ಮಾಯಕೊಂಡ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

ವಿಕಿಪೀಡಿಯದಿಂದ, ಇದು ಮುಕ್ತ ಹಾಗೂ ಸ್ವತಂತ್ರ ವಿಶ್ವಕೋಶ
Content deleted Content added
ಹೊಸ ಪುಟ: {{Infobox Indian Jurisdiction | native_name = ಮಾಯಕೊಂಡ | latd = 14.4167 | longd = 74.4| locator_position = right | |state_name = ಕರ್ನಾಟಕ |...
( ಯಾವುದೇ ವ್ಯತ್ಯಾಸವಿಲ್ಲ )

೧೩:೦೮, ೬ ಜೂನ್ ೨೦೧೮ ನಂತೆ ಪರಿಷ್ಕರಣೆ

ಮಾಯಕೊಂಡ
ಮಾಯಕೊಂಡ
Population
 (2017)
 • Total೧,೪೫,೦೦೦

ಮಾಯಕೊಂಡ - ಭಾರತದ ಕರ್ನಾಟಕ ರಾಜ್ಯದ ದಾವಣಗೆರೆ ಜಿಲ್ಲೆಯ ಒಂದು ಊರು ಮತ್ತು ಹೋಬಳಿ ಕೇಂದ್ರ.

ಭೌಗೋಳಿಕ

ದಾವಣಗೆರೆ ಆಗ್ನೇಯದಲ್ಲಿ 23 ಕಿಮೀ ದೂರದಲ್ಲಿ ಬೆಂಗಳೂರು-ಪುಣೆ ರೈಲು ಮಾರ್ಗದಲ್ಲಿದೆ. ಜನಸಂಖ್ಯೆ 4,642 (1981). ಈ ಊರು ವ್ಯಾಪಾರಸ್ಥಳವಾಗಿ ಅಭಿವೃದ್ಧಿಯಾಗುತ್ತಿದೆ. ಅಂಚೆ, ವಿದ್ಯುಚ್ಛಕ್ತಿ, ಶಾಲೆಗಳು, ಆರೋಗ್ಯ ಕೇಂದ್ರ ಮುಂತಾದ ನಾಗರಿಕ ಸೌಲಭ್ಯಗಳಿವೆ. ಪುರಸಭಾಡಳಿತವಿದೆ. ಈ ಊರಿನಲ್ಲಿ ಕೇಶವ ಮತ್ತು ಓಬಳ ನರಸಿಂಹ ಗುಡಿಗಳಿವೆ.

ಇತಿಹಾಸ

ನರಸಿಂಹಸ್ವಾಮಿ ಗುಡಿಯ ನವರಂಗಕ್ಕೆ ದ್ರಾವಿಡ ಶಿಲ್ಪ ಶೈಲಿಯ ನಾಲ್ಕು ಕಂಬಗಳಿವೆ. ಈ ಘನಾಕೃತಿಯ ಕಂಬಗಳ ಮೇಲೆ ಗಣೇಶ, ಹನುಮಂತ ಮೊದಲಾದ ದೇವತೆಗಳೂ ಪುರುಷಾಮೃಗ, ನೃತ್ಯಗಾತಿಯರು, ದರ್ಪಣಮೋಹಿನಿ, ಕಾಳಿಂಗ ಮೊದಲಾದ ಉಬ್ಬುಶಿಲ್ಪದ ರಚನೆಗಳೂ ಇವೆ.

"https://kn.wikipedia.org/w/index.php?title=ಮಾಯಕೊಂಡ&oldid=848658" ಇಂದ ಪಡೆಯಲ್ಪಟ್ಟಿದೆ