ಸದಸ್ಯರ ಚರ್ಚೆಪುಟ:Nishanth58
ನಮಸ್ಕಾರ Nishanth58,
ಕನ್ನಡ ವಿಶ್ವಕೋಶಕ್ಕೆ ನಿಮಗೆ ಸ್ವಾಗತ! ವಿಕಿಪೀಡಿಯ ನಿಮಗೆ ಇಷ್ಟವಾಗುವುದೆಂದೂ, ಇದರಲ್ಲಿ ಸಕ್ರಿಯ ಸದಸ್ಯರಾಗಿರುವಿರೆಂದೂ ಆಶಿಸುತ್ತೇನೆ. ಕನ್ನಡ ವಿಕಿಪೀಡಿಯಾದ ಸಕ್ರಿಯ ಸದಸ್ಯರಲ್ಲೊಬ್ಬರಾಗಲು, ಇದರಲ್ಲಿ ಸಂಪಾದನೆ ಮಾಡಲು ವಿಕಿಪೀಡಿಯ:ಸಮುದಾಯ ಪುಟ ನೋಡಿ.
ಹೊಸಬರಿಗೆ ಉಪಯುಕ್ತವಾಗುವಂತಹ ಕೆಲವು ಸಂಪರ್ಕಗಳು ಇಲ್ಲಿವೆ (ಕೆಲ ಸಂಪರ್ಕಗಳು ಆಂಗ್ಲ ವಿಕಿಪೀಡಿಯಕ್ಕೆ ಕರೆದೊಯ್ಯುತ್ತವೆ):
- Font help (read this if Kannada is not getting rendered on your system properly)
- ನೇರವಾಗಿ ಕನ್ನಡದಲ್ಲಿ ಬರೆಯುವುದು ಹೇಗೆ?.
- ವಿಕಿಪೀಡಿಯ:ದಿಕ್ಸೂಚಿ
- ಸಂಪಾದನೆ ಮಾಡುವುದು ಹೇಗೆ?
- ಆಂಗ್ಲ ವಿಕಿಪೀಡಿಯ ಟುಟೋರಿಯಲ್
- ಚಿತ್ರಗಳನ್ನುಪಯೋಗಿಸಿವುದು ಹೇಗೆ?
- ಹೊಸ ಲೇಖನವನ್ನು ಪ್ರಾರಂಭಿಸುವುದು ಹೇಗೆ?
- ದೊಡ್ಡ ಲೇಖನವೊಂದನ್ನು ಬರೆಯುವುದು ಹೇಗೆ?
- ಹೆಸರಿಡುವುದರ ಬಗ್ಗೆ
- ಶೈಲಿ ಕೈಪಿಡಿ
- ವಿಕಿಪೀಡಿಯ:ಕೋರಿಕೆಯ ಲೇಖನಗಳು
ನೀವು ಕನ್ನಡ ವಿಕಿಪೀಡಿಯದ ಸಹಾಯ ಪುಟಗಳನ್ನು ಬರೆಯಲು ಉತ್ಸುಕರಾಗಿದ್ದಲ್ಲಿ, ಅಥವಾ ಮತ್ತೇನಾದರೂ ತಿಳಿಯಬಯಸಿದಲ್ಲಿ, ದಯಮಾಡಿ ಈ ಅಂಚೆ ಪೆಟ್ಟಿಗೆಗೆ ಸದಸ್ಯರಾಗಿ, ಸಂದೇಶ ಕಳುಹಿಸಿ.
ವಿಕಿಪೀಡಿಯದಲ್ಲಿ ಮಾತುಕತೆ ನಡೆಸುವಾಗ, ಚರ್ಚಾ ಪುಟದಲ್ಲಿ ಬರೆಯುವಾಗ ಸಹಿ ಹಾಕುವುದನ್ನು ಮರೆಯಬೇಡಿ.
ಸಹಿ ಹಾಕಲು ಇದನ್ನು ಬಳಸಿ:
~~~~
ಕನ್ನಡದಲ್ಲೇ ಬರೆಯಿರಿ
ದಯವಿಟ್ಟು ಕನ್ನಡ ವಿಕಿಪೀಡಿಯದಲ್ಲಿ ಕನ್ನಡ ಲಿಪಿಯಲ್ಲೇ ಬರೆಯಿರಿ. ಹಾಗೆಯೇ ಲೇಖನದ ಶೀರ್ಷಿಕೆಯೂ ಕನ್ನಡ ಲಿಪಿಯಲ್ಲೇ ಇರಲಿ. ಹಾಗೆಯೇ ಯಾವುದೇ ಬ್ಲಾಗ್ ಮಾದರಿಯ ಲೇಖನ ಸೇರಿಸಬೇಡಿ.
ಲೇಖನ ಸೇರಿಸುವಾಗ
ವಿಕಿಪೀಡಿಯ ಒಂದು ವಿಶ್ವಕೋಶ. ಅದರಲ್ಲಿ ಸೇರಿಸುವ ಲೇಖನಗಳು ವಿಶ್ವಕೋಶಕ್ಕೆ ತಕ್ಕುದಾಗಿರಬೇಕು. ಯಾವುದೇ ಬ್ಲಾಗ್ ಮಾದರಿಯ ಲೇಖನಗಳು, ಕಥೆ, ಕವನ, ಕಾದಂಬರಿ, ನಾಟಕ, ವೈಯಕ್ತಿಕ ಅಭಿಪ್ರಾಯಗಳು, ಪ್ರಬಂಧ ಮಾದರಿಯ ಲೇಖನಗಳು, ವಿಮರ್ಶೆ, ಜಾಹೀರಾತು ಮಾದರಿಯ ಲೇಖನಗಳು -ಇತ್ಯಾದಿಗಳನ್ನು ಸೇರಿಸುವಂತಿಲ್ಲ. ಲೇಖನಗಳು ಜಗತ್ತಿಗೆಲ್ಲ ಉಪಯುಕ್ತವಾಗುವಂತಹ ಗಮನಾರ್ಹ ವಿಷಯಗಳ ಬಗ್ಗೆ ಮಾತ್ರ ಇರಲಿ
Palagiri (ಚರ್ಚೆ) ೦೩:೧೪, ೧೨ ಆಗಸ್ಟ್ ೨೦೧೫ (UTC)
ಡಾ.ಜಿ.ಎಸ್.ಶಿವರುದ್ರಪ್ಪನವರು ಶಿವಮೊಗ್ಗಜಿಲ್ಲೆಯ ಶಿಕಾರಿಪುರದ ಹತ್ತಿರವಿರುವ ಈಸೂರುಗ್ರಾಮದಲ್ಲಿ ಫೆಬ್ರುವರಿ ೭, ೧೯೨೬ ರಂದು ಜನಿಸಿದರು. ತಂದೆ ಶಾಂತವೀರಪ್ಪ ಅಲ್ಲಿನ ಮಾಧ್ಯಮಿಕ ಶಾಲೆಯಲ್ಲಿ ಶಿಕ್ಷಕರಾಗಿದ್ದರು. ತಾಯಿ ವೀರಮ್ಮ.
ತಂದೆಯಿಂದ ಸಾಹಿತ್ಯದ ಗೀಳು ಹತ್ತಿಸಿಕೊಂಡ ಶಿವರುದ್ರಪ್ಪನವರು ಹೊನ್ನಾಳಿ, ಕೋಟೆಹಾಳಗಳಲ್ಲಿ ಪ್ರಾಥಮಿಕ ಶಿಕ್ಷಣವನ್ನು, ರಾಮಗಿರಿ, ಬೆಲಗೂರುಗಳಲ್ಲಿ ಮಾಧ್ಯಮಿಕ ಶಿಕ್ಷಣವನ್ನು, ದಾವಣಗೆರೆ, ತುಮಕೂರುಗಳಲ್ಲಿ ಪ್ರೌಢಶಾಲಾ, ಇಂಟರ್ ಮೀಡಿಯಟ್ ಶಿಕ್ಷಣವನ್ನೂ ಮುಗಿಸಿದರು. ಮೈಸೂರು ವಿಶ್ವವಿದ್ಯಾನಿಲಯದ ಮಹಾರಾಜ ಕಾಲೇಜಿನಲ್ಲಿ ಬಿ.ಎ. ಆನರ್ಸ್ (೧೯೪೯) ಪದವಿ ಪಡೆದರು.
ಕೆಲಕಾಲ ದಾವಣಗೆರೆಯ ಡಿ.ಆರ್.ಎಮ್. ಕಾಲೇಜಿನಲ್ಲಿ ಕನ್ನಡ ಉಪನ್ಯಾಸಕರಾಗಿದ್ದು ನಂತರ ಎಂ.ಎ. (೧೯೫೩) ಪ್ರ ಪ್ರಥಮ ದರ್ಜೆಯಲ್ಲಿ ತೇರ್ಗಡೆ ಹೊಂದಿ ಮೂರು ಸುವರ್ಣ ಪದಕಗಳನ್ನು ಪಡೆದರು. ೧೯೫೫ರಲ್ಲಿ ಭಾರತ ಸರಕಾರದ ಸಂಶೋಧನಾ ಶಿಷ್ಯ ವೇತನದ ಸಹಾಯದಿಂದ ಕುವೆಂಪುರವರ ಮಾರ್ಗದರ್ಶನದಲ್ಲಿ ಸಂಶೋಧನೆ ನಡೆಸಿದರು. ಮೈಸೂರು ವಿಶ್ವ ವಿದ್ಯಾಲಯದಿಂದ ಡಾಕ್ಟರೇಟ್ ದೊರಕಿಸಿ ಕೊಟ್ಟ ಇವರ ಪ್ರೌಢ ಪ್ರಬಂಧ -ಸೌಂದರ್ಯ ಸಮೀಕ್ಷೆ. ಕುವೆಂಪುರವರ ಮೆಚ್ಚಿನ ಶಿಷ್ಯರಾಗಿ ಅವರ ಬರವಣಿಗೆ ಮತ್ತು ಜೀವನದಿಂದ ಪ್ರಭಾವಿತರಾಗಿದ್ದರು.
೧೯೫೫ ರಲ್ಲಿ ಭಾರತ ಸರಕಾರದ ಸಂಶೋಧನಾ ಶಿಷ್ಯ ವೇತನದ ಸಹಾಯದಿಂದ ಕುವೆಂಪುರವರ ಮಾರ್ಗದರ್ಶನದಲ್ಲಿ ಸಂಶೋಧನೆ ನಡೆಸಿದರು. ಮೈಸೂರು ವಿಶ್ವವಿದ್ಯಾನಿಲಯದಿಂದ ಡಾಕ್ಟರೇಟ್ ದೊರಕಿಸಿ ಕೊಟ್ಟ ಇವರ ಪ್ರೌಢ ಪ್ರಬಂಧ -ಸೌಂದರ್ಯ ಸಮೀಕ್ಷೆ. ಡಾ.ಜಿ.ಎಸ್.ಶಿವರು ದ್ರಪ್ಪ ನವರು ಮೈಸೂರು ವಿಶ್ವ ವಿದ್ಯಾಲಯದ ಕುವೆಂಪು ಕನ್ನಡ ಅಧ್ಯಯನ ಸಂಸ್ಥೆಯಲ್ಲಿ, ಬೆಂಗಳೂರು ಸೆಂಟ್ರಲ್ ಕಾಲೇಜಿನಲ್ಲಿ ಕನ್ನಡ ಅಧ್ಯಾಪಕರಾಗಿ ಹಾಗೂ ಬೆಂಗಳೂರು ವಿಶ್ವವಿದ್ಯಾಲಯದ ಕನ್ನಡ ಅಧ್ಯಯನ ಕೇಂದ್ರದಲ್ಲಿ ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸಿದ್ದಾರೆ. ೧೯೬೩ರ ನವೆಂಬರ್‌ನಿಂದ ೨ ವರ್ಷಗಳ ಕಾಲ ಹೈದರಾಬಾದಿನ ಉಸ್ಮಾನಿಯಾ ವಿಶ್ವ ವಿದ್ಯಾಲಯದಲ್ಲಿ ಕನ್ನಡ ವಿಭಾಗದ ಉಪ ಪ್ರಾಧ್ಯಾಪಕರಾಗಿ, ಮುಖ್ಯಸ್ಥರಾಗಿ ಸೇವೆ ಸಲ್ಲಿಸಿದ್ದಾರೆ. ೧೯೭೧ರ ನವೆಂಬರಿನಲ್ಲಿ ಬೆಂಗಳೂರು ವಿಶ್ವವಿದ್ಯಾಲಯದ ಕನ್ನಡ ವಿಭಾಗದಲ್ಲಿ ಪ್ರಾಧ್ಯಾಪಕರಾದ ಅವರು, ಮುಂದೆ ಅದು "ಕನ್ನಡ ಅಧ್ಯಯನ ಕೇಂದ್ರ" ವಾಗಿ ಪರಿವರ್ತಿತವಾದಾಗ, ಅದರ ನಿರ್ದೇಶಕರೂ ಆದರು. ಹಸ್ತಪ್ರತಿಗಳ ಸಂಗ್ರಹಣೆ, ಅವುಗಳ ರಕ್ಷಣೆಗಳ ಬಗ್ಗೆ ವಿಶೇಷ ಕಾಳಜಿ ಹೊಂದಿದ್ದ ಶಿವರುದ್ರಪ್ಪನವರು ೧೯೭೧ರಲ್ಲಿ ಕನ್ನಡ ಅಧ್ಯಯನ ಕೇಂದ್ರದಲ್ಲಿ 'ಹಸ್ತಪ್ರತಿ ವಿಭಾಗ' ವನ್ನು ಪ್ರಾರಂಭಿಸಿದರು. ಕೇವಲ ೪ ವರ್ಷಗಳಲ್ಲಿ ೩೦೦೦ಕ್ಕೂ ಹೆಚ್ಚು ಓಲೆಗರಿಯ ಹಾಗೂ ೧೦೦೦ಕ್ಕೂ ಹೆಚ್ಚು ಕಾಗದದ ಹಸ್ತ ಪ್ರತಿಗಳ ಸಂಗ್ರಹಣೆಯಾಯಿತು. ತಾವು ಓದಿದ ಮೈಸೂರು ವಿಶ್ವವಿದ್ಯಾನಿಲಯದಲ್ಲೇ ೧೯೪೯ರಲ್ಲಿ ಕನ್ನಡ ಅಧ್ಯಾಪಕರಾಗಿ ವೃತ್ತಿಯನ್ನು ಆರಂಭಿಸಿದರು. ೧೯೬೩ರಲ್ಲಿ ಹೈದರಾಬಾದಿನ ಉಸ್ಮಾನಿಯಾ ವಿಶ್ವವಿದ್ಯಾಲಯದ ಆಹ್ವಾನದ ಮೇರೆಗೆ ರೀಡರ್ ಮತ್ತು ಕನ್ನಡ ವಿಭಾಗದ ಮುಖ್ಯಸ್ಥರಾಗಿ ೧೯೬೬ ರ ವರೆವಿಗೂ ಅಲ್ಲಿ ಸೇವೆ ಸಲ್ಲಿಸಿದರು. ೧೯೬೬ ರಲ್ಲಿ ಬೆಂಗಳೂರು ವಿಶ್ವವಿದ್ಯಾಲಯದಲ್ಲಿ ಪ್ರಾಧ್ಯಾಪಕ ಹಾಗೂ ನಿರ್ದೇಶಕರಾಗಿ ಆಯ್ಕೆಯಾಗಿ ೧೯೮೭ ರವರೆವಿಗೂ ಕನ್ನಡ ಅಧ್ಯಯನ ಕೇಂದ್ರದಲ್ಲಿ ಸೇವೆ ಸಲ್ಲಿಸಿದರು. ಅವರ ಕಾಲದಲ್ಲೇ ಕನ್ನಡ ವಿಭಾಗವು ಕನ್ನಡ ಅಧ್ಯಯನ ಕೇಂದ್ರವಾಯಿತು. ನಿವೃತ್ತಿಯ ನಂತರವೂ ಮೈಸೂರು ವಿಶ್ವವಿದ್ಯಾಲಯದ ಕನ್ನಡ ಅಧ್ಯಯನ ಸಂಸ್ಥೆಯ ಕುವೆಂಪು ಪೀಠ ದ ಸಂದರ್ಶಕ ಪ್ರಾಧ್ಯಾಪಕರಾಗಿಯೂ ಗಣನೀಯ ಸೇವೆ ಸಲ್ಲಿಸಿರುತ್ತಾರೆ. ಕೇಂದ್ರ ಸಾಹಿತ್ಯ ಅಕಾಡೆಮಿ ಸದಸ್ಯರಾಗಿ, ರಾಜ್ಯ ಸಾಹಿತ್ಯ ಅಕಾಡೆಮಿಯ ಅಧ್ಯಕ್ಷರಾಗಿಯೂ ದುಡಿದಿದ್ದಾರೆ. ದೆಹಲಿಯ ರಾಷ್ಟ್ರೀಯ ಕವಿ ಸಮ್ಮೇಳನ, ತುಮಕೂರಿನ ಸಾಹಿತ್ಯ ಸಮ್ಮೇಳನ ದ ಕವಿಗೋಷ್ಠಿಯ ಅಧ್ಯಕ್ಷರಾಗಿ, ಮದರಾಸಿನ ಕನ್ನಡ ಸಮ್ಮೇಳನ ದ ಅಧ್ಯಕ್ಷರಾಗಿ, ೧೯೯೨ರಲ್ಲಿ ದಾವಣಗೆರೆಯಲ್ಲಿ ನಡೆದ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿಯೂ ಗೌರವಿಸಲ್ಪಟ್ಟಿದ್ದಾರೆ.
ಕವನ ಸಂಕಲನಗಳು.ಚೆಲುವು-ಒಲವು,ದೇವಶಿಲ್ಪಿ/ಶಿಲ್ಪ,ದೀಪದ ಹೆಜ್ಜೆ,ತೆರೆದ ಬಾಗಿಲು/ತೆರೆದ ದಾರಿ,ಗೋಡೆ,ತೀರ್ಥವಾಣಿ,ಕಾರ್ತಿಕ,ಕಾಡಿನ ಕತ್ತಲಲ್ಲಿ,ಎದೆ ತುಂಬಿ ಹಾಡುವೆ,ಗಂಗೆಯ ಶಿಖರಗಳಲ್ಲಿ,ಕುವೆಂಪು : ಪುನರವಲೋಕನ. ಪ್ರಶಸ್ತಿ/ಪುರಸ್ಕಾರಗಳು.ಸೋವಿಯತ್ ಲ್ಯಾಂಡ್ ನೆಹರೂ ಪ್ರಶಸ್ತಿ,ಕರ್ನಾಟಕ ಸಾಹಿತ್ಯ ಅಕಾಡೆಮಿಯ ಗೌರವ ಪ್ರಶಸ್ತಿ,ಕರ್ನಾಟಕ ರಾಜ್ಯೋತ್ಸವ ಪುರಸ್ಕಾರ ಹಾಗೂ 'ಕಾವ್ಯಾರ್ಥ ಚಿಂತನ' ಕೃತಿಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ, ದಾವಣಗೆರೆಯಲ್ಲಿ ನಡೆದ ೬೧ನೇ ಅಖಿಲ-ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷತೆ,ಪ್ರೋ.ಭೂಸನೂರ ಮಠ ಪ್ರಶಸ್ತಿ ಮತ್ತು ಗೊರೂರು ಪ್ರಶಸ್ತಿ,ಪಂಪ ಪ್ರಶಸ್ತಿ,ಮಾಸ್ತಿ ಪ್ರಶಸ್ತಿ,ಹಂಪಿ ಕನ್ನಡ ವಿ.ವಿಯಿಂದ ನಾಡೋಜ ಗೌರವ ಡಾಕ್ಟರೇಟ್,ಕುವೆಂಪು ವಿ.ವಿಯಿಂದ ಗೌರವ ಡಿ.ಲಿಟ್ ,ಶಿವರುದ್ರಪ್ಪನವರಿಗೆ ವಿಮರ್ಶೆಗಾಗಿ ೧೯೮೪ ರಲ್ಲಿ ಕೇಂದ್ರ ಸಾಹಿತ್ಯ ಅಕಾಡೆಮಿಯ ಪ್ರಶಸ್ತಿ ಲಭಿಸಿತು. ಇದಲ್ಲದೆ ಕರ್ನಾಟಕ ರಾಜ್ಯ ಸಾಹಿತ್ಯ ಅಕಾಡೆಮಿ ಪ್ರಶಸ್ತಿ (೧೯೮೨), ರಾಜ್ಯೋತ್ಸವ ಪ್ರಶಸ್ತಿ, ಸೋವಿಯತ್ ಲ್ಯಾಂಡ ನೆಹರೂ ಪ್ರಶಸ್ತಿ (೧೯೭೩)ಸಹ ಶಿವರುದ್ರಪ್ಪನವರಿಗೆ ದೊರೆತಿವೆ.ಜಿ.ಎಸ್.ಶಿವರುದ್ರಪ್ಪನವರು ೧೯೯೨ ರಲ್ಲಿ ದಾವಣಗೆರೆಯಲ್ಲಿ ಜರುಗಿದ ೬೧ ನೆಯ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿದ್ದರು. ಜಿ.ಎಸ್.ಶಿವರುದ್ರಪ್ಪನವರು 23 ಡಿಸೆಂಬರ್ 2013ರಂದು ತಮ್ಮ ಬನಶಂಕರಿಯ ನಿವಾಸದಲ್ಲಿ ನಿಧನರಾದರು. ತಿಂಗಳಿನಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಇವರು ಅಂದು ಸ್ವರ್ಗಸ್ಥರಾದರು. ಜಿ.ಎಸ್.ಶಿವರುದ್ರಪ್ಪನವರ ಆಣತಿಯಂತೆಯೆ ಅವರ ದೇಹವನ್ನು ಮರಣಾನಂತರ ಮಣ್ಣು ಮಾಡದೆ ಸುಡಲಾಯಿತು. ಬೆಂಗಳೂರು ವಿ.ವಿ. ಸಮೀಪವಿರುವ ಕಲಾಗ್ರಾಮದಲ್ಲಿ ಅವರ ಅಂತ್ಯ ಸಂಸ್ಕಾರದ ವಿಧಿ ವಿಧಾನವನ್ನು ಸಕಲ ಸರ್ಕಾರಿ ಗೌರವ ಮರ್ಯಾದೆಯೊಂದಿಗೆ ದಿ. 24 ಡಿಸೆಂಬರ್ 2013ರಂದು ನೇರವೇರಿಸಲಾಯಿತು.
Start a discussion with Nishanth58
Talk pages are where people discuss how to make content on ವಿಕಿಪೀಡಿಯ the best that it can be. Start a new discussion to connect and collaborate with Nishanth58. What you say here will be public for others to see.