ಸತೀಶ ಕುಲಕರ್ಣಿ

ವಿಕಿಪೀಡಿಯದಿಂದ, ಇದು ಮುಕ್ತ ಹಾಗೂ ಸ್ವತಂತ್ರ ವಿಶ್ವಕೋಶ

ಕವಿ, ಕಲಾವಿದ, ನಾಟಕಕಾರ ಸತೀಶ ಕುಲಕರ್ಣಿ ಅವರು 1951 ಜುಲೈ 13 ರಂದು ಧಾರವಾಡದಲ್ಲಿ ಜನಿಸಿದರು. ತಾಯಿ ಲೀಲಾಬಾಯಿ, ತಂದೆ ನೀಲಕಂಠರಾವ್ ಕುಲಕರ್ಣಿ. ಬಾಲ್ಯದಿಂದಲೂ ರಂಗಭೂಮಿಯಲ್ಲಿ ಆಸಕ್ತಿ ಇದ್ದ ಇವರು ಹಲವಾರು ನಾಟಕಗಳಲ್ಲಿ ಅಭಿನಯಿಸಿದ್ದಾರೆ ಹಾಗೂ ನಿರ್ದೇಶಿಸಿದ್ದಾರೆ.

ಲಂಕೇಶರ ತೆರೆಗಳು, ಜೋಕುಮಾರಸ್ವಾಮಿ, ಕುಂಟಾಕುಂಟಾ ಕುರವತ್ತಿ, ಪ್ರಸ್ತುತ, ಬಂಗಾರದ ಕೊಡ, ಗಾಂಧಿ ಹಬ್ಬಿದ ಗಿಡ, ಪರಸಪ್ಪನ ಕಥೆ, ಅನಾಮಿಕ, ಕಂಪ್ಯೂಟರ್, ದೊಡ್ಡಮನುಷ್ಯ, ಹಾವು ಬಂತು ಹಾವು, ಗಗ್ಗಯ್ಯನ ಗಡಿಬಿಡಿ, ಗಾಡಿಬಂತುಗಾಡಿ ಮುಂತಾದ ನಾಟಕ ನಿರ್ದೇಶನ ಮತ್ತು ಅಭಿನಯ.

‘ವಿಷಾದಯೋಗ, ಗಾಂಧಿಗಿಡ, ಕಂಪನಿ ಸವಾಲ್, ಬೆಂಕಿನೀರು, ನೆಲದ ನೆರಳು, ವಿಕ್ಷಿಪ್ತ: ಗಾಂಧಿ ಒಡಲಾಳ ಕಿಚ್ಚು’ ಅವರ ಕವನ ಸಂಕಲನಗಳು.

ದಲಿತ ಬಂಡಾಯ ಸಾಹಿತ್ಯದ ಪ್ರಮುಖ ಕವಿ ಆಗಿರುವ ಸತೀಶ ಕುಲಕರ್ಣಿ ಅವರ 'ಕಟ್ಟತ್ತೇವ ನಾವು ಕಟ್ಟತ್ತೇವ' ಎಂಬ ಕ್ರಾಂತಿಗೀತೆ ಬಹಳ ಜನಪ್ರಿಯವಾದುದು.

ಇವರಿಗೆ ವಿದ್ಯಾವರ್ಧಕ ಸಂಘದ ಪ್ರಶಸ್ತಿ, ರಾಜ್ಯ ಮಟ್ಟದ ನಿರ್ದೇಶಕ ಪ್ರಶಸ್ತಿಗಳು ದೊರೆತಿವೆ. ಯುವರಂಗದ ರಾಜ್ಯಮಟ್ಟದ ನಾಟಕ ಸ್ಪರ್ಧೆಯಲ್ಲಿ ಬಂಗಾರಕೊಡ ನಾಟಕಕ್ಕೆ ಅತ್ಯುತ್ತಮ ನಟ, ನಿರ್ದೇಶಕ ಪ್ರಶಸ್ತಿ, ವಿದ್ಯಾವರ್ಧಕ ಸಂಘದ ಪ್ರಶಸ್ತಿ ಹಾಗೂ ರಾಜ್ಯ ಮಟ್ಟದ ನಿರ್ದೇಶಕ ಪ್ರಶಸ್ತಿಗಳು ಅವರಿಗೆ ಸಂದಿವೆ.