ಸದಸ್ಯ:Devadiga Reethika s/sandbox
ಬಸವೇಶ್ವರ
ಶ್ರೀ ಬಸವೇಶ್ವರ (ಶ್ರೀ ಬಸವ ಅಥವಾ ಬಸವಣ್ಣನವರು) ಲಿಂಗಾಯತ ಧರ್ಮದ ಸ್ಥಾಪಕರು. ಬಸವಣ್ಣನವರು ೧೨ ನೆಯ ಶತಮಾನದ ಭಕ್ತಿ ಪಂಥದ ಪ್ರಮುಖರಲ್ಲಿ ಒಬ್ಬರು. ಬಸವಣ್ಣನವರು ಮತ್ತು ಶಿವಶರಣರಾದ ಅಲ್ಲಮಪ್ರಭು, ಅಕ್ಕಮಹಾದೇವಿ, ಚೆನ್ನಬಸವಣ್ಣ ವೊದಲಾದ ನೂರಾರು ಶರಣರು ವಚನಗಳ ಮೂಲಕ ಭಕ್ತಿಪಥ ಮತ್ತು ಜೀವನದ ಬಗ್ಗೆ ಹೊಸ ದೃಷ್ಟಿ ಬೀರಿದರು.
ಬಸವಣ್ಣನವರು ೧೧೩೪ ರಲ್ಲಿ ಈಗಿನ ಬಿಜಾಪುರ ಜಿಲ್ಲೆಯಲ್ಲಿರುವ ಬಸವನ ಬಾಗೇವಾಡಿ ಗ್ರಾಮದಲ್ಲಿ (ಬಸವಣ್ಣನವರ ತಾಯಿಯ ತವರು ಮನೆಯಾದ ಇಂಗಳೇಶ್ವರ ಗ್ರಾಮದಲ್ಲಿ ಜನಿಸಿದರು ಎಂಬ ಪ್ರತೀತಿ ಇದೆ.), ಶ್ರೀ ಮಾದರಸ ಮತ್ತು ಮಾದಲಾಂಬಿಕೆ ದಂಪತಿಗಳಿಗೆ ಜನಿಸಿದರು. ಬಸವಣ್ಣ ಚಿಕ್ಕಂದಿನಿಂದಲೂ ವೈದಿಕ ಸಂಸ್ಕೃತಿಯ ಕರ್ಮಾಚರಣೆಗಳ ವಿರೋಧಿಯಾಗಿದ್ದರು. ಅಕ್ಕ ನಾಗಮ್ಮ ಮತ್ತು ಭಾವ ಶಿವಸ್ವಾಮಿಯ ಜೊತೆಯಲ್ಲಿ ಬಾಲ್ಯವನ್ನು ಕಳೆದರು. ಅವರ ೮ನೇ ವಯಸ್ಸಿನಲ್ಲಿ ಬ್ರಾಹ್ಮಣ ಸಂಪ್ರದಾಯದಂತೆ ಬಸವಣ್ಣನವರಿಗೆ ಜನಿವಾರ ಹಾಕಲು ಬಂದಾಗ, ಬಸವಣ್ಣನವರು ತನಗಿಂತ ಹಿರಿಯಳಾದ ಅಕ್ಕ ನಾಗಮ್ಮನಿಗೆ ಕೊಡಲು ಕೇಳುತ್ತಾನೆ, ಆಗ ಇದು ಪುರುಷರಿಗೆ ಮಾತ್ರ ಕೊಡುವಂತಹುದು ಆದ್ದರಿಂದ ಅಕ್ಕನಿಗೆ ಕೊಡಲು ಬರುವುದಿಲ್ಲ ಅಂತ ನುಡಿದಾಗ, ಬಸವಣ್ಣ ಪುರುಷ/ಮಹಿಳೆ ಅಸಮಾನತೆಯನ್ನು ವಿರೋಧಿಸಿ ಮನೆಯಿಂದ ನಿರ್ಗಮಿಸಿ ಕೂಡಲಸಂಗಮಕ್ಕೆ ಹೊರಡುತ್ತಾರೆ