ಸದಸ್ಯ:Arvind siquera/sandbox/1
ಆಪರೇಷನ್ ಕಾರ್ಗಿಲ್
[ಬದಲಾಯಿಸಿ]ಕಾರ್ಗಿಲ್ ಸಂಘರ್ಷ ವೆಂದೇ ಹೆಸರಾದ ಕಾರ್ಗಿಲ್ ಯುದ್ದವುಟೆಂಪ್ಲೇಟು:Fn ಭಾರತ ಮತ್ತು ಪಾಕಿಸ್ತಾನದ ಮಧ್ಯೆ ನಡೆದ ಸಶಸ್ತ್ರ ಸಂಘರ್ಷವಾಗಿದ್ದು, ಕಾಶ್ಮೀರದ ಕಾರ್ಗಿಲ್ ಜಿಲ್ಲೆ ಮತ್ತು ನಿಯಂತ್ರಣ ರೇಖೆಯಿರುವ ಪ್ರದೇಶಗಳಲ್ಲಿ 1999ರ ಮೇ ಮತ್ತು ಜುಲೈ ನಡುವೆ ಸಂಭವಿಸಿತು. ಉಭಯ ರಾಷ್ಟ್ರಗಳ ನಡುವಿನ de facto ಗಡಿಯಾಗಿರುವ ನಿಯಂತ್ರಣ ರೇಖೆಯಲ್ಲಿ(LOC)ರುವ ಭಾರತದ ನೆಲೆಗಳಿಗೆ ಪಾಕಿಸ್ತಾನದ ಸೈನಿಕರು ಮತ್ತು ಕಾಶ್ಮೀರಿ ಉಗ್ರಗಾಮಿಗಳು ನುಸುಳಿದ್ದೇ ಯುದ್ಧಕ್ಕೆ ಕಾರಣ.[೮] ಯುದ್ಧದ ಆರಂಭದ ಹಂತಗಳಲ್ಲಿ, ಕಾರ್ಗಿಲ್ ಕದನಕ್ಕೆ ಸ್ವತಂತ್ರ ಕಾಶ್ಮೀರಿ ಉಗ್ರಗಾಮಿಗಳ ಮೇಲೆ ಪಾಕಿಸ್ತಾನ ಗೂಬೆ ಕೂರಿಸಿತು, ಆದರೆ ಯುದ್ಧಾನಂತರದ ಸಾವು ನೋವುಗಳ ದಾಖಲೆಗಳು ಮತ್ತು ಆ ಬಳಿಕ ಪಾಕಿಸ್ತಾನದ ಪ್ರಧಾನ ಮಂತ್ರಿ ಮತ್ತು ಸೇನಾ ಸಿಬ್ಬಂದಿ ಮುಖ್ಯಸ್ಥರು ನೀಡಿದ ಹೇಳಿಕೆಗಳು, ಜನರಲ್ ಅಶ್ರಫ್ ರಷೀದ್ ನೇತೃತ್ವದ ಪಾಕಿಸ್ತಾನಿ ಅರೆಸೇನೆ ಪಡೆಗಳು ಈ ಯುದ್ಧದಲ್ಲಿ ಪಾಲ್ಗೊಂಡಿದ್ದನ್ನು ರುಜುವಾತು ಮಾಡಿತು.[೯][೧೦][೧೧][೧೨] ಪಾಕಿಸ್ತಾನದ ಪಡೆಗಳು ಮತ್ತು ಉಗ್ರಗಾಮಿಗಳು LoCಯಲ್ಲಿ ಆಕ್ರಮಿಸಿಕೊಂಡ ಭಾರತದ ಬಹುತೇಕ ನೆಲೆಗಳನ್ನು ಬಳಿಕ ಭಾರತದ ಸೇನೆಯು ಭಾರತೀಯ ವಾಯು ಪಡೆಯ ಬೆಂಬಲದೊಂದಿಗೆ ಮರುವಶಕ್ಕೆ ತೆಗೆದುಕೊಂಡಿತು. ಅಂತಾರಾಷ್ಟ್ರೀಯವಾಗಿ ರಾಜತಾಂತ್ರಿಕ ವಿರೋಧ ವ್ಯಕ್ತವಾಗಿದ್ದರಿಂದಾಗಿ, ಪಾಕಿಸ್ತಾನದ ಪಡೆಗಳು LOCಯ ಭಾರತದ ನೆಲೆಗಳಿಂದ ಬಲವಂತವಾಗಿ ಹಿಂದಕ್ಕೆ ಸರಿಯಬೇಕಾಯಿತು.
ಅತೀ ಎತ್ತರದ ಪರ್ವತಚ್ಛಾದಿತ ಪ್ರದೇಶದಲ್ಲಿ ಕಾದಾಟ ಮಾಡಿದಕ್ಕೆ ಈ ಯುದ್ಧ ಇತ್ತೀಚಿನ ಉದಾಹರಣೆಯಾಗಿದ್ದು, ಉಭಯ ಕಡೆಗಳೂ ಗಣನೀಯವಾಗಿ ಸೈನ್ಯ ವ್ಯವಸ್ಥಾಪನಾ ತಂತ್ರದ ಸಮಸ್ಯೆಗಳನ್ನು ಎದುರಿಸಬೇಕಾಯಿತು.1969ರಲ್ಲಿ ಚೀನಾ-ಸೋವಿಯಟ್ ಗಡಿ ಸಂಘರ್ಷದ ನಂತರ, ಯಾವುದೇ ಎರಡು ರಾಷ್ಟ್ರಗಳು ಅಣ್ವಸ್ತ್ರಗಳನ್ನು ಅಭಿವೃದ್ಧಿಪಡಿಸಿದ ಬಳಿಕ ಅವುಗಳ ನಡುವೆ ನಡೆದ ಎರಡನೇ ನೇರ ಭೂ-ಯುದ್ಧವಾಗಿದೆ, ಅಲ್ಲದೆ ಬಹು ಇತ್ತೀಚೆಗೆ ನಡೆದ ಯುದ್ಧ ಕೂಡ ಇದೇ ಆಗಿದೆ. (1974ರಲ್ಲೇ ಭಾರತ ಪ್ರಥಮ ಅಣ್ವಸ್ತ್ರ ಪರೀಕ್ಷೆ ನಡೆಸಿದ್ದರೂ, ಭಾರತ ಮತ್ತು ಪಾಕಿಸ್ತಾನವೆರಡೂ 1998ರ ಮೇನಲ್ಲಿ ವಿದಳನ ಸಾಧನಗಳ ಸ್ಫೋಟ ಪರೀಕ್ಷೆಗಳನ್ನು ನಡೆಸಿತು). ಈ ಸಂಘರ್ಷ ಉಭಯ ರಾಷ್ಟ್ರಗಳ ನಡುವೆ ಉದ್ವಿಗ್ನತೆ ಹೆಚ್ಚಳಕ್ಕೆ ಕಾರಣವಾಯಿತು, ಮತ್ತು ಇದರಿಂದಾಗಿ ಭಾರತದ ರಕ್ಷಣಾ ವೆಚ್ಚವೂ ಹೆಚ್ಚಿತು.[ಸೂಕ್ತ ಉಲ್ಲೇಖನ ಬೇಕು]