ಸದಸ್ಯರ ಚರ್ಚೆಪುಟ:Sahad~knwiki/sandbox

Page contents not supported in other languages.
ವಿಕಿಪೀಡಿಯದಿಂದ, ಇದು ಮುಕ್ತ ಹಾಗೂ ಸ್ವತಂತ್ರ ವಿಶ್ವಕೋಶ

ದ.ರಾ.ಬೇಂದ್ರೆ "ಕುಣಿಯೋಣು ಬಾರಾ ಕುಣಿಯೋಣು ಬಾ", "ಇಳಿದು ಬಾ ತಾಯಿ ಇಳಿದು ಬಾ", "ನಾನು ಬಡವಿ ಆತ ಬಡವ ಒಲವೆ ನಮ್ಮ ಬದುಕು", ಎಂದು ಆರಂಭವಾಗುವ ಕವಿತೆಗಳನ್ನು ಕೇಳದ ಕನ್ನಡಿಗನಿಲ್ಲ. ಉತ್ಸಾಹದ ಚಿಲುಮೆಯನ್ನುಕ್ಕಿಸಬಲ್ಲ, ನೊಂದ ಜೀವಕ್ಕೆ ಸಾಂತ್ವನ ನೀಡಬಲ್ಲ, ಪ್ರೀತಿ ಪ್ರೇಮಗಳನ್ನು ಮೂಡಿಸಬಲ್ಲ ಕವಿತೆಗಳನ್ನು ರಚಿಸಿಕೊಟ್ಟ ವರಕವಿ ಬೇಂದ್ರೆ. ರಸವೆ ಜನನ, ವಿರಸವೆ ಮರಣ, ಸಮರಸವೆ ಜೀವನ ಎಂದು ಜೀವನವನ್ನು ಕುರಿತು ಪರಿಣಾಮಕಾರಿಯಾಗಿ ಹೇಳಿದ ಧೀಮಂತ ಕವಿ. ಬೇಂದ್ರೆಯವರ ಕುರಿತೊಂದು [೧] ಸಾಕ್ಷ್ಯಚಿತ್ರ ತಯಾರಾಗಿತ್ತು. ಜೀವನ

ಬೇಂದ್ರೆ ೧೮೯೬ನೆಯ ಇಸವಿ ಜನವರಿ ೩೧ ರಂದು ಜನಿಸಿದರು. ತಂದೆ ರಾಮಚಂದ್ರ ಭಟ್ಟ, ತಾಯಿ ಅಂಬಿಕೆ(ಅಂಬವ್ವ). ಬೇಂದ್ರೆಯವರ ಕಾವ್ಯನಾಮ ಅಂಬಿಕಾತನಯದತ್ತ. ಬೇಂದ್ರೆ ಮನೆತನದ ಮೂಲ ಹೆಸರು ಠೋಸರ. ವೈದಿಕ ವೃತ್ತಿಯ ಕುಟುಂಬ. ಒಂದು ಕಾಲಕ್ಕೆ ಸಾಂಗ್ಲಿ ಸಂಸ್ಥಾನಕ್ಕೆ ಸೇರಿದ್ದ ಗದಗ ಪಟ್ಟಣದ ಸಮೀಪದ ಶಿರಹಟ್ಟಿಯಲ್ಲಿ ಬಂದು ನೆಲೆಸಿದರು. ದ.ರಾ.ಬೇಂದ್ರೆ ಹನ್ನೊಂದು ವರ್ಷದವರಿದ್ದಾಗ ಅವರ ತಂದೆ ತೀರಿಕೊಂಡರು. ೧೯೧೩ರಲ್ಲಿ ಮೆಟ್ರಿಕ್ಯುಲೇಶನ್ ಮುಗಿಸಿದ ಬಳಿಕ ಬೇಂದ್ರೆ ಪುಣೆಯ ಕಾಲೇಜಿನಲ್ಲಿ ಓದಿ ೧೯೧೮ರಲ್ಲಿ ಬಿ.ಎ. ಮಾಡಿಕೊಂಡರು. ಹಿಡಿದದ್ದು ಅಧ್ಯಾಪಕ ವೃತ್ತಿ. ೧೯೩೫ರಲ್ಲಿ ಎಂ.ಎ. ಮಾಡಿಕೊಂಡು ಕೆಲಕಾಲ (೧೯೪೪ - ೧೯೫೬) ಸೊಲ್ಲಾಪುರದ ಡಿ.ಎ.ವಿ ಕಾಲೇಜಿನಲ್ಲಿ ಪ್ರಾಧ್ಯಾಪಕರಾಗಿದ್ದರು. ಬೇಂದ್ರೆಯವರು ೧೯೧೯ರಂದು ಹುಬ್ಬಳ್ಳಿಯಲ್ಲಿ ಲಕ್ಷ್ಮೀಬಾಯಿಯವರನ್ನು ವಿವಾಹವಾದರು; ಅವರ ಪ್ರಥಮ ಕಾವ್ಯ ಸಂಕಲನ "ಕೃಷ್ಣ ಕುಮಾರಿ"-ಯು ಆಗಲೇ ಪ್ರಕಟಿಸಲ್ಪಟ್ಟಿತ್ತು.

   ಕವಿ, ದಾರ್ಶನಿಕ ಬೇಂದ್ರೆ ಈ ಯುಗದ ಒಬ್ಬ ಮಹಾಕವಿ. ೧೯೮೧ರ ಅಕ್ಟೋಬರ್‌ನಲ್ಲಿ ತೀರಿಕೊಂಡ ಅವರು ಕವಿಗಳಿಗೆ, ಸಾಹಿತಿಗಳಿಗೆ 

ಸ್ಫೂರ್ತಿಯ ಸೆಲೆ. ಎಲ್ಲಾ ಕಾಲಕ್ಕೂ ಬಾಳುವಂತಹ ಕವನಗಳನ್ನು ರಚಿಸಿದ ಕೀರ್ತಿ ಅವರದು.

   ನಾಡಿನ ತುಂಬೆಲ್ಲಾ ನಡೆದಾಡಿದ ಅವರಲ್ಲಿರುವಂತ ಪ್ರತಿಯೊಂದು ಸಾಹಿತ್ಯದ ನುಡಿಗಳು ಮಾನವನ ನಾಡಿ ಮಿಡಿತದಂತೆ ಹರಿದಾಡಿ 

ಇಡೀ ಕನ್ನಡ ಸಾಹಿತ್ಯ ರಂಗವನ್ನೆ ಶ್ರೀಮಂತಗೊಳಿಸಿವೆ ಎಂದರೆ ತಪ್ಪಲಾಗಲಾರದು. ಇಡೀ ಜೀವನದ ತುಂಬಾ ನಿಸ್ವಾರ್ಥ ಸೇವೆಯನ್ನು ಗೈದ "ಧಾರವಾಡ ದ ಅಜ್ಜ" ಅವರ ಕೆಲವೊಂದು ಮಕ್ಕಳ ಕವಿತೆ, ಕತೆಗಳು ಮಕ್ಕಳ ಮನಸ್ಸನ್ನು ಪರಿವರ್ತಿಸುತ್ತವೆ.