ಸದಸ್ಯ:ಜೀವನ್ ಕೆ ಎಂ/ನನ್ನ ಪ್ರಯೋಗಪುಟ
ಪಶುಪಾಲನಾ ಮತ್ತು ಪಶುವೈದ್ಯ ಸೇವಾ ಇಲಾಖೆ
*ಪರಿಚಯ:-
ಪಶುಪಾಲನಾ ಮತ್ತು ಪಶುವೈದ್ಯ ಸೇವಾ ಇಲಾಖೆಯು 1945 ರಲ್ಲಿ ಸ್ವತಂತ್ರ ಇಲಾಖೆಯಾಗಿ ರೂಪುಗೊಂಡಿತು. ರಾಜ್ಯದ ಜಾನುವಾರು ಸಂಪತ್ತಿಗೆ ಅರೋಗ್ಯ ರಕ್ಷಣೆ ನೀಡುವ ಹೊಣೆಗಾರಿಕೆಯ ಜೊತೆಗೆ ಜಾನುವಾರು ಅಭಿವೃದ್ಧಿ ಚಟುವಟಿಕೆ, ವಿಸ್ತರಣಾ ಸೇವೆಗಳು ಮತ್ತು ತರಬೇತಿ, ಸಾಮಾಜಿಕ ಮತ್ತು ಆರ್ಥಿಕ ಕಾರ್ಯಕ್ರಮಗಳ ಅನುಷ್ಠಾನ, ಮಾದರಿ ಸಮೀಕ್ಷೆ ಮತ್ತು ಜಾನುವಾರು ಗಣತಿ ಮುಂತಾದ ಕಾರ್ಯಾಕ್ರಮಗಳನ್ನು ಇಲಾಖೆಯು ತನ್ನ ವಿವಿಧ ಸ್ತರದ ಪಶುವೈದ್ಯ ಸಂಸ್ಥೆಗಳ ಜಾಲದ ಮೂಲಕ ಯಶಸ್ವಿಯಾಗಿ ನಿರ್ವಹಿಸುತ್ತಿದೆ.
ಇಲಾಖೆಯ ಇತಿಹಾಸ
1. 1572-1600: ವಿಜಯನಗರದಿಂದ ತಂದ ಹಳ್ಳಿಕಾರ್ ಹಸುಗಳನ್ನು ಹೊಂದಿದ ವಿಜಯನಗರದ ವೈಸ್-ರಾಯ್ ರವರ ಶ್ರೀರಂಗಪಟ್ಟಣದಲ್ಲಿನ 'ಕರುಹಟ್ಟಿ' ಎಂಬ ಸಂಸ್ಥೆಯ ಮೂಲಕ ಜಾನುವಾರು ಅಭಿವೃದ್ಧಿ ಕಾಯಕವನ್ನು ಪ್ರಾರಂಭಿಸಲಾಯಿತು.
2. 1967-1704: ಆಗಿನ ಮೈಸೂರಿನ ಮಹಾರಾಜರು ಕಾಲಾನುಸಾರವಾಗಿ ಈ ಕರುಹಟ್ಟಿಗೆ ರಾಸುಗಳನ್ನು ಸೇರಿಸಿ, ಈ ರಾಸುಗಳಿಗೆ ನಿಗದಿತ 'ಕಾವಲು'ಗಳನ್ನು ತಮ್ಮ ರಾಜ್ಯದ ವಿವಿಧ ಭಾಗದಲ್ಲಿ ನೀಡಿದರು. ಅಂದಿನ ಮಹಾರಾಜರಾದ ಸನ್ಮಾನ್ಯ ಶ್ರೀ ಚಿಕ್ಕದೇವರಾಜ ಒಡೆಯರ್ ರವರು ಈ ಸಂಸ್ಥೆಗೆ 'ಬೆಣ್ಣೆ ಚಾವಡಿ' ಎಂದು ನಾಮಕರಣ ಮಾಡಿದರು.
3. 1799: ಟಿಪ್ಪು ಸುಲ್ತಾನರು ಬೆಣ್ಣೆ ಚಾವಡಿ ಹೆಸರನ್ನು 'ಅಮೃತ್ ಮಹಲ್' ಎಂದು ಮರುನಾಮಕರಣ ಮಾಡಿ, ಅಮೃತ್ ಮಹಲ್ ತಳಿಯ ಅಭಿವೃದ್ಧಿಗೆ ಹೆಚ್ಚಿನ ಆಸಕ್ತಿ ತೋರಿದರು. ಹಾಗೂ ಈ ಇಲಾಖೆಯ ಉನ್ನತೀಕರಣಕ್ಕಾಗಿ ಸೂಕ್ತ ಕಾಯ್ದೆಗಳನ್ನು ಹುಕುಂನಾಮ ಮುಖೇನ ಅಳವಡಿಸಿದರು.
4. 1799-1881: ಟಿಪ್ಪು ಸುಲ್ತಾನರ ಅವನತಿಯ ನಂತರ ಅಮೃತ್ ಮಹಲ್ ಇಲಾಖೆಯ ಉಸ್ತುವಾರಿಯನ್ನು ಬ್ರಿಟೀಷರು ತೆಗೆದುಕೊಂಡು ಅವರ ರೀತಿಯಲ್ಲಿಯೇ ಅಮೃತ್ ಮಹಲ್ ದನಗಳನ್ನು ಹಾಲು, ಉಳುಮೆ ಹಾಗೂ ಯುದ್ಧಗಳಲ್ಲಿ ಉಪಯೋಗಿಸುವ ಸಲುವಾಗಿ ಅಭಿವೃದ್ಧಿಪಡಿಸಲು ಕ್ರಮ ಜರುಗಿಸಿದರು. ಈ ಇಲಾಖೆಗೆ ಒಟ್ಟು 143 ಕಾವಲುಗಳಿದ್ದು.
6. 1897: ಅಮೃತ್ ಮಹಲ್ ಇಲಾಖೆಯ ಉಸ್ತುವಾರಿಯನ್ನು ನೋಡಿಕೊಳ್ಳಲು ಒಬ್ಬರು ಪ್ರತ್ಯೇಕ ಅಧೀಕ್ಷಕರನ್ನು ನೇಮಿಸಲಾಯಿತು.
7. 1915-16: ಅಮೃತ್ ಮಹಲ್ ಇಲಾಖೆಯನ್ನು ಕೃಷಿ ಇಲಾಖೆಗೆ ವರ್ಗಾಯಿಸಿ, ಈ ವಿಭಾಗವನ್ನು ಪಶುಸಂಗೋಪನೆ ತಜ್ಞರ ಉಸ್ತುವಾರಿಯಲ್ಲಿ ಕಾರ್ಯನಿರ್ವಹಿಸುವಂತೆ ವ್ಯವಸ್ಥೆಗೊಳಿಸಲಾಯಿತು.
8. 1945: ಈ ವಿಭಾಗವನ್ನು ಕೃಷಿ ಇಲಾಖೆಯಿಂದ ಬೇರ್ಪಡಿಸಿ, ಮೈಸೂರು ರಾಜ್ಯದ ಪಶುಸಂಗೋಪನೆ ಮತ್ತು ಪಶುವೈದ್ಯ ಸೇವಾ ಇಲಾಖೆಯನ್ನಾಗಿ ಮಾಡಲಾಯಿತು.
* ಜುಲೈ 12, 1945 ಗೆಜೆಟ್ ನೋಟಿ:-https://upload.wikimedia.org/wikipedia/commons/thumb/c/cc/Notice%E0%B2%AA%E0%B2%B6%E0%B3%81%E0%B2%87%E0%B2%B2%E0%B2%BE%E0%B2%96%E0%B3%86.jpg/585px-Notice%E0%B2%AA%E0%B2%B6%E0%B3%81%E0%B2%87%E0%B2%B2%E0%B2%BE%E0%B2%96%E0%B3%86.jpg?20241122072315
ನಾಗರೀಕ ಸನ್ನದು
ಪಶುಪಾಲನಾ ಮತ್ತು ಪಶುವೈದ್ಯ ಸೇವಾ ಇಲಾಖೆ
* ಪೀಠಿಕೆ:-
ಪಶುಸಂಗೋಪನಾ ವಲಯವು ಕೃಷಿ ಆಧಾರಿತ ಗ್ರಾಮೀಣ ಅರ್ಥವ್ಯವಸ್ಥೆಯಲ್ಲಿ ಪ್ರಮುಖ ಪಾತ್ರ ವಹಿಸುತ್ತಿದೆ. ಚಟುವಟಿಕೆಗಳಲ್ಲಿ ಮುಖ್ಯವಾಗಿ ಹೈನುಗಾರಿಕೆ, ಕುರಿ ಸಾಕಾಣಿಕೆ, ಮೇಕೆ ಸಾಕಾಣಿಕೆ, ಹಂದಿ ಸಾಕಾಣಿಕೆ ಮತ್ತು ಕೋಳಿ ಸಾಕಾಣಿಕೆ ಒಳಗೊಂಡಿವೆ. ಈ ಚಟುವಟಿಕೆಗಳು ನಿರ್ದಿಷ್ಠವಾಗಿ ಗ್ರಾಮೀಣ ಭಾರತದಲ್ಲಿ ಸಾಂಪ್ರದಾಯಿಕವಾಗಿದ್ದರೂ, ವೈಜ್ಞಾನಿಕ ಪ್ರಗತಿ, ಉದಾರೀಕರಣ ಮತ್ತು ಸುಧಾರಣೆಗಳ ಪ್ರಕ್ರಿಯೆಯು ಈ ವಲಯದಲ್ಲಿ ಖಾಸಗಿಯ ಸಣ್ಣ ಮತ್ತು ಬೃಹತ್ ಉದ್ಯಮದಾರರು ಬಂಡವಾಳ ಹೂಡಲು ದಾರಿಮಾಡಿಕೊಟ್ಟಿದೆ.
* ದೂರದೃಷ್ಟಿ:-
ಜಾನುವಾರು, ಕೋಳಿ ಮತ್ತು ಮೆಲುಕು ಹಾಕುವ ಸಣ್ಣ ಪ್ರಾಣಿಗಳ ಸುಸ್ಥಿರ ಬೆಳವಣಿಗೆ ಅಥವಾ ಪೌಷ್ಠಿಕ ಭದ್ರತೆ ಮತ್ತು ಆರ್ಥಿಕ ಅಭಿವೃದ್ಧಿ.
*ಗುರಿ:-
ಪ್ರಾಣಿ ಅನುವಂಶೀಯ ಸಂಪನ್ಮೂಲಗಳ ಸಂರಕ್ಷಣೆ ಹಾಗೂ ಅಭಿವೃದ್ಧಿ, ಮತ್ತು ತ್ವರಿತ ತಳಿವೃದ್ಧಿಗಾಗಿ ತಳಿ ಅಭಿವೃದ್ಧಿ ಕಾರ್ಯಕ್ರಮ.
* ಕಾರ್ಯಕ್ರಮಗಳು:-
ಜಾನುವಾರುಗಳ ಸಂವರ್ಧನೆ, ಪಾಲನೆ, ಸಂರಕ್ಷಣೆ ಹಾಗೂ ಸುಧಾರಣೆ, ಪಶುಸಂಗೋಪನೆ ಮತ್ತು ಹೈನುಗರಿಕೆ ಅಭಿವೃದ್ಧಿ, ಪಶುವೈದ್ಯಕೀಯ ಸೇವೆಗಳ ಕ್ಷೇತ್ರದಲ್ಲಿ ಕಾರ್ಯನೀತಿ ಹಾಗೂ ಕಾರ್ಯಕ್ರಮಗಳ ರಚನೆ ಮತ್ತು ಅನುಷ್ಠಾನ ಇವುಗಳು ಇಲಾಖೆಯ ಜವಾಬ್ದಾರಿಯಾಗಿದೆ. ಇಲಾಖೆಯಲ್ಲಿನ ಕಾರ್ಯಚಟುವಟಿಕೆಗಳು ಮುಖ್ಯವಾಗಿ ಈ ಕೆಳಗಿನ ಅಂಶಗಳ ಮೇಲೆ ಹೆಚ್ಚಿನ ಆದ್ಯತೆಯನ್ನು ನೀಡುತ್ತವೆ:
ಪಶುಸಂಗೋಪನಾ ಉತ್ಪಾದಕತೆಯನ್ನು ಸುಧಾರಿಸುವುದಕ್ಕಾಗಿ ರಾಜ್ಯದಲ್ಲಿ ಅಗತ್ಯ ಮೂಲಭೂತ ಸೌಲಭ್ಯಗಳನ್ನು ಅಭಿವೃದ್ಧಿಪಡಿಸುವುದು.
ಹಾಲು ಮತ್ತು ಹಾಲಿನ ಉತ್ಪನ್ನಗಳ ನಿರ್ವಹಣೆ, ಸಂಸ್ಕರಣೆ ಮತ್ತು ಮಾರಾಟ ಮಾಡುವುದಕ್ಕೆ ಸಂಬಂಧಿಸಿದ ಮೂಲಸೌಲಭ್ಯಗಳನ್ನು ಒದಗಿಸುವುದು.
ದೇಶೀಯ ತಳಿಗಳ ಸಂರಕ್ಷಣೆ ಮತ್ತು ಅಭಿವೃದ್ಧಿ.
ಪಶು ಆರೋಗ್ಯ ಸೇವೆಯನ್ನು ಕಲ್ಪಿಸುವ ಮೂಲಕ ಜಾನುವಾರುಗಳ ಪಾಲನೆ ಹಾಗೂ ಸಂರಕ್ಷಣೆ.
ಅತ್ಯುತ್ಕೃಷ್ಟ ಅನುವಂಶೀಯತೆ ಅಭಿವೃದ್ಧಿಗಾಗಿ ಜಾನುವಾರು ಕ್ಷೇತ್ರಗಳನ್ನು ಬಲಪಡಿಸುವುದು.
ಸಾಮರ್ಥ್ಯವರ್ಧನೆ ಮತ್ತು ಮಾನವ ಸಂಪನ್ಮೂಲ ಅಭಿವೃದ್ಧಿ.
ಸಂಶೋಧನಾ ಮತ್ತು ಅಭಿವೃದ್ಧಿ ಕಾರ್ಯಚಟುವಟಿಕೆಗಳು.
ಜಾನುವಾರುಗಳ ಅಭಿವೃದ್ಧಿ ಕಾರ್ಯಚಟುವಟಿಕೆಗಳಿಗೆ ಪ್ರೋತ್ಸಾಹ.
ಸಾಮಾಜಿಕ-ಆರ್ಥಿಕ ಕಾರ್ಯಕ್ರಮಗಳ ಅನುಷ್ಠಾನ.
ಪಶುವೈದ್ಯ ಸಂಸ್ಥೆಗಳಲ್ಲಿ ದೊರೆಯುವ ಸೌಲಭ್ಯಗಳು
ಅ. ಪಶುವೈದ್ಯ ಆಸ್ಪತ್ರೆ ಮತ್ತು ಚಿಕಿತ್ಸಾಲಯಗಳು:
ಎಕ್ಸ್-ರೇ ಸೌಲಭ್ಯ (ತಾಲ್ಲೂಕು ಆಸ್ಪತ್ರೆ)
ಕೃತಕ ಗರ್ಭಧಾರಣೆ
ರೋಗ ಪತ್ತೆಹಚ್ಚುವಿಕೆ
ಚಿಕಿತ್ಸೆ
ರೊಗನಿರೋಧಕ ಲಸಿಕೆಗಳು
ಪಶುವೈದ್ಯ ಸಂಸ್ಥೆಗಳು ಇಲ್ಲದಿರುವ ಸ್ಥಳಗಳಿಗೆ ಸಂಚಾರಿ ಪಶುವೈದ್ಯ ಸೇವೆಗಳು
ವಿಸ್ತರಣೆ, ಶಿಕ್ಷಣ ಮತ್ತು ತರಬೇತಿ
ಸಾಮಾಜಿಕ-ಆರ್ಥಿಕ ಕಾರ್ಯಕ್ರಮಗಳು
ಆ. ಪ್ರಾಥಮಿಕ ಪಶುವೈದ್ಯ ಕೇಂದ್ರಗಳು:
ಚಿಕಿತ್ಸೆ
ಕೃತಕ ಗರ್ಭಧಾರಣೆ
ರೊಗನಿರೋಧಕ ಲಸಿಕೆಗಳು
ವಿಸ್ತರಣೆ, ಶಿಕ್ಷಣ ಮತ್ತು ತರಬೇತಿ
*ಸಂಸ್ಥೆಗಳು:-
1.ಕರ್ನಾಟಕ ಪಶುವೈದ್ಯಕೀಯ, ಪಶು ಹಾಗೂ ಮೀನುಗಾರಿಕೆ ವಿಜ್ಞಾನಗಳ ವಿಶ್ವಯವಿದ್ಯಾಲಯ (KVAFSU): ಪಶುವೈದ್ಯಕೀಯ ಮತ್ತು ಮಶುಸಂಗೋಪನಾ ಕ್ಷೇತ್ರದಲ್ಲಿ ಸಂಶೋಧನೆಯನ್ನು ಕೈಗೊಳ್ಳುವ ಪದವೀಧರರಿಗೆ ಮೂಲಭೂತ ಪಶುವೈದ್ಯಕೀಯ ಶಿಕ್ಷಣದ ಜೊತೆಗೆ ತಾಂತ್ರಿಕ ಮಾಹಿತಿಯನ್ನು ಒದಗಿಸುತ್ತದೆ.
2.ಹಾಲು ಉತ್ಪಾದಕರ ಮಹಾಮಂಡಳಿ (KMF): ರಾಜ್ಯದಲ್ಲಿನ ಹೈನುಗಾರಿಕೆ ಅಭಿವೃದ್ಧಿ ಕಾರ್ಯಚಟುವಟಿಕೆಗಳಿಗೆ ಹಾಲು ಉತ್ಪನ್ನಗಳ ಸಹಕಾರಿ ಅಗ್ರಸಂಸ್ಥೆಯಾಗಿದ್ದು, ಹಾಲು ಮತ್ತು ಹಾಲು ಉತ್ಪನ್ನಗಳಿಗೆ ನಿಖರವಾದ ಹಾಗೂ ಪ್ರೋತ್ಸಾಹದಾಯಕ ಬೆಲೆಯನ್ನು ಒದಗಿಸುತ್ತಿದೆ.
3.ಪ್ರಾಣಿ ಜೈವಿಕ ಮತ್ತು ಆರೋಗ್ಯ ಸಂಸ್ಥೆ (IAH&VB): ಜಾನುವಾರುಗಳು ಮತ್ತು ಕೋಳಿಗಳಿಗೆ ಬಾಧಕವಾಗುವ ಬ್ಯಾಕ್ಟೀರಿಯಾ ಮತ್ತು ವೈರಸ್ ಸಂಬಂಧಿ ಕಾಯಿಲೆಗಳ ನಿಯಂತ್ರಣಕ್ಕೆ ಲಸಿಕೆಗಳನ್ನು ಉತ್ಪಾದಿಸುವ ಗುರಿಯೊಂದಿಗೆ ಕಾರ್ಯನಿರ್ವಹಿಸುತ್ತಿದೆ.
4.ಕರ್ನಾಟಕ ಕುರಿ ಮತ್ತು ಉಣ್ಣೆ ಅಭಿವೃದ್ಧಿ ನಿಗಮ (KSWDC): ಕುರಿ ಮತ್ತು ಉಣ್ಣೆ ಉತ್ಪಾದಕರ ಸಹಕಾರ ಸಂಘವು ಮಿಶ್ರ ತಳಿ ಮತ್ತು ದೇಶೀಯ ತಳಿಗಳನ್ನು ಮೇಲ್ದರ್ಜೆಗೇರಿಸುವ ಮೂಲಕ ರಾಜ್ಯದಲ್ಲಿ ಕುರಿ ಮತ್ತು ಮೇಕೆಗಳ ಅಭಿವೃದ್ಧಿಪಡಿಸುವ ಉದ್ದೇಶವನ್ನು ಹೊಂದಿದೆ.
5.ಕರ್ನಾಟಕ ಸಹಕಾರಿ ಕುಕ್ಕುಟ ಮಂಡಳಿ (KCPF): ಕೋಳಿ ಸಾಕಾಣಿಕೆ, ಗಿರಿರಾಜ ಕೋಳಿಗಳ ಸಾಕಾಣಿಕೆ ಮತ್ತು ಮಾರಾಟ ಹಾಗೂ ಆಸಕ್ತ ರೈತರಿಗೆ ಹಣಕಾಸು ನೆರವನ್ನು ಒದಗಿಸುವ ಮೂಲಕ ಗ್ರಾಮೀಣ ಯುವಜನರಿಗೆ ಉದ್ಯೋಗಾವಕಾಶವನ್ನು ಕಲ್ಪಿಸುವ ಗುರಿಯನ್ನು ಈ ಸಂಸ್ಥೆಯು ಹೊಂದಿದೆ.
* ಆಡಳಿತ ವ್ಯವಸ್ಥೆ:-
1.ರಾಜ್ಯ ಮಟ್ಟದ ಆಡಳಿತ: ಆಯುಕ್ತರು, ಪಶುಪಾಲನಾ ಮತ್ತು ಪಶುವೈದ್ಯ ಸೇವಾ ಇಲಾಖೆ ಇವರು ಇಲಾಖಾ ಮುಖ್ಯಸ್ಥರಾಗಿರುತ್ತಾರೆ. ನಿರ್ದೇಶಕರು, ಪಶುಪಾಲನಾ ಮತ್ತು ಪಶುವೈದ್ಯ ಸೇವಾ ಇಲಾಖೆ ಇವರು ತಾಂತ್ರಿಕ ಆಡಳಿತದ ಮುಖ್ಯಸ್ಥರಾಗಿದ್ದು, ಆಯುಕ್ತರ ಅಧೀನದಲ್ಲಿ ಕಾರ್ಯನಿರ್ವಹಿಸುತ್ತಾರೆ.
2.ಜಿಲ್ಲಾ ಮಟ್ಟದ ಆಡಳಿತ: ಜಿಲ್ಲಾ ಮಟ್ಟದಲ್ಲಿ ಉಪ ನಿರ್ದೇಶಕರು, ಪಶುಪಾಲನಾ ಮತ್ತು ಪಶುವೈದ್ಯ ಸೇವಾ ಇಲಾಖೆ ಇವರು ಆಡಳಿತ ವ್ಯವಸ್ಥೆಯ ಮುಖ್ಯಸ್ಥರಾಗಿರುತ್ತಾರೆ. ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ಆಡಳಿತವು ಆಯಾ ಜಿಲ್ಲಾ ಪಂಚಾಯಿತಿಗಳ ಅಧೀನದಲ್ಲಿ ಕಾರ್ಯನಿರ್ವಹಿಸುತ್ತವೆ.
3.ತಾಲ್ಲೂಕು ಮಟ್ಟದ ಆಡಳಿತ: ತಾಲ್ಲೂಕು ಮಟ್ಟದಲ್ಲಿ ಸಹಾಯಕ ನಿರ್ದೇಶಕರು, ಪಶುಪಾಲನಾ ಮತ್ತು ಪಶುವೈದ್ಯ ಸೇವಾ ಇಲಾಖೆ ಇವರು ಆಡಳಿತ ವ್ಯವಸ್ಥೆಯ ಮುಖ್ಯಸ್ಥರಾಗಿರುತ್ತಾರೆ.
* ಪಶುಪಾಲಕರ ಸಹಾಯವಾಣಿ *ಸರ್ವಜನಿಕ ಜಾಲತಾಣ ಕರೆಮಾಡಿ ವಾಟ್ಸ್ ಅ್ಯಪ್ 8277 100 200 ( 24/7 )