ಸದಸ್ಯರ ಚರ್ಚೆಪುಟ:Avin A/ನನ್ನ ಪ್ರಯೋಗಪುಟ

Page contents not supported in other languages.
ವಿಕಿಪೀಡಿಯದಿಂದ, ಇದು ಮುಕ್ತ ಹಾಗೂ ಸ್ವತಂತ್ರ ವಿಶ್ವಕೋಶ
                                                    ಬಿಜಾಪುರದ ಗೋಳ ಗುಮ್ಮಟ
                                                            


ಗೋಲ್ ಗುಂಬಜ್ ಬಿಜಾಪುರದ ಅತ್ಯಂತ ಆಕರ್ಷಕವಾದ ಸ್ಮಾರಕ. ಇದನ್ನು ಮುಹಮ್ಮದ್ ಆದಿಲ್ ಷಾ,(1627-56) ತನ್ನ ಸಮಾಧಿ ಹಾಗೂ ಸ್ಮಾರಕವಾಗಿ ನಿರ್ಮಿಸಿದನು. ಈ ಕಟ್ಟಡವು ಗೋಳಾಕಾರವಾದ್ದರಿಂದ "ವೃತ್ತಾಕಾರದ ಗುಮ್ಮಟ" ಎಂಬ ಅರ್ಥವನ್ನು ಗೋಲ್ Gombadh ನಿಂದ ಇದಕ್ಕೆ ಈ ಹೆಸರು ಸೃಷ್ಟಿ ಆಯಿತು.ಇದು ಡೆಕ್ಕನ್ ವಾಸ್ತುಶಿಲ್ಪದ ಪ್ರಕಾರ ನಿರ್ಮಿತವಾಗಿದೆ.ಅದರ ಕಟ್ಟುವಿಕೆಯ ಹೊಣೆ ಹೊತ್ತವನು, ದಾಬುಲ್ ನ ಪ್ರಸಿದ್ಧ ವಾಸ್ತುಶಿಲ್ಪಯಾದ ಯಾಕುಬ್. ಗೋಲ್ ಗುಂಬಜ್ ನ ತಳಹದಿಯು 205 ಅಡಿಗಳ ಚಚ್ಚೌಕ. ಅದರ ಸುತ್ತಲೂ ಇರುವ ಗೋಡೆಗಳು 198 ಅಡಿ ಎತ್ತರವಾಗಿವೆ. ಈ ಗೋಡೆಗಳ ಮೇಲೆ ಗುಂಬಜವು ಕಣ್ಣಿಗೆ ಕಾಣುವ ಯಾವುದೇ ಆಸರೆಯೂ ಇಲ್ಲದೆ ನಿಂತಿದೆ. ಗೋಡೆಗಳಿಂದ ಸುತ್ತುವರಿಯಲ್ಪಟ್ಟ ಮತ್ತು ಗುಂಬಜದ ಕೆಳಗಿರುವ ವಿಶಾಲವಾದ ಹಾಲ್ ನ ವಿಸ್ತೀರ್ಣವು 1833767 ಚದುರಡಿಗಳು. ಗೋಲ್ ಗುಂಬಜ್, ಜಗತ್ತಿನಲ್ಲಿರುವ ಅತ್ಯಂತ ದೊಡ್ಡ ಸಿಂಗಲ್ ಛೇಂಬರ್ ಸ್ಟ್ರಕ್ಚರ್ ಗಳಲ್ಲಿ ಒಂದು. ಇಲ್ಲಿರುವ ಗೋಡೆಗಳಲ್ಲಿ ಪ್ರತಿಯೊಂದರಲ್ಲಿಯೂ ಮೂರು ಕಮಾನುಗಳನ್ನು ರಚಿಸಲಾಗಿದೆ. ಗೋಲ್ ಗುಂಬಜ್ ನ ಮಧ್ಯದಲ್ಲಿರುವ ಗೋಳಾಕೃತಿಯ ಶಿಖರವು ಯಾವುದೇ ಕಂಬ ಅಥವಾ ರಚನೆಯನ್ನು ಆಧರಿಸಿ ನಿಂತಿಲ್ಲ. ರೋಮ್ ನಗರದಲ್ಲಿರುವ ಸೈಂಟ್ ಪೀಟರ್ ಬ್ಯಾಸಿಲಿಕಾದ ಡೋಮನ್ನು ಹೊರತುಪಡಿಸಿದರೆ, ಇದು ಪ್ರಪಂಚದಲ್ಲಿಯೇ ಅತ್ಯಂತ ದೊಡ್ಡದು. ಈ ಡೋಮ್ ನಿಂತಿರುವುದು ಪೆಂಡಾಂಟಿವ್ ಎಂಬ ತತ್ವದ ಮೇಲೆ. ಪರಸ್ಪರ ಕ್ರಾಸ್ ಆಗುವ ಕಮಾನುಗಳ ವ್ಯವಸ್ಥೆಯೇ ಈ ಡೋಮಿಗೆ ಆಧಾರವಾಗಿರುತ್ತದೆ. ಭಾರತದಲ್ಲಿ ಬೇರೆಲ್ಲಿಯೂ ಈ ಬಗೆಯ ರಚನೆಯಿಲ್ಲ.

ಕಾರ್ಡೋಬಾದಲ್ಲಿರುವ ಬೃಹತ್ ಮಸೀದಿಯಲ್ಲಿ ಮಾತ್ರ ಇಂತಹ ರಚನೆಯನ್ನು ಬಳಸಲಾಗಿದೆ. ಎತ್ತರದ ಬಿಂದುವಿನಲ್ಲಿ ಕೊನೆಯಾಗುವ ಎಂಟು ಕಮಾನುಗಳು, ನಿಯತವಾದ ಜಾಗಗಳಲ್ಲಿ ಒಂದನ್ನೊಂದು ಅರ್ಧಿಸುತ್ತವೆ. ಈ ಗುಂಬಜ್ ನಲ್ಲಿರುವ ಪ್ರತಿಧ್ವನಿಗುಣವು ಅದರ ವಿಶೇಷ ಲಕ್ಷಣಗಳಲ್ಲಿ ಒಂದು. ಇಲ್ಲಿ ಆಡಿದ ಮಾತು ಅಥವಾ ಮಾಡಿದ ಶಬ್ದವು ಹನ್ನೊಂದು ಬಾರಿ ಪ್ರತಿಧ್ವನಿಸುತ್ತದೆ. ಅದನ್ನು ಮೂವತ್ತೇಳು ಕಿಲೋಮೀಟರುಗಳ ದೂರದಿಂದ ಕೇಳಬಹುದು. ಹಾಲ್ ನಿಂದ 33.22 ಮೀಟರುಗಳ ಎತ್ತರದಲ್ಲಿ ಸುಮಾರು ಮೂರೂಕಾಲು ಅಡಿ ಅಗಲದ ಗ್ಯಾಲರಿಯಿದೆ. ಇದು ಗುಂಬಜಿನ ಒಳ ಪರಿಧಿಯ ಸುತ್ತಲೂ ವೃತ್ತಾಕಾರವಾಗಿ ಹರಡಿಕೊಂಡಿದೆ. ಇದನ್ನು ‘ಪಿಸುಗುಟ್ಟುವ ಗ್ಯಾಲರಿ’(ವಿಷ್ಪರಿಂಗ್ ಗ್ಯಾಲರಿ) ಎಂದು ಕರೆಯುತ್ತಾರೆ. ಏಕೆಂದರೆ, ಇಲ್ಲಿ ಅತ್ಯಂತ ಮೆಲುದನಿಯಲ್ಲಿ ಆಡಿದ ಮಾತನ್ನು ಕೂಡ ಗ್ಯಾಲರಿಯ ಒಂದು ತುದಿಯಿಂದ ಇನ್ನೊಂದು ತುದಿಯವರೆಗೂ ಕೇಳಬಹುದು. ಒಂದೇ ಒಂದು ಬಾರಿ ಗಟ್ಟಿಯಾಗಿ ಚಪ್ಪಾಳೆ ತಟ್ಟಿದರೆ, ಅದು ಹತ್ತು ಸಲ ಪ್ರತಿಧ್ವನಿಸುತ್ತದೆ. ಗುಂಬಜಿನ ಗೋಡೆಗಳ ಹೊರ ಭಾಗದ ಮೇಲೆ ಪಾರಿವಾಳಗಳು, ಆನೆಗಳು, ಕಮಲದಳಗಳು, ಮತ್ತು ಕಂಠಹಾರಗಳ ಸುಂದರವಾದ ಕೆತ್ತನೆ ಹಾಗೂ ಶಿಲ್ಪಗಳನ್ನು ನೋಡಬಹುದು. ಹಾಲಿನ ಮಧ್ಯದಲ್ಲಿರುವ ವೇದಿಕೆಯ ಮೇಲೆ, ಮುಹಮ್ಮದ್ ಆದಿಲ್ ಷಾ ಮತ್ತು ಅವನ ಬಂಧುಗಳ ಕೃತಕವಾದ ಸಮಾಧಿಗಳಿವೆ. ನಿಜವಾದ ಸಮಾಧಿಗಳು ನೆಲಮಾಳಿಗೆಯಲ್ಲಿ ಸುರಕ್ಷಿತವಾಗಿವೆ.