ವಿಶ್ವ ಪುಸ್ತಕ ಮತ್ತು ಕೃತಿಸ್ವಾಮ್ಯ ದಿನ
ಗೋಚರ
ಪ್ರತಿ ವರ್ಷದ ಎಪ್ರೀಲ್ ೨೩ರಂದು ವಿಶ್ವ ಪುಸ್ತಕ ಮತ್ತು ಕೃತಿಸ್ವಾಮ್ಯ ದಿನ (ಇದನ್ನು ಅಂತರಾಷ್ಟ್ರೀಯ ಪುಸ್ತಕ ದಿನ ಎಂದೂ ಕರೆಯುತ್ತಾರೆ). ವಿಶ್ವಸಂಸ್ಥೆಯ ಶೈಕ್ಷಣಿಕ, ವೈಜ್ಞಾನಿಕ ಮತ್ತು ಸಾಂಸ್ಕೃತಿಕ ಆಯೋಗ (ಯುನೆಸ್ಕೋ) 1995ರಲ್ಲಿ ಮೊದಲ ಬಾರಿಗೆ ಓದುವಿಕೆ, ಪ್ರಕಾಶನ ಮತ್ತು ಕೃತಿಸ್ವಾಮ್ಯಗಳ ಬಗ್ಗೆ ಅರಿವು ಮತ್ತು ಪ್ರಚಾರ ನೀಡಲು ಈ ಕಾರ್ಯಕ್ರಮ ಹಮ್ಮಿಕೊಂಡಿತು. ಈ ಕಾರ್ಯಕ್ರಮ ಹಮ್ಮಿಕೊಳ್ಳುವ ಮೂಲಕ ಯುನೇಸ್ಕೊ ಯುವಜನತೆಯಲ್ಲಿ ಪುಸ್ತಕ ಪ್ರೇಮ, ಓದಿನ ಖುಷಿ ಅಥವಾ ಗಮ್ಮತ್ತು ಹೆಚ್ಚಿಸುವ ಮತ್ತು ಉತ್ತಮ ಲೇಖಕನ್ನು ಗೌರವಿಸುವ ಹಂಬಲ ಹೊಂದಿದೆ. ನೂರಕ್ಕೂ ಹೆಚ್ಚು ರಾಷ್ಟ್ರಗಳು ಮತ್ತು ವಿಶ್ವಾದ್ಯಂತ ಅನೇಕಾನೇಕ ಪುಸ್ತಕ ಪ್ರಕಾಶಕರು, ಪುಸ್ತಕ ವ್ಯಾಪಾರಿಗಳು, ಗ್ರಂಥಾಲಯಗಳು, ಶಾಲಾ-ಕಾಲೇಜು-ವಿಶ್ವವಿದ್ಯಾಲಯಗಳು, ಸಾಂಸ್ಕೃತಿಕ ಸಂಘಟನೆಗಳು ಮತ್ತು ಸಾಹಿತ್ಯ ವೇದಿಕೆಗಳು ಈ ದಿನಾಚಾರಣೆಯಲ್ಲಿ ಭಾಗವಹಿಸಿ ಪುಸ್ತಕ ಮತ್ತು ಓದುವಿಕೆಯ ಮಹತ್ವ ಸಾರಲಿವೆ. ಈ ದಿನದಂದು ವಿಲಿಯಮ್ ಶೆಕ್ಸ್ಪಿಯರ್ ರವರ ಪುಣ್ಯತಿಥಿಯನ್ನೂ ಸಹ ಆಚರಿಸುವರು.
ಈ ಲೇಖನ ಒಂದು ಚುಟುಕು. ಇದರ ಬಗ್ಗೆ ಹೆಚ್ಚಿನ ಮಾಹಿತಿ ತಿಳಿದಿದ್ದಲ್ಲಿ, ನೀವು ಈ ವಿಷಯವನ್ನು ವಿಸ್ತರಿಸಿ ಕನ್ನಡ ವಿಕಿಪೀಡಿಯ ಯೋಜನೆಯನ್ನು ಉತ್ತಮಗೊಳಿಸುವಲ್ಲಿ ಸಹಕರಿಸಬಹುದು. |