ಶಿಕ್ಷಕರ ದಿನಾಚರಣೆ

ವಿಕಿಪೀಡಿಯದಿಂದ, ಇದು ಮುಕ್ತ ಹಾಗೂ ಸ್ವತಂತ್ರ ವಿಶ್ವಕೋಶ

ಶಿಕ್ಷಕರ ದಿನಾಚರಣೆ


ಶಿಕ್ಷಕರ ದಿನಾಚರಣೆಯು ಅನೇಕ ದೇಶಗಳಲ್ಲಿ ಆಚರಿಸಲಾಗುತ್ತದೆ. ಭಾರತದಲ್ಲಿ ಸರ್ವೆಪಲ್ಲಿ ರಾಧಾಕೃಷ್ಣನ್ರ ಗೌರವಾರ್ಥವಾಗಿ ಅವರ ಜನ್ಮದಿನವಾದ ಸೆಪ್ಟೆಂಬರ್ ೫ ರಂದು ಶಿಕ್ಷಕರ ದಿನಾಚರಣೆಯಾಗಿ ಆಚರಿಸಲಾಗುತ್ತದೆ. ಸರ್ವೆಪಲ್ಲಿ ರಾಧಾಕೃಷ್ಣನ್ರವರು ಭಾರತದ ೨ನೆಯ ರಾಷ್ಟ್ರಪತಿಗಳಾಗಿದ್ದರು ಹಾಗೂ ಒಬ್ಬ ಹೆಸರಾಂತ ಶಿಕ್ಷಣತಜ್ಞರಾಗಿದ್ದರು.

ಭಾರತದಲ್ಲಿ ಶಿಕ್ಷಕರ ದಿನಾಚರಣೆಯನ್ನು ಸೆಪ್ಟೆಂಬರ್ ೫ ರಂದು ಆಚರಿಸಲಾಗುತ್ತದೆ; ಆದರೆ ವಿಶ್ವ ಶಿಕ್ಷಕರ ದಿನಾಚರಣೆಯನ್ನು ಅಕ್ಟೋಬರ್ ೫ ರಂದು ಆಚರಿಸುವರು.