ವಿಷಯಕ್ಕೆ ಹೋಗು

ಸದಸ್ಯರ ಚರ್ಚೆಪುಟ:Vaishnavi HR

Page contents not supported in other languages.
ವಿಕಿಪೀಡಿಯದಿಂದ, ಇದು ಮುಕ್ತ ಹಾಗೂ ಸ್ವತಂತ್ರ ವಿಶ್ವಕೋಶ
                                    ಚಿನ್ನ

ಚಿನ್ನವು ಒಂದು ಮೂಲಧಾತು. ರಸಾಯನಶಾಸ್ತ್ರದಲ್ಲಿ ಇದರ ಚಿಹ್ನೆ (ಲ್ಯಾಟಿನ್ ಭಾಷೆಯ ಹೊಳೆಯುವ ಪ್ರಭಾತ ಎಂಬರ್ಥ ಕೊದುವ ಅರಮ್ ಎಂಬ ಪದದಿಂದ ಆರಿಸಿಕೊಳ್ಳಲಾಗಿದೆ). ಚಿನ್ನದ ಪರಮಾಣು ಸಂಖ್ಯೆ ೭೯. ಬಹು ಜನಪ್ರಿಯ ರಾಜಲೋಹವಾಗಿರುವ ಚಿನ್ನವನ್ನು ಸಹಸ್ರಮಾನಗಳಿಂದಲೂ ಮಾನವನು ಮೋಹಿಸಿರುವನು. ಚಿನ್ನವನ್ನು ಹಿಂದಿನ ಕಾಲದಿಂದಲೂ ಹಣವಾಗಿ, ಆಭರನಗಳಲ್ಲಿ ಮತ್ತು ಬಹುಮಾಲ್ಯ ವಸ್ತುಗವಾಗಿ ಮಾನವನು ಬಳಸುತ್ತಿರುವನು. ಚಿನ್ನವು ಭೂಮಿಯಲ್ಲಿ ಮೃದು, ಸಾಂದ್ರ ಮತ್ತು ಹೊಳೆಯುವ ಲೋಹವಾಗಿದೆ. ಇದನ್ನು ತಗಡುಗಳನ್ನಾಗಿ ತಂತಿಯನ್ನಾಗಿ ರೂಪಿಸುವುದು ಬಲು ಸುಲಭ. ಎಲ್ಲಾ ಲೋಹಗಳ್ ಪೈಕಿ ಚಿನ್ನವು ಅತ್ಯಂತ ಮೃದು. ಶುದ್ಧ ಚಿನ್ನವು ಪ್ರಕಾಶಮಾನವಾದ ಹಳದಿ ಬಣ್ಣವನ್ನು ಹೊಂದಿರುತ್ತದೆ. ಅಂತರಾಷ್ಟ್ರೀಯ ಹಣಹಾಸು ನಿಧಿಯು ಚಿನ್ನವನ್ನು ಆರ್ಥಿಕ ಪ್ರಮಾಣವನ್ನಾಗಿ ಪರಿಗಣಿಸುತ್ತದೆ. ಚಿನ್ನವು ರಾಸಾಯನಿಕ ಕ್ರಿಯೆಗಳಿಗೆ ತೀವ್ರ ಪ್ರತಿರೋಧ ಒಡ್ಡುವುದರಿಂದಾಗಿ ಆಧುನಿಕ ಕೈಗಾರಿಕೆಗಳಲ್ಲಿ ದಂತಶಾಸ್ತ್ರದಲ್ಲಿ ಮತ್ತು ವಿದ್ಯುನ್ಮಾನ ಉದ್ಯಮದಲ್ಲಿ ವ್ಯಾಪಕವಾಗಿ ಬಳಸಲ್ಪಡುತ್ತಿದೆ. ಚಿನ್ನವು ಹೆಚ್ಚಿನ ರಾಸಾಯನಿಕಗಳೊಂದಿಗೆ ಪ್ರತಿಕ್ರಿಯೆ ನಡೆಸುವುದಿಲ್ಲ. ಆದರೆ ಕ್ಲೋರಿನ್, ಫ್ಲೋರಿನ್, ರಾಜೋಧಕ (ಅಕ್ವಾ ರೀಜಿಯ) ಮತ್ತು ಸಯನೈಡ್ ಗಳು ಚಿನ್ನದ ಮೇಲೆ ರಾಸಾಯನಿಕ ಪರಿಣಾಮವುಂಟುಮಾಡುತ್ತವೆ.

ಚಿನ್ನವು ಪಾದರಸದಲ್ಲಿ ಕರಗಿ ಕೆಲ ವಿಶ್ರಧಾತುಗಳನ್ನು ಸೃಷ್ಟಿಸುವುದಾದರೂ ಪಾದರಸದೊಂದಿಗೆ ರಾಸಾಯನಿಕ ಕ್ರಿಯೆ ಉಂಟಾಗುವುದಿಲ್ಲ. ಒಂದಕ್ಕೆ ಮಾರರ ಪ್ರಮಾಣದಲ್ಲಿರುವ ಸಾಂದ್ರ ನೈಟ್ರಿಕ್ ಆಮ್ಲ ಮತ್ತು ಹೈಡ್ರೋಕ್ಲೋರಿಕ್ ಆಮ್ಲಗಳ ಮಿಶ್ರಣದಲ್ಲಿ ಮಾತ್ರ ಚಿನ್ನವು ಕರಗುವುದು. ಈ ದ್ರಾವಣವನ್ನು ಅಕ್ವಾ ರೀಜಿಯ ಎಂದು ಕರೆಯುವರು. ನೈಟ್ರಿಕ್ ಅಮ್ಲದಲ್ಲಿ ಚಿನ್ನವು ಕರಗಲಾರದು. ಈ ಗುಣವನ್ನು ವಸ್ತುಗಳಲ್ಲಿ ಚಿನ್ನದ ಇರುವಿಕೆಯನ್ನು ಕಂಡುಕೊಳ್ಳುವಲ್ಲಿ ಬಳಸಲಾಗುತ್ತದೆ. ಅಲ್ಲದೆ ಸಾಮಾನ್ಯವಾಗಿ ಚಿನ್ನವು ಪ್ರಕೃತಿಯಲ್ಲಿ ಬೆಳ್ಳಿಯೊಡನೆ ಬೆರೆತಿರುವುದರಿಂದಾಗಿ ಚಿನ್ನವನ್ನು ಶುದ್ಧೀಕರಿಸಿ ತೆಗೆಯುವಾಗ ನೈಟ್ರಿಕ್ ಆಮ್ಲದ ದ್ರಾವಣದ ಬಳಕೆಯಗುವುದು. ಬೆಳ್ಳಿಯು ನೈಟ್ರಿಕ್ ಆಮ್ಲದಲ್ಲಿ ಕರಗುತ್ತದೆ.

Start a discussion with Vaishnavi HR

Start a discussion