ಸದಸ್ಯ:Deepak k s/ನನ್ನ ಪ್ರಯೋಗಪುಟ

ವಿಕಿಪೀಡಿಯದಿಂದ, ಇದು ಮುಕ್ತ ಹಾಗೂ ಸ್ವತಂತ್ರ ವಿಶ್ವಕೋಶ

ಸರ್ ಎಂ.ವಿ.(ಸೆಪ್ಟೆಂಬರ್ ೧೫೧೮೬೧ - ಏಪ್ರಿಲ್ ೧೨೧೯೬೨) ಎಂದು ಜನಪ್ರಿಯರಾಗಿದ್ದ ಸರ್ ಮೋಕ್ಷಗುಂಡಂ ವಿಶ್ವೇಶ್ವರಯ್ಯ ರವರು, ಭಾರತದ ಗಣ್ಯ ಅಭಿಯಂತರರಲ್ಲಿ ಒಬ್ಬರು. ಇವರು ೧೯೧೨ ರಿಂದ ೧೯೧೮ರವರೆಗೆ ಮೈಸೂರು ಸಂಸ್ಥಾನದ ದಿವಾನರಾಗಿದ್ದವರು. ಇವರ ಹುಟ್ಟಿದ ದಿನವನ್ನು ಭಾರತ ದೇಶದಾದ್ಯಂತ ಅಭಿಯಂತರರ ದಿನ ಎಂದು ಆಚರಿಸುತ್ತಾರೆ.

ಬಾಲ್ಯ, ವಿದ್ಯಾಭ್ಯಾಸ[ಬದಲಾಯಿಸಿ]

ವಿಶ್ವೇಶ್ವರಯ್ಯನವರು ಜನಿಸಿದ್ದು ಸೆಪ್ಟೆಂಬರ್ ೧೫,೧೮೬೧ ರಲ್ಲಿ ಚಿಕ್ಕಬಳ್ಳಾಪುರ ಜಿಲ್ಲೆಯ ಮುದ್ದೇನಹಳ್ಳಿ ಎಂಬಲ್ಲಿ ಬ್ರಾಹ್ಮಣ ಕುಟುಂಬದಲ್ಲಿ. ವಿಶ್ವೇಶ್ವರಯ್ಯನವರ ತಂದೆ 'ಶ್ರೀನಿವಾಸ ಶಾಸ್ತ್ರಿ', ತಾಯಿ 'ವೆಂಕಟಲಕ್ಷ್ಮಮ್ಮ'. ವಿಶ್ವೇಶ್ವರಯ್ಯನವರ ತಂದೆ ಸಂಸ್ಕೃತ ವಿದ್ವಾಂಸರು; ಧರ್ಮ ಶಾಸ್ತ್ರಗಳನ್ನು ಆಳವಾಗಿ ಅಭ್ಯಾಸ ಮಾಡಿದ್ದರಲ್ಲದೆ ಆಯುರ್ವೇದ ತಜ್ಞರೂ ಆಗಿದ್ದರು. ಅವರು ೧೫ ವರ್ಷದವರಿರುವಾಗಲೆ ತಂದೆಯು ನಿಧನರಾದರು. ವಿಶ್ವೇಶ್ವರಯ್ಯನವರ ಪ್ರಾಥಮಿಕ ಶಿಕ್ಷಣ ಚಿಕ್ಕಬಳ್ಳಾಪುರದಲ್ಲಿ ಮತ್ತು ಪ್ರೌಢ ಶಿಕ್ಷಣ ಬೆಂಗಳೂರಿನಲ್ಲಿ ನಡೆಯಿತು. ೧೮೮೧ ರಲ್ಲಿ ಮದ್ರಾಸು ವಿಶ್ವವಿದ್ಯಾಲಯದಿಂದ ಬಿ.ಎ ಪದವಿಯನ್ನು ಪಡೆದು ನಂತರ ಪುಣೆಯ ವಿಜ್ಞಾನ ಕಾಲೇಜಿನಿಂದ ಸಿವಿಲ್ ಎಂಜಿನಿಯರಿಂಗ್ ಪದವಿಯನ್ನು ಪಡೆದರು.ಅವರ ಪೂರ್ವಜರು ಈಗಿನ ಆಂದ್ರಪ್ರದೇಶದ 'ಮೋಕ್ಷಗುಂಡಂ' ಎಂಬ ಸ್ಥಳದಿಂದ ವಲಸೆ ಬಂದು ಮುದ್ದೇನಹಳ್ಳಿಯಲ್ಲಿ ವಾಸವಾಗಿದ್ದ ಕಾರಣ ಅವರ ಹೆಸರಿನೊಡನೆ ಮೋಕ್ಷಗುಂಡಂ ಸೇರಿಕೊಂಡಿದೆ.

ವೃತ್ತಿಜೀವನ[ಬದಲಾಯಿಸಿ]

'ಕೃಷ್ಣರಾಜಸಾಗರ ಅಣೆಕಟ್ಟು' ವಿಶ್ವೇಶ್ವರಯ್ಯನವರು ನಂತರ ಮುಂಬಯಿ ನಗರದಲ್ಲಿ ಲೋಕೋಪಯೋಗಿ ಇಲಾಖೆಯನ್ನು ಸೇರಿದರು ೧೮೮೪ರಲ್ಲಿ. ಇದಾದ ಮೇಲೆ ಭಾರತೀಯ ನೀರಾವರಿ ಕಮಿಷನ್ ಇಂದ ಅವರಿಗೆ ಆಮಂತ್ರಣ ಬಂದಿತು. ಈ ಕಮಿಷನ್ ಅನ್ನು ಸೇರಿದ ನಂತರ ದಖನ್ ಪ್ರಸ್ತಭೂಮಿಯಲ್ಲೇ ಉತ್ತಮವಾದ ನೀರಾವರಿ ವ್ಯವಸ್ಥೆಯನ್ನು ವಿಶ್ವೇಶ್ವರಯ್ಯನವರು ಪರಿಚಯಿಸಿದರು. ಸರ್ ಎಂ. ವಿ. ಯವರು ಅರ್ಥರ್ ಕಾಟನ್ ರವರಿಂದ ಬಹಳಷ್ಟು ಪ್ರಭಾವಿತರಾಗಿದ್ದರು. ಕಾವೇರಿ ನದಿಗೆ ಅಣೆಕಟ್ಟು ಕಟ್ಟುವಲ್ಲಿ ಅವರು ತಿರುಚನಾಪಳ್ಳಿಯಲ್ಲಿ ಚೋಳ ರಾಜರಿಂದ ನಿರ್ಮಿಸಲ್ಪಟ್ಟ ಹಾಗೂ ೧೮ನೇ ಶತಮಾನದ ಅರ್ಧದಲ್ಲಿ ಅರ್ಥರ್ ಕಾಟನ್ ರವರಿಂದ ಸಂಪೂರ್ಣವಾಗಿ ನವೀಕರಿಸಲ್ಪಟ್ಟ ಬೃಹತ್ ಅಣೆಕಟ್ಟು [ಗ್ರಾಂಡ್ ಅಣಿಕಟ್] ನ್ನು ನೋಡಿ ಪ್ರಭಾವಿತರಾಗಿದ್ದರು. ನಂತರ ಮಹಾರಾಜರಲ್ಲಿ ಇದನ್ನು ವರದಿ ಮಾಡಿದ್ದರು. ಅಣೆಕಟ್ಟುಗಳಲ್ಲಿ ಉಪಯೋಗಿಸಲಾಗುವ 'ಸ್ವಯಂಚಾಲಿತ ಫ್ಲಡ್ ಗೇಟ್ ವಿನ್ಯಾಸ' ವೂಂದನ್ನು ಕಂಡು ಹಿಡಿದು ಅದಕ್ಕಾಗಿ 'ಪೇಟೆಂಟ್' ಪಡೆದರು. ಮೊದಲ ಬಾರಿಗೆ ೧೯೦೩ ರಲ್ಲಿ ಈ ಫ್ಲಡ್ ಗೇಟ್ ಗಳು ಪುಣೆಯ 'ಖಡಕ್ವಾಸ್ಲಾ' ಅಣೆಕಟ್ಟಿನಲ್ಲಿ ಸ್ಥಾಪಿತವಾದವು. ಇಲ್ಲಿ ಅವು ಯಶಸ್ವಿಯಾದ ನಂತರ 'ಗ್ವಾಲಿಯರ್ ನ ಟಿಗ್ರಾ ಅಣೆಕಟ್ಟು' ಮತ್ತು ಕರ್ನಾಟಕದ 'ಕೃಷ್ಣರಾಜಸಾಗರ' ಅಣೆಕಟ್ಟುಗಳಲ್ಲಿ ಸಹ ಉಪಯೋಗಿತವಾದವು. ಈ ಗೇಟ್ ಗಳ ಉದ್ದೇಶ ಅಣೆಕಟ್ಟಿಗೆ ಹಾನಿ ಮಾಡದೆ ಗರಿಷ್ಠ ಮಟ್ಟದ ನೀರನ್ನು ಶೇಖರಿಸಿಡುವುದೇ ಆಗಿತ್ತು. ಕೃಷ್ಣರಾಜ ಸಾಗರವನ್ನು ಅವರು ಕಟ್ಟಿಸಿದಾಗ ಅದು ಆ ಕಾಲಕ್ಕೆ ಭಾರತದ ಬಹುದೊಡ್ದ ಅಣೆಕಟ್ಟು. ವಿಶ್ವೇಶ್ವರಯ್ಯನವರು ದೇಶಾದ್ಯ೦ತ ಪ್ರಸಿದ್ದರಾದುದು ಹೈದರಾಬಾದ್ ನಗರವನ್ನು ಪ್ರವಾಹದಿ೦ದ ರಕ್ಷಿಸಲು ಅವರು ಅನುಸರಿಸಿದ ಕ್ರಮಗಳು. ಇದರಿ೦ದ ಅಪಾರವಾದಷ್ಟು ನಷ್ಟವನ್ನು ಅವರು ರಕ್ಷಿಸಿದರು.