚಿವರಾದ ಬಸನಗೌಡ ಪಾಟೀಲ(ಯತ್ನಾಳ)ರನ್ನು 2 ಬಾರಿ ಕ್ಷೇತ್ರದ ಜನತೆ ಆಯ್ಕೆ ಮಾಡಿದ್ದಾರೆ.
  • ಕ್ಷೇತ್ರದಲ್ಲಿ ಮುಸ್ಲಿಂ ಮತಗಳು ಹೆಚ್ಚಾಗಿರುವುದರಿಂದ 5 ಬಾರಿ ಮುಸ್ಲಿಂ ನಾಯಕರು ಆಯ್ಕೆಯಾಗಿದ್ದಾರೆ.

ಜನಪ್ರತಿನಿಧಿಗಳ ವಿವರ

ವರ್ಷ ವಿಧಾನ ಸಭಾ ಕ್ಷೆತ್ರ ವಿಜೇತರು ಪಕ್ಷ ಮತಗಳು ಉಪಾಂತ ವಿಜೇತರು ಪಕ್ಷ ಮತಗಳು
ವಿಜಯಪುರ ನಗರ ವಿಧಾನಸಭಾ ಕ್ಷೇತ್ರ ಕರ್ನಾಟಕ ರಾಜ್ಯ
2018 ವಿಜಯಪುರ ನಗರ ವಿಧಾನಸಭಾ ಕ್ಷೇತ್ರ ಬಸನಗೌಡ ಪಾಟೀಲ(ಯತ್ನಾಳ) BJP 76308 ಅಬ್ದುಲ್ ಹಮೀದ್ ಮುಸ್ರೀಫ್ INC 69895
2013 ವಿಜಯಪುರ ನಗರ ವಿಧಾನಸಭಾ ಕ್ಷೇತ್ರ ಡಾ.ಮಕಬುಲ್ ಬಾಗವಾನ INC 48615 ಬಸನಗೌಡ ಪಾಟೀಲ(ಯತ್ನಾಳ) JDS 39235
2008 ವಿಜಯಪುರ ನಗರ ವಿಧಾನಸಭಾ ಕ್ಷೇತ್ರ ಅಪ್ಪಾಸಾಹೇಬ ಪಟ್ಟಣಶೆಟ್ಟಿ BJP 34217 ಎಸ್.ಎ.ಹೊರ್ತಿ INC 16653
2004 ವಿಜಯಪುರ ವಿಧಾನಸಭಾ ಕ್ಷೇತ್ರ ಅಪ್ಪಾಸಾಹೇಬ ಪಟ್ಟಣಶೆಟ್ಟಿ BJP 70001 ಎಮ್.ಎಲ್.ಉಸ್ತಾದ INC 45968
1999 ವಿಜಯಪುರ ವಿಧಾನಸಭಾ ಕ್ಷೇತ್ರ ಎಮ್.ಎಲ್.ಉಸ್ತಾದ INC 42902 ಅಪ್ಪಾಸಾಹೇಬ ಪಟ್ಟಣಶೆಟ್ಟಿ BJP 39749
1994 ವಿಜಯಪುರ ವಿಧಾನಸಭಾ ಕ್ಷೇತ್ರ ಬಸನಗೌಡ ಪಾಟೀಲ(ಯತ್ನಾಳ) BJP 45286 ಎಮ್.ಎಲ್.ಉಸ್ತಾದ JDS 29158
1989 ವಿಜಯಪುರ ವಿಧಾನಸಭಾ ಕ್ಷೇತ್ರ ಎಮ್.ಎಲ್.ಉಸ್ತಾದ INC 45623 ಎಸ್.ಆರ್.ಔರಂಗಾಬಾದ್ JDS 34355
1985 ವಿಜಯಪುರ ವಿಧಾನಸಭಾ ಕ್ಷೇತ್ರ ಎಮ್.ಎಲ್.ಉಸ್ತಾದ INC 26829 ಬಿ.ಆರ್.ಪಾಟೀಲ JNP 25914
1983 ವಿಜಯಪುರ ವಿಧಾನಸಭಾ ಕ್ಷೇತ್ರ ಚಂದ್ರಶೇಖರ ಗಚ್ಚಿನಮಠ BJP 28795 ಖಾಜಿಹುಸೇನ್ ಜಾಹಾಗೀರದಾರ INC 24974
1978 ವಿಜಯಪುರ ವಿಧಾನಸಭಾ ಕ್ಷೇತ್ರ ಹಬೀಬುದ್ದೀನ್ ಬಕ್ಷಿ JNP 26191 ಕೆ.ಟಿ.ರಾಠೋಡ INC 16663
ವಿಜಯಪುರ ವಿಧಾನಸಭಾ ಕ್ಷೇತ್ರ ಮೈಸೂರು ರಾಜ್ಯ
1972 ವಿಜಯಪುರ ವಿಧಾನಸಭಾ ಕ್ಷೇತ್ರ ಕೆ.ಟಿ.ರಾಠೋಡ INC 23205 ವಿಷ್ಣು ಕೇಶವ ಪಂಡಿತ NCO 13970
1967 ವಿಜಯಪುರ ವಿಧಾನಸಭಾ ಕ್ಷೇತ್ರ ಬಸನಗೌಡ ಪಾಟೀಲ INC 18818 ಮಲ್ಲಪ್ಪ ಕರಬಸಪ್ಪ ಸುರಪುರ SWA 5396
1962 ವಿಜಯಪುರ ವಿಧಾನಸಭಾ ಕ್ಷೇತ್ರ ರೇವಣಸಿದ್ದಪ್ಪ ನಾವದಗಿ INC 13828 ನಬೀಸಾಬ್ ಬಾಳಾಸಿಂಗ್ SWA 4846
1957 ವಿಜಯಪುರ ವಿಧಾನಸಭಾ ಕ್ಷೇತ್ರ ಡಾ.ಬಸವರಾಜ ನಾಗೂರ IND 11827 ಮೊಹದ್ದಿನ್ ಮಹಾಲ್ದಾರ INC 7995
ವಿಜಯಪುರ ವಿಧಾನಸಭಾ ಕ್ಷೇತ್ರ ಬಾಂಬೆ ರಾಜ್ಯ
1951 ವಿಜಯಪುರ ವಿಧಾನಸಭಾ ಕ್ಷೇತ್ರ ಮಲ್ಲನಗೌಡ ಪಾಟೀಲ INC 10406 ನಬೀಸಾಬ್ ಬಾಳಾಸಿಂಗ್ CPI 6069

ಬಬಲೇಶ್ವರ ವಿಧಾನ ಸಭಾ ಕ್ಷೇತ್ರವು ಕರ್ನಾಟಕ ರಾಜ್ಯದ ವಿಜಯಪುರ ಜಿಲ್ಲೆಯ 8 ವಿಧಾನ ಸಭಾ ಕ್ಷೆತ್ರಗಳಲ್ಲಿ ಒಂದಾಗಿದೆ. ಬಬಲೇಶ್ವರ ಮತಕ್ಷೇತ್ರ(2018)ದಲ್ಲಿ 1,06,256 ಪುರುಷರು, 1,02,647 ಮಹಿಳೆಯರು ಸೇರಿ ಒಟ್ಟು 2,08,903 ಮತದಾರರಿದ್ದಾರೆ.

ಕ್ಷೇತ್ರದ ಇತಿಹಾಸ

ಹನ್ನೆರಡನೇ ಶತಮಾನದಲ್ಲಿ ಕಲ್ಯಾಣದಲ್ಲಿ ನಡೆದ ಮಹಾಕ್ರಾಂತಿಯ ನಂತರ ಶರಣ ಹರಳಯ್ಯ 63 ಶರಣರೊಂದಿಗೆ ಶೇಗುಣಸಿ ಹೊರ ವಲಯದಲ್ಲಿ ಕೆಲ ಕಾಲ ತಂಗಿದ್ದ ಐತಿಹ್ಯ ಇಲ್ಲಿನ ಹರಳಯ್ಯನ ಗುಂಡಿ ಇದೆ. ಮಮದಾಪುರದಲ್ಲಿ ಆದಿಲ್‌ಶಾಹಿ ಅರಸರು ಕಟ್ಟಿಸಿದ ಸುಂದರ ಕೆರೆ ಶತ ಶತಮಾನಗಳ ಕಾಲ ವಿಶಿಷ್ಟ ತಳಿಯ ಭತ್ತ ಬೆಳೆಯಲು ಆಸರೆಯಾಗಿತ್ತು ಎಂಬುದು ಇಲ್ಲಿನ ಐತಿಹ್ಯ. ಬಬಲೇಶ್ವರದ ಗುರುಪಾದೇಶ್ವರ ಬೃಹನ್ಮಠಕ್ಕೆ ತನ್ನದೇ ಪರಂಪರೆಯಿದೆ. ಕಾಖಂಡಕಿಯ ಮಹಿಪತಿದಾಸರ ಪರಂಪರೆ ರಾಜ್ಯದಲ್ಲೇ ಹೆಸರುವಾಸಿ. ಕಾರಹುಣ್ಣಿಮೆ ಸಂದರ್ಭ ಇಲ್ಲಿ ನಡೆಯುವ ಓರಿ ಓಡಿಸುವ ಸ್ಪರ್ಧೆ ಮೈಮನ ರೋಮಾಂಚನಗೊಳಿಸುತ್ತದೆ. ಪ್ರಸಿದ್ಧ ಅರಕೇರಿ ಅಮೋಘ ಸಿದ್ಧೇಶ್ವರ ದೇವಾಲಯ, ಕಂಬಾಗಿ ಮತ್ತು ಹಲಗಣಿ ಗ್ರಾಮದ ಹಣಮಂತ ದೇವಾಲಯಗಳು, ಐತಿಹಾಸಿಕ ಬಬಲಾದಿಯ ಗುರು ಚಕ್ರವರ್ತಿ ಸದಾಶಿವ ಮಠ, ಬೆಳ್ಳುಬ್ಬಿಯ ಮಳೇಮಲ್ಲೇಶ್ವರ ದೇವಾಲಯ ಹಾಗೂ ದೇವರ ಗೆಣ್ಣೂರನ ಮಹಾಲಕ್ಷ್ಮಿ ದೇವಾಲಯಗಳಿವೆ. ಪ್ರಸಿದ್ಧ ದೇಸಗತಿ ಮನೆತನ ವಿಜಯಪುರ ತಾಲ್ಲೂಕಿನ ಜೈನಾಪುರ ಗ್ರಾಮದಲ್ಲಿ ವಾಸವಾಗಿದೆ.

ಒಂದೆಡೆ ಹೊಳಿ ದಂಡೆ. ಸಮೃದ್ಧಿಯ ಕೃಷಿ ಚಿತ್ರಣ. ಇನ್ನೊಂದೆಡೆ ಎತ್ತರದ ಪ್ರದೇಶ. ಹನಿ ಹನಿ ನೀರಿಗೂ ತತ್ವಾರ. ಮಳೆಯಾಶ್ರಿತ ಬೆಳೆ ಪದ್ಧತಿ. ಕೃಷ್ಣೆ–ಡೋಣಿ ಹರಿಯುವಿಕೆ. ಸಾರವಾಡ ಸುತ್ತಮುತ್ತಲಿನ ಬಿಳಿಜೋಳ ಎಲ್ಲೆಡೆ ಪ್ರಸಿದ್ಧಿ. ಕೃಷ್ಣಾ ನದಿ ತಟದ ಕಬ್ಬು ಬೆಳೆಗಾರರಿಗಾಗಿ ಜಿಲ್ಲೆಯ ಇತಿಹಾಸದಲ್ಲೇ ಆರಂಭಗೊಂಡ ಮೊದಲ ಸಹಕಾರಿ ಸಕ್ಕರೆ ಕಾರ್ಖಾನೆ ನಂದಿ ಸಹಕಾರಿ ಸಕ್ಕರೆ ಕಾರ್ಖಾನೆ, ಕೃಷ್ಣಾನಗರದಲ್ಲಿದೆ. ರಜತ ಮಹೋತ್ಸವ ಕಂಡ ಈ ಕಾರ್ಖಾನೆ ಈ ಭಾಗದ ರೈತರ ಆರ್ಥಿಕಾಭಿವೃದ್ಧಿಯ ಬೆನ್ನೆಲುಬಾಗಿರುವುದು ಇಲ್ಲಿನ ವಿಶೇಷ. ತಿಕೋಟಾ ಭಾಗ ದ್ರಾಕ್ಷಿಯ ಕಣಜ ಎಂದೇ ಖ್ಯಾತವಾಗಿದೆ. ವಿದೇಶಕ್ಕೂ ಇಲ್ಲಿನ ದ್ರಾಕ್ಷಿ ರಫ್ತಾಗುತ್ತಿದೆ. ಒಟ್ಟಾರೆ ಬಬಲೇಶ್ವರ ವಿಧಾನಸಭಾ ಕ್ಷೇತ್ರ ವಿಶಿಷ್ಟ ಭೌಗೋಳಿಕ ನೆಲೆಯನ್ನು ತನ್ನೊಡಲಲ್ಲಿ ಹುದುಗಿಸಿಕೊಂಡಿದೆ.

ಬಬಲೇಶ್ವರ ವಿಧಾನಸಭೆ ಕ್ಷೇತ್ರ 2008ರಲ್ಲಿ ಮರು ವಿಂಗಡಣೆ ಆದ ಬಳಿಕ ಬಬಲೇಶ್ವರ ಎಂದು ನಾಮಕರಣಗೊಂಡಿದೆ. 2008ರ ಮೊದಲು ತಿಕೋಟಾ ವಿಧಾನಸಭೆ ಕ್ಷೇತ್ರವಾಗಿತ್ತು. ನಾಲ್ಕು ಬಾರಿ ಕಾಂಗ್ರೆಸ್‌ನ ಬಿ.ಎಂ.ಪಾಟೀಲರು ಹಾಗೂ ಅವರ ಪುತ್ರ ಎಂ.ಬಿ.ಪಾಟೀಲರು ನಾಲ್ಕು ಬಾರಿ ಆಯ್ಕೆಯಾಗಿ ಅತಿ ಹೆಚ್ಚು ವರ್ಷಗಳ ಕಾಲ ಈ ಕ್ಷೇತ್ರವನ್ನು ಪ್ರತಿನಿಧಿಸಿದ್ದು ವಿಶೇಷವಾಗಿದೆ. ಕ್ಷೇತ್ರ ಪುನರ್‌ ವಿಂಗಡಣೆ ಬಳಿಕ ತಿಕೋಟಾ ವಿಧಾನಸಭಾ ಕ್ಷೇತ್ರ ಬಬಲೇಶ್ವರ ವಿಧಾನಸಭಾ ಕ್ಷೇತ್ರ ದೊಳಗೆ ವಿಲೀನವಾಯಿತು. ಕ್ಷೇತ್ರಕ್ಕೆ ಉಪ ಚುನಾವಣೆ ಸೇರಿದಂತೆ ಒಟ್ಟು 14 ವಿಧಾನಸಭಾ ಚುನಾವಣೆ ನಡೆದಿದ್ದು, ಇದರಲ್ಲಿ ಎಂಟು ಚುನಾವಣೆಗಳಲ್ಲಿ ಇಲ್ಲಿನ ಮತದಾರರು ಬಿ.ಎಂ.ಪಾಟೀಲ ಹಾಗೂ ಎಂ.ಬಿ.ಪಾಟೀಲಗೆ ಹರಸಿದ್ದಾರೆ. ತಂದೆ–ಮಗ ಇಬ್ಬರೂ ಸಚಿವರಾಗಿರುವುದು ಇಲ್ಲಿನ ವಿಶೇಷ.

1994ರಲ್ಲಿ ಜನತಾದಳದಿಂದ ಆಯ್ಕೆಯಾದ ಶಿವಾನಂದ ಪಾಟೀಲರು ಕಾಂಗ್ರೆಸ್‌ನ ಬಿ.ಎಂ.ಪಾಟೀಲ ಅವರ ಪುತ್ರ ಎಂ.ಬಿ.ಪಾಟೀಲರನ್ನು ಸೋಲಿಸಿದ್ದರು. 1999ರಲ್ಲಿ ಕಾಂಗ್ರೆಸ್‌ನ ಎಂ.ಬಿ.ಪಾಟೀಲರನ್ನು ಸೋಲಿಸಿ ಜನತಾದಳದಿಂದ ಆಯ್ಕೆಯಾದ ಶಿವಾನಂದ ಪಾಟೀಲ ಅವರು BJPಯಿಂದ ಸ್ಪರ್ಧಿಸಿ ಗೆದ್ದಿದ್ದರು. ಶಿವಾನಂದ ಪಾಟೀಲ ಅವರು ಬಸವನಬಾಗೇವಾಡಿ ಕ್ಷೇತ್ರಕ್ಕೆ ವಲಸೆ ಹೋದ ಬಳಿಕ ಎಂ.ಬಿ.ಪಾಟೀಲರು ಸತತ ಮೂರು ಬಾರಿ ಗೆದ್ದು ಹ್ಯಾಟ್ರಿಕ್‌ ಸಾಧಿಸಿದ್ದಾರೆ. ಇದರಲ್ಲಿ ಎರಡು ಬಾರಿ ಜೆಡಿಎಸ್‌ ಪಕ್ಷದಿಂದ ಸೋತಿರುವ BJPಯ ವಿಜುಗೌಡ ಪಾಟೀಲರು ಶಿವಾನಂದ ಪಾಟೀಲ ಅವರ ಕಿರಿಯ ಸಹೋದರ ಎಂಬುದು ಗಣನೀಯ.

2008ರಲ್ಲಿ ತಿಕೋಟಾ ವಿಧಾನಸಭಾ ಕ್ಷೇತ್ರವನ್ನು ಬಬಲೇಶ್ವರ ವಿಧಾನಸಭಾ ಕ್ಷೇತ್ರ ಎಂದು ನಾಮಕರಣ ಮಾಡಲಾಯಿತು. ಆಗ ಬಸವನಬಾಗೇವಾಡಿ ಕ್ಷೇತ್ರದಲ್ಲಿದ್ದ ಮಮದಾಪುರ ಹೋಬಳಿಯ 28 ಹಳ್ಳಿಗಳು ಬಬಲೇಶ್ವರ ಕ್ಷೇತ್ರಕ್ಕೆ ಸೇರ್ಪಡೆಯಾದರೆ, ತಿಕೋಟಾ ವ್ಯಾಪ್ತಿಯಲ್ಲಿದ್ದ ಕೆಲ ಹಳ್ಳಿಗಳು ನಾಗಠಾಣ(ಹಳೆಯ ಬಳ್ಳೋಳ್ಳಿ) ಕ್ಷೇತ್ರದ ಪಾಲಾದವು.

ಕ್ಷೇತ್ರದ ವಿಶೇಷತೆ

  • ಸ್ವಾತಂತ್ರ್ಯ ಹೋರಾಟಗಾರ ಮತ್ತು ಕರ್ನಾಟಕದ ಏಕೀಕರಣಕ್ಕಾಗಿ ದುಡಿದ ಹಿರಿಯರಾದ ಚೆನ್ನಬಸಪ್ಪ ಅಂಬಲಿಯವರು ಈ ಕ್ಷೇತ್ರದ 1951ರ ಚುನಾವಣೆಯಲ್ಲಿ ಸ್ಪರ್ಧಿಸಿ ಗೆದ್ದಿದ್ದು ವಿಶೇಶವಾಗಿದೆ.
  • ಬಬಲೇಶ್ವರ ಕ್ಷೇತ್ರ ಕಾಂಗ್ರೆಸ್‌ನ ಭದ್ರಕೋಟೆ ಎನಿಸಿದರೂ ಕಾಂಗ್ರೆಸ್ಸೇತರ ಪಕ್ಷಗಳೂ ಬಲ್ಯ ಮೆರೆದಿವೆ. 1957ರಿಂದ ನಿರಂತರ ಗೆದ್ದಿದ್ದ ಕಾಂಗ್ರೆಸ್‌ ಪಕ್ಷ ಮೊದಲ ಸೋಲು ಕಂಡಿದ್ದು 1978ರ ಕಾಂಗ್ರೆಸ್‌ ಅಭ್ಯರ್ಥಿ ಶಿವರಾಯ ಜಿದ್ದಿ ಅವರನ್ನು ಸೋಲಿಸಿದ ಜನತಾ ಪಕ್ಷದ ಬದುಗೌಡ ಬಾಪುಗೌಡ ಪಾಟೀಲ ಮೊದಲ ಬಾರಿಗೆ ಕಾಂಗ್ರೆಸ್‌ ರಹಿತ ಶಾಸಕ ಎನಿಸಿದರು.
  • 1962ರಲ್ಲಿ ಶಾಸಕರಾಗಿದ್ದ ಬಿ.ಎಂ.ಪಾಟೀಲರನ್ನು 1983 ಚುನಾವಣೆ ಬಳಿಕ 1989ರವರೆಗೆ ನಡೆದ ಮೂರು ಚುನಾವಣೆಗಳಲ್ಲಿ ಬಿ.ಎಂ.ಪಾಟೀಲರನ್ನು ಗೆಲ್ಲಿಸಿ ಕ್ಷೇತ್ರದಲ್ಲಿ ಹ್ಯಾಟ್ರಿಕ್‌ ಗಳಿಸುವಂತೆ ಮಾಡಿತ್ತು.
  • ಬಿ.ಎಂ.ಪಾಟೀಲರು ವೀರಪ್ಪ ಮೊಯ್ಲಿ ಮಂತ್ರಿಮಂಡಳದಲ್ಲಿ ನಾಗರಿಕ ಆಡಳಿತ ಮತ್ತು ನಗರಾಭಿವೃದ್ಧಿ ಸಚಿವರಾಗಿದ್ದರು ಹಾಗೂ ಒಂದು ಬಾರಿ ವಿಧಾನ ಪರಿಷತ್ ಸದಸ್ಯರಾಗಿದ್ದರು.
  • ಎಂ.ಬಿ.ಪಾಟೀಲರು ಸಿದ್ದರಾಮಯ್ಯನವರ ಮಂತ್ರಿಮಂಡಳದಲ್ಲಿ ನೀರಾವರಿ ಸಚಿವರಾಗಿದ್ದರು.
  • ಎಂ.ಬಿ.ಪಾಟೀಲರು ಎಚ್.ಡಿ.ಕುಮಾರಸ್ವಾಮಿ ಸಮ್ಮಿಸ್ರ ಸರ್ಕಾರದ ಮಂತ್ರಿಮಂಡಳದಲ್ಲಿ ಗೃಹ ಸಚಿವರಾಗಿದ್ದರು.

ಜನಪ್ರತಿನಿಧಿಗಳ ವಿವರ

ವರ್ಷ ವಿಧಾನ ಸಭಾ ಕ್ಷೆತ್ರ ವಿಜೇತ ಪಕ್ಷ ಮತಗಳು ಉಪಾಂತ ವಿಜೇತ ಪಕ್ಷ ಮತಗಳು
ಬಬಲೇಶ್ವರ ವಿಧಾನಸಭಾ ಕ್ಷೇತ್ರ ಕರ್ನಾಟಕ ರಾಜ್ಯ
2018 ಬಬಲೇಶ್ವರ ವಿಧಾನ ಸಭಾ ಕ್ಷೇತ್ರ ಎಂ.ಬಿ.ಪಾಟೀಲ INC 98339 ವಿಜುಗೌಡ ಪಾಟೀಲ BJP 68624
2013 ಬಬಲೇಶ್ವರ ವಿಧಾನ ಸಭಾ ಕ್ಷೇತ್ರ ಎಂ.ಬಿ.ಪಾಟೀಲ INC 62061 ವಿಜುಗೌಡ ಪಾಟೀಲ JDS 57706
2008 ಬಬಲೇಶ್ವರ ವಿಧಾನ ಸಭಾ ಕ್ಷೇತ್ರ ಎಂ.ಬಿ.ಪಾಟೀಲ INC 55525 ವಿಜುಗೌಡ ಪಾಟೀಲ JDS 38886
ತಿಕೋಟಾ ವಿಧಾನಸಭಾ ಕ್ಷೇತ್ರ ಕರ್ನಾಟಕ ರಾಜ್ಯ
2004 ತಿಕೋಟಾ ವಿಧಾನ ಸಭಾ ಕ್ಷೇತ್ರ ಎಂ.ಬಿ.ಪಾಟೀಲ INC 48274 ಎಂ.ಎಸ್.ರುದ್ರಗೌಡರ JDU 19040
1999 ತಿಕೋಟಾ ವಿಧಾನ ಸಭಾ ಕ್ಷೇತ್ರ ಶಿವಾನಂದ ಪಾಟೀಲ BJP 49080 ಎಂ.ಬಿ.ಪಾಟೀಲ INC 41649
1994 ತಿಕೋಟಾ ವಿಧಾನ ಸಭಾ ಕ್ಷೇತ್ರ ಶಿವಾನಂದ ಪಾಟೀಲ JD 50679 ಎಂ.ಬಿ.ಪಾಟೀಲ INC 25897
1991 ತಿಕೋಟಾ ವಿಧಾನ ಸಭಾ ಕ್ಷೇತ್ರ(Bypoll) ಎಂ.ಬಿ.ಪಾಟೀಲ INC 32832 ಶಿವಾನಂದ ಪಾಟೀಲ JD 28228
1989 ತಿಕೋಟಾ ವಿಧಾನ ಸಭಾ ಕ್ಷೇತ್ರ ಬಿ.ಎಂ.ಪಾಟೀಲ INC 37832 ಬಿ.ಆರ್.ಪಾಟೀಲ JD 33228
1985 ತಿಕೋಟಾ ವಿಧಾನ ಸಭಾ ಕ್ಷೇತ್ರ ಬಿ.ಎಂ.ಪಾಟೀಲ INC 26829 ಬಿ.ಆರ್.ಪಾಟೀಲ JNP 25914
1983 ತಿಕೋಟಾ ವಿಧಾನ ಸಭಾ ಕ್ಷೇತ್ರ ಬಿ.ಎಂ.ಪಾಟೀಲ INC 27884 ಬಿ.ಎಮ್.ಕೊತೀಹಾಳ JNP 18092
1978 ತಿಕೋಟಾ ವಿಧಾನ ಸಭಾ ಕ್ಷೇತ್ರ ಬಿ.ಬಿ.ಪಾಟೀಲ JNP 21317 ಎಸ್.ಎ.ಜಿದ್ದಿ INC 16899
ತಿಕೋಟಾ ವಿಧಾನಸಭಾ ಕ್ಷೇತ್ರ ಮೈಸೂರು ರಾಜ್ಯ
1972 ತಿಕೋಟಾ ವಿಧಾನ ಸಭಾ ಕ್ಷೇತ್ರ ಜಿ.ಎನ್.ಪಾಟೀಲ NCO 22119 ಎಸ್.ಎ.ಜಿದ್ದಿ INC 14156
1967 ತಿಕೋಟಾ ವಿಧಾನ ಸಭಾ ಕ್ಷೇತ್ರ ವಿ.ಎಸ್.ಬಸಲಿಂಗಯ್ಯ INC 16329 ಎನ್.ಕೆ.ಉಪಾಧ್ಯಯ CPM 3353
1962 ತಿಕೋಟಾ ವಿಧಾನ ಸಭಾ ಕ್ಷೇತ್ರ ಬಿ.ಎಂ.ಪಾಟೀಲ INC 19957 ಬಿ.ಜಿ.ಬಿರಾದಾರ SWA 4024
1957 ತಿಕೋಟಾ ವಿಧಾನ ಸಭಾ ಕ್ಷೇತ್ರ ಚೆನ್ನಬಸಪ್ಪ ಅಂಬಲಿ INC 12933 ಡಾ.ಬಸವರಾಜ ನಾಗೂರ IND 8262
ತಿಕೋಟಾ-ಬೀಳಗಿ ವಿಧಾನಸಭಾ ಕ್ಷೇತ್ರ ಬಾಂಬೆ ರಾಜ್ಯ
1951 ತಿಕೋಟಾ-ಬೀಳಗಿ ವಿಧಾನ ಸಭಾ ಕ್ಷೇತ್ರ ಚೆನ್ನಬಸಪ್ಪ ಅಂಬಲಿ INC 21042 ಆರ್.ಎಂ.ಪಾಟೀಲ KMPP 9001

ಇಂಡಿ ವಿಧಾನಸಭಾ ಕ್ಷೇತ್ರವು ಕರ್ನಾಟಕ ರಾಜ್ಯದ ವಿಜಯಪುರ ಜಿಲ್ಲೆಯ 8 ವಿಧಾನ ಸಭಾ ಕ್ಷೆತ್ರಗಳಲ್ಲಿ ಒಂದಾಗಿದೆ. ಇಂಡಿ ಮತಕ್ಷೇತ್ರ(2018)ದಲ್ಲಿ 1,18,626 ಪುರುಷರು, 1,09,818 ಮಹಿಳೆಯರು ಸೇರಿ ಒಟ್ಟು 2,28,444 ಮತದಾರರಿದ್ದಾರೆ.

ಕ್ಷೇತ್ರದ ಇತಿಹಾಸ

ಪುಣ್ಯಕ್ಷೇತ್ರವಾಗಿಯೂ ಪ್ರಸಿದ್ಧಿ ಪಡೆದ ಇಂಡಿ ಕ್ಷೇತ್ರವು ವಿಜಯಪುರ ಜಿಲ್ಲೆಯ ಒಂದು ವಿಧಾನಸಭಾ ಕ್ಷೇತ್ರ. ಕರ್ನಾಟಕದ ಉತ್ತರದ ಗಡಿಯಲ್ಲಿರುವ ಇಂಡಿಯು ಉತ್ತರಕ್ಕೆ ಮಹಾರಾಷ್ಟ್ರದ ಸೊಲ್ಲಾಪುರ ಜಿಲ್ಲೆ, ಪಶ್ಚಿಮಕ್ಕೆ ಮಹಾರಾಷ್ಟ್ರದ ಸಾಂಗಲಿ ಜಿಲ್ಲೆ , ದಕ್ಷಿಣಕ್ಕೆ ವಿಜಯಪುರ ತಾಲ್ಲೂಕು ಮತ್ತು ಪೂರ್ವಕ್ಕೆ ಸಿಂದಗಿ ತಾಲ್ಲೂಕುಗಳಿವೆ.

ಅವಿಭಜಿತ ವಿಜಯಪುರ ಜಿಲ್ಲೆಯ ಶೈಕ್ಷಣಿಕ ಕ್ಷೇತ್ರದಲ್ಲಿ ತನ್ನದೇ ಛಾಪು ಮೂಡಿಸಿರುವ ಬಿಎಲ್‌ಡಿಇ ಸಂಸ್ಥೆಯ ಶ್ರೇಯೋಭಿವೃದ್ಧಿಗೆ ಶ್ರಮಿಸಿದ ಬಂಥನಾಳದ ಸಂಗನಬಸವ ಶಿವಯೋಗಿಗಳ ಕಾರ್ಯಕ್ಷೇತ್ರ. ಲಚ್ಯಾಣದ ಕಮರಿಮಠದ ಸಿದ್ಧಲಿಂಗ ಮಹಾರಾಜರು ನೆಲೆಸಿದ ನೆಲೆವೀಡು.

ಶತ ಶತಮಾನಗಳ ಹಿಂದೆಯೇ ಪ್ರಸಿದ್ಧ ವಿದ್ಯಾಕೇಂದ್ರ ಸಾಲೋಟಗಿಯಲ್ಲಿತ್ತು ಎಂಬ ಐತಿಹ್ಯ. ಸಾಧು–ಸಂತರು ಜನ್ಮ ತಾಳಿದ ಸುಕ್ಷೇತ್ರ. ಶಿಲಾಯುಗ ಸೇರಿದಂತೆ ರಾಮಾಯಣ ಕಾಲಘಟ್ಟದ ಇತಿಹಾಸ. ಪುರಾತನ ಸ್ಥಳ ಎಂಬ ಉಲ್ಲೇಖವೂ ಈಜಿಪ್ಟ್‌ನ ಖ್ಯಾತ ಭೂಗೋಳ ಶಾಸ್ತ್ರಜ್ಞ ಟಾಲೆಮಿ ರಚಿತ ಗ್ರಂಥದಲ್ಲಿ ದಾಖಲಾಗಿದೆ.

ಭೀಮಾ ನದಿ ವಿಜಯಪುರ ಜಿಲ್ಲೆಯ ವ್ಯಾಪ್ತಿಯಲ್ಲಿ ಹೆಚ್ಚು ಹರಿಯುವುದೇ ಇಂಡಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ. ಅಪರಾಧಿಕ ಚಟುವಟಿಕೆಗಳಿಂದಲೂ ಇಂಡಿ ರಾಜ್ಯದಲ್ಲೇ ಕುಖ್ಯಾತ. ಭೀಮಾ ತೀರ ಎಂದರೇ ಇಂದಿಗೂ ಬೆಚ್ಚಿ ಬೀಳುವವರು ಇದ್ದಾರೆ.

ಯಶವಂತರಾಯಗೌಡ ಪಾಟೀಲರು ಪಂಚಾಯಿತಿ ಮಟ್ಟದಿಂದಲೇ ಈ ಹಂತಕ್ಕೆ ಬೆಳೆದವರು. 1995ರಲ್ಲಿ ಅಂಜುಟಗಿ ಜಿಪಂ ಕ್ಷೇತ್ರದಿಂದ ಆಯ್ಕೆಯಾದ ಇವರು, ಮೊದಲ ಸಲ ಗೆದ್ದಾಗಲೇ ಜಿಲ್ಲಾ ಪರಿಷತ್‌ ಪ್ರತಿಪಕ್ಷದ ನಾಯಕರಾಗಿದ್ದರು. 2000ರಲ್ಲಿ 2ನೇ ಬಾರಿ ಆಯ್ಕೆಯಾಗಿ 2002-03ರಲ್ಲಿ ಜಿಪಂ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಿದ್ದಾರೆ. 2005ಲ್ಲಿ 3ನೇ ಬಾರಿ ಜಿಪಂ ಸದಸ್ಯರಾದರು. 2008ರಲ್ಲಿ ಇಂಡಿ ವಿಧಾನಸಭೆ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿಯಾಗಿ ಸ್ಪರ್ಧಿಸಿ ಕೇವಲ 571 ಮತಗಳಿಂದ ಪರಾಭವಗೊಂಡರು. 2013ರಲ್ಲಿ ಮೊದಲ ಬಾರಿ ಶಾಸಕರಾಗಿ ಆಯ್ಕೆಯಾದರು.

ಕ್ಷೇತ್ರದ ವಿಶೇಷತೆ

  • ಮಲ್ಲಪ್ಪ ಸುರಪುರ, ರೇವಣಸಿದ್ದಪ್ಪ ಕಲ್ಲೂರ ಹಾಗೂ ರವಿಕಾಂತ ಪಾಟೀಲರು 3 ಬಾರಿ ಆಯ್ಕೆಯಾಗಿದ್ದಾರೆ. ಇಂಡಿ ವಿಧಾನಸಭಾ ಕ್ಷೇತ್ರದ ಮತದಾರರು ಮೂವರಿಗೆ ತಲಾ ಮೂರು ಬಾರಿ ಶಾಸಕರಾಗುವ ಅವಕಾಶ ನೀಡಿದ್ದಾರೆ. ಅದರಲ್ಲೂ ರವಿಕಾಂತ ಪಾಟೀಲ ಪಕ್ಷೇತರರಾಗಿ ಹ್ಯಾಟ್ರಿಕ್‌ ವಿಜಯಭೇರಿ ಬಾರಿಸಿದ ಕ್ಷೇತ್ರವಿದು.
  • 1978, 1983, 1989ರಲ್ಲಿ ರೇವಣಸಿದ್ದಪ್ಪ ಕಲ್ಲೂರ ಶಾಸಕರಾದ ಆಗಿನ ಮುಖ್ಯಮಂತ್ರಿ ಗುಂಡೂರಾವ್‌ಗೆ 9 ಕೆ.ಜಿ. ತೂಕದ ಬೆಳ್ಳಿ ಪಂಪ್‌ಸೆಟ್‌ ನೀಡಿದ ಹೆಗ್ಗಳಿಕೆ ಇವರದ್ದು.
  • 1994, 1999, 2004ರಲ್ಲಿ INDರಾಗಿ ಮೊದಲ ಬಾರಿಗೆ ಹ್ಯಾಟ್ರಿಕ್‌ ವಿಜಯಭೇರಿ ದಾಖಲಿಸಿದ ಕೀರ್ತಿ ರವಿಕಾಂತ ಪಾಟೀಲರದ್ದು.
  • 2008ರಲ್ಲಿ ಡಾ.ಸರ್ವಭೌಮ ಬಗಲಿಯವರು BJPಯಿಂದ ಕೇವಲ ಒಮ್ಮೆ ಆಯ್ಕೆಯಾಗಿದ್ದು ಈ ಕ್ಷೇತ್ರದ ವಿಶೇಷತೆಯಾಗಿದೆ.
  • ಕಾಂಗ್ರೆಸನ ಯಶವಂತಗೌಡ ಪಾಟೀಲರು ಕಳೆದ 40 ವರ್ಷಗಳಿಂದ ನೆನೆಗುದಿಗೆ ಬಿದ್ದಿದ್ದ ಮರಗೂರಿನ ಭೀಮಾಶಂಕರ ಸಹಕಾರಿ ಸಕ್ಕರೆ ಕಾರ್ಖಾನೆಯನ್ನು 2018ರಲ್ಲಿ ಪೂರ್ಣಗೊಳಿಸಿದ್ದು ಇವರ ಹೆಗ್ಗಳಿಕೆ.

ಜನಪ್ರತಿನಿಧಿಗಳ ವಿವರ

ವರ್ಷ ವಿಧಾನ ಸಭಾ ಕ್ಷೆತ್ರ ವಿಜೇತರು ಪಕ್ಷ ಮತಗಳು ಉಪಾಂತ ವಿಜೇತರು ಪಕ್ಷ ಮತಗಳು
ಇಂಡಿ ವಿಧಾನಸಭಾ ಕ್ಷೇತ್ರ ಕರ್ನಾಟಕ ರಾಜ್ಯ
2018 ಇಂಡಿ ವಿಧಾನಸಭಾ ಕ್ಷೇತ್ರ ಯಶವಂತರಾಯಗೌಡ ಪಾಟೀಲ INC 50401 ಬಿ.ಡಿ.ಪಾಟೀಲ(ಹಂಜಗಿ) JDS 40463
2013 ಇಂಡಿ ವಿಧಾನಸಭಾ ಕ್ಷೇತ್ರ ಯಶವಂತರಾಯಗೌಡ ಪಾಟೀಲ INC 58562 ರವಿಕಾಂತ ಪಾಟೀಲ KJP 25260
2008 ಇಂಡಿ ವಿಧಾನಸಭಾ ಕ್ಷೇತ್ರ ಡಾ.ಸರ್ವಭೌಮ ಬಗಲಿ BJP 29456 ಯಶವಂತರಾಯಗೌಡ ಪಾಟೀಲ INC 28885
2004 ಇಂಡಿ ವಿಧಾನಸಭಾ ಕ್ಷೇತ್ರ ರವಿಕಾಂತ ಪಾಟೀಲ SWA 42984 ಬಿ.ಜಿ.ಪಾಟೀಲ(ಹಲಸಂಗಿ) INC 33652
1999 ಇಂಡಿ ವಿಧಾನಸಭಾ ಕ್ಷೇತ್ರ ರವಿಕಾಂತ ಪಾಟೀಲ SWA 44523 ಬಿ.ಆರ್.ಪಾಟೀಲ(ಅಂಜುಟಗಿ) INC 25203
1994 ಇಂಡಿ ವಿಧಾನಸಭಾ ಕ್ಷೇತ್ರ ರವಿಕಾಂತ ಪಾಟೀಲ SWA 23200 ಬಿ.ಜಿ.ಪಾಟೀಲ(ಹಲಸಂಗಿ) JDS 19469
1989 ಇಂಡಿ ವಿಧಾನಸಭಾ ಕ್ಷೇತ್ರ ಆರ್.ಆರ್. ಕಲ್ಲೂರ INC 27154 ಬಿ.ಜಿ.ಪಾಟೀಲ(ಹಲಸಂಗಿ) JDS 18438
1985 ಇಂಡಿ ವಿಧಾನಸಭಾ ಕ್ಷೇತ್ರ ಎನ್.ಎಸ್.ಖೇಡ JNP 30349 ಭೀಮನಗೌಡ ಪಾಟೀಲ INC 23541
1983 ಇಂಡಿ ವಿಧಾನಸಭಾ ಕ್ಷೇತ್ರ ಆರ್.ಆರ್. ಕಲ್ಲೂರ INC 24132 ಬಸನಗೌಡ ಪಾಟೀಲ SWA 11098
1978 ಇಂಡಿ ವಿಧಾನಸಭಾ ಕ್ಷೇತ್ರ ಆರ್.ಆರ್. ಕಲ್ಲೂರ JNP 26022 ಸಿದ್ದೂಬಾ ಮಿಸಾಳೆ INC 15856
ಇಂಡಿ ವಿಧಾನಸಭಾ ಕ್ಷೇತ್ರ ಮೈಸೂರು ರಾಜ್ಯ
1972 ಇಂಡಿ ವಿಧಾನಸಭಾ ಕ್ಷೇತ್ರ ಮಲ್ಲಪ್ಪ ಕರಬಸಪ್ಪ ಸುರಪುರ INC 17517 ಆರ್.ಆರ್. ಕಲ್ಲೂರ NCO 14490
1967 ಇಂಡಿ ವಿಧಾನಸಭಾ ಕ್ಷೇತ್ರ ಮಲ್ಲಪ್ಪ ಕರಬಸಪ್ಪ ಸುರಪುರ SWA 15769 ಆರ್.ಆರ್. ಕಲ್ಲೂರ INC 11703
1962 ಇಂಡಿ ವಿಧಾನಸಭಾ ಕ್ಷೇತ್ರ ಗುರುಲಿಂಗಪ್ಪ ಪಾಟೀಲ SWA 14624 ಮಲ್ಲಪ್ಪ ಕರಬಸಪ್ಪ ಸುರಪುರ INC 13673
1957 ಇಂಡಿ ವಿಧಾನಸಭಾ ಕ್ಷೇತ್ರ-2 ಮಲ್ಲಪ್ಪ ಕರಬಸಪ್ಪ ಸುರಪುರ INC 23033 ಯಶವಂತರಾವ್ ಪಾಟೀಲ SFC 6586
ಇಂಡಿ-ಸಿಂದಗಿ ವಿಧಾನಸಭಾ ಕ್ಷೇತ್ರ ಬಾಂಬೆ ರಾಜ್ಯ
1951 ಇಂಡಿ-ಸಿಂದಗಿ ವಿಧಾನಸಭಾ ಕ್ಷೇತ್ರ-2 ಮಲ್ಲಪ್ಪ ಕರಬಸಪ್ಪ ಸುರಪುರ INC 30322 ರಾವಪ್ಪ ಕಾಳೆ SWA 4536

ಮುದ್ದೇಬಿಹಾಳ ವಿಧಾನಸಭಾ ಕ್ಷೇತ್ರವು ಕರ್ನಾಟಕ ರಾಜ್ಯದ ವಿಜಯಪುರ ಜಿಲ್ಲೆಯ 8 ವಿಧಾನ ಸಭಾ ಕ್ಷೆತ್ರಗಳಲ್ಲಿ ಒಂದಾಗಿದೆ. ಮುದ್ದೇಬಿಹಾಳ ಮತಕ್ಷೇತ್ರ(2018)ದಲ್ಲಿ 1,03,038 ಪುರುಷರು, 97,844 ಮಹಿಳೆಯರು ಸೇರಿ ಒಟ್ಟು 2,00,882 ಮತದಾರರಿದ್ದಾರೆ.

ಕ್ಷೇತ್ರದ ಇತಿಹಾಸ

ಹನ್ನೆರಡನೇ ಶತಮಾನದ ಶರಣ ಶ್ರೇಷ್ಠ ಬಸವಣ್ಣನವರ ಧರ್ಮ ಪತ್ನಿ ನೀಲಾಂಬಿಕೆ ಐಕ್ಯರಾದ ಸ್ಥಳ ತಂಗಡಗಿ. ವಿಜಯನಗರ ಸಾಮ್ರಾಜ್ಯ ಪತನಕ್ಕೆ ಕಾರಣೀಭೂತವಾದ ಯುದ್ಧ ನಡೆದಿದ್ದು ರಕ್ಕಸ-ತಂಗಡಗಿಯಲ್ಲೇ. ಇಲ್ಲಿನ ಮಿಣಜಗಿಯ ಪರ್ಸಿ ಎಲ್ಲೆಡೆ ಪ್ರಸಿದ್ಧಿ. ಮಹಿಳಾ ರಾಜಕಾರಣಿಗೆ ಮನ್ನಣೆ ನೀಡಿದ ಜಿಲ್ಲೆಯ ಏಕೈಕ ವಿಧಾನಸಭಾ ಕ್ಷೇತ್ರ ಮುದ್ದೇಬಿಹಾಳ. ನಾಲ್ಕು ದಶಕಗಳಿಂದ ಎರಡು ಮನೆತನಕ್ಕಷ್ಟೇ ಮನ್ನಣೆ ನೀಡಿರುವುದು ಇಲ್ಲಿನ ವೈಶಿಷ್ಟ್ಯ.

ಆಂಗ್ಲರ ಅಧಿಪತ್ಯ ಅಳಿದು 70 ವರ್ಷಗಳಾದರೂ ಮುದ್ದೇಬಿಹಾಳ ವಿಧಾನಸಭೆ ಕ್ಷೇತ್ರದ ಮತದಾರ ಪ್ರಭು ಇನ್ನೂ ದೇಸಗತಿ ಮನೆತನಕ್ಕೆ ಮಣೆ ಹಾಕುತ್ತಿರುವುದು ಕ್ಷೇತ್ರದ ವಿಶೇಷ. ಊಳುವವನೇ ಒಡೆಯ ಕಾಯ್ದೆಯನ್ವಯ ನೂರಾರು ಎಕರೆ ಜಮೀನು ಬಿಟ್ಟುಕೊಟ್ಟ ಶಾಸಕ ಸಿ.ಎಸ್. ನಾಡಗೌಡ ಹಾಗೂ ಜಗದೇವರಾವ ದೇಶಮುಖ ಮನೆತನಕ್ಕೆ ಇಲ್ಲಿನ ಮತದಾರರು ಅಧಿಕಾರದ ಫಲ ನೀಡುತ್ತಲೇ ಇದ್ದಾರೆ. 1978 ರಿಂದ 2018ರವರೆಗೆ ಸುಮಾರು 40 ವರ್ಷಗಳ ಕಾಲ ಚುನಾವಣೆವರೆಗಿನ ಕ್ಷೇತ್ರದ ಇತಿಹಾಸ ಗಮನಿಸಿದಾಗ ಹೆಚ್ಚಿನ ಅಧಿಕಾರ ಅನುಭವಿಸಿದ್ದು ಇದೇ ಎರಡು ಮನೆತಗಳು ಎಂಬುದು ಗಮನಾರ್ಹ.

1994ರಲ್ಲಿ ನಡೆದ ಚುನಾವಣೆಯಲ್ಲಿ ಸಚಿವರಾಗಿದ್ದ ಸಿ.ಎಸ್‌.ನಾಡಗೌಡರನ್ನು ಸೋಲಿಸಿ, ವಿಜಯ ಪತಾಕೆ ಹಾರಿಸಿದ ವಿಮಲಾಬಾಯಿ ದೇಶಮುಖ ಜಿಲ್ಲೆಯ ಎರಡನೇ ಮಹಿಳಾ ಶಾಸಕಿ. ಜನತಾದಳ ಸರ್ಕಾರದಲ್ಲಿ ಸಚಿವರಾಗಿಯೂ ಕಾರ್ಯ ನಿರ್ವಹಿಸಿದರು.

ದೇಶಮುಖ ಮನೆತನದ ನಾಯಕ ಜಗದೇವರಾವ ಸಂಗನಬಸಪ್ಪ ದೇಶಮುಖರು ಸತತ ಮೂರು ಬಾರಿ ಕ್ಷೇತ್ರದಲ್ಲಿ ವಿಜಯ ಪತಾಕೆ ಹಾರಿಸಿದ್ದರು. ಅವರ ಅಕಾಲಿಕ ನಿಧನ ಬಳಿಕ ಕ್ಷೇತ್ರ ಕೈ ತಪ್ಪಿತು. ಮಧ್ಯಂತರದಲ್ಲಿ ಅಧಿಕಾರ ಕಸಿದುಕೊಂಡಿದ್ದ ಸಿ.ಎಸ್. ನಾಡಗೌಡರಿಂದ ಮತ್ತೆ ಕ್ಷೇತ್ರ ಕೈವಶ ಮಾಡಿಕೊಳ್ಳುವಲ್ಲಿ ಜಗದೇವರಾವ ಅವರ ಪತ್ನಿ ವಿಮಲಾಬಾಯಿ ಸಫಲರಾದರು. 1994ರಲ್ಲಿ ಅನುಕಂಪದ ಆಧಾರದ ಮೇಲೆ ವಿಮಲಾದೇವಿ ಭರ್ಜರಿ ಜಯಸಾಧಿಸಿದರು.

ಮುದ್ದೇಬಿಹಾಳ ಕೇತ್ರದಿಂದ 5 ಬಾರಿ ಶಾಸಕರಾಗಿ ಆಯ್ಕೆಯಾದ ಸಿ.ಎಸ್‌.ನಾಡಗೌಡರು ಪಂಚಾಯಿತಿಯಿಂದ ಈ ಮಟ್ಟಕ್ಕೆ ಬೆಳೆದವರು. 1986ರಲ್ಲಿ ನಾಲತವಾಡ ಜಿಪಂ ಕ್ಷೇತ್ರದಿಂದ ಆಯ್ಕೆಯಾಗಿದ್ದ ನಾಡಗೌಡರಿಗೆ 1989ರ ಅಸೆಂಬ್ಲಿ ಚುನಾವಣೆಯಲ್ಲಿ ಅದೃಷ್ಟ ಒಲಿಯಿತು. ಅಲ್ಲಿಂದೀಚೆಗೆ 5 ಬಾರಿ ಶಾಸಕರಾಗಿ, ಮಂತ್ರಿಯಾಗಿ, ಮುಖ್ಯ ಸಚೇತಕ, ಪ್ರಸ್ತುತ ಸರಕಾರದಲ್ಲಿ ದಿಲ್ಲಿ ವಿಶೇಷ ಪ್ರತಿನಿಧಿಯಾಗಿದ್ದಾರೆ.

1957ರಲ್ಲಿ ಸಿದ್ಧಾಂತಿ ಪ್ರಾಣೇಶ ಗುರುಭಟ್ಟ (ಬ್ರಾಹ್ಮಣ), 1972ರಲ್ಲಿ ಮಲ್ಲಪ್ಪ ಮುರಗೆಪ್ಪ ಸಜ್ಜನ(ಗಾಣಿಗ) ಶಾಸಕರಾಗಿ ಆಯ್ಕೆಯಾಗಿದ್ದು ಹೊರತುಪಡಿಸಿದರೆ, ಉಳಿದ ಅವಧಿಗೆ (1978ರಿಂದ 2018ರವರೆಗಿನ ನಾಲ್ಕು ದಶಕಗಳ ಅವಧಿ) ಆಯ್ಕೆಯಾದವರು ಪಂಚಮಸಾಲಿ ಮತ್ತು ರಡ್ಡಿ ಸಮುದಾಯದವರು.

ಸತತ ಮೂರು ಬಾರಿ ಜೆ.ಎಸ್‌.ದೇಶಮುಖ (ಪಂಚಮಸಾಲಿ), 1994ರಲ್ಲಿ ವಿಮಲಾಬಾಯಿ ದೇಶಮುಖ ಆಯ್ಕೆಯಾದರೆ, ಉಳಿದ 25 ವರ್ಷದ ಅವಧಿ ಸಿ.ಎಸ್‌.ನಾಡಗೌಡ (ರಡ್ಡಿ) ಶಾಸಕರು. ಈ ಅವಧಿಯಲ್ಲಿ ಸ್ಪರ್ಧೆ ನಡೆದಿದ್ದು, ಈ ಎರಡೂ ಮನೆತನಗಳ ನಡುವೆಯೇ. ಒಮ್ಮೆ ಮಾತ್ರ BJPಯ ಮಂಗಳಾದೇವಿ ಬಿರಾದಾರ ಪ್ರಬಲ ಪೈಪೋಟಿ ನೀಡಿದ್ದಾರೆ.

ಪಕ್ಷವಾರು ಸಾಧನೆ ಪರಿಗಣಿಸಿದರೆ ಸದರಿ ಕ್ಷೇತ್ರ INC ಪಕ್ಷ ಹೆಚ್ಚಿನ ಸಂಖ್ಯೆಯಲ್ಲಿ ಈ ಕ್ಷೇತ್ರದಲ್ಲಿ ಗೆದ್ದಿದೆ. 1957ರ ಸಾರ್ವತ್ರಿಕ ಚುನಾವಣೆ ಗಣನೆಗೆ ತೆಗೆದುಕೊಳ್ಳುವುದಾದರೆ ಅಂದಿನ ಭಾರತೀಯ INC ಪಕ್ಷದ ಸಿದ್ಧಾಂತಿ ಪ್ರಾಣೇಶ ಗುರುಭಟ್ಟರು, ಆ ಬಳಿಕ ಶಿವಶಂಕರಪ್ಪ ಮಲ್ಲಪ್ಪ ಗುರಡ್ಡಿ, ಹಾಗೂ ಮಲ್ಲಪ್ಪ ಮುರಗೆಪ್ಪ ಸಜ್ಜನ ಸಾಲಾಗಿ ಆಯ್ಕೆಯಾಗಿದ್ದು INC ಸಾಧನೆ. ಪ್ರಪ್ರಥಮ ಬಾರಿಗೆ ಜನತಾ ಪಕ್ಷದಿಂದ ಜಗದೇವರಾವ ಅವರು ಅಧಿಕಾರ ಕಸಿದುಕೊಂಡು ಹ್ಯಾಟ್ರಿಕ್ ಸಾಧನೆ ಮೆರೆದರು.

1966ರಲ್ಲಿ ಲೋಕಸಭೆ ಹಾಗೂ ವಿಧಾನಸಭೆ ಕ್ಷೇತ್ರಗಳ ಪುನರ್ವಿಂಗಡಣೆಯಾದ ಬಳಿಕ ತಾಳಿಕೋಟೆ ಕ್ಷೇತ್ರವು ಮುದ್ದೇಬಿಹಾಳ ಕ್ಷೇತ್ರದಲ್ಲಿ ವಿಲೀನವಾಯಿತು. ಮೊದಲೆರಡು ಚುನಾವಣೆಯಲ್ಲಿ ಪ್ರತ್ಯೇಕ ವಿಧಾನಸಭೆ ಕ್ಷೇತ್ರವಾಗಿದ್ದ ತಾಳಿಕೋಟೆಯಿಂದ 1957ರಲ್ಲಿ ಕುಮಾರಗೌಡ ಅಡಿವೆಪ್ಪಗೌಡ ಪಾಟೀಲರು SWA ಅಭ್ಯರ್ಥಿಯಾಗಿ(15,200) ಗೆಲುವು ಸಾಧಿಸಿದರು. ಇವರ ವಿರುದ್ಧ ಭಾರತೀಯ INC ಪಕ್ಷದಿಂದ ಶರಣಯ್ಯ ಬಸಲಿಂಗಯ್ಯ ವಸ್ತ್ರದ (12,804) ಪರಾಜಯಗೊಂಡರು. ಆ ಬಳಿಕ 1962ರಲ್ಲಿ ಗದಿಗೆಪ್ಪಗೌಡ ನಿಂಗನಗೌಡ ಪಾಟೀಲ ಭಾರತೀಯ ಕಾಂಗ್ರೆಸ್ನಿಂದ ಅವಿರೋಧ ಆಯ್ಕೆಯಾದರು.

ಕ್ಷೇತ್ರದ ವಿಶೇಷತೆ

  • 1962ರಲ್ಲಿ ಗದಿಗೆಪ್ಪಗೌಡ ನಿಂಗನಗೌಡ ಪಾಟೀಲರು ಭಾರತೀಯ ಕಾಂಗ್ರೆಸ್ನಿಂದ ಜಿಲ್ಲೆಯಲ್ಲಿ ಈವರೆಗೆ ಅವಿರೋಧ ಆಯ್ಕೆಯಾದ ಏಕೈಕ ಶಾಸಕರಾಗಿದ್ದು ವಿಶೇಷವಾಗಿದೆ.
  • ಜಗದೇವರಾವ ದೇಶಮುಖರವರು ಇಂಧನ ಖಾತೆ ಸಚಿವರಾಗಿದ್ದರು.
  • ವಿಮಲಾಬಾಯಿ ದೇಶಮುಖರವರು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆಯಾಗಿದ್ದರು.
  • ಸಿ.ಎಸ್.ನಾಡಗೌಡರು ಕಾರ್ಮಿಕ ಸಚಿವ ಮತ್ತು ಸರ್ಕಾರದ ಮುಖ್ಯ ಸಚೇತಕ, ನವದೆಹಲಿ ವಿಶೇಷ ಪ್ರತಿನಿಧಿಯಾಗಿದ್ದು ಕ್ಷೇತ್ರದ ಮೈಲಿಗಲ್ಲು.
  • ಜನತಾ ಪಕ್ಷದಿಂದ ಜಗದೇವರಾವರವರು ಹ್ಯಾಟ್ರಿಕ್ ಆಯ್ಕೆಯಾಗಿದ್ದು ಕ್ಷೇತ್ರದ ವಿಶೇಷತೆಯಾಗಿದೆ.
  • ಸಿ.ಎಸ್.ನಾಡಗೌಡರು INC ಪಕ್ಷದಿಂದ ಹ್ಯಾಟ್ರಿಕ್ ಬಾರಿಸಿ ಐದು ಬಾರಿ ಆಯ್ಕೆಯಾಗಿದ್ದು ಕ್ಷೇತ್ರದ ಮತ್ತೊಂದು ವಿಶೇಷತೆಯಾಗಿದೆ.
  • ನಾಡಗೌಡ ಹಾಗೂ ದೇಶಮುಖ ಮನೆತನಕ್ಕೆ ಇಲ್ಲಿನ ಮತದಾರರು 1978 ರಿಂದ 2018ರವರೆಗೆ ಸುಮಾರು 40 ವರ್ಷಗಳ ಕಾಲ ಕ್ಷೇತ್ರದ ಇತಿಹಾಸ ಗಮನಿಸಿದಾಗ ಹೆಚ್ಚಿನ ಅಧಿಕಾರ ಅನುಭವಿಸಿದ್ದು ಇದೇ ಎರಡು ಮನೆತಗಳು ಎಂಬುದು ಗಮನಾರ್ಹ.
  • ಎ.ಎಸ್.ಪಾಟೀಲ(ನಡಹಳ್ಳಿ)ಯವರು ಮೊದಲ ಬಾರಿಗೆ 2018ರಲ್ಲಿ BJPಯಿಂದ ಗೆದ್ದಿರುವುದು ವಿಶೇಷವಾಗಿದೆ.

ಜನಪ್ರತಿನಿಧಿಗಳ ವಿವರ

ವರ್ಷ ವಿಧಾನ ಸಭಾ ಕ್ಷೆತ್ರ ವಿಜೇತ ಪಕ್ಷ ಮತಗಳು ಉಪಾಂತ ವಿಜೇತ ಪಕ್ಷ ಮತಗಳು
ಮುದ್ದೇಬಿಹಾಳ ವಿಧಾನಸಭಾ ಕ್ಷೇತ್ರ ಕರ್ನಾಟಕ ರಾಜ್ಯ
2018 ಮುದ್ದೇಬಿಹಾಳ ವಿಧಾನಸಭಾ ಕ್ಷೇತ್ರ ಎ.ಎಸ್.ಪಾಟೀಲ(ನಡಹಳ್ಳಿ) BJP 63512 ಸಿ.ಎಸ್.ನಾಡಗೌಡ INC 54879
2013 ಮುದ್ದೇಬಿಹಾಳ ವಿಧಾನಸಭಾ ಕ್ಷೇತ್ರ ಸಿ.ಎಸ್.ನಾಡಗೌಡ INC 34747 ವಿಮಲಾಬಾಯಿ ದೇಶಮುಖ KJP 22545
2008 ಮುದ್ದೇಬಿಹಾಳ ವಿಧಾನಸಭಾ ಕ್ಷೇತ್ರ ಸಿ.ಎಸ್.ನಾಡಗೌಡ INC 24065 ಮಂಗಳಾದೇವಿ ಬಿರಾದಾರ BJP 21662
2004 ಮುದ್ದೇಬಿಹಾಳ ವಿಧಾನಸಭಾ ಕ್ಷೇತ್ರ ಸಿ.ಎಸ್.ನಾಡಗೌಡ INC 30203 ವಿಮಲಾಬಾಯಿ ದೇಶಮುಖ JDS 27776
1999 ಮುದ್ದೇಬಿಹಾಳ ವಿಧಾನಸಭಾ ಕ್ಷೇತ್ರ ಸಿ.ಎಸ್.ನಾಡಗೌಡ INC 43662 ವಿಮಲಾಬಾಯಿ ದೇಶಮುಖ JDU 32632
1994 ಮುದ್ದೇಬಿಹಾಳ ವಿಧಾನಸಭಾ ಕ್ಷೇತ್ರ ವಿಮಲಾಬಾಯಿ ದೇಶಮುಖ JD 39149 ಸಿ.ಎಸ್.ನಾಡಗೌಡ INC 21756
1989 ಮುದ್ದೇಬಿಹಾಳ ವಿಧಾನಸಭಾ ಕ್ಷೇತ್ರ ಸಿ.ಎಸ್.ನಾಡಗೌಡ INC 31933 ಜಗದೇವರಾವ್ ದೇಶಮುಖ JD 29840
1985 ಮುದ್ದೇಬಿಹಾಳ ವಿಧಾನಸಭಾ ಕ್ಷೇತ್ರ ಜಗದೇವರಾವ್ ದೇಶಮುಖ JNP 35056 ಬಸವರಾವ್ ಜಗ್ಗಲ INC 16052
1983 ಮುದ್ದೇಬಿಹಾಳ ವಿಧಾನಸಭಾ ಕ್ಷೇತ್ರ ಜಗದೇವರಾವ್ ದೇಶಮುಖ JNP 21885 ರಾಮರಾವ್ ಭಗವಂತ SWA 9530
1978 ಮುದ್ದೇಬಿಹಾಳ ವಿಧಾನಸಭಾ ಕ್ಷೇತ್ರ ಜಗದೇವರಾವ್ ದೇಶಮುಖ JNP 28857 ಮಲ್ಲಪ್ಪ ಸಜ್ಜನ INC 11486
ಮುದ್ದೇಬಿಹಾಳ ವಿಧಾನಸಭಾ ಕ್ಷೇತ್ರ ಮೈಸೂರು ರಾಜ್ಯ
1972 ಮುದ್ದೇಬಿಹಾಳ ವಿಧಾನಸಭಾ ಕ್ಷೇತ್ರ ಮಲ್ಲಪ್ಪ ಸಜ್ಜನ INC 17778 ಶಿವಶಂಕರಪ್ಪ ಗುರಡ್ಡಿ NCO 17021
1967 ಮುದ್ದೇಬಿಹಾಳ ವಿಧಾನಸಭಾ ಕ್ಷೇತ್ರ ಶಿವಶಂಕರಪ್ಪ ಗುರಡ್ಡಿ INC 19452 ಶ್ರೀಶೈಲಪ್ಪ ಮಸಳಿ SWA 14740
1962 ಮುದ್ದೇಬಿಹಾಳ ವಿಧಾನಸಭಾ ಕ್ಷೇತ್ರ ಶಿವಶಂಕರಪ್ಪ ಗುರಡ್ಡಿ INC 13969 ಶ್ರೀಶೈಲಪ್ಪ ಮಸಳಿ SWA 10680
1957 ಮುದ್ದೇಬಿಹಾಳ ವಿಧಾನಸಭಾ ಕ್ಷೇತ್ರ ಸಿದ್ಧಾಂತಿ ಪ್ರಾಣೇಶ ಭಟ್ INC 12888 ಶಿವಬಸವಸ್ವಾಮಿ ವಿರಕ್ತಮಠ SWA 11657
ಮುದ್ದೇಬಿಹಾಳ ವಿಧಾನಸಭಾ ಕ್ಷೇತ್ರ ಬಾಂಬೆ ರಾಜ್ಯ
1951 ಮುದ್ದೇಬಿಹಾಳ ವಿಧಾನಸಭಾ ಕ್ಷೇತ್ರ ಸಿದ್ಧಾಂತಿ ಪ್ರಾಣೇಶ ಭಟ್ INC 16627 ಭೀಮನಗೌಡ ಪಾಟೀಲ KMPP 7745

ದೇವರ ಹಿಪ್ಪರಗಿ ವಿಧಾನಸಭಾ ಕ್ಷೇತ್ರವು ಕರ್ನಾಟಕ ರಾಜ್ಯದ ವಿಜಯಪುರ ಜಿಲ್ಲೆಯ 8 ವಿಧಾನ ಸಭಾ ಕ್ಷೆತ್ರಗಳಲ್ಲಿ ಒಂದಾಗಿದೆ. ದೇವರ ಹಿಪ್ಪರಗಿ ಮತಕ್ಷೇತ್ರ(2018)ದಲ್ಲಿ 1,07,407 ಪುರುಷರು, 99,773 ಮಹಿಳೆಯರು ಸೇರಿ ಒಟ್ಟು 2,07,180 ಮತದಾರರಿದ್ದಾರೆ.

ಕ್ಷೇತ್ರದ ಇತಿಹಾಸ

ಪುಣ್ಯಕ್ಷೇತ್ರವಾಗಿ ಪ್ರಸಿದ್ಧಿ ಪಡೆದ ದೇವರ ಹಿಪ್ಪರಗಿ ಗ್ರಾಮ ವಿಜಯಪುರ - ಗುಲ್ಬರ್ಗಾ ಹೆದ್ದಾರಿಯಲ್ಲಿದೆ. ಮೂರು ತಾಲೂಕುಗಳನ್ನೊಳಗೊಂಡಿರೋ ಈ ವಿಧಾನಸಭಾ ಕ್ಷೇತ್ರವಾಗಿದೆ. 2008ರಲ್ಲಿ ಈ ಕ್ಷೇತ್ರದ ಹೆಸರು ದೇವರ ಹಿಪ್ಪರಗಿ ಎಂದು ಬದಲಾಯಿತು. ಮುಂಚೆ ಹೂವಿನಹಿಪ್ಪರಗಿ ಕ್ಷೇತ್ರವಾಗಿತ್ತು. ಬಸವನ ಬಾಗೇವಾಡಿ ತಾಲ್ಲೂಕಿನ ನಿಡಗುಂದಿ ಹೋಬಳಿ ಕೈಬಿಟ್ಟು, ಸಿಂದಗಿ ತಾಲ್ಲೂಕಿನ ದೇವರ ಹಿಪ್ಪರಗಿ ಹೋಬಳಿಯನ್ನು ಈ ಕ್ಷೇತ್ರದಲ್ಲಿ ಸೇರಿಸಲಾಯಿತು.

INC ಅಭ್ಯರ್ಥಿ ಎ.ಎಸ್.ಪಾಟೀಲ(ನಡಹಳ್ಳಿ) ಸತತ 2013 ಮತ್ತು 2008ರಲ್ಲಿ ಎರಡು ಬಾರಿ ಗೆದ್ದಿದ್ದಾರೆ. ಬಿ.ಎಸ್.ಪಾಟೀಲ(ಸಾಸನೂರ)ರು ಒಟ್ಟು 6 ಸಲ ಸ್ಪರ್ಧಿಸಿ 4 ಬಾರಿ ಆಯ್ಕೆಯಾಗಿ ವೀರಪ್ಪ ಮೊಯಿಲಿ ಅವರ ಸಂಪುಟದಲ್ಲಿ ಬಿ.ಎಸ್ ಪಾಟೀಲ (ಸಾಸನೂರ) ಅವರು ಆರೋಗ್ಯ ಖಾತೆ ಹಾಗೂ ಎಸ್.ಎಂ. ಕೃಷ್ಣ ಸಂಪುಟದಲ್ಲಿ ಕೃಷಿ ಉತ್ಪನ್ನ ಮಾರುಕಟ್ಟೆ ಸಚಿವರಾಗಿದ್ದರು. ಶಿವಪುತ್ರಪ್ಪ ದೇಸಾಯಿ ಅವರು ಜೆ.ಎಚ್. ಪಟೇಲ್ ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ಭೂಸೇನಾ ನಿಗಮದ ಅಧ್ಯಕ್ಷರಾಗಿದ್ದರು. ಶಿವಪುತ್ರಪ್ಪ ದೇಸಾಯಿ 5 ಬಾರಿ ಸ್ಪರ್ಧಿಸಿ 3 ಬಿ.ಎಸ್.ಪಾಟೀಲ(ಸಾಸನೂರ)ನ್ನು ಸೋಲಿಸಿ ಆಯ್ಕೆಯಾಗಿದ್ದು ಹಾಗೂ ಇಬ್ಬರು ಸಂಬಂಧಿಕರಾಗಿದ್ದು ವಿಶೇಷವಾಗಿದೆ. ಶಿವಪುತ್ರಪ್ಪ ದೇಸಾಯಿಯವರು ಉಗ್ರಾಣ ನಿಗಮದ ಮಾಜಿ ಅಧ್ಯಕ್ಷರು. 1978ರಿಂದ 2008ವರೆಗೆ ಶಿವಪುತ್ರಪ್ಪ ದೇಸಾಯಿ ಹಾಗೂ ಬಿ.ಎಸ್.ಪಾಟೀಲ(ಸಾಸನೂರ) ನಡುವೆ ಸ್ಪರ್ಧೆ ಏರ್ಪಟ್ಟಿತ್ತು.

ಬಿ.ಎಸ್.ಪಾಟೀಲ(ಸಾಸನೂರ) 1978ರಲ್ಲಿ ಜನತಾ ಪಕ್ಷದಿಂದ ಹಾಗೂ 1983ರಲ್ಲಿ ಕಾಂಗ್ರೆಸ್‌ನಿಂದ ಆಯ್ಕೆಯಾಗಿದ್ದರು. ನಂತರ 1986ರಲ್ಲಿ ಚುನಾವಣೆ ಎದುರಾಯಿತು. ಇದು ಮಾವ-ಅಳಿಯನ ಆಖಾಡಕ್ಕೆ ಸಾಕ್ಷಿಯಾಗಿತ್ತು. ಜನತಾ ಪಕ್ಷದಿಂದ ಸ್ಪರ್ಧಿಸಿದ ಅಳಿಯ ಶಿವಪುತ್ರಪ್ಪ ದೇಸಾಯಿ, ಮಾವ ಸಾಸನೂರ ಅವರ ಹ್ಯಾಟ್ರಿಕ್ ಸಾಧನೆಗೆ ಬ್ರೇಕ್ ನೀಡಿದ್ದರು. ಮತ್ತೆ 1989ರಲ್ಲಿ ಮಾವ ಬಿಎಸ್ ಪಾಟೀಲ ಸಾಸನೂರ ಅಳಿಯ ಶಿವಪುತ್ರಪ್ಪ ದೇಸಾಯಿ ಅವರನ್ನು 15395 ಮತಗಳಿಂದ ಪರಾಭವಗೊಳಿಸಿದ್ದರು. ನಂತರ 1994ರಲ್ಲಿ ಅದೇ ಪಕ್ಷದಿಂದ ಶಿವಪುತ್ರಪ್ಪ ದೇಸಾಯಿ ತಮ್ಮ ಮಾವನನ್ನು 12427 ಮತಗಳಿಂದ ಸೋಲಿಸಿದರು. 1999ರಲ್ಲಿ ಎದುರಾದ ಚುನಾವಣೆಯಲ್ಲಿ ಪುನಃ ಬಿಎಸ್ ಪಾಟೀಲ ಸಾಸನೂರ ಅಳಿಯನನ್ನು ಪರಾಭಗೊಳಿಸಿದರೆ, 2004ರಲ್ಲಿ ನಡೆದ ಚುನಾವಣೆಯಲ್ಲಿ ಮುಯ್ಯಿಗೆ ಮುಯ್ಯಿ ಎಂಬಂತೆ ಶಿವಪುತ್ರಪ್ಪ ದೇಸಾಯಿ ಅವರು ಮತ್ತೆ ಮಾವನನ್ನು ಸೋಲಿಸಿದ್ದರು.

ಕ್ಷೇತ್ರದ ವಿಶೇಷತೆ

  • ಬಸವನ ಬಾಗೇವಡಿ, ಸಿಂದಗಿ ಮತ್ತು ಮುದ್ದೇಬಿಹಾಳ ಮೂರು ತಾಲೂಕುಗಳನ್ನೊಳಗೊಂಡಿರೋ ವಿಧಾನಸಭಾ ಕ್ಷೇತ್ರವಾಗಿದೆ.
  • ಬಿ.ಎಸ್.ಪಾಟೀಲ(ಸಾಸನೂರ)ರು ವೀರಪ್ಪ ಮೊಯಿಲಿ ಅವರ ಸಂಪುಟದಲ್ಲಿ ಆರೋಗ್ಯ ಖಾತೆ ಹಾಗೂ ಎಸ್.ಎಂ. ಕೃಷ್ಣ ಸಂಪುಟದಲ್ಲಿ ಕೃಷಿ ಉತ್ಪನ್ನ ಮಾರುಕಟ್ಟೆ ಸಚಿವರಾಗಿದ್ದರು.
  • ಶಿವಪುತ್ರಪ್ಪ ದೇಸಾಯಿ ಅವರು ಜೆ.ಎಚ್. ಪಟೇಲ್ ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ಭೂಸೇನಾ ನಿಗಮ ಮತ್ತು ಉಗ್ರಾಣ ನಿಗಮದ ಅಧ್ಯಕ್ಷರಾಗಿದ್ದರು.
  • ಶಿವಪುತ್ರಪ್ಪ ದೇಸಾಯಿ ಮತ್ತು ಬಿ.ಎಸ್.ಪಾಟೀಲ(ಸಾಸನೂರ)ರು ಮಾವ-ಅಳಿಯನ ಆಖಾಡಕ್ಕೆ ಸಾಕ್ಷಿಯಾಗಿತ್ತು.
  • ಬಿ.ಎಸ್.ಪಾಟೀಲ(ಸಾಸನೂರ)ರು ಒಟ್ಟು 6 ಸಲ ಸ್ಪರ್ಧಿಸಿ 4 ಬಾರಿ ಆಯ್ಕೆಯಾಗಿದ್ದಾರೆ.
  • ಶಿವಪುತ್ರಪ್ಪ ದೇಸಾಯಿಯವರು ಒಟ್ಟು 5 ಸಲ ಸ್ಪರ್ಧಿಸಿ 3 ಬಾರಿ ಆಯ್ಕೆಯಾಗಿದ್ದಾರೆ. ಒಟ್ಟಾರೆಯಾಗಿ 1978 - 2008ರವರೆಗೆ ಸುಮಾರು 3 ದಶಕಗಳ ಕಾಲ ಮಾವ-ಅಳಿಯನ ಆಖಾಡಕ್ಕೆ ಸಾಕ್ಷಿಯಾಗಿತ್ತು.
  • ಎ.ಎಸ್.ಪಾಟೀಲ(ನಡಹಳ್ಳಿ) ಸತತ 2008 ಮತ್ತು 2013ರಲ್ಲಿ ಎರಡು ಬಾರಿ ಗೆದ್ದಿದ್ದಾರೆ.

ಜನಪ್ರತಿನಿಧಿಗಳ ವಿವರ

ವರ್ಷ ವಿಧಾನ ಸಭಾ ಕ್ಷೆತ್ರ ವಿಜೇತ ಪಕ್ಷ ಮತಗಳು ಉಪಾಂತ ವಿಜೇತ ಪಕ್ಷ ಮತಗಳು
ದೇವರಹಿಪ್ಪರಗಿ ವಿಧಾನಸಭಾ ಕ್ಷೇತ್ರ ಕರ್ನಾಟಕ ರಾಜ್ಯ
2018 ದೇವರಹಿಪ್ಪರಗಿ ವಿಧಾನಸಭಾ ಕ್ಷೇತ್ರ ಸೋಮನಗೌಡ ಪಾಟೀಲ BJP 48245 ರಾಜುಗೌಡ ಪಾಟೀಲ JDS 44892
2013 ದೇವರಹಿಪ್ಪರಗಿ ವಿಧಾನಸಭಾ ಕ್ಷೇತ್ರ ಎ.ಎಸ್.ಪಾಟೀಲ(ನಡಹಳ್ಳಿ) INC 36231 ಸೋಮನಗೌಡ ಪಾಟೀಲ BJP 28135
2008 ದೇವರಹಿಪ್ಪರಗಿ ವಿಧಾನಸಭಾ ಕ್ಷೇತ್ರ ಎ.ಎಸ್.ಪಾಟೀಲ(ನಡಹಳ್ಳಿ) INC 54879 ಬಸನಗೌಡ ಪಾಟೀಲ(ಯತ್ನಾಳ) BJP 23986
2004 ಹೂವಿನಹಿಪ್ಪರಗಿ ವಿಧಾನಸಭಾ ಕ್ಷೇತ್ರ ಶಿವಪುತ್ರಪ್ಪ ದೇಸಾಯಿ BJP 39224 ಬಿ.ಎಸ್.ಪಾಟೀಲ(ಸಾಸನೂರ) INC 32927
1999 ಹೂವಿನಹಿಪ್ಪರಗಿ ವಿಧಾನಸಭಾ ಕ್ಷೇತ್ರ ಬಿ.ಎಸ್.ಪಾಟೀಲ(ಸಾಸನೂರ) INC 46088 ಶಿವಪುತ್ರಪ್ಪ ದೇಸಾಯಿ JDU 28492
1994 ಹೂವಿನಹಿಪ್ಪರಗಿ ವಿಧಾನಸಭಾ ಕ್ಷೇತ್ರ ಶಿವಪುತ್ರಪ್ಪ ದೇಸಾಯಿ JD 35849 ಬಿ.ಎಸ್.ಪಾಟೀಲ(ಸಾಸನೂರ) INC 23422
1989 ಹೂವಿನಹಿಪ್ಪರಗಿ ವಿಧಾನಸಭಾ ಕ್ಷೇತ್ರ ಬಿ.ಎಸ್.ಪಾಟೀಲ(ಸಾಸನೂರ) INC 36588 ಶಿವಪುತ್ರಪ್ಪ ದೇಸಾಯಿ JD 21193
1985 ಹೂವಿನಹಿಪ್ಪರಗಿ ವಿಧಾನಸಭಾ ಕ್ಷೇತ್ರ ಶಿವಪುತ್ರಪ್ಪ ದೇಸಾಯಿ JNP 31748 ಬಿ.ಎಸ್.ಪಾಟೀಲ(ಸಾಸನೂರ) INC 27949
1983 ಹೂವಿನಹಿಪ್ಪರಗಿ ವಿಧಾನಸಭಾ ಕ್ಷೇತ್ರ ಬಿ.ಎಸ್.ಪಾಟೀಲ(ಸಾಸನೂರ) INC 30320 ಬಸನಗೌಡ ಲಿಂ ಪಾಟೀಲ JNP 17872
1978 ಹೂವಿನಹಿಪ್ಪರಗಿ ವಿಧಾನಸಭಾ ಕ್ಷೇತ್ರ ಬಿ.ಎಸ್.ಪಾಟೀಲ(ಸಾಸನೂರ) JNP 26814 ಕುಮಾರಗೌಡ ಪಾಟೀಲ INC(I) 22531
ಹೂವಿನಹಿಪ್ಪರಗಿ ವಿಧಾನಸಭಾ ಕ್ಷೇತ್ರ ಮೈಸೂರು ರಾಜ್ಯ
1972 ಹೂವಿನಹಿಪ್ಪರಗಿ ವಿಧಾನಸಭಾ ಕ್ಷೇತ್ರ ಕೆ.ಡಿ.ಪಾಟೀಲ(ಉಕ್ಕಲಿ) NCO 18331 ಎಲ್.ಆರ್.ನಾಯಕ INC 12855
1967 ಹೂವಿನಹಿಪ್ಪರಗಿ ವಿಧಾನಸಭಾ ಕ್ಷೇತ್ರ ಗದಿಗೆಪ್ಪಗೌಡ ಪಾಟೀಲ INC 15189 ಹೆಚ್.ಕೆ.ಮಾರ್ತಂಡಪ್ಪ SWA 7050
1962 ತಾಳಿಕೋಟ ವಿಧಾನಸಭಾ ಕ್ಷೇತ್ರ ಗದಿಗೆಪ್ಪಗೌಡ ಪಾಟೀಲ INC ಅವಿರೋದ ಆಯ್ಕೆ
1957 ತಾಳಿಕೋಟ ವಿಧಾನಸಭಾ ಕ್ಷೇತ್ರ ಕುಮಾರಗೌಡ ಪಾಟೀಲ IND 15200 ಶರಣಯ್ಯ ವಸ್ತದ INC 12804
ಬಾಗೇವಾಡಿ-ಹಿಪ್ಪರಗಿ ವಿಧಾನಸಭಾ ಕ್ಷೇತ್ರ ಬಾಂಬೆ ರಾಜ್ಯ
1951 ಬಾಗೇವಾಡಿ-ಹಿಪ್ಪರಗಿ ವಿಧಾನಸಭಾ ಕ್ಷೇತ್ರ ಶಂಕರಗೌಡ ಪಾಟೀಲ INC 17752 ಸಾವಳಗೆಪ್ಪ ನಂದಿ KMPP 5507

ಬಸವನ ಬಾಗೇವಾಡಿ ವಿಧಾನಸಭಾ ಕ್ಷೇತ್ರವು ಕರ್ನಾಟಕ ರಾಜ್ಯದ ವಿಜಯಪುರ ಜಿಲ್ಲೆಯ 8 ವಿಧಾನ ಸಭಾ ಕ್ಷೆತ್ರಗಳಲ್ಲಿ ಒಂದಾಗಿದೆ. ಬಸವನ ಬಾಗೇವಾಡಿ ಮತಕ್ಷೇತ್ರ(2018)ದಲ್ಲಿ 1,01,345 ಪುರುಷರು, 95,044 ಮಹಿಳೆಯರು ಸೇರಿ ಒಟ್ಟು 1,96,389 ಮತದಾರರಿದ್ದಾರೆ.

ಕ್ಷೇತ್ರದ ಇತಿಹಾಸ

ಬಸವನ ಬಾಗೇವಾಡಿ ಎಂದೊಡನೆ ನೆನಪಾಗುವುದು ವಚನ ಕ್ರಾಂತಿಯ ಹರಿಕಾರ ಬಸವಣ್ಣ. ಅವರು ಹುಟ್ಟಿದ, ಲಿಂಗೈಕ್ಯರಾದ ಸ್ಥಳವಾಗಿರುವುದರಿಂದ ಇದು ಪುಣ್ಯಕ್ಷೇತ್ರವಾಗಿಯೂ, ಪ್ರವಾಸಿ ತಾಣವಾಗಿಯೂ ಪ್ರಸಿದ್ಧಿ. 12 ನೇ ಶತಮಾನದಲ್ಲಿ ವಚನ ಸಾಹಿತ್ಯದ ಮೂಲಕ ಜಾತಿ ವ್ಯವಸ್ಥೆಯ ವಿರುದ್ಧ ಸಮರ ಸಾರಿದ, ಸಾಮಾಜಿಕ ಜಾಗೃತಿಗೆ ಮುನ್ನುಡಿ ಬರೆದ ಬಸವಣ್ಣನವರು ಲಿಂಗೈಕ್ಯರಾದ ಕೂಡಲಸಂಗಮ ವಿಜಯಪುರ ಜಿಲ್ಲೆಯ ಪ್ರಸಿದ್ಧ ಪ್ರವಾಸಿ ಕೇಂದ್ರಗಳಲ್ಲೊಂದು.

ಕೃಷ್ಣಾ ನದಿಗೆ ಕಟ್ಟಲಾದ ಆಲಮಟ್ಟಿ ಜಲಾಶಯ ಏಷ್ಯಾ ಖಂಡದಲ್ಲೇ ಅತೀ ದೊಡ್ಡದು ಎಂಬ ಖ್ಯಾತಿ ಗಳಿಸಿದೆ. ಆಲಮಟ್ಟಿ ಜಲಾಶಯದಿಂದಾಗಿ ಜಮೀನು, ಮನೆ ಕಳೆದುಕೊಂಡವರು ನೂರಾರು ಜನ. ಇಲ್ಲಿನ ಇಳಕಲ್ಲು ಸೀರೆ ಮತ್ತು ಖಾದಿ ಬಟ್ಟೆ ದೇಶದಲ್ಲೇ ಪ್ರಸಿದ್ಧಿ ಪಡೆದಿದೆ. ಕ್ಷೇತ್ರದಲ್ಲಿ ಲಂಬಾಣಿ ಜನರನ್ನೂ ಕಾಣಬಹುದು.

ಸಮಾನತೆಯ ಹರಿಹಾರ, ಜಗತ್ತಿನ ಮೂಢನಂಬಿಕೆ ತೊಡೆಯಲು ವೈಚಾರಿಕ ಪ್ರಜ್ಞೆಯ ಬೆಳಕು ನೀಡಿದ ಬಸವೇಶ್ವರ ಜನ್ಮಭೂಮಿ ಬಸವನಬಾಗೇವಾಡಿ ಕ್ಷೇತ್ರ ಜಿಲ್ಲೆಯ ಇತರೆ ಕ್ಷೇತ್ರಗಳಂತೆ ಅಭಿವೃದ್ಧಿ ಹೀನ ತಾಲೂಕುಗಳಲ್ಲಿ ಒಂದು. ಕೃಷ್ಣೆಯನ್ನೇ ಒಡಲಲ್ಲಿ ಇರಿಸಿಕೊಂಡರೂ ಕ್ಷೇತ್ರದಲ್ಲಿ ಕುಡಿಯುವ ನೀರಿನ ದಾಹ ಇದ್ದೇ ಇದೆ. ಕಾಂಗ್ರೆಸ್‌ ಭದ್ರಕೋಟೆ ಎನಿಸಿರುವ ಈ ನೆಲವನ್ನು ಮತ್ತೆ ಸ್ವಾಧೀನಕ್ಕೆ ಪಡೆಯಲು BJP ಹವಣಿಸುತ್ತಿದ್ದರೆ, ಒಂದು ಬಾರಿಯಾದರೂ ಖಾತೆ ತೆರೆಯಲು ಜೆಡಿಸ್‌ ಪೈಪೋಟಿ ನಡೆಸಿದೆ.

ನೀರಾವರಿ ಈ ಕ್ಷೇತ್ರದ ಬಹು ದೊಡ್ಡ ಬಲವಾದರೆ, ನೀರಾವರಿ ಹಾಗೂ ವಿದ್ಯುತ್‌ ಯೋಜನೆಗಳಿಗೆ ಭೂಮಿ ಕಳೆದುಕೊಂಡು ಸಂತ್ರಸ್ತರ ಸಮಸ್ಯೆಯೇ ಇಲ್ಲಿನ ಬಲಹೀನತೆ. ಕೃಷ್ಣಾ ನದಿಗೆ ನಿರ್ಮಿಸಿರುವ ಲಾಲಬಹದ್ದೂರ ಶಾಸ್ತ್ರಿ ಜಲಾಶಯ ಇರುವುದು ಇದೇ ಕ್ಷೇತ್ರದ ಆಲಮಟ್ಟಿಯಲ್ಲಿ. ಸಂತ್ರಸ್ತರ ಪುನರ್ವಸತಿ ಕೇಂದ್ರಗಳು ಅಭಿವೃದ್ಧಿಗೆ ಕಾಯುತ್ತಿವೆ. ಈಚೆಗಷ್ಟೇ ತಲೆ ಎತ್ತಿರುವ ದೇಶಕ್ಕೆ ಬೆಳಕು ನೀಡುವ ಮಹತ್ವಾಕಾಂಕ್ಷೆಯ ಎನ್‌ಟಿಪಿಸಿ ಕೂಡಗಿ ಯೋಜನೆ ಕೂಡ ಈ ಕ್ಷೇತ್ರದಲ್ಲೇ ಇದೆ. ಪರಿಸರಕ್ಕೆ ಹಾನಿ ಎಂಬ ಕಾರಣಕ್ಕೆ ಈ ಯೋಜನೆ ವಿರೋಧಿಸಿ ರೈತರು ಗುಂಡೇಟು ತಿಂದಿದ್ದು, ನೂರಾರು ರೈತರು ಜೈಲು ಪಾಲಾಗಿ ಕೋರ್ಟ್‌ ಅಲೆಯುತ್ತಿದ್ದರು. ಈಚೆಗಷ್ಟೇ ಈ ರೈತರ ಮೇಲಿನ ಮೊಕದ್ದಮೆ ಹಿಂಪಡೆಯುವ ಮೂಲಕ ಸರ್ಕಾರ ರೈತರಿಗೆ ಸಂಕಷ್ಟದಿಂದ ಮುಕ್ತಿ ನೀಡಿದೆ.

ಇಂಥ ನೆಲಕ್ಕೆ ಒಂದೂವರೆ ದಶಕದ ಹಿಂದೆ ಕಾಲಿಟ್ಟವರು ತಿಕೋಟಾ ಕ್ಷೇತ್ರದಲ್ಲಿ ಜನತಾದಳ ಹಾಗೂ BJPಯಿಂದ ಎರಡು ಬಾರಿ ಶಾಸಕರಾಗಿದ್ದ ಶಿವಾನಂದ ಪಾಟೀಲ. ಈ ಕ್ಷೇತ್ರದಿಂದಲೂ ಮೂರು ಬಾರಿ ಶಾಸಕರಾಗಿರುವ ಶಿವಾನಂದ ಪಾಟೀಲ ಅವರು ಐದು ಬಾರಿ ಶಾಸಕರಾದರೂ ಸಚಿವರಾಗುವ ಕನಸು ಈಡೇರಿಲ್ಲ.ಇದೇ ಕ್ಷೇತ್ರದಿಂದ ಸೋಮನಗೌಡ(ಅಪ್ಪು) ಪಾಟೀಲ ಅವರ ತಂದೆ ಬಿ.ಎಸ್‌.ಪಾಟೀಲ(ಮನಗೂಳಿ) ಅವರನ್ನು 6 ಬಾರಿ ಆಯ್ಕೆ ಮಾಡಿದ್ದ ಕ್ಷೇತ್ರದ ಮತದಾರರು, ಅವರು ಸಚಿವರಾಗಲು ನೆರವಾಗಿದ್ದರು.

ಮಾಜಿ ಸಿಎಂ ಬಂಗಾರಪ್ಪ ಅವರ ಕೆಸಿಪಿ ಪಕ್ಷದಿಂದ ಸ್ಪರ್ಧಿಸಿ ಸೋತಿದ್ದ ಸಂಗಪ್ಪ ಕಲ್ಲಪ್ಪ ಬೆಳ್ಳುಬ್ಬಿ BJP ಸೇರುವ ಮೂಲಕ ಬಸವನಬಾಗೇವಾಡಿ ಕ್ಷೇತ್ರದ ಕಾಂಗ್ರೆಸ್‌ ಭದ್ರಕೋಟೆ ಛಿದ್ರಗೊಳಿಸಿ ಎರಡು ಬಾರಿ ಗೆದ್ದವರು. ತಮ್ಮ ಮೂಲಕ BJP ಖಾತೆ ತೆರೆದ ಎಸ್‌.ಕೆ. ಬೆಳ್ಳುಬ್ಬಿ ಅಪ್ಪಟ ಹಳ್ಳಿ ಸೊಗಡಿನ ರಾಜಕೀಯ ನಾಯಕ. ಮಾಜಿ ಸಚಿವ ಎಸ್‌.ಕೆ.ಬೆಳ್ಳುಬ್ಬಿ ಪಂಚಾಯಿತಿ ಮಟ್ಟದಿಂದಲೇ ವಿಧಾನಸಭೆ ತನಕ ರಾಜಕಾರಣದಲ್ಲಿ ಯಶಸ್ಸು ಕಂಡವರು. 1978ರಲ್ಲಿ ಗ್ರಾಪಂ ಸದಸ್ಯರಾಗಿ ಆಯ್ಕೆಯಾದ ಬೆಳ್ಳುಬ್ಬಿ, 1983ರಲ್ಲಿ ಕೊಲ್ಹಾರ ಗ್ರಾಪಂ ಅಧ್ಯಕ್ಷರಾಗಿದ್ದರು. 1987ರಲ್ಲಿ ಮಂಡಲ ಪಂಚಾಯಿತಿ ಸದಸ್ಯರಾಗಿ ಆಯ್ಕೆಯಾಗಿ ಮಂಡಲ ಪ್ರಧಾನ ಹುದ್ದೆಯನ್ನೂ ಗಿಟ್ಟಿಸಿಕೊಂಡರು. 1994ರಲ್ಲಿ ಕೆಸಿಪಿ ಪಕ್ಷದಿಂದ ಬಸವನಬಾಗೇವಾಡಿ ಕ್ಷೇತ್ರದಿಂದ ವಿಧಾನಸಭೆ ಪ್ರವೇಶಿಸುವ ಮೊದಲ ಪ್ರಯತ್ನ ಫಲಿಸಲಿಲ್ಲ. ಮತ್ತೆ 1999ರಲ್ಲಿ BJP ಅಭ್ಯರ್ಥಿಯಾಗಿ ಕಣಕ್ಕಿಳಿದ ಬೆಳ್ಳುಬ್ಬಿ ಶಾಸಕರಾಗಿ ಆಯ್ಕೆಯಾದರು. 2008ರಲ್ಲಿ 2ನೇ ಬಾರಿ ಶಾಸಕರಾಗಿ ಆಯ್ಕೆಯಾಗುವ ಮೂಲಕ ಕೆಲ ತಿಂಗಳು ಮಂತ್ರಿಸ್ಥಾನವನ್ನೂ ಅಲಂಕರಿಸಿದ್ದರು. 2004 ಹಾಗೂ 2013ರ ಚುನಾವಣೆಯಲ್ಲಿ ಸೋಲಿನ ಕಹಿ ಅನುಭವಿಸಿದ್ದಾರೆ.

13 ಚುನಾವಣೆ ಕಂಡಿರುವ ಬಸವ ಜನ್ಮಭೂಮಿ ಬಸವನಬಾಗೇವಾಡಿ ಕ್ಷೇತ್ರದಲ್ಲಿ 8 ಬಾರಿ ಗೆದ್ದಿರುವ ಕಾಂಗ್ರೆಸ್‌, ಒಂದು ಬಾರಿ ಅಂಗ ಪಕ್ಷ ಕಾಂಗ್ರೆಸ್‌-ಐ ಅಭ್ಯರ್ಥಿಯನ್ನೂ ಆಯ್ಕೆ ಮಾಡಿ ಕಾಂಗ್ರೆಸ್‌ ಭದ್ರಕೋಟೆ ಎನಿಸಿದೆ. ಕ್ಷೇತ್ರಕ್ಕೆ ನಡೆದ ಮೊದಲ ಎರಡು ಚುನಾವಣೆಯಲ್ಲಿ ಸುಶೀಲಾಬಾಯಿ ಶಹಾ ಎಂಬ ಮಹಿಳೆ ಗೆದ್ದಿರುವುದು ವಿಶೇಷ. ಮಹಿಳಾ ಸಮಾನತೆ ಹರಿಕಾರ ಬಸವ ಜನ್ಮಭೂಮಿ ಜನರು ಮಹಿಳೆಯನ್ನು ಆಯ್ಕೆ ಮಾಡಿದ್ದೇ ಬಸವ ತತ್ವಕ್ಕೆ ಆದ್ಯತೆ ನೀಡಿದ್ದಕ್ಕೆ ಸಾಕ್ಷಿ. ವ್ಯಕ್ತಿ ಪೂಜೆಗೆ ಆದ್ಯತೆ ನೀಡಿರುವ ಈ ಕ್ಷೇತ್ರ ಮನಗೂಳಿಯ ಬಿ.ಎಸ್‌. ಪಾಟೀಲ ಅವರನ್ನು 6 ಬಾರಿ ವಿಧಾನಸೌಧಕ್ಕೆ ಕಳಿಸಿದ್ದು, ಎಸ್‌.ಕೆ.ಬೆಳ್ಳುಬ್ಬಿ ಅವರ ಮೂಲಕ BJP ಎರಡು ಬಾರಿ ಇಲ್ಲಿ ನೆಲೆ ಕಂಡುಕೊಂಡಿದೆ. ಕುಮಾರಗೌಡ ಪಾಟೀಲ ಸೇರಿ ಇಬ್ಬರು ಈ ಕ್ಷೇತ್ರದಲ್ಲಿ ಜನತಾಪಕ್ಷದಿಂದ ಗೆದ್ದಿದ್ದಾರೆ.

ಕ್ಷೇತ್ರದ ವಿಶೇಷತೆ

  • ಕಾಂಗ್ರೇಸಿನ ಬಿ.ಎಸ್.ಪಾಟೀಲ(ಮನಗೂಳಿ)ರು 6 ಸಲ ಆಯ್ಕೆಯಾಗಿ ವೀರಪ್ಪ ಮೊಯ್ಲಿ ಸಂಪುಟದಲ್ಲಿ ನೀರಾವರಿ ಸಚಿವರಾಗಿದ್ದರು.
  • ಕ್ಷೇತ್ರದಿಂದ 1957 ಮತ್ತು 1962 ಸುಶಿಲಾಬಾಯಿ ಶಹಾ ಅವರನ್ನು ಆಯ್ಕೆ ಮಾಡಿ ವಿಜಯಪುರ ಜಿಲ್ಲೆಯ ಪ್ರಪ್ರಥಮ ಮಹಿಳಾ ಶಾಸಕಿಯಾಗಿದ್ದರು.
  • ಎಸ್.ಕೆ.ಬೆಳ್ಳುಬ್ಬಿಯವರು ಎರಡು ಬಾರಿ ಶಾಸಕರಾಗಿ ಆಯ್ಕೆಯಾಗಿ 2008ರಲ್ಲಿ ಬಿ.ಎಸ್.ಯಡಿಯುರಪ್ಪ ಸಂಪುಟದಲ್ಲಿ ತೋಟಗಾರಿಕಾ ಸಚಿವರಾಗಿದ್ದರು.
  • ಶಿವಾನಂದ ಪಾಟೀಲರು ಎಚ್.ಡಿ.ಕುಮಾರಸ್ವಾಮಿ ಸಮ್ಮಿಸ್ರ ಸರ್ಕಾರದ ಮಂತ್ರಿಮಂಡಳದಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರಾಗಿದ್ದರು.

ಜನಪ್ರತಿನಿಧಿಗಳ ವಿವರ

ವರ್ಷ ವಿಧಾನ ಸಭಾ ಕ್ಷೆತ್ರ ವಿಜೇತ ಪಕ್ಷ ಮತಗಳು ಉಪಾಂತ ವಿಜೇತ ಪಕ್ಷ ಮತಗಳು
ಬಸವನಬಾಗೇವಾಡಿ ವಿಧಾನಸಭಾ ಕ್ಷೇತ್ರ ಕರ್ನಾಟಕ ರಾಜ್ಯ
2018 ಬಸವನಬಾಗೇವಾಡಿ ವಿಧಾನಸಭಾ ಕ್ಷೇತ್ರ ಶಿವಾನಂದ ಪಾಟೀಲ INC 58647 ಅಪ್ಪು ಪಾಟೀಲ(ಮನಗೂಳಿ) JDS 55461
2013 ಬಸವನಬಾಗೇವಾಡಿ ವಿಧಾನಸಭಾ ಕ್ಷೇತ್ರ ಶಿವಾನಂದ ಪಾಟೀಲ INC 56329 ಎಸ್.ಕೆ.ಬೆಳ್ಳುಬ್ಬಿ BJP 36653
2008 ಬಸವನಬಾಗೇವಾಡಿ ವಿಧಾನಸಭಾ ಕ್ಷೇತ್ರ ಎಸ್.ಕೆ.ಬೆಳ್ಳುಬ್ಬಿ BJP 48481 ಶಿವಾನಂದ ಪಾಟೀಲ INC 34594
2004 ಬಸವನಬಾಗೇವಾಡಿ ವಿಧಾನಸಭಾ ಕ್ಷೇತ್ರ ಶಿವಾನಂದ ಪಾಟೀಲ INC 50238 ಎಸ್.ಕೆ.ಬೆಳ್ಳುಬ್ಬಿ BJP 46933
1999 ಬಸವನಬಾಗೇವಾಡಿ ವಿಧಾನಸಭಾ ಕ್ಷೇತ್ರ ಎಸ್.ಕೆ.ಬೆಳ್ಳುಬ್ಬಿ BJP 50543 ಬಿ.ಎಸ್.ಪಾಟೀಲ(ಮನಗೂಳಿ) INC 40487
1994 ಬಸವನಬಾಗೇವಾಡಿ ವಿಧಾನಸಭಾ ಕ್ಷೇತ್ರ ಬಿ.ಎಸ್.ಪಾಟೀಲ(ಮನಗೂಳಿ) INC 27557 ಕುಮಾರಗೌಡ ಪಾಟೀಲ JD 19270
1989 ಬಸವನಬಾಗೇವಾಡಿ ವಿಧಾನಸಭಾ ಕ್ಷೇತ್ರ ಬಿ.ಎಸ್.ಪಾಟೀಲ(ಮನಗೂಳಿ) INC 37868 ಕುಮಾರಗೌಡ ಪಾಟೀಲ JD 25235
1985 ಬಸವನಬಾಗೇವಾಡಿ ವಿಧಾನಸಭಾ ಕ್ಷೇತ್ರ ಕುಮಾರಗೌಡ ಪಾಟೀಲ JNP 29320 ಭೀಮನಗೌಡ ಪಾಟೀಲ INC 23744
1983 ಬಸವನಬಾಗೇವಾಡಿ ವಿಧಾನಸಭಾ ಕ್ಷೇತ್ರ ಬಿ.ಎಸ್.ಪಾಟೀಲ(ಮನಗೂಳಿ) INC 34386 ರಾಜಶೇಖರ ಪಟ್ಟಣಶೆಟ್ಟಿ BJP 15577
1978 ಬಸವನಬಾಗೇವಾಡಿ ವಿಧಾನಸಭಾ ಕ್ಷೇತ್ರ ಬಿ.ಎಸ್.ಪಾಟೀಲ(ಮನಗೂಳಿ) JNP 27806 ಬಸವಂತರಾಯ ಪಾಟೀಲ INC 16048
ಬಾಗೇವಾಡಿ ವಿಧಾನಸಭಾ ಕ್ಷೇತ್ರ ಮೈಸೂರು ರಾಜ್ಯ
1972 ಬಾಗೇವಾಡಿ ವಿಧಾನಸಭಾ ಕ್ಷೇತ್ರ ಬಿ.ಎಸ್.ಪಾಟೀಲ(ಮನಗೂಳಿ) NCO 23061 ಜಿ.ವಿ.ಪಾಟೀಲ INC 16250
1967 ಬಾಗೇವಾಡಿ ವಿಧಾನಸಭಾ ಕ್ಷೇತ್ರ ಬಿ.ಎಸ್.ಪಾಟೀಲ(ಮನಗೂಳಿ) INC 25173 ಜಿ.ಬಿ.ಈರಯ್ಯ SWA 2759
1962 ಬಾಗೇವಾಡಿ ವಿಧಾನಸಭಾ ಕ್ಷೇತ್ರ ಸುಶಿಲಾಬಾಯಿ ಶಹಾ INC 12365 ರಾಮನಗೌಡ ಪಾಟೀಲ SWA 6113
1957 ಬಾಗೇವಾಡಿ ವಿಧಾನಸಭಾ ಕ್ಷೇತ್ರ ಸುಶಿಲಾಬಾಯಿ ಶಹಾ INC 11941 ರಾಮಣ್ಣ ಕಲ್ಲೂರ SWA 4883
ಹಿಪ್ಪರಗಿ-ಬಾಗೇವಾಡಿ ವಿಧಾನಸಭಾ ಕ್ಷೇತ್ರ ಬಾಂಬೆ ರಾಜ್ಯ
1951 ಹಿಪ್ಪರಗಿ-ಬಾಗೇವಾಡಿ ವಿಧಾನಸಭಾ ಕ್ಷೇತ್ರ ಶಂಕರಗೌಡ ಪಾಟೀಲ INC 17752 ಸಾವಳಗೆಪ್ಪ ನಂದಿ KMPP 5507

ಸಿಂದಗಿ ವಿಧಾನಸಭಾ ಕ್ಷೇತ್ರವು ಕರ್ನಾಟಕ ರಾಜ್ಯದ ವಿಜಯಪುರ ಜಿಲ್ಲೆಯ 8 ವಿಧಾನ ಸಭಾ ಕ್ಷೆತ್ರಗಳಲ್ಲಿ ಒಂದಾಗಿದೆ. ಸಿಂದಗಿ ಮತಕ್ಷೇತ್ರ(2018)ದಲ್ಲಿ 1,07,407 ಪುರುಷರು, 99,773 ಮಹಿಳೆಯರು ಸೇರಿ ಒಟ್ಟು 2,07,180 ಮತದಾರರಿದ್ದಾರೆ.

ಕ್ಷೇತ್ರದ ಇತಿಹಾಸ

ಕರ್ನಾಟಕದ ಉತ್ತರದ ಗಡಿಯಲ್ಲಿರುವ ಸಿಂದಗಿಯು ಉತ್ತರಕ್ಕೆ ಮಹಾರಾಷ್ಟ್ರದ ಸೊಲ್ಲಾಪುರ ಜಿಲ್ಲೆ, ಪಶ್ಚಿಮಕ್ಕೆ ಇಂಡಿ ತಾಲ್ಲೂಕು, ದಕ್ಷಿಣಕ್ಕೆ ವಿಜಯಪುರ ತಾಲ್ಲೂಕು ಮತ್ತು ಪೂರ್ವಕ್ಕೆ ಅಫಜಲಪೂರ ತಾಲ್ಲೂಕುಗಳಿವೆ.

ಸ್ವಾತಂತ್ರ್ಯ ಹೋರಾಟಗಾರ ವಾಸುದೇವ ಬಲವಂತರಾಯ ಪದಕಿ ಸೆರೆಸಿಕ್ಕ ದೇವರನಾವದಗಿ ದೇವಾಲಯವಿರುವುದು ವಿಜಯಪುರ ಜಿಲ್ಲೆಯ ಸಿಂದಗಿ ತಾಲೂಕಿನಲ್ಲಿ. 12 ನೇ ಶತಮಾನದಲ್ಲಿ ಕಲ್ಯಾಣಿ ಚಾಲುಕ್ಯರಿಂದ ನಿರ್ಮಿಸಲ್ಪಟ್ಟ ದೇವರನಾವದಗಿ ಶ್ರೀ ಸಂಗಮೇಶ್ವರ ದೇವಾಲಯ ಐತಿಹಾಸಿಕ ಪ್ರಸಿದ್ಧಿ ಪಡೆದಿದೆ. ಇದು ಹೈದರಾಬಾದ್ ಕರ್ನಾಟಕ ವಿಮೋಚನಾ ಹೋರಾಟದ ರೂವಾರಿ ರಮಾನಂದ ನೀರ್ಥರ ನೆಲೆಯೂ ಹೌದು.

ಸಿಂದಗಿ ಕ್ಷೇತ್ರದಿಂದ 2 ಬಾರಿ ಶಾಸಕರಾಗಿರುವ ರಮೇಶ ಭೂಸನೂರ ಗ್ರಾಮ ಮಟ್ಟದಿಂದ ರಾಜಕೀಯ ಜೀವನಕ್ಕೆ ಕಾಲಿಟ್ಟವರು. ಇವರು ಪಂಚಾಯತ್‌ ರಾಜ್‌ ವ್ಯವಸ್ಥೆಯ 3 ಹಂತಗಳಲ್ಲಿ (ಮಂಡಲ ಪಂಚಾಯಿತಿ, ತಾಪಂ, ಜಿಪಂ) ಸದಸ್ಯರಾಗಿ ಆಯ್ಕೆಯಾದವರು. 1987ರಲ್ಲಿ ಮಂಡಲ ಪಂಚಾಯಿತಿ ಸದಸ್ಯರಾಗಿ, ಪ್ರಧಾನ ಆಗಿದ್ದರು. 1995ರಲ್ಲಿ ತಾಪಂ ಸದಸ್ಯ, 2000ದಲ್ಲಿ ಆಲಮೇಲ ಜಿಪಂ ಕ್ಷೇತ್ರದಿಂದ IND ಸದಸ್ಯರಾಗಿ ಆಯ್ಕೆಯಾಗಿದ್ದರು. 2004ರಲ್ಲಿ ವಿಧಾನಸಭೆ ಪ್ರವೇಶಿಸಲು ಇಂಡಿ ಕ್ಷೇತ್ರದ ಕಾಂಗ್ರೆಸ್‌ ಆಕಾಂಕ್ಷಿಯಾಗಿದ್ದರು. ಆದರೆ ಟಿಕೆಟ್‌ ಸಿಗಲಿಲ್ಲ. 2008ರಲ್ಲಿ ಸಿಂದಗಿ ಕ್ಷೇತ್ರದ BJPಯಿಂದ ಕಣಕ್ಕಿಳಿದು ಮೊದಲ ಶಾಸಕರಾಗಿ ವಿಧಾನಸಭೆ ಮೆಟ್ಟಿಲೇರಿದರು. 2013ರಲ್ಲಿ BJPಯಿಂದ ಸ್ಪರ್ಧಿಸಿ 2ನೇ ಬಾರಿ ಶಾಸಕರಾದರು.

ಕ್ಷೇತ್ರದ ವಿಶೇಷತೆ

  • ಕಾಂಗ್ರೇಸಿನ ಸಿ.ಎಮ್.ದೇಸಾಯಿ, BJPಯ ರಮೇಶ ಭೂಸನೂರ ಮತ್ತು ಜೆಡಿ(ಎಸ್)ನ ಎಂ.ಸಿ.ಮನಗೂಳಿ 2 ಬಾರಿ ಆಯ್ಕೆಯಾಗಿದ್ದು ಬಿಟ್ಟರೆ ಉಳಿದ ಅಭ್ಯರ್ಥಿಗಳು ಕೇವಲ ಒಂದು ಸಲ ಮಾತ್ರ ಆಯ್ಕೆಯಾಗಿದ್ದಾರೆ.
  • 2004ರಿಂದ 2018ರವರೆಗೆ ಕ್ಷೇತ್ರವು BJP ಪಕ್ಷದ ಹಿಡಿತದಲ್ಲಿತ್ತು.
  • 1994ರಲ್ಲಿ ಎಂ.ಸಿ.ಮನಗೂಳಿಯವರು ಹೆಚ್.ಡಿ.ದೇವೇಗೌಡ ಸಂಪುಟದಲ್ಲಿ ಸಚಿವರಾಗಿದ್ದರು.
  • ಎಂ.ಸಿ.ಮನಗೂಳಿಯವರು 7 ಸಲ ಸ್ಪರ್ಧಿಸಿ 2 ಬಾರಿ ಆಯ್ಕೆಯಾಗಿದ್ದು ವಿಶೇಷವಾಗಿ ಉಳಿದ 5 ಬಾರಿ ಎರಡನೇಯ ಸ್ಥಾನಕ್ಕೆ ತೃಪ್ತಿಪಟ್ಟಿದ್ದಾರೆ.
  • 2018ರಲ್ಲಿ ಎಂ.ಸಿ.ಮನಗೂಳಿಯವರು ಎಚ್.ಡಿ.ಕುಮಾರಸ್ವಾಮಿ ಸಮ್ಮಿಸ್ರ ಸರ್ಕಾರದ ಮಂತ್ರಿಮಂಡಳದಲ್ಲಿ ತೋಟಗಾರಿಕೆ ಸಚಿವರಾಗಿದ್ದರು.

ಜನಪ್ರತಿನಿಧಿಗಳ ವಿವರ

ವರ್ಷ ವಿಧಾನ ಸಭಾ ಕ್ಷೆತ್ರ ವಿಜೇತರು ಪಕ್ಷ ಮತಗಳು ಉಪಾಂತ ವಿಜೇತರು ಪಕ್ಷ ಮತಗಳು
ಸಿಂದಗಿ ವಿಧಾನಸಭಾ ಕ್ಷೇತ್ರ ಕರ್ನಾಟಕ ರಾಜ್ಯ
2018 ಸಿಂದಗಿ ವಿಧಾನಸಭಾ ಕ್ಷೇತ್ರ ಎಂ.ಸಿ.ಮನಗೂಳಿ JDS 70865 ರಮೇಶ ಭೂಸನೂರ BJP 61560
2013 ಸಿಂದಗಿ ವಿಧಾನಸಭಾ ಕ್ಷೇತ್ರ ರಮೇಶ ಭೂಸನೂರ BJP 37834 ಎಂ.ಸಿ.ಮನಗೂಳಿ JDS 37082
2008 ಸಿಂದಗಿ ವಿಧಾನಸಭಾ ಕ್ಷೇತ್ರ ರಮೇಶ ಭೂಸನೂರ BJP 35227 ಎಂ.ಸಿ.ಮನಗೂಳಿ JDS 20466
2004 ಸಿಂದಗಿ ವಿಧಾನಸಭಾ ಕ್ಷೇತ್ರ ಅಶೋಕ ಶಾಬಾದಿ BJP 38853 ಎಂ.ಸಿ.ಮನಗೂಳಿ JDS 29803
1999 ಸಿಂದಗಿ ವಿಧಾನಸಭಾ ಕ್ಷೇತ್ರ ಶರಣಪ್ಪ ಸುಣಗಾರ INC 30432 ಎಂ.ಸಿ.ಮನಗೂಳಿ SWA 19675
1994 ಸಿಂದಗಿ ವಿಧಾನಸಭಾ ಕ್ಷೇತ್ರ ಎಂ.ಸಿ.ಮನಗೂಳಿ JD 45356 ರಾಯಗೊಂಡಪ್ಪ ಚೌಧರಿ INC 17137
1989 ಸಿಂದಗಿ ವಿಧಾನಸಭಾ ಕ್ಷೇತ್ರ ರಾಯಗೊಂಡಪ್ಪ ಚೌಧರಿ INC 29798 ಎಂ.ಸಿ.ಮನಗೂಳಿ JNP 21169
1985 ಸಿಂದಗಿ ವಿಧಾನಸಭಾ ಕ್ಷೇತ್ರ ಮಲ್ಲನಗೌಡ ಬಿರಾದಾರ JNP 31483 ತಿಪ್ಪಣ್ಣ ಅಗಸರ INC 17564
1983 ಸಿಂದಗಿ ವಿಧಾನಸಭಾ ಕ್ಷೇತ್ರ ನಿಂಗನಗೌಡ ಪಾಟೀಲ INC 25778 ಮಲ್ಲನಗೌಡ ಬಿರಾದಾರ JNP 18788
1978 ಸಿಂದಗಿ ವಿಧಾನಸಭಾ ಕ್ಷೇತ್ರ ಮಹಿಬೂಬ ಬೆಕಿನಾಳಕರ INC(I) 19592 ಶಂಕರಗೌಡ ಪಾಟೀಲ JNP 18268
ಸಿಂದಗಿ ವಿಧಾನಸಭಾ ಕ್ಷೇತ್ರ ಮೈಸೂರು ರಾಜ್ಯ
1972 ಸಿಂದಗಿ ವಿಧಾನಸಭಾ ಕ್ಷೇತ್ರ ಎಸ್.ವಾಯ್.ಪಾಟೀಲ NCO 17516 ಮಹಿಬೂಬ ಬೆಕಿನಾಳಕರ INC 16538
1967 ಸಿಂದಗಿ ವಿಧಾನಸಭಾ ಕ್ಷೇತ್ರ ಸಿ.ಎಮ್.ದೇಸಾಯಿ INC 16668 ಎಸ್.ವಾಯ್.ಪಾಟೀಲ SWA 13298
1962 ಸಿಂದಗಿ ವಿಧಾನಸಭಾ ಕ್ಷೇತ್ರ ಸಿ.ಎಮ್.ದೇಸಾಯಿ INC 14012 ಸಿದ್ದಪ್ಪ ರಡ್ಡೆವಾಡಗಿ SWA 7432
1957 ಸಿಂದಗಿ ವಿಧಾನಸಭಾ ಕ್ಷೇತ್ರ ಎಸ್.ವಾಯ್.ಪಾಟೀಲ INC 10149 ಗೋವಿಂದಪ್ಪ ಕೊಣ್ಣೂರ SWA 7739
ಸಿಂದಗಿ ವಿಧಾನಸಭಾ ಕ್ಷೇತ್ರ ಬಾಂಬೆ ರಾಜ್ಯ
1951 ಸಿಂದಗಿ ವಿಧಾನಸಭಾ ಕ್ಷೇತ್ರ ಜಟ್ಟೆಪ್ಪ ಕಬಾಡಿ INC 30231 ಬಾಬುರಾಮ್ ಹುಜರೆ SFC 5457

ನಾಗಠಾಣ ವಿಧಾನಸಭಾ ಕ್ಷೇತ್ರ

[ಬದಲಾಯಿಸಿ]

ನಾಗಠಾಣ ವಿಧಾನಸಭಾ ಕ್ಷೇತ್ರವು ಕರ್ನಾಟಕ ರಾಜ್ಯದ ವಿಜಯಪುರ ಜಿಲ್ಲೆಯ 8 ವಿಧಾನ ಸಭಾ ಕ್ಷೆತ್ರಗಳಲ್ಲಿ ಒಂದಾಗಿದೆ. ನಾಗಠಾಣ ಮತಕ್ಷೇತ್ರ(2018)ದಲ್ಲಿ 1,07,407 ಪುರುಷರು, 99,773 ಮಹಿಳೆಯರು ಸೇರಿ ಒಟ್ಟು 2,07,180 ಮತದಾರರಿದ್ದಾರೆ.

ಕ್ಷೇತ್ರದ ಇತಿಹಾಸ

ಪರಿಶಿಷ್ಟ ಜಾತಿ ಮೀಸಲು ಕ್ಷೇತ್ರವಾಗಿ ಗುರುತಿಸಿಕೊಂಡ ನಾಗಠಾಣ ವಿಧಾನಸಭಾ ಕ್ಷೇತ್ರವು, ವಿಜಯಪುರ ಜಿಲ್ಲೆಯ ಒಂದು ಪ್ರಮುಖ ವಿಧಾನಸಭಾ ಕ್ಷೇತ್ರ. ವಿಜಯಪುರ-ಇಂಡಿ ರಸ್ತೆಯಲ್ಲಿ ಈ ಊರು ನೆಲೆಸಿದೆ. ಮಹಾರಾಷ್ಟ್ರ-ಕರ್ನಾಟಕ ಗಡಿಯಲ್ಲಿರುವುದರಿಂದ ಈ ಊರಿನ ಮೇಲೆ ಮರಾಠಿ ಪ್ರಭಾವ ಸಾಕಷ್ಟಿದೆ. ರಾಜ್ಯದಲ್ಲೇ ಹೆಚ್ಚು ವಿಸ್ತಾರವುಳ್ಳ ಎರಡನೇ ವಿಧಾನಸಭಾ ಕ್ಷೇತ್ರ ಎಂಬ ಹೆಗ್ಗಳಿಕೆ ಹೊಂದಿರುವ ನಾಗಠಾಣ ವಿಧಾನಸಭಾ ಕ್ಷೇತ್ರದ್ದು. ಮಾಜಿ ಶಾಸಕ ಆರ್‌.ಕೆ.ರಾಠೋಡ ಪಂಚಾಯಿತಿ ರಾಜಕಾರಣವನ್ನು ಮೆಟ್ಟಿಲಾಗಿಸಿಕೊಂಡು ವಿಧಾನಸಭೆಗೆ ಆಯ್ಕೆಯಾಗಿದ್ದರು. ಹೊರ್ತಿ ಜಿಪಂ ಕ್ಷೇತ್ರದ ಸದಸ್ಯರಾಗಿ ಆಯ್ಕೆಯಾಗಿದ್ದಲ್ಲದೆ ಅಧ್ಯಕ್ಷ ಸ್ಥಾನವನ್ನೂ ಅಲಂಕರಿಸಿದ್ದರು. 2004ರಲ್ಲಿ ಜನತಾದಳದಿಂದ ಬಳ್ಳೊಳ್ಳಿ ಮೀಸಲು ಕ್ಷೇತ್ರದ (ಈಗಿನ ನಾಗಠಾಣ) ಶಾಸಕರಾಗಿ ಆಯ್ಕೆಯಾಗಿದ್ದರು. 2004ರ ಮುಂಚೆ ಬಳ್ಳೊಳ್ಳಿ ವಿಧಾನಸಭಾ ಕ್ಷೇತ್ರವಾಗಿತ್ತು.1962ರಲ್ಲಿ ಬರಡೋಲ ವಿಧಾನಸಭಾ ಕ್ಷೇತ್ರವೆಂದು ನಾಮಕರಣಗೊಂಡಿತ್ತು. ಪರಿಶಿಷ್ಟ ಜಾತಿ ಮೀಸಲು ಕ್ಷೇತ್ರವಾದ ಈ ಕ್ಷೇತ್ರವನ್ನು 2013 ರಲ್ಲಿ INC ನ ಪ್ರೊ.ರಾಜು ಆಲಗೂರು ಪ್ರತಿನಿಧಿಸಿದ್ದರು.

ಕ್ಷೇತ್ರದ ವಿಶೇಷತೆ

  • ರಾಜ್ಯದಲ್ಲೇ ಹೆಚ್ಚು ವಿಸ್ತಾರವುಳ್ಳ ಎರಡನೇ ವಿಧಾನಸಭಾ ಕ್ಷೇತ್ರ ಎಂಬ ಹೆಗ್ಗಳಿಕೆ ಹೊಂದಿರುವ ನಾಗಠಾಣ ವಿಧಾನಸಭಾ ಕ್ಷೇತ್ರದ್ದು.
  • ವಿಜಯಪುರ ಜಿಲ್ಲೆಯಲ್ಲಿ ಪರಿಶಿಷ್ಟ ಜಾತಿ ಮೀಸಲು ಕ್ಷೇತ್ರವಾಗಿ ಗುರುತಿಸಿಕೊಂಡ ನಾಗಠಾಣ ವಿಧಾನಸಭಾ ಕ್ಷೇತ್ರ.
  • ರಾಜು ಆಲಗೂರುರವರು ಕರ್ನಾಟಕ ಸಾಬೂನು ಮತ್ತು ಮಾರ್ಜಕ ಮಂಡಳಿ ಅಧ್ಯಕ್ಷ ಹಾಗೂ ಸಂಸದೀಯ ಕಾರ್ಯದರ್ಶಿಗಳಾಗಿರುವುದು ಈ ಕ್ಷೇತ್ರದ ವಿಶೇಷತೆಗಳಲ್ಲಿ ಒಂದು.
  • ಜೆಟ್ಟೆಪ್ಪ ಕಬಾಡಿಯವರು ಇದೆ ಕ್ಷೇತ್ರದಿಂದ 4 ಬಾರಿ ಆಯ್ಕೆಯಾಗಿದ್ದಾರೆ.
  • ರಾಜು ಆಲಗೂರು, ಸಿದ್ಧಾರ್ಥ ಅರಕೇರಿ 2 ಬಾರಿ ಹಾಗೂ ರಮೇಶ ಜಿಗಜಿಣಗಿ 3 ಬಾರಿ ಆಯ್ಕೆಯಾಗಿದ್ದಾರೆ.
  • ರಮೇಶ ಜಿಗಜಿಣಗಿಯವರು 1983ರಲ್ಲಿ ರಾಮಕೃಷ್ಣ ಹೆಗಡೆ ಸಂಪುಟದಲ್ಲಿ ಗೃಹ ಸಚಿವರಾಗಿ ಕಾರ್ಯ ನಿರ್ವಹಿಸಿದ್ದಾರೆ. ಅದರಂತೆ 1984 -85ರಲ್ಲಿ ಅಬಕಾರಿ ಖಾತೆ ರಾಜ್ಯ ಸಚಿವರಾಗಿ , 1996-98ರಲ್ಲಿ ಜೆ.ಎಚ್.ಪಟೇಲ್ ಸಂಪುಟದಲ್ಲಿ ಸಮಾಜ ಕಲ್ಯಾಣ ಮತ್ತು ಕಂದಾಯ ಸಚಿವರಾಗಿ ಕಾರ್ಯ ನಿರ್ವಹಿಸಿದ್ದಾರೆ.
  • ದೇವಾನಂದ ಚವ್ಹಾಣರು 2019ರಲ್ಲಿ ಹೆಚ್.ಡಿ.ಕುಮಾರಸ್ವಾಮಿ ಸಮ್ಮಿಸ್ರ ಸಂಪುಟದಲ್ಲಿ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಇಲಾಖೆ ಸಂಸದೀಯ ಕಾರ್ಯದರ್ಶಿಯಾಗಿದ್ದರು.
  • ದೇವಾನಂದ ಚವ್ಹಾಣ, ಆರ್.ಕೆ.ರಾಠೋಡ ಮತ್ತು ಮನೋಹರ ಐನಾಪುರರವರು ಲಂಬಾಣಿ ಸಮುದಾಯಕ್ಕೆ ಸೇರಿದ್ದಾರೆ.

ಜನಪ್ರತಿನಿಧಿಗಳ ವಿವರ

ವರ್ಷ ವಿಧಾನ ಸಭಾ ಕ್ಷೆತ್ರ ವಿಜೇತ ಪಕ್ಷ ಮತಗಳು ಉಪಾಂತ ವಿಜೇತ ಪಕ್ಷ ಮತಗಳು
ನಾಗಠಾಣ ವಿಧಾನಸಭಾ ಕ್ಷೇತ್ರ ಕರ್ನಾಟಕ ರಾಜ್ಯ
2018 ನಾಗಠಾಣ ವಿಧಾನಸಭಾ ಕ್ಷೇತ್ರ ದೇವಾನಂದ ಚವ್ಹಾಣ JDS 59709 ವಿಠ್ಠಲ ಕಟಕದೊಂಡ INC 54108
2013 ನಾಗಠಾಣ ವಿಧಾನಸಭಾ ಕ್ಷೇತ್ರ ರಾಜು ಆಲಗೂರ INC 45570 ದೇವಾನಂದ ಚವ್ಹಾಣ JDS 44903
2008 ನಾಗಠಾಣ ವಿಧಾನಸಭಾ ಕ್ಷೇತ್ರ ವಿಠ್ಠಲ ಕಟಕದೊಂಡ BJP 40225 ರಾಜು ಆಲಗೂರ INC 36018
ಬಳ್ಳೊಳ್ಳಿ ವಿಧಾನಸಭಾ ಕ್ಷೇತ್ರ ಕರ್ನಾಟಕ ರಾಜ್ಯ
2004 ಬಳ್ಳೊಳ್ಳಿ ವಿಧಾನಸಭಾ ಕ್ಷೇತ್ರ ಆರ್.ಕೆ.ರಾಠೋಡ JDS 39915 ರಾಜು ಆಲಗೂರ INC 28873
1999 ಬಳ್ಳೊಳ್ಳಿ ವಿಧಾನಸಭಾ ಕ್ಷೇತ್ರ ರಾಜು ಆಲಗೂರ INC 27194 ಆರ್.ಕೆ.ರಾಠೋಡ JDS 24667
1994 ಬಳ್ಳೊಳ್ಳಿ ವಿಧಾನಸಭಾ ಕ್ಷೇತ್ರ ರಮೇಶ ಜಿಗಜಿಣಗಿ JD 29018 ಫೂಲಸಿಂಗ್ ಚವ್ಹಾಣ INC 17591
1989 ಬಳ್ಳೊಳ್ಳಿ ವಿಧಾನಸಭಾ ಕ್ಷೇತ್ರ ಮನೋಹರ ಐನಾಪುರ INC 27782 ರಮೇಶ ಜಿಗಜಿಣಗಿ JD 23357
1985 ಬಳ್ಳೊಳ್ಳಿ ವಿಧಾನಸಭಾ ಕ್ಷೇತ್ರ ರಮೇಶ ಜಿಗಜಿಣಗಿ JNP 32360 ದಯಾನಂದ ಕೊಂಡಗೂಳಿ INC 21311
1983 ಬಳ್ಳೊಳ್ಳಿ ವಿಧಾನಸಭಾ ಕ್ಷೇತ್ರ ರಮೇಶ ಜಿಗಜಿಣಗಿ JNP 24603 ಸಿದ್ಧಾರ್ಥ ಅರಕೇರಿ INC 11876
1978 ಬಳ್ಳೊಳ್ಳಿ ವಿಧಾನಸಭಾ ಕ್ಷೇತ್ರ ಸಿದ್ಧಾರ್ಥ ಅರಕೇರಿ JNP 23023 ಚಂದ್ರಶೇಖರ ಹೊಸಮನಿ INC 14204
ಬಳ್ಳೊಳ್ಳಿ ವಿಧಾನಸಭಾ ಕ್ಷೇತ್ರ ಮೈಸೂರು ರಾಜ್ಯ
1972 ಬಳ್ಳೊಳ್ಳಿ ವಿಧಾನಸಭಾ ಕ್ಷೇತ್ರ ಜೆಟ್ಟೆಪ್ಪ ಕಬಾಡಿ NCO 15537 ಬಾಬುರಾವ್ ಹುಜರೆ INC 11204
1967 ಬಳ್ಳೊಳ್ಳಿ ವಿಧಾನಸಭಾ ಕ್ಷೇತ್ರ ಸಿದ್ಧಾರ್ಥ ಅರಕೇರಿ RPI 14653 ಜೆಟ್ಟೆಪ್ಪ ಕಬಾಡಿ INC 10738
1962 ಬರಡೋಲ ವಿಧಾನಸಭಾ ಕ್ಷೇತ್ರ ಜೆಟ್ಟೆಪ್ಪ ಕಬಾಡಿ INC 9792 ಶಿವಪ್ಪ ಕಾಂಬ್ಳೆ RPI 2623
1957 ಬಳ್ಳೊಳ್ಳಿ ವಿಧಾನಸಭಾ ಕ್ಷೇತ್ರ ಜೆಟ್ಟೆಪ್ಪ ಕಬಾಡಿ INC 17402 ಲಚ್ಚಪ್ಪ ಸಂಧಿಮನಿ SWA 16390
ಇಂಡಿ ವಿಧಾನಸಭಾ ಕ್ಷೇತ್ರ-೧ ಬಾಂಬೆ ರಾಜ್ಯ
1951 ಇಂಡಿ-ಸಿಂದಗಿ ವಿಧಾನಸಭಾ ಕ್ಷೇತ್ರ ಜೆಟ್ಟೆಪ್ಪ ಕಬಾಡಿ INC 30322 ಬಾಬುರಾವ್ ಹುಜರೆ SFC 5457

ವಿಜಯಪುರ ಲೋಕ ಸಭೆ ಚುನಾವಣಾ ಕ್ಷೇತ್ರ

ವಿಜಯಪುರ ಲೋಕಸಭಾ ಕ್ಷೇತ್ರವು ಕರ್ನಾಟಕಲೋಕ ಸಭೆ ಚುನಾವಣಾ ಕ್ಷೇತ್ರಗಳಲ್ಲಿ ಒಂದು.


ಪಾಟೀಲರ ರಾಜಕಾರಣ

ವಿಜಯಪುರ ಜಿಲ್ಲೆಯ ರಾಜಕಾರಣದಲ್ಲಿ ಪಾಟೀಲರದ್ದೇ ಪಾರುಪತ್ಯ. ಯಾವುದೇ ಪಕ್ಷದಿಂದ ಪಾಟೀಲರೊಬ್ಬರು ಕಣಕ್ಕಿಳಿದರೆ ಎದುರಾಳಿಯೂ ಪಾಟೀಲರೇ ಆಗಿರುತ್ತಾರೆ. ವಿಧಾನಸಭೆ ಚುನಾವಣೆಯಲ್ಲಿ ಪಾಟೀ ಸವಾಲು ನೋಡುವುದೇ ಮತದಾರರಿಗೆ ಖುಷಿ. ಇಲ್ಲಿ ಪಾಟೀಲರೇ ದುಷ್ಮನ್‌ಗಳು, ಪಾಟೀಲರೇ ಗೆಳೆಯರು. ಹೀಗಾಗಿ ಪಾಟೀಲರ ತಂತ್ರ- ಪ್ರತಿತಂತ್ರದ ಕುತೂಹಲ ಹೆಚ್ಚು.

ಜಿಲ್ಲೆಯಲ್ಲಿ 1957ರಿಂದ ಈವರೆಗಿನ ಚುನಾವಣೆ ಪುಟಗಳನ್ನು ತಿರುವಿ ಹಾಕಿದರೆ ಪಾಟೀಲರೇ ಕದನ ಕಲಿಗಳಾಗಿ ಮಿಂಚಿರುವುದನ್ನು ಕಾಣಬಹುದು. ಇಡೀ ಜಿಲ್ಲೆಯಲ್ಲಿ 119 ಮಂದಿ ಪಾಟೀಲರು ಸ್ಪರ್ಧಿಸಿ 40 ಮಂದಿ ಚುನಾಯಿತರಾಗಿದ್ದಾರೆ. ಇದರಲ್ಲಿ 6, 4 ಬಾರಿ ಗೆದ್ದ ಪಾಟೀಲರೇ ಹೆಚ್ಚಿದ್ದಾರೆ. ಗೆದ್ದವರು ಒಬ್ಬರು ಪಾಟೀಲರಾದರೆ ಸೋತವರೂ ಮತ್ತೊಬ್ಬ ಪಾಟೀಲರೇ ಆಗಿದ್ದಾರೆ. ಅದರಲ್ಲೂ ಹಿಪ್ಪರಗಿ, ಇಂಡಿ, ಬಬಲೇಶ್ವರ, ಬಸವನ ಬಾಗೇವಾಡಿ, ಸಿಂದಗಿ ಕ್ಷೇತ್ರದ ಮತ ಸಮರದಲ್ಲಿ ಪಾಟೀಲರೇ ಜಿದ್ದಾಜಿದ್ದಿನ ರಾಜಕೀಯ ಗದ್ದಲ ಎಬ್ಬಿಸಿದ್ದಾರೆ. ಕನಿಷ್ಠ ನಾಲ್ಕು ಮಂದಿ ಪಾಟೀಲರು ಶಾಸಕರಾಗಿ ಪ್ರತಿ ಚುನಾವಣೆಯಲ್ಲಿ ಆಯ್ಕೆಯಾಗಿ ಬರುತ್ತಾರೆ. 2013ರಲ್ಲೂ ಸಚಿವ ಎಂ.ಬಿ.ಪಾಟೀಲ, ಹಿರಿಯ ಶಾಸಕ ಶಿವಾನಂದ ಪಾಟೀಲ, ಎ.ಎಸ್.ಪಾಟೀಲ ಮತ್ತು ಯಶವಂತರಾಯಗೌಡ ಪಾಟೀಲ ನಾಲ್ವರು ಚುನಾಯಿತರಾಗಿದ್ದರು.

ಜಿಲ್ಲೆಯ 7 ಸಾಮಾನ್ಯ ಕ್ಷೇತ್ರಗಳಲ್ಲಿ ವಿಧಾನಸಭೆ ಚುನಾವಣೆಗೆ ಸ್ಪರ್ಧಿಸಿರುವವರ ಮಾಹಿತಿ ಗಮನಿಸಿದರೆ ಎ ಟು ಝಡ್‌ ಪಾಟೀಲರೇ ಇರುವುದು ಕಂಡುಬರುತ್ತದೆ. ಅಂದರೆ ಇಂಗ್ಲಿಷ್‌ ಅಕ್ಷರಗಳ ಪ್ರಕಾರ ಅವರ ಹೆಸರು ಇರುವ ಶಾಸಕರು ಇದ್ದಾರೆ. ಅಂದರೆ ಅಮೀನಪ್ಪ ಪಾಟೀಲ, ಬಸನಗೌಡ, ಚಂದ್ರಗೌಡ, ದೊಡ್ಡನಗೌಡ, ಜಗದೀಶಗೌಡ, ಕುಮಾರಗೌಡ, ಮಲ್ಲನಗೌಡ, ಮಲಕೇಂದ್ರ ಪಾಟೀಲ, ಪ್ರಭುಗೌಡ, ಶಿವಾನಂದ ಪಾಟೀಲ, ಶಾಂತಗೌಡ, ರವಿಕಾಂತ ಪಾಟೀಲ, ವಿಜುಗೌಡ, ಯಶವಂತರಾಯಗೌಡ ಪಾಟೀಲ ಹೀಗೆ ಪಟ್ಟಿ ಸಾಗುತ್ತದೆ.

ಒಂದೇ ಹೆಸರಿವರೂ ಎದುರಾಳಿಗಳಾಗಿದ್ದು, ಪಕ್ಕದ ಕ್ಷೇತ್ರಗಳಲ್ಲಿ ಉದಾಹರಣೆಯಿದೆ. ಅಪ್ಪ-ಮಗ, ಅಣ್ಣ-ತಮ್ಮ, ಬೀಗರು, ಹತ್ತಿರದ ಸಂಬಂಧಿಗಳು ಸ್ಪರ್ಧಿಸಿದ್ದಾರೆ. ಉತ್ತರ ಕರ್ನಾಟಕ ಭಾಗದಲ್ಲಿ ಲಿಂಗಾಯತರು ಮಾತ್ರವಲ್ಲದೇ ಮುಸ್ಲಿಂ ಸಹಿತ ಇತರೆ ಸಮುದಾಯದವರೂ ಪಾಟೀಲರು ಎನ್ನುವ ಸರ್‌ ನೇಮ್‌(ಮನೆತನ ಹೆಸರು) ಹೊಂದಿರುವುದರಿಂದ ಒಳಪಂಗಡಗಳ ಸುಳಿ ಗೊತ್ತಾಗುವುದು ಚುನಾವಣೆಯಲ್ಲಿ ಗೆದ್ದಾಗ ಇಲ್ಲವೇ ಸೋತಾಗಲೇ.

1957ರಲ್ಲಿ 4, 1962ರಲ್ಲಿ 5, 1967ರಲ್ಲಿ 3, 1972ರಲ್ಲಿ 4, 1984ರಲ್ಲಿ 11, 1983ರಲ್ಲಿ 10, 1985ರಲ್ಲಿ 8, 1989ರಲ್ಲಿ 11, 1994ರಲ್ಲಿ 13, 1999ರಲ್ಲಿ 8, 2004ರಲ್ಲಿ 9, 2008ರಲ್ಲಿ 16 , 2013ರಲ್ಲಿ 15 ಜನರು ಪಾಟೀಲರೇ ಸ್ಪರ್ಧಿಸಿದ್ದಾರೆ.

ಬಿ.ಎಸ್‌.ಪಾಟೀಲ(ಮನಗೂಳಿ) 6 ಬಾರಿ, ಬಿ.ಎಂ.ಪಾಟೀಲ, ಬಿ.ಎಸ್‌.ಪಾಟೀಲ(ಸಾಸನೂರ) ಹಾಗೂ ಶಿವಾನಂದ ಪಾಟೀಲ ತಲಾ 4 ಬಾರಿ ಗೆಲುವು ಕಂಡಿದ್ದಾರೆ. ರವಿಕಾಂತ ಪಾಟೀಲ ಮತ್ತು ಎಂ.ಬಿ.ಪಾಟೀಲ 3 ಬಾರಿ, ಗದಿಗೆಪ್ಪಗೌಡ ಪಾಟೀಲ, ಎ.ಎಸ್‌.ಪಾಟೀಲ ನಡಹಳ್ಳಿ, ಬಸನಗೌಡ ಪಾಟೀಲ(ಯತ್ನಾಳ), ಕುಮಾರಗೌಡ ಪಾಟೀಲ ಮತ್ತು ವೈ.ಎಸ್‌.ಪಾಟೀಲ್‌ ಅವರು 2 ಬಾರಿ ಗೆದ್ದಿದ್ದಾರೆ.ಬಿ.ಬಿ.ಪಾಟೀಲ, ಯಶವಂತರಾಯಗೌಡ, ಜಿ.ಎನ್.ಪಾಟೀಲ, ಕೆ.ಡಿ.ಪಾಟೀಲ(ಉಕ್ಕಲಿ), ಶಂಕರಗೌಡ ಪಾಟೀಲ, ನಿಂಗನಗೌಡ ಪಾಟೀಲರು ತಲಾ ಒಂದು ಬಾರಿ ಗೆದ್ದಿದ್ದಾರೆ.

ಬಸವನಬಾಗೇವಾಡಿಯಲ್ಲಿ ಸಂಬಂಧಿಕರೇ ಎದುರಾಳಿಗಳಾಗಿದ್ದರೆ, ಹೂವಿನ ಹಿಪ್ಪರಗಿಯಲ್ಲಿ ಜಿ.ಎನ್‌.ಪಾಟೀಲ ಅವಿರೋಧವಾಗಿ ಆಯ್ಕೆಯಾದ ಇತಿಹಾಸವಿದೆ.