ವಿಶ್ವ ಕನ್ನಡ ಸಮ್ಮೇಳನ

ವಿಕಿಪೀಡಿಯದಿಂದ, ಇದು ಮುಕ್ತ ಹಾಗೂ ಸ್ವತಂತ್ರ ವಿಶ್ವಕೋಶ

ವಿಶ್ವ ಕನ್ನಡ ಸಮ್ಮೇಳನವು ಜಗತ್ತಿನಾದ್ಯಂತ ಹರಡಿರುವ ಕನ್ನಡಿಗರನ್ನು ಒಗ್ಗೂಡಿಸಿ ಕನ್ನಡ ನಾಡು-ನುಡಿಗೆ ಸಂಬಂಧಿಸಿದ ವಿಷಯಗಳನ್ನು ಕುರಿತು ನಡೆಸುವ ಸಮ್ಮೇಳನ. ಈವರೆಗೆ ವಿಶ್ವ ಕನ್ನಡ ಸಮ್ಮೇಳನವು ಎರಡು ಬಾರಿ ನಡೆದಿದೆ. ಇನ್ನು ಮುಂದೆ ಐದು ವರ್ಷಗಳಿಗೊಮ್ಮೆ ನಡೆಸುವ ಯೋಜನೆಯನ್ನು ಎರಡನೆಯ ಸಮ್ಮೇಳನದಲ್ಲಿ ಘೋಷಿಸಲಾಗಿದೆ.

ಮೊದಲನೆಯ ವಿಶ್ವ ಕನ್ನಡ ಸಮ್ಮೇಳನ[ಬದಲಾಯಿಸಿ]

ಮೊದಲನೆಯ ವಿಶ್ವ ಕನ್ನಡ ಸಮ್ಮೇಳನವು ೧೯೮೫ರಲ್ಲಿ ಮೈಸೂರಿನಲ್ಲಿ ನಡೆಯಿತು. ಸಾಹಿತಿ ಶಿವರಾಮ ಕಾರಂತರ ಅಧ್ಯಕ್ಷತೆಯಲ್ಲಿ ರಾಷ್ಟ್ರಕವಿ ಕುವೆಂಪುರವರು ಈ ಸಮ್ಮೇಳನವನ್ನು ಉದ್ಘಾಟಿಸಿದರು.ರಾಜೀವ್ ಗಾಂಧಿ ಅವರು ಸಹ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು.

ಎರಡನೆಯ ವಿಶ್ವ ಕನ್ನಡ ಸಮ್ಮೇಳನ[ಬದಲಾಯಿಸಿ]

ಎರಡನೆಯ ವಿಶ್ವ ಕನ್ನಡ ಸಮ್ಮೇಳನವು ೨೦೧೧ರ ಮಾರ್ಚ್ ೧೧, ೧೨, ೧೩ರಂದು ಬೆಳಗಾವಿಯಲ್ಲಿ ನಡೆಯಿತು. ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪನವರ ಅಧ್ಯಕ್ಷತೆಯಲ್ಲಿ ಇನ್ಫೋಸಿಸ್ ಸಂಸ್ಥೆಯ ಸ್ಥಾಪಕ ಎನ್ ಆರ್ ನಾರಾಯಣಮೂರ್ತಿಯವರು ಈ ಸಮ್ಮೇಳನವನ್ನು ಉದ್ಘಾಟಿಸಿದರು. ವಿಶೇಷ ಅತಿಥಿಯಾಗಿ ಶ್ರೀಮತಿ ಐಶ್ವರ್ಯಾ ರೈ ಬಚ್ಚನ್ ಭಾಗವಹಿಸಿದ್ದರು. ಸಮಾರೋಪ ಸಮಾರಂಭದ ಅಧ್ಯಕ್ಷತೆಯನ್ನು ನಾಡೋಜ ದೇ ಜವರೇಗೌಡರು ವಹಿಸಿದ್ದರು. ಈ ಸಮ್ಮೇಳನಕ್ಕಾಗಿ ಸಾವಿರಾರು ಜನ ದೇಶ ವಿದೇಶಗಳಿಂದ ಆಗಮಿಸಿದ್ದರು.