ವಿಷಯಕ್ಕೆ ಹೋಗು

ಸದಸ್ಯ:Brindha Mundiyalonda

ವಿಕಿಪೀಡಿಯದಿಂದ, ಇದು ಮುಕ್ತ ಹಾಗೂ ಸ್ವತಂತ್ರ ವಿಶ್ವಕೋಶ

ಡಾ. ಬಿ.ಎ ವಿವೇಕ ರೈ

ಡಾ.ಬಿ.ಎ ವಿವೇಕ ರೈಯವರು ೧೯೪೬ರಲ್ಲಿ ಬಂಟ್ವಾಳ ತಾಲೂಕಿನ ಅಗ್ರಾಳದಲ್ಲಿ ಜನಿಸಿದರು. ತಮ್ಮ ವಿದ್ಯಾಭ್ಯಾಸವನ್ನು ಪುತ್ತೂರು ಮತ್ತು ಮಂಗಳೂರಲ್ಲಿ ನಡೆಸಿದರು. ಮಂಗಳೂರು ಸ್ನಾತಕೋತ್ತರ ಕೇಂದ್ರದಲ್ಲಿ ಕನ್ನಡ ಎಂ.ಎ ಪದವಿ ಪಡೆದು ೧೯೭೦ರಲ್ಲಿ ಅಲ್ಲಿಯೇ ಉಪನ್ಯಾಸಕರಾಗಿ ವೃತ್ತಿಯನ್ನು ಆರಂಭಿಸಿದರು. ಮಂಗಳೂರು ವಿ.ವಿ ಯ ಕನ್ನಡ ಅಧ್ಯಯನ ವಿಭಾಗದ ಪ್ರಾಧ್ಯಾಪಕರಾಗಿ ಹಾಗೂ ಅಧ್ಯಕ್ಷರಾಗಿ ಕನ್ನಡ ವಿಭಾಗವನ್ನು ಕಟ್ಟಿ ಬೆಳೆಸಿದರು. ಹಂಪಿ ಕನ್ನಡ ವಿ.ವಿ ದ ಕುಲಪತಿಗಳಾಗಿ ಹಾಗೂ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಕುಲಪತಿಗಳಾಗಿ ಅನುಪಮ ಸೇವೆ ಸಲ್ಲಿಸಿದ್ದಾರೆ. ಪ್ರಸ್ತುತ ಡಾ.ವಿವೇಕ ರೈಯವರು ಜರ್ಮನಿಯ ವ್ಯೂತ್ಸ್ ಬುರ್ಗ್ ವಿಶ್ವವಿದ್ಯಾನಿಲಯದ ಇಂಡಾಲಜಿ ವಿಭಾಗದಲ್ಲಿ ಸಂದರ್ಶಕ ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ.

ಮಂಗಳೂರು ವಿಶ್ವವಿದ್ಯಾನಿಲಯದ ಶಿವರಾಮ ಕಾರಂತ ಅಧ್ಯಯನ ಪೀಠ, ಶ್ರಿ ಧರ್ಮಸ್ಥಳ ಮಂಜುನಾಥೇಶ್ವರ ತುಳುಪೀಠದ ನಿರ್ದೇಶಕರಾಗಿ, ಕರ್ನಾಟಕ ರಾಜ್ಯ ಸಾಹಿತ್ಯ ಅಕಾಡಮಿಯ ಸದಸ್ಯರಾಗಿ ಸೇವೆ ಸಲ್ಲಿಸಿದ ಡಾ.ವಿವೇಕ ರೈಯವರು ಕರ್ನಾಟಕ ರಾಜ್ಯ ತುಳು ಸಾಹಿತ್ಯ ಅಕಾಡಮಿ ಪ್ರಥಮ ಅಧ್ಯಕ್ಷರಾಗಿ ತುಳು ಸಾಹಿತ್ಯದ ಬೆಳವಣಿಗೆಗೆ ಸೃಷ್ಟ ಮಾರ್ಗದರ್ಶನ ನೀಡಿದ್ದಾರೆ.

ಕನ್ನಡ-ತುಳು-ಆಂಗ್ಲ ಭಾಷೆಗಳಲ್ಲಿ ವಿದ್ವಾಂಸರಾಗಿ, ಸಂಶೋಧಕರಾಗಿ, ವಿಮರ್ಶಕರಾಗಿ ಪ್ರಸಿದ್ಧರಾದ ಡಾ.ರೈಯವರು ಫಿನ್ಲೆಂಡ್, ಜರ್ಮನಿ, ಜಪಾನ್, ದೇಶಗಳಲ್ಲಿ ಸಂದರ್ಶಕ ಪ್ರಾಧ್ಯಾಪಕರಾಗಿ ಕಾರ್ಯನಿರ್ವಹಿಸಿದ್ದಾರೆ.

ತುಳು ಗಾದೆಗಳು, ತುಳು ಒಗಟುಗಳು, ತೌಳವ ಸಂಸ್ಕೃತಿ, ತುಳುವ ಅಧ್ಯಯನ ಕೆಲವು ವಿಚಾರಗಳು, ತುಳು ಜನಪದ ಸಾಹಿತ್ಯ ಅನ್ವಯಿಕ ಜಾನಪದ, ಗಿಳಿಸೂವೆ, ಹಿಂದಣ ಹೆಜ್ಜೆ ಮೊದಲಾದ ಕೃತಿಗಳನ್ನು ಪ್ರಕಟಿಸಿದ್ದಾರೆ. ಬ್ಲಾಗ್ ನಲ್ಲಿ ಅವರು ಬರೆದಿರುವ ಲೇಖನಗಳ ಸಂಗ್ರಹ ಬ್ಲಾಗಿಲನು ತೆರೆದು ಅವರ ನೂತನ ಕೃತಿ.

ಕಡಂಗೋಡ್ಲು ಸಾಹಿತ್ಯ, ಕನ್ನಡ ಕಾದಂಬರಿಗಳ ಮೊದಲ ಹೆಜ್ಜೆಗಳು, ಮುಳಿಯ ತಿಮ್ಮಪ್ಪನವರ ಸಾಹಿತ್ಯ, ಸಿರಿ ಮಹಾಕಾವ್ಯ ಮೊದಲಾದ ಗ್ರಂಥಗಳನ್ನು ಸಂಪಾದಿಸಿದ್ದಾರೆ.

ಕರ್ನಾಟಕ ಸರಕಾರದ ರಾಜ್ಯೋತ್ಸವ ಪ್ರಶಸ್ತಿ ತುಳು ಸಾಹಿತ್ಯ ಅಕಾಡೆಮಿಯ ವಿಶೇಷ ಗೌವರ ಪ್ರಶಸ್ತಿ, ಕರ್ನಾಟಕ ಜಾನಪದ ಮತ್ತು ಯಕ್ಷಗಾನ ಅಕಾಡೆಮಿಯ ಜಾನಪದ ತಜ್ಞ ಪ್ರಶಸ್ತಿ ಮೊದಲಾದವು ರೈಯವರಿಗೆ ಸಂದ ಪ್ರಶಸ್ತಿಗಳು.