ವಿಷಯಕ್ಕೆ ಹೋಗು

ಸದಸ್ಯರ ಚರ್ಚೆಪುಟ:Harshitha Harshitha

Page contents not supported in other languages.
ವಿಕಿಪೀಡಿಯದಿಂದ, ಇದು ಮುಕ್ತ ಹಾಗೂ ಸ್ವತಂತ್ರ ವಿಶ್ವಕೋಶ

ರಹಮತ್ ತರೀಕೆರೆ ರಹಮತ್ ತರೀಕೆರೆ (ಆಗಸ್ಟ್ ೨೬, ೧೯೫೯) ಕನ್ನಡದ ಪ್ರಸಿದ್ಧ ಸಂಸ್ಕೃತಿ ಚಿಂತಕರಾಗಿ, ವೈಚಾರಿಕ ಬರಹಗಾರರಾಗಿ ಹೆಸರಾಗಿದ್ದಾರೆ. ಜೀವನ

   ಕನ್ನಡದ ಪ್ರಸಿದ್ಡ ಸಂಸ್ಕೃತಿ ಚಿಂತಕರು ಹಾಗೂ ವಿಮರ್ಶಕರಾದ ರಹಮತ್ ತರೀಕೆರೆ ಅವರು ಆಗಸ್ಟ್ ೨೬, ೧೯೫೯ರಂದು ತರೀಕೆರೆ ತಾಲೂಕಿನ ಸಮತಳದಲ್ಲಿ ಜನಿಸಿದರು. ಹಳ್ಳಿಯಲ್ಲಿ ಕಮ್ಮಾರಿಕೆಯಿಂದ ಮನೆಯವರ ಹೊಟ್ಟೆ ತುಂಬುವುದು ಅಸಾಧ್ಯವಾದಾಗ ಇವರ ಕುಟುಂಬ ತರೀಕೆರೆಗೆ ಬಂತು. ಆಗ ಇವರಿಗೆ ದೊರೆತದ್ದು ಅಕ್ಷರಶಃ ಸ್ಲಂ ಬದುಕು. ಅವರಿವರ ಜೋಪಡಿ ಪಟ್ಟಿಗಳ ಬೆಳಕಿನಲ್ಲಿ ಹುಚ್ಚುಹಿಡಿದು ಓದುತ್ತ ಎಸ್ ಎಸ್ ಎಲ್ ಸಿ, ಪಿಯುಸಿ ಮುಗಿಸಿದರು. ಇದಕ್ಕೆ ತಾಯಿಯ ಒತ್ತಾಸೆಯೂ ಇತ್ತು. ತರೀಕೆರೆಯಲ್ಲಿ ಓದುವಾಗ ಅಪ್ಪ ಅಣ್ಣಂದಿರೊಂದಿಗೆ ಇವರು ಹಮಾಲಿ ಮಾಡಿದ್ದೂ ಉಂಟು.
   ಶಿವಮೊಗ್ಗೆಯ ಸಹ್ಯಾದ್ರಿ ಕಾಲೇಜಿನಲ್ಲಿ ಕನ್ನಡದ ವಿಷಯವನ್ನು ಆಯ್ಕೆ ಮಾಡಿಕೊಂಡು ಪ್ರ ಪ್ರಥಮ ಶ್ರೇಣಿಯಲ್ಲಿ ಚಿನ್ನದ ಪದಕಗಳೊಂದಿಗೆ ಪದವಿ ಪೂರೈಸಿದ ರಹಮತ್ ಅವರು ಮುಂದೆ ಮೈಸೂರಿನ ಮಾನಸಗಂಗೋತ್ರಿಯಲ್ಲಿ 1983ರ ವರ್ಷದಲ್ಲಿ ಅದೇ ಮೇಲ್ಮಟ್ಟದ ಪ್ರ ಪ್ರಥಮ ಶ್ರೇಣಿ ಮತ್ತು ಸ್ವರ್ಣಪದಕಗಳ ಸಾಧನೆಯೊಂದಿಗೆ ಸ್ನಾತಕೋತ್ತರ ಪದವಿ ಪಡೆದರು.
   ೧೯೮೩-೮೪ರ ವರ್ಷದಿಂದ ಶಿವಮೊಗ್ಗೆಯ ಸಹ್ಯಾದ್ರಿ ಕಾಲೇಜಿನಲ್ಲಿ ಕನ್ನಡ ಉಪನ್ಯಾಸಕರಾಗಿ ವೃತ್ತಿ ಆರಂಭ ಮಾಡಿದ ರಹಮತ್ ತರೀಕೆರೆಯವರು ೧೯೮೪ರಿಂದ ಚಂದ್ರಶೇಖರ ಕಂಬಾರರ ಕರೆಯ ಮೇರೆಗೆ ಹಂಪಿ ಕನ್ನಡ ವಿಶ್ವವಿದ್ಯಾಲಯದಲ್ಲಿ ಪ್ರಾಧ್ಯಾಪಕರಾದರು. ಪ್ರಸಕ್ತದಲ್ಲಿ ಕನ್ನಡ ಸಾಹಿತ್ಯ ವಿಭಾಗದ ಮುಖ್ಯಸ್ಥರಾಗಿ ಹಾಗೂ ಭಾಷಾಕಾಯದ ಡೀನ್ ಆಗಿ ಅವರು ಕಾರ್ಯ ನಿರ್ವಹಿಸುತ್ತಿದ್ದಾರೆ.

'ರಹಮತ್ ತರೀಕೆರೆಯವರು' ಬರೆದ ಮಹತ್ವದ ಕೃತಿಗಳು

 ಜೀವನ

ಲೇಖಕರಾಗಿ

   ರಹಮತ್ ತರೀಕೆರೆಯವರು ತಮ್ಮ ಓದಿನ ದಿನಗಳಲ್ಲೇ ‘ಪ್ರಪಂಚ’, ‘ಜನಪ್ರಗತಿ’, ‘ಅಂಚೆವಾರ್ತೆ’ಗಳಂಥ ಪತ್ರಿಕೆಗಳಲ್ಲಿ ಹೃದಯಸ್ಪರ್ಶಿ ಕಥೆ ಕವಿತೆಗಳನ್ನು ಪ್ರಕಟಿಸಿ ತರೀಕೆರೆ ಸೀಮೆಯ ಜನರ ಹೆಮ್ಮೆಗೆ ಪಾತ್ರರಾಗಿದ್ದರು.
   ಅವರು ಆಗಲೇ ‘ಐವರು ಹೇಳಿದ ಜನಪದ ಕಥೆಗಳು’ ಎಂಬ ಸಂಪಾದನೆಯನ್ನು ಕನ್ನಡ ಸಾಹಿತ್ಯ ಪರಿಷತ್ತು ಪ್ರಕಟಿಸುವಷ್ಟು ಬೆಳೆದಿದ್ದರು. ಎಂ.ಎ. ಸೇರುವುದರೊಳಗಾಗಿ ದಾರಿ ಖಚಿತವಾಗಿತ್ತು. ವಿದ್ಯಾರ್ಥಿ ಬದುಕಿನ ಜೀವನದುದ್ದಕ್ಕೂ ವಿದ್ಯಾಗುರುಗಳಾದ ಗೋವಿಂದರಾಜು, ಹಾಲೇಶ್, ನೊಸಂತಿ, ಎಚ್. ಎಂ. ಚೆನ್ನಯ್ಯ, ಪ್ರಭುಶಂಕರ, ಜಿ.ಎಚ್ ನಾಯಕ ಮೊದಲಾದವರು ನೀಡಿದ ನೈತಿಕ ಬೆಂಬಲ ಅವರನ್ನು ಬೆಳೆಸಿತು.
   ‘ಪ್ರತಿಸಂಸ್ಕೃತಿ’, ‘ಮರದೊಳಗಿನ ಕಿಚ್ಚು’, ‘ಸಂಸ್ಕೃತಿ ಚಿಂತನೆ’, ‘ಕತ್ತಿಯಂಚಿನ ದಾರಿ’, ‘ಚಿಂತನೆಯ ಪಾಡು’, ‘ಕರ್ನಾಟಕದ ಸೂಫಿಗಳು ಹಾಗೂ ಕರ್ನಾಟಕದ ನಾಥಪಂಥ’ ಮುಂತಾದವು ರಹಮತ್ ತರೀಕೆರೆ ಅವರ ವಿಮರ್ಶಾ ಗ್ರಂಥಗಳಾಗಿವೆ. ‘ಮಾತು ತಲೆ ಎತ್ತುವ ಬಗೆ’, ‘ಇಲ್ಲಿ ಯಾರೂ ಮುಖ್ಯರಲ್ಲ’ ಮುಂತಾದವು ಅವರ ಸಂಶೋಧನಾ ಕೃತಿಗಳು. ‘ಅಂಡಮಾನ್ ಕನಸು’ ಪ್ರವಾಸ ಕಥನ. ‘ಸಾಂಸ್ಕೃತಿಕ ಅಧ್ಯಯನ’, ‘ಧರ್ಮಪರೀಕ್ಷೆ’, 'ವಸಾಹತು ಪ್ರಜ್ಞೆ ಮತ್ತು ವಿಮೋಚನೆ’, ‘ಧರ್ಮವಿಶ್ವಕೋಶ’, ‘ಹೊಸ ತಲೆಮಾರಿನ ತಲ್ಲಣ’, ‘ಕವಿರಾಜಮಾರ್ಗ ಸಾಂಸ್ಕೃತಿಕ ಮುಖಾಮುಖಿ’, ‘ಅಕ್ಕನ ವಚನಗಳು ಸಾಂಸ್ಕೃತಿಕ ಮುಖಾಮುಖಿ’, ‘ಕುಮಾರವ್ಯಾಸ ಸಾಂಸ್ಕೃತಿಕ ಮುಖಾಮುಖಿ’, ‘ಇಂಗ್ಲಿಷ್ ಗೀತೆಗಳು ಸಾಂಸ್ಕೃತಿಕ ಮುಖಾಮುಖಿ’, ‘ಮಲೆಗಳಲ್ಲಿ ಮದುಮಗಳು ಸಾಂಸ್ಕೃತಿಕ ಮುಖಾಮುಖಿ’, ‘ತನ್ನತನದ ಹುಡುಕಾಟ’ ಮುಂತಾದವು ಅವರ ವೈಶಿಷ್ಟ್ಯಪೂರ್ಣ ಚಿಂತನ ಕೃತಿಗಳು. ‘ಲೋಕವಿರೋಧಿಗಳ ಜತೆಯಲ್ಲಿ’, ‘ಐವರು ಹೇಳಿದ ಜನಪದ ಕಥೆಗಳು’ ಮುಂತಾದವು ಸಂಪಾದಿತ ಕೃತಿಗಳು.

Start a discussion with Harshitha Harshitha

Start a discussion