ವಿಷಯಕ್ಕೆ ಹೋಗು

ಸದಸ್ಯರ ಚರ್ಚೆಪುಟ:Jeshu123

Page contents not supported in other languages.
ವಿಕಿಪೀಡಿಯದಿಂದ, ಇದು ಮುಕ್ತ ಹಾಗೂ ಸ್ವತಂತ್ರ ವಿಶ್ವಕೋಶ

ಅಕ್ಕಮಹಾದೇವಿ: ಅಕ್ಕಮಹಾದೇವಿ ಕನ್ನಡದ ಪ್ರಥಮ ಮಹಿಳಾ ಕವಿಯತ್ರಿಯಾಗಿದ್ದಾರೆ. ಅಕ್ಕಮಹಾದೇವಿಯವರನ್ನು ಶರಣ ಚಳುವಳಿಯ ಪ್ರಮುಖರಾಗಿ, ಸ್ವಾಭಿಮಾನದ ಪ್ರತೀಕವಾಗಿ, ಸ್ತ್ರಿವಾದಿ ಚಳವಳಿಯ ನಿಜವಾದ ಪ್ರತಿಪಾದಕಿಯಾಗಿ, ಅಕ್ಕರೆಯ ಅಕ್ಕನಾಗಿ, ಹೀಗೆ ಹಲವು ರೀತಿ ಗುರುತಿಸ ಬಹುದಾಗಿದೆ. ಚಿಕ್ಕ ವಯಸ್ಸಿನಲ್ಲೆ ಸಕಲ ಸುಖವನ್ನು ತ್ಯಜಿಸಿದ ಅಕ್ಕ, ಎದುರಿಸಿದ ಪರೀಕ್ಷೆಗಳು ಬಹಳಷ್ಟು. ಸಾಕ್ಷಾತ್ ಶಿವ ( ಮಲ್ಲಿಕಾರ್ಜುನ)ನನ್ನು ಪತಿ ಎಂದು ಸ್ವೀಕರಿಸಿ, ಲೌಕಿಕ ಜಗತ್ತನ್ನು ಧಿಕ್ಕರಿಸಿ, ಕೇಶಾಂಬರೆಯಾಗಿ ನಡೆದ ಅಕ್ಕ, ಹಲವಾರು ಭಕ್ತರಿಗೆ ಮಾದರಿಯಾಗಿದ್ದಾಳೆ.

ಜೀವನ ಜನ್ಮಸ್ಥ್ಲಳ : ಶರಣೆ ಅಕ್ಕಮಹಾದೇವಿಯವರು ಜನಿಸಿದ್ದು ಶಿವಮೊಗ್ಗ ಜಿಲ್ಲೆ, ಶಿಕಾರಿಪುರ-ಶಿರಾಳ ಕೊಪ್ಪದ ನಡುವೆ ಇರುವ ಉಡುತಡಿ ಅಥವಾ ಉಡಗಣಿ ಇಲ್ಲವೆ ಉಡುಗಣಿ ಎಂದೇ ಪ್ರಸಿದ್ದವಾಗಿರುವ ಪುಟ್ಟ ಗ್ರಾಮದಲ್ಲಿ. ಇದು ಶಿಕಾರಿಪುರದಿಂದ ಸುಮಾರು 15 ಕಿ.ಮಿ. ಹಾಗೂ ಶಿರಾಳ ಕೊಪ್ಪದಿಂದ 4 ಕಿ.ಮಿ.ದೂರದಲ್ಲಿದೆ. ಇದೀಗ ಇದು ಪ್ರವಾಸಿ ತಾಣವಾಗಿಯೂ ಪ್ರಸಿದ್ದವಾಗಿದೆ. ಪರರ ಪಾಲಾಗಿದ್ದ ಇಲ್ಲಿರುವ ಕೌಶಿಕ ಮಹಾರಾಜರ ಕೋಟೆ ಹಾಗೂ ಅಕ್ಕನ ದೇವಸ್ಥಾನ ಇರುವ ಜಮೀನನ್ನು ಉಳಿಸಲು ಪ್ರಯತ್ನಿಸಿ, ಹೋರಾಟ ನಡೆಸಿ, ಯಶಸ್ವಿ ಯಾಗಿದ್ದು ಸಿರಿಗೆರೆಯ ಶ್ರೀಗಳಾಗಿದ್ದ ಲಿಂಗೈಕ್ಯ ಶ್ರೀ ಶಿವಕುಮಾರ ಶಿವಾಚಾರ್ಯ ಮಹಾಸ್ವಾಮೀಜಿಯವರು ಹಾಗೂ ಹಿರೇ ಜಂಬೂರಿನ ಸ್ವಾತಂತ್ರ ಹೋರಾಟರು. ಇದನ್ನು ಇವರು ಉಳಿಸಿ ಕೊಟ್ಟ ನಂತರ ಸರಕಾರ ಇತ್ತ ಗಮನ ಹರಿಸಿ,ಅದರ ಅಭಿವೃದ್ದಿಗೆ ಮುಂದಾಗಿದೆ. ಇಂತಹ ಉಡುತಡಿಯಿಂದ ಎಲ್ಲವನ್ನೂ ತ್ಯಜಿಸಿ ಹೊರಟ ಅಕ್ಕಮಹಾದೇವಿಯವರು ಮುಂದೆ [ಬಸವ ಕಲ್ಯಾಣ]ದ ಅನುಭವ ಮಂಟಪದಲ್ಲಿ ಅಲ್ಲಮಪ್ರಭು, ಬಸವಣ್ಣ, ಚೆನ್ನಬಸವಣ್ಣ, ಸಿದ್ಧರಾಮೇಶ್ವರ ಮೊದಲಾದ ಶರಣರೊಡನೆ ಕಲ್ಯಾಣದ ಕ್ರಾಂತಿಯಲ್ಲಿ ತಮ್ಮನ್ನು ತಾವೂ ತೊಡಗಿಸಿಕೊಂಡರಲ್ಲದೇ, "ಚನ್ನಮಲ್ಲಿಕಾರ್ಜುನ" ಎಂಬ ಅಂಕಿತ ನಾಮದಲ್ಲಿ ವಚನ ಸಾಹಿತ್ಯಕ್ಕೆ (ಶರಣ ಸಾಹಿತ್ಯ) ತಮ್ಮದೇ ಆದ ಸಾಹಿತ್ಯ ಸೇವೆಯನ್ನು ಸಲ್ಲಿಸಿದ್ದಾರೆ.

ಅಕ್ಕಮಹಾದೇವಿಯ ಆಯ್ದ ವಚನಗಳು : ಬೆಟ್ಟದ ಮೇಲೊಂದು ಮನೆಯ ಮಾಡಿ ಮೃಗಗಳಿಗಂಜಿದೊಡೆಂತಯ್ಯ? ಸಮುದ್ರದ ತಡಿಯಲೊಂದು ಮನೆಯ ಮಾಡಿ ನೊರೆ ತೆರೆಗಳಿಗಂಜಿದೊಡೆಂತಯ್ಯ? ಸಂತೆಯೊಳಗೊಂದು ಮನೆಯ ಮಾಡಿ ಶಬ್ದಕ್ಕೆ ನಾಚಿದೊಡೆಂತಯ್ಯ? ಚೆನ್ನಮಲ್ಲಿಕಾರ್ಜುನದೇವ ಕೇಳಯ್ಯ ಈ ಲೋಕದೊಳಗೆ ಹುಟ್ಟಿದ ಬಳಿಕ ಸ್ತುತಿ-ನಿಂದೆಗಳು ಬಂದರೆ ಮನದಲ್ಲಿ ಕೋಪವ ತಾಳದೆ ಸಮಾಧಾನಿಯಾಗಿರಬೇಕು.

Start a discussion with Jeshu123

Start a discussion