ಸದಸ್ಯರ ಚರ್ಚೆಪುಟ:Soundarya k

Page contents not supported in other languages.
ವಿಕಿಪೀಡಿಯದಿಂದ, ಇದು ಮುಕ್ತ ಹಾಗೂ ಸ್ವತಂತ್ರ ವಿಶ್ವಕೋಶ


ಮಿದುಳಿನ ಕಾರ್ಯ ಘಟಕವೇ ನರಕೋಶ. ಮಿದುಳಿನ ಹತ್ತು ಸಾವಿರ ಕೋಟಿಗೂ ಹೆಚ್ಚು ನರಕೋಶಗಳಿವೆ ಎಂದು ಅಂದಾಜು. ಪ್ರತಿಯೊಂದು ನರಕೋಶವೂ ತನ್ನದೇ ಆದ ರಚನೆಯನ್ನು ಹೊಂದಿಗೆ. ಸೂಕ್ಷ್ಮದರ್ಶಕದಲ್ಲಿ ವೀಕ್ಷಿಸಿದಾಗ ಪ್ರತಿ ಕೋಶಕ್ಕೆ ಒಂದು ದೇಹ. ಆ ದೇಹದ ಮಧ್ಯಭಾಗದಲ್ಲಿ ಕೇಂದ್ರಬಿಂದು (ನ್ಯೂಕ್ಲಿಯಸ್) ಕೈಗಳೋಪಾದಿಯಲ್ಲಿ ಅನೇಕ ಡೆಂಡ್ರೈಟುಗಳು ಬಾಲದಂತಹ ಆಕ್ಸಾನ್‌ ಇರುವುದು ಕಂಡು ಬರುತ್ತದೆ. ಇದರ ಜೊತೆಗೆ, ಆಕ್ಸಾನ್‌ ನರತಂತು ರೂಪದಲ್ಲಿದ್ದು, ಅದರ ನರ ತುದಿಗಳು ಮತ್ತೊಂದು ನರಕೋಶದ, ಆಕ್ಸಾನ್‌ನ ತುದಿಗಳೊಂದಿಗೆ ಸಂಪರ್ಕ ಸಾಧಿಸುತ್ತದೆ. ನೇರವಾಗಿ ಒಂದಕ್ಕೊಂದು ಅಂಟಿಕೊಂಡಿಲ್ಲವಾದರೂ, ವಿಶೇಷ ವ್ಯವಸ್ಥೆಯಿಂದ ಸಂಪರ್ಕ ಸಾಧಿಸುವ ಈ ಸ್ಥಳವನ್ನು ಕೂಡು ಸ್ಥಳ-ಸೈನಾಪ್ಸ್‌ ಎಂದು ಕರೆಯುತ್ತಾರೆ. ನರತಂತುವಿನಲ್ಲಿ ಮಧ್ಯ ಭಾಗ ಮೃದುವಾಗಿದ್ದು ಅದರ ಮೇಲೆ ಎರಡು ಬಗೆಯ ಪೊರೆಗಳಿರುತ್ತವೆ. ಒಳ ಪೊರೆಯನ್ನು ಮೆಡುಲ್ಲರಿ ಶೀತ್ ಎಂದೂ ಹೊರಗಿನ ಪೊರೆಯನ್ನು ಮೈಲಿನ್ ಶೀತ್ ಎಂದೂ ಕರೆಯುತ್ತಾರೆ. ನರತಂತುಗಳು ತಮ್ಮ ಮಾರ್ಗದಲ್ಲಿ, ತುಸು ದೊಡ್ಡದಾಗಿ ಗಂಟು ರೂಪದಲ್ಲಿರುತ್ತವೆ. ಇವನ್ನು ಗ್ಯಾಂಗ್ಲಿಯ ಎನ್ನುತ್ತಾರೆ. ಕೆಲವು ನರತಂತುಗಳು ಕಲವೇ ಮಿಲಿಮೀಟರ್‌ಗಳಷ್ಟು ಉದ್ದವಿದ್ದರೆ, ಕೆಲವು ಕೆಲ ಅಡಿಗಳಷ್ಟು ಉದ್ದವಿರುತ್ತದೆ.

ನರಕೋಶ-ನರತಂತುಗಳ ಮುಖ್ಯ ಕೆಲಸ ಯಾವುದೇ ಸಂದೇಶ-ಸಂವೇದನೆಯನ್ನು ಒಂದೆಡೆಯಿಂದ ಇನ್ನೊಂದೆಡೆಗೆ ಸಾಗಿಸುವುದು. ನರತಂತು-ನರಕೋಶಗಳಲ್ಲಿ ಎರಡು ಬಗೆ. ಒಂದು ಪರಿಧಿಯಿಂದ ಸಂವೇದನೆಗಳನ್ನು ಮಿದುಳಿಗೆ ಸಾಗಿಸುವುದು, ಇನ್ನೊಂದು ಮಿದುಳಿನಿಂದ ಸಂದೇಶಗಳನ್ನು ಪರಿಧಿಯ ಸ್ನಾಯುಗಳು, ಅಂಗಾಂಗಗಳಿಗೆ ತಲುಪಿಸುವುದು. ಯಾವುದೇ ಸಂವೇದನೆ-ಸಂದೇಶ ವಿದ್ಯುತ್ ಚಟುವಟಿಕೆಯಾಗಿ ಪರಿವರ್ತನೆಗೊಂಡು ನರಕೋಶದಿಂದ ನರಕೋಶಕ್ಕೆ ವರ್ಗಾಯಿಸಲ್ಪಡುತ್ತದೆ. ಬೆನ್ನು ಹುರಿಯ ಮೂಲಕ ಅಥವಾ ಆಯಾ ಕ್ಷೇತ್ರದಲ್ಲಿರುವ ಕಪೋಲ ನರಗಳ ಮೂಲಕ ಸಂದೇಶ-ಸಂವೇದನೆಯ ಸಾಗಾಟ ನಡೆಯುತ್ತದೆ. ಈ ಕಾರ್ಯದಲ್ಲಿ ಅಸಂಖ್ಯಾತ ನರಕೋಶಗಳು ಭಾಗಿಯಾಗುತ್ತವೆ. ವಿದ್ಯುತ್ ಸಂಕೇತ ಒಂದು ನರತಂತುವಿನ ತುದಿಗೆ ಬಂದಾಗ ಅಲ್ಲಿರುವ ಗುಳ್ಳೆಗಳಲ್ಲಿ ಸಂಗ್ರಹವಾಗಿರುವ ನರವಾಹಕರಗಳನ್ನು (ನ್ಯೂರೋ ಟ್ರಾನ್ಸ್‌ಮೀಟರ್ಸ್) ಬಿಡುಗಡೆ ಮಾಡುತ್ತದೆ. ನರವಾಹಕಗಳು ‘ಸೈನಾಪ್ಸ್‌: ಅನ್ನು ದಾಟಿ, ಇನ್ನೊಂದು ನರ ತುದಿಯಲ್ಲಿರುವ ‘ರಿಸೆ ಪ್ಟಾರ್‌’ ಗಳನ್ನು ಸೇರುತ್ತವೆ. ತನ್ಮೂಲಕ ಸಂಕೇತವು ಆ ನರತುದಿಯನ್ನು ಸೇರಿ, ತನ್ನ ಪ್ರಯಾಣವನ್ನು ಮುಂದುವರೆಸುತ್ತದೆ. ಯಾವುದೇ ಕಾರಣದಿಂದ ನರವಾಹಕ ಬಿಡುಗಡೆ ಆಗದಿದ್ದರೆ ಅಥವಾ ಬಿಡುಗಡೆಯಾದರೆ ನರವಾಹಕಗಳು ನಾಶಗೊಂಡರೆ ಅಥವಾ ರಿಸೆಪ್ಟಾರ್‌ಗಳನ್ನು ಬೇರೆ ಯಾವುರೋ ರಾಸಾಯನಿಕ ವಸ್ತು ಆಕ್ರಮಿಸಿದ್ದರೆ ಸಂದೇಶ-ಸಂವೇದನೆಯ ಸಾಗಾಟ ನಿಂತು ಹೋಗುತ್ತದೆ ಅಥವಾ ಅಸ್ತವ್ಯಸ್ತಗೊಳ್ಳುತ್ತದೆ. ಕಣ್ಣು ಎದುರಿಗಿರುವ ವಸ್ತುವಿನ ಬಿಂಬದ ಸಂವೇದನೆಯನ್ನು ಪಡೆದರೂ, ಮಿದುಳಿಗೆ ಈ ಸಂವೇದನೆ ಮುಟ್ಟದೇ ಮನಸ್ಸು ಏನನ್ನೂ ಗ್ರಹಿಸದು ಅಥವಾ ವಿಕೃತವಾಗಿ ಗ್ರಹಿಸಬಹುದು (ಇಲ್ಲೂಶನ್ಸ್‌-ಭ್ರಮೆ).


ಚೆನ್ನೈ: ಚೆನ್ನೈ ಖ್ಯಾತ ಮರೀನಾ ಬೀಚ್ ನಲ್ಲಿ ಶೀಘ್ರದಲ್ಲಿಯೇ ಉಚಿತ ವೈಫೈ ಸೇವೆ ದೊರೆಯಲಿದೆ.

ಚೆನ್ನೈನ ಮರೀನಾ ಬೀಚ್ ಗೆ ತೆರಳುವ ಪ್ರವಾಸಿಗರಿಗಾಗಿ ರಿಲಯನ್ಸ್ ಜಿಯೋ ಟೆಲಿಕಾಮ್ ಸಂಸ್ಥೆ ಉಚಿತ ವೈಫೈ ಸೇವೆ ನೀಡಲು ಮುಂದಾಗಿದೆ. ರಿಲಯನ್ಸ್ ಸಂಸ್ಥೆ ತನ್ನ ನೂತನ 4ಜಿ ಸೇವೆಗಳನ್ನು ಪ್ರಚಾರ ಮಾಡುವ ಸಲುವಾಗಿ ಈ ಯೋಜನೆ ಹಾಕಿಕೊಂಡಿದೆ ಎಂದು ಹೇಳಲಾಗುತ್ತಿದೆ. ಇದಕ್ಕಾಗಿ ಚೆನ್ನೈ ಮರೀನಾ ಬೀಚ್ ಬಳಿ 4ಜಿ ಸೇವೆ ನೀಡಬಲ್ಲ ಟವರ್ ಮತ್ತು ತಾಂತ್ರಿಕ ಸಲಕರಣೆಗಳನ್ನು ಅಳವಡಿಸಲು ಮುಂದಾಗಿದೆ. ಮರೀನಾ ಬೀಚ್ ನಲ್ಲಿರುವ ಉತ್ತರ ಲೈಟ್ ಹೌಸ್ ಭಾಗದ ಸುಮಾರು 3 ಕಿಮೀ ವ್ಯಾಪ್ತಿಯಲ್ಲಿ ವೈಫೈ ಸೇವೆ ನೀಡಲು ಮುಖೇಶ್ ಅಂಬಾನಿ ಮಾಲೀಕತ್ವದ ರಿಲಯನ್ಸ್ ಇಂಡಸ್ಟ್ರೀಸ್ ಲಿಮಿಟೆಡ್ ನಿರ್ಧರಿಸಿದೆ.

ಡಿಸೆಂಬರ್ 27ರಂದು ರಿಲಯನ್ಸ್ ಸಂಸ್ಥೆಯ ಸಂಸ್ಥಾಪಕರಾದ ಧೀರುಭಾಯ್ ಅಂಬಾನಿ ಅವರ 83ನೇ ಜನ್ಮ ದಿನಾಚರಣೆ ನಡೆದಿದ್ದು, ಇದೇ ವೇಳೆ ಈ ನೂತನ ಯೋಜನೆಯನ್ನು ರಿಲಯನ್ಸ್ ಸಂಸ್ಥೆ ಘೋಷಣೆ ಮಾಡಿದೆ.

ಮೂಲಗಳ ಪ್ರಕಾರ, ಪ್ರಸ್ತುತ ಮರೀನಾ ಬೀಚ್ ನಲ್ಲಿ ವೈಫೈ ತಂತ್ರಜ್ಞಾನಕ್ಕೆ ಬೇಕಾದ ಮೂಲಭೂತ ಸೌಕರ್ಯಗಳನ್ನು ಅಳವಡಿಸಲಾಗುತ್ತಿದೆ. ಇನ್ನು ಕೆಲವೇ ದಿನಗಳಲ್ಲಿ ಟವರ್ ಸೇರಿದಂತೆ ಇದಕ್ಕೆ ಬೇಕಾದ ಸಲಕರಣೆಗಳನ್ನು ಕೂಡ ಅಳವಡಿಸಲಾಗುವುದು ಎಂದು ಹೇಳಲಾಗುತ್ತಿದೆ. ಎಲ್ಲವೂ ಅಂದುಕೊಂಡಂತೆ ನಡೆದರೆ ಇದೇ ಮಾರ್ಚ್ 2016ರ ವೇಳೆಗೆ ಮರೀನಾ ಬೀಚ್ ನಲ್ಲಿ 24 ಗಂಟೆಗಳ ನಿರಂತರ ವೈಫೈ ಸೇವೆ ಲಭ್ಯವಾಗಲಿದೆ.