ಸದಸ್ಯ:Aparanjibubbly/ನನ್ನ ಪ್ರಯೋಗಪುಟ

ವಿಕಿಪೀಡಿಯದಿಂದ, ಇದು ಮುಕ್ತ ಹಾಗೂ ಸ್ವತಂತ್ರ ವಿಶ್ವಕೋಶ

ಹಿಮವತ್ ಗೋಪಾಲ ಸ್ವಾಮಿ ಬೆಟ್ಟ[ಬದಲಾಯಿಸಿ]

ಕರ್ನಾಟಕ ರಾಜ್ಯದ ಗುಂಡ್ಲುಪೇಟೆ ತಾಲೂಕಿನಲ್ಲಿದೆ. ಮೈಸೂರಿನ ದಕ್ಷಿಣಕ್ಕೆ ಸುಮಾರು ೮೦ ಕಿ.ಮೀ. ದೂರದಲ್ಲಿ ಊಟಿ ಹೆದ್ದಾರಿಯ ಅಂಚಿನಲ್ಲಿರುವ ಈ ಬೆಟ್ಟವು ಅದ್ಬುತ ಪ್ರಕೃತಿ ಸೌಂದರ್ಯದ ತಾಣ. ಸಮುದ್ರ ಮಟ್ಟದಿಂದ ಸುಮಾರು ೧೪೪೦ ಮೀ. ಎತ್ತರದಲ್ಲಿ ಮಲೆಯ ಮೇಲೆ ಶ್ರೀಕೃಷ್ಣನ ದೇವಾಲಯವಿದೆ.

ಚಿತ್ರ:ಹಿಮವತ್ ಗೋಪಾಲಸ್ವಾಮಿ ಬೆಟ್ಟ.jpg
ಹಿಮವತ್ ಗೋಪಾಲಸ್ವಾಮಿ ಬೆಟ್ಟ

ಪುರಾಣ ಹಿನ್ನಲೆ

೧. ದ್ವಾಪರದ ಕೃಷ್ಣನ ವೇಣುಗಾನಕ್ಕೆ ಗೋವುಗಳೆಲ್ಲಾ ಅವನ ಸುತ್ತಲು ಬಂದು ಸೇರುತ್ತಿದ್ದವನತೆ. ಇಂದು ಅದೇ ಕೃಷ್ಣ, ಬೆಟ್ಟದ ತುದಿಯಲ್ಲಿ ನಿಂತು ತನ್ನ ಕೊಳಲಿನಿಂದ ಸುಮಧುರ ಗಾನ ಸುಧೆ ಹರಿಸುತ್ತಿದ್ದಾನೆ, ಪ್ರಕೃತಿ ದೇವತೆ ಅವನ ಸುತ್ತಲು ಅಮೋಘವಾಗಿ ನರ್ತಿಸುತ್ತಿದ್ದಾಳೆ. ಗೋಪಾಲಸ್ವಾಮಿ ವಿಗ್ರಹದ ಕಲ್ಲಿನ ಮೇಲೆ ವರ್ಷದ ೩೬೫ ದಿನಗಳೂ ನೀರು ಜಿನುಗುತ್ತಿರುತ್ತದೆ.

೨. ಈ ಬೆಟ್ಟದಲ್ಲಿ ಸುಮಾರು ೭೭ ತೀರ್ಥಸ್ಥಳಗಳಿವೆ. ಇವುಗಳಲ್ಲಿ ಕೆಲವನ್ನು ದೇವಸ್ಥಾನದ ಸುತ್ತ ಮುತ್ತ ನೋಡಬಹುದು. ಮತ್ತೊಮ್ಮೆ ಅಚ್ಚರಿ ಎಂದರೆ ಇಲ್ಲಿ ಕಾಗೆಗಳು ಕಾಣ ಸಿಗುವುದ್ದಿಲ್ಲ.

ಪಾಲಿಸಬೇಕಾದ ನಿಯಮಗಳು[ಬದಲಾಯಿಸಿ]

ಈ ಸ್ಥಳಕ್ಕೆ ಯಾವುದೆ ಸ್ವಂತ ವಾಹನಗಳನ್ನು ಬಿಡುವುದಿಲ್ಲ ಹಾಗು ಯಾವುದೆ ತರಹದ ಪರಿಸರಕ್ಕೆ ಹಾನಿ ಮಾಡುವ ವಸ್ತುಗಳನ್ನು ತೆಗೆದುಕೊಂಡು ಹೋಗುವಂತ್ತಿಲ್ಲ. ಈ ತಾಣವು ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲ್ಲೂಕಿನಲ್ಲಿದೆ. [೧]

ಉಲ್ಲೇಖಗಳು[ಬದಲಾಯಿಸಿ]

  1. ಚಾಮರಾಜನಗರದಲ್ಲಿರುವ ಹಿಮವದ್ ಗೋಪಾಲಸ್ವಾಮಿ ಬೆಟ್ಟವನ್ನೇರಿದ್ದೀರಾ?