ಸದಸ್ಯ:Beena v m/ನನ್ನ ಪ್ರಯೋಗಪುಟ

ವಿಕಿಪೀಡಿಯದಿಂದ, ಇದು ಮುಕ್ತ ಹಾಗೂ ಸ್ವತಂತ್ರ ವಿಶ್ವಕೋಶ

ವ್ಯುತ್ಪತ್ತಿ[ಬದಲಾಯಿಸಿ]

'[[ವಿಕಿಪೀಡಿಯ]]' ಎಂಬ ಪದವು ಒಂದು ಮಿಶ್ರಪದ (Portmanteau word) ಆಗಿದ್ದು, ಹವಾಯಿ ಭಾಷೆಯ 'ವಿಕಿ' (ಅಂದರೆ 'ಶೀಘ್ರ' ಎಂದರ್ಥ) ಹಾಗು ಇಂಗ್ಲಿಷ್‌ನ 'ಎನ್‌ಸೈಕ್ಲೊಪೀಡಿಯ' ಎಂಬ ಎರಡು ಪದಗಳು ಸೇರಿ ರಚನೆಯಾಗಿದೆ.

ಚರಿತ್ರೆ[ಬದಲಾಯಿಸಿ]

ವಿಕಿಪೀಡಿಯವು ಮೂಲತಃ ನ್ಯುಪೀಡಿಅ ಎಂಬ ಇನ್ನೊಂದು ವಿಶ್ವಕೋಶದ ಯೋಜನೆಯಿಂದ ಮೂಡಿಬಂದಿತು ವಿಕಿಪೀಡಿಯವು ಮೂಲತಃ ನ್ಯುಪೀಡಿಯ (Nupedia) ಎಂಬ ಇನ್ನೊಂದು ಇಂಗ್ಲಿಷ್ ವಿಶ್ವಕೋಶೀಯ ಜಾಲತಾಣದ ಯೋಜನೆಯಿಂದ ಮೂಡಿಬಂದಿತು. ಜಿಮ್ಮಿ ವೇಲ್ಸ್ (Jimmy Wales) ಮತ್ತು ಲ್ಯಾರಿ ಸ್ಯಾಂಗರ್ (Larry Sanger) ಎಂಬುವವರು ಇದನ್ನು ಜನವರಿ ೧೫, ೨೦೦೧ ರಂದು ಆರಂಭಿಸಿದರು. ಪ್ರಸ್ತುತ ಇದು ವಿಕಿಮೀಡಿಯ ಫೌಂಡೇಷನ್ ಎಂಬ ಒಂ

ವಿಶ್ವಾಸಾರ್ಹ[ಬದಲಾಯಿಸಿ]

  • ವಿಕಿಪೀಡಿಯದಲ್ಲಿನ ದಾಖಲೆಗಳು ಮತ್ತು ಮಾಹಿತಿಗಳನ್ನು ಅವು ಸ್ವಯಂ ಪರಿಪೂರ್ಣವೆಂದು ಭಾವಿಸಬಾರದು. ಅವುಗಳನ್ನು ನಿರಂತರವಾಗಿ ಪರಿಷ್ಕರಣೆ ಹಾಗೂ ಸುಧಾರಣೆಗೆ ಒಳಪಡಿಸಲಾಗುತ್ತಿರುತ್ತದೆ
  • ಇಲ್ಲಿ ದೊರೆಯುವ ಹಲವಾರು ಮಾಹಿತಿಗಳು ಸತ್ಯದೂರ ಅಥವಾ ಚರ್ಚಾಸ್ಪದ ವಿಷಯಗಳಾಗಿರುವ ಸಾಧ್ಯತೆಗಳಿವೆ. ವಾಸ್ತವವಾಗಿ ಅನೇಕ ಮಾಹಿತಿಗಳು ಕೇವಲ ಒಂದು ದೃಷ್ಟಿಕೋನವನ್ನು ಮಾತ್ರ ಪ್ರತಿನಿಧಿಸಬಹುದು
  • ವಾದ ವಿವಾದಗಳು ಮತ್ತು ಚರ್ಚೆಗಳಿಂದ ಕೂಡಿದ ಸುದೀರ್ಘ ವೈಚಾರಿಕ ಪ್ರಕ್ರಿಯೆಯ ನಂತರವೇ ಒಂದು ಒಮ್ಮತದ ಮತ್ತು ಅಲಿಪ್ತ ದೃಷ್ಟಿಕೋನವನ್ನು ನಿರ್ಧರಿಸಲಾಗುವುದು
  • ವಿಕಿಪೀಡಿಯದಲ್ಲಿನ ಲೇಖನಗಳು ಕೆಲವು ಆದರ್ಶ ಲಕ್ಷಣಗಳನ್ನು ಹೊಂದಿರುತ್ತವೆ. ಅವು ಉತ್ತಮ ಶಬ್ದ ಸಂಪತ್ತಿನಿಂದ ಕೂಡಿದ್ದು ಸಮತೋಲಿತ, ತಟಸ್ಥ ಹಾಗೂ ಮಾಹಿತಿಕೋಶಿಯ ದರ್ಜೆಯ ಮಾಹಿತಿಗಳನ್ನು ಹೊಂದಿರುತ್ತವಲ್ಲದೆ ಅವು ವ್ಯಾಪಕ ಹಾಗೂ ಪುರಾವೆಗಳನ್ನು ಒದಗಿಸಲು ಸಮರ್ಥವಾದ ದಾಖಲೆಗಳಾಗಿರುತ್ತವೆ.
  • ವಿಕಿಪೀಡಿಯದಲ್ಲಿ ಕಂಡು ಬರುವ ಮಾಹಿತಿಗಳನ್ನು ಸಂಶೋಧನ ಆಕರಗಳನ್ನಾಗಿ ಬಳಸಬೇಕಾದಲ್ಲಿ ಹೆಚ್ಚಿನ ಎಚ್ಚರಿಕೆ ವಹಿಸಬೇಕಾದುದು ಅವಶ್ಯಕ. ಏಕೆಂದರೆ ಇಲ್ಲಿನ ಹಲವಾರು ಲೇಖನಗಳು ಸ್ವಾಭಾವಿಕವಾಗಿ ತಮ್ಮ ಪ್ರಬುದ್ಧತೆ ಮತ್ತು ಬೌದ್ಧಿಕ ದರ್ಜೆಗಳಲ್ಲಿ ಗಣನೀಯ ಪ್ರಮಾಣದ ಏರುಪೇರುಗಳನ್ನು ತೋರಿಸಬಹುದು
  • ವಿಕಿಪೀಡಿಯದಲ್ಲಿನ ಮಾಹಿತಿಗಳನ್ನು ಯಾರು ಬೇಕಾದರೂ ಪರಿಷ್ಕರಿಸಲು ಸಾಧ್ಯವಿರುವುದರಿಂದ ಕೆಲವು ತಪ್ಪು ಮಾಹಿತಿಗಳು ಸೇರ್ಪಡೆಯಾಗುವ ಹಾಗೂ ಸೇರ್ಪಡೆಯಾಗಿರುವ ಸಾಧ್ಯತೆಗಳೂ ಉಂಟು. ಹಾಗಾಗಿ ಅಂತಹ ಮಾಹಿತಿಗಳನ್ನು ತಗೆದುಕೊಳ್ಳುವಾಗ ಎಚ್ಚರಿಕೆ ವಹಿಸಬೇಕಾಗುತ್.