ಶ್ರೀ ಚೆನ್ನಕೇಶವ ದೇವಸ್ಥಾನ
| ಶ್ರೀ ಚೆನ್ನಕೇಶವ ದೇವಸ್ಥಾನ | |
|---|---|
Keshava temple at Somanathpura (also spelled Keshava temple, Somnathpur) | |
| ಹೆಸರು: | ಶ್ರೀ ಚೆನ್ನಕೇಶವ ದೇವಸ್ಥಾನ |
| ನಿರ್ಮಾತೃ: | Somanatha Dandanayaka |
| ವಾಸ್ತುಶಿಲ್ಪ: | Hoysala architecture |
| ರೇಖಾಂಶ: | 12°16′32.49″N 76°52′53.95″E / 12.2756917°N 76.8816528°E |
| Official name: Sacred Ensembles of the Hoysalas | |
| Type | Cultural |
| Criteria | i, ii, iv |
| Designated | 2023 (45th session) |
| Reference no. | 1670[೧] |
ಇತಿಹಾಸ
[ಬದಲಾಯಿಸಿ]ಶ್ರೀ ಚನ್ನಕೇಶವ ದೇವಾಲಯವು ಕರ್ನಾಟಕದ ಸೋಮನಾಥಪುರ ಪಟ್ಟಣ ದಲ್ಲಿದೆ. ಇದು ಕನ್ನಡದ ಮೇರು ದೊರೆಗಳಾದ ಹೊಯ್ಸಳರ ಕಾಲದ ಶಿಲ್ಪಕಲೆಯ ಬೀಡಾಗಿದೆ.೧೨೬೮ರಲ್ಲಿ ಹೊಯ್ಸಳ ದೊರೆ ಮೂರನೇ ನರಸಿಂಹ ಅವರಿಂದ ಕಟ್ಟಲ್ಪಟ್ಟಿತು. ಅದು ದಕ್ಷಿಣ ಭಾರತದಲ್ಲಿ ಹೊಯ್ಸಳ ಸಾಮ್ರಾಜ್ಯ ವಿಜ್ರಂಭಣೆಯಿಂದ ನಡೆಯುತ್ತಿದ್ದ ಸಮಯವಾಗಿತ್ತು.
ಐತಿಹ್ಯ
[ಬದಲಾಯಿಸಿ]13ನೆಯ ಶತಮಾನದಲ್ಲಿ ಸೋಮನಾಥಪುರ ಒಂದು ಪುಟ್ಟ ಅಗ್ರಹಾರವಾಗಿತ್ತು. ಚತುರ್ವೇದಿಮಂಗಲ ವಿದ್ಯಾನಿಧಿಪ್ರಸನ್ನ ಸೋಮನಾಥಪುರ ಎಂಬುದು ಇದರ ಪೂರ್ವ ಹೆಸರು. ಇಲ್ಲಿರುವ 7 ಶಾಸನಗಳು ಈ ಅಪೂರ್ವ ದೇವಾಲಯದ ಬಗ್ಗೆ ಹಾಗೂ ಕಲೆಗೆ ಹಾಗೂ ವಿದ್ಯೆಗೆ ಆಗರವಾಗಿದ್ದ ಈ ಊರಿನ ಬಗ್ಗೆ ಮಹತ್ವದ ಮಾಹಿತಿ ಒದಗಿಸುತ್ತವೆ. ಹೊಯ್ಸಳರ ದೊರೆ ಮುಮ್ಮಡಿ ನರಸಿಂಹನ ದಂಡನಾಯಕನಾಗಿದ್ದ ಸೋಮನಾಥ 1258ರ ಸುಮಾರಿನಲ್ಲಿ ನಿರ್ಮಿಸಿ, ತನ್ನ ಹೆಸರನ್ನೇ ಇಟ್ಟು ಸೋಮನಾಥಪುರವೆಂದು ಕರೆದ. ಪ್ರಶಾಂತವಾಗಿ ಕಾವೇರಿ ನದಿ ಹರಿಯುವ ಈ ಸ್ಥಳದಲ್ಲಿ ಹಲವು ದೇವಾಲಯಗಳನ್ನು ನಿರ್ಮಿಸಿದ ಎನ್ನುತ್ತದೆ ಇತಿಹಾಸ.
ವಾಸ್ತುಶಿಲ್ಪ
[ಬದಲಾಯಿಸಿ]
ವಿಶಾಲವಾದ ಸ್ಥಳದಲ್ಲಿ ನಕ್ಷತ್ರಾಕಾರದ ಜಗತಿಯ ಮೇಲೆ ನಿರ್ಮಿಸಲಾಗಿರುವ ಈ ದೇಗುಲ ಪೂರ್ವಾಭಿಮುಖವಾಗಿದ್ದು ಜಗತಿಯ ಸುತ್ತಲೂ ಇಡೀ ದೇವಾಲಯವನ್ನೇ ಆನೆಗಳು ಹೊತ್ತಿವೆಯೇನೋ ಎಂದು ಭಾಸವಾಗುವಂತೆ ಸುಂದರ ಗಜಶಿಲ್ಪಗಳನ್ನು ಕೆತ್ತಲಾಗಿದೆ. ಶಿಖರಪ್ರಾಯ: ಸೋಮನಾಥಪುರದ ದೇವಾಲಯದ ಸೌಂದರ್ಯಕ್ಕೆ ಶಿಖರಪ್ರಾಯವಾಗಿರುವುದು ಮೂರು ಶಿಖರಗಳೇ. ಹೀಗಾಗೇ ಇದನ್ನು ತ್ರಿಕುಟಾಚಲವೆನ್ನುತ್ತಾರೆ. ಹದಿನಾರು ಕೋಣೆಗಳ ನಕ್ಷತ್ರಾಕಾರದ ವಿನ್ಯಾಸದ ಮೇಲೆ ರಚಿತವಾಗಿರುವ ಶಿಖರಗಳು ದೇವಾಲಯ ರಮ್ಯತೆಯನ್ನು ನೂರ್ಮಡಿಗೊಳಿಸಿವೆ. ಎಲ್ಲ ಹೊಯ್ಸಳ ದೇವಾಲಯದಲ್ಲಿರುವಂತೆ ಮುಖಮಂಟಪ, ನವರಂಗ, ಗರ್ಭಗೃಹ, ಸುಖನಾಸಿಗಳು ಇಲ್ಲೂ ಇವೆ. ಮಧ್ಯದ ಭುನವೇಶ್ವರಿಯಲ್ಲಿ ಅಷ್ಟದಿಕ್ಪಾಲಕರು, ಅದರ ಮೇಲೆ 32 ತೊಲೆಗಳಿಂದ ಮಾಡಿದ ಕಮಾನು, ಅದರ ಮಧ್ಯದಲ್ಲಿ ತೂಗಾಡುವ ರೀತಿಯ ಕಮಲದ ಮೊಗ್ಗು ಮನಮೋಹಕ. ಈ ದೇವಾಲಯದಲ್ಲಿ ಮೂರು ಗರ್ಭಗೃಹಗಳಿದ್ದು, ಉತ್ತರ ಗರ್ಭಗೃಹದಲ್ಲಿ ಜನಾರ್ದನ ದಕ್ಷಿಣ ಗರ್ಭಗೃಹದಲ್ಲಿ ತ್ರಿಭಂಗಿಯಲ್ಲಿ ನಿಂತ ವೇಣುಗೋಪಾಲ ವಿಗ್ರಹ ಇದೆ. ಮಧ್ಯದ ಗರ್ಭಗೃಹದಲ್ಲಿ ಯಾವ ವಿಗ್ರಹವೂ ಇಲ್ಲ. ಹಿಂದೆ ಇಲ್ಲಿ ವಿಗ್ರಹ ಇತ್ತೆಂದು ಹೇಳಲಾಗುತ್ತದೆ.
ದುರಸ್ತಿ
[ಬದಲಾಯಿಸಿ]ಇಂದು ಈ ದೇವಾಲಯದಲ್ಲಿ ಹಲವು ಭಗ್ನಗೊಂಡ ವಿಗ್ರಹಗಳನ್ನು ಕಂಡಾಗ ಮನಸ್ಸು ವ್ಯಾಕುಲಗೊಳ್ಳುತ್ತದೆ. 19ನೆಯ ಶತಮಾನದಲ್ಲಿ ಆಂಗ್ಲವಿದ್ವಾಂಸರು ಈ ದೇವಾಲಯದ ಶಿಲ್ಪಕಲಾವೈಭವ ಕಂಡು ಅದರ ಮಾಹಿತಿ ಮುದ್ರಿಸಿದ ಕಾರಣ, ಅಂದಿನ ಮೈಸೂರು ಅರಸರು ಈ ದೇವಾಲಯವನ್ನು ಸ್ವಲ್ಪಮಟ್ಟಿಗೆ ಅಭಿವೃದ್ಧಿಪಡಿಸಿದರು. 1924ರಲ್ಲಿ ಬಿದ್ದುಹೋಗಿದ್ದ ಗೋಡೆಗಳ ದುರಸ್ತಿ ಮಾಡಿ, ದೇವಾಲಯ ಶಿಥಿಲವಾಗದಂತೆ ಭದ್ರಗೊಳಿಸಲಾಯಿತು. 1953ರಲ್ಲಿ ಈ ದೇವಾಲಯದ ಒಳಭಾಗದ ಅಪರಿಮಿತ ಸೌಂದರ್ಯವನ್ನು ಪ್ರವಾಸಿಗರು ಕಣ್ತುಂಬಿಕೊಳ್ಳಲೆಂದು ವಿದ್ಯುದ್ದೀಪದ ವ್ಯವಸ್ಥೆ ಮಾಡಲಾಗಿದೆ
ಉಲ್ಲೇಖಗಳು
[ಬದಲಾಯಿಸಿ]- ↑ "Sacred Ensembles of the Hoysalas". UNESCO World Heritage Centre. Retrieved 2023-09-24.