ಸದಸ್ಯ:Gladson alloy/sandbox

ವಿಕಿಪೀಡಿಯ ಇಂದ
Jump to navigation Jump to search

ಬಾಲ್ಯ[ಬದಲಾಯಿಸಿ] ಉತ್ತರ ಗುಜರಾತಿನ ಮಹೆಸಾನ ಜಿಲ್ಲೆ (મહેસાણા જિલ્લો)ಯ ವಿದ್ ನಗರ ನರೇಂದ್ರ ಮೋದಿ,[೫] ಪರಿವಾರದಲ್ಲಿ ೪ ಮಕ್ಕಳ ಪೈಕಿ ಮೂರನೆಯವರಾಗಿ, ೧೭ ಸೆಪ್ಟೆಂಬರ್ ೧೯೫೦ ರಲ್ಲಿ ಅತ್ಯಂತ ಹಿಂದುಳಿದ 'ಮೋಧ್ ಗಂಜಿ ತೇಲಿ' (ಗಾಣಿಗ) ಜಾತಿಯ ಅತಿ ಬಡ ಕುಟುಂಬದಲ್ಲಿ ಜನಿಸಿದರು. ತಂದೆ, 'ದಾಮೋದರ ದಾಸ್ ಮುಲಚಂದ್ ಮೋದಿ', ಮತ್ತು ತಾಯಿ, 'ಹೀರಾ ಬೆನ್'.'ದಾಮೋದರ್ ದಾಸ್',

ಶಿಕ್ಷಣ[ಬದಲಾಯಿಸಿ] ಚಿಕ್ಕಂದಿನಿಂದಲೇ ಹಲವಾರು ಕಷ್ಟ ಕೋಟಲೆಗಳನ್ನು ಸಮರ್ಥವಾಗಿ ಎದುರಿಸಬೇಕಾಯಿತು. ಆದರೆ ಅಡೆತಡೆಗಳನ್ನು ಅತ್ಯಂತ ಸಮರ್ಥವಾಗಿ ನಿಭಾಯಿಸಿದರು. ಕೇವಲ ವ್ಯಕ್ತಿತ್ವದ ಶಕ್ತಿ ಮತ್ತು ಧೈರ್ಯದಿಂದಲೇ ಸವಾಲುಗಳನ್ನು ಅವಕಾಶಗಳನ್ನಾಗಿ ಅವರು ಬದಲಿಸುತ್ತಿದ್ದರು. ಆದರಲ್ಲೂ ಕಾಲೇಜು ಹಾಗೂ ಉನ್ನತ ಶಿಕ್ಷಣಕ್ಕಾಗಿ ವಿಶ್ವವಿದ್ಯಾಲಯ ಸೇರಿದಾಗ ಇನ್ನಷ್ಟು ಕಠಿಣ ಹಾದಿಯಲ್ಲಿ ಮೋದಿ ಸಾಗಬೇಕಾಯಿತು. ಬದುಕೆಂಬ ಯುದ್ಧದಲ್ಲಿ ನೈಜ ಸೈನಿಕನಂತೆ ಹೋರಾಟ ನಡೆಸಿಕೊಂಡು ಬಂದರು. ಸೋಲುವುದು, ಹಿಂಜರಿಕೆ ವಿರುದ್ಧ ಪ್ರಬಲವಾಗಿ ಮುನ್ನುಗ್ಗುತ್ತಿದ್ದರು. ಅವರು ರಾಜಕೀಯ ವಿಜ್ಞಾನದಲ್ಲಿ ಸ್ನಾತಕೋತ್ತರ ಪದವಿ ಪಡೆದರು. ಭಾರತದ ಸಾಮಾಜಿಕ ಮತ್ತು ಸಾಂಸ್ಕೃತಿಕ ಅಭಿವೃದ್ಧಿಯನ್ನು ಗಮನದಲ್ಲಿಟ್ಟುಕೊಂಡು ಅವರು ರಾಷ್ಟ್ರೀಯ ಸ್ವಯಂಸೇವಕ ಸಂಘದೊಡನೆ ತಮ್ಮ ಸಾಂಗತ್ಯವನ್ನು ಆರಂಭಿಸಿದರು. ಆರೆಸ್ಸೆಸ್ ನಲ್ಲಿದ್ದಾಗ ಮೋದಿ ಅವರು ಹಲವಾರು ಮಹತ್ವದ ಕಾರ್ಯಗಳನ್ನು ಕೈಗೊಂಡರು. ಪ್ರಮುಖವಾಗಿ ೧೯೭೪ರಲ್ಲಿ ನವನಿರ್ಮಾಣ ಭ್ರಷ್ಟಾಚಾರ ವಿರೋಧಿ ಚಳವಳಿ ಹಾಗೂ ನಾಗರಿಕರ ಮೂಲಭೂತ ಹಕ್ಕುಗಳನ್ನು ಕಿತ್ತುಕೊಂಡ ೧೯ ತಿಂಗಳ (ಜೂನ್ ೧೯೭೫ ರಿಂದ ಜನವರಿ ೧೯೭೭) ತುರ್ತುಪರಿಸ್ಥಿತಿ ಹೇರಿಕೆ ಸಂದರ್ಭದಲ್ಲಿ ಕೇಂದ್ರ ಸರ್ಕಾರದ ಸರ್ವಾಧಿಕಾರಿ ಧೋರಣೆಯನ್ನು ವಿರೋಧಿಸಿ ಭೂಗತರಾಗಿಯೇ ಉಳಿದ ಮೋದಿಯವರು ವ್ಯವಸ್ಥೆಯ ವಿರುದ್ಧ ಹೋರಾಟ ನಡೆಸಿದರು.

ರಾಜಕೀಯ ಜೀವನ[ಬದಲಾಯಿಸಿ] ೧೯೮೭ರಲ್ಲಿ ಬಿಜೆಪಿ ಸೇರುವ ಮೂಲಕ ಸಕ್ರಿಯ ರಾಜಕಾರಣಕ್ಕೆ ಮೋದಿ ಧುಮುಕಿದರು. ಪಕ್ಷ ಸೇರಿದ ಒಂದು ವರ್ಷದಲ್ಲೇ ಗುಜರಾತ್ ಬಿಜೆಪಿ ಘಟಕದ ಪ್ರಧಾನ ಕಾರ್ಯದರ್ಶಿಯಾಗಿ ಬಡ್ತಿ ಪಡೆದರು. ಆ ಹೊತ್ತಿಗಾಗಲೆ ಅವರು ಅತ್ಯಂತ ಸಮರ್ಥ ಸಂಘಟನಾಕಾರ ಎಂದು ಎಲ್ಲೆಡೆ ಗುರುತಿಸಿ ಕೊಂಡಿದ್ದರು. ರಾಜಕೀಯವಾಗಿ ಪ್ರಗತಿ ಕಂಡ ಪಕ್ಷದಿಂದ ೧೯೯೦ರಲ್ಲಿ ಸಮ್ಮಿಶ್ರ ಸರ್ಕಾರ ರಚಿಸಲು ಸಾಧ್ಯವಾಯಿತು. ೧೯೮೮ ಮತ್ತು ೧೯೯೫ರ ನಡುವೆ ಗುಜರಾತಿನಲ್ಲಿ ಬಿಜೆಪಿಯನ್ನು ಅಧಿಕಾರಕ್ಕೆ ತರುವ ಮೂಲಕ ನರೇಂದ್ರ ಮೋದಿಯವರು ಮಾಸ್ಟರ್ ತಂತ್ರಗಾರ ಎಂಬ ಹೆಗ್ಗಳಿಕೆಗೆ ಪಾತ್ರ ರಾದರು. ಆ ಅವಧಿಯಲ್ಲಿ ನರೇಂದ್ರ ಮೋದಿ ಅವರಿಗೆ ರಾಷ್ಟ್ರಮಟದಲ್ಲಿ ಎರಡು ಮಹತ್ವದ ಕಾರ್ಯಕ್ರಮಗಳನ್ನು ಆಯೋಜಿಸುವ ಜವಾಬ್ದಾರಿ ನೀಡಲಾಯಿತು. ಎಲ್. ಕೆ. ಅಡ್ವಾಣಿಯವರ ಸೋಮನಾಥದಿಂದ ಅಯೋಧ್ಯಾವರೆಗಿನ ರಥಯಾತ್ರೆ (ಅತಿ ದೊಡ್ಡ ಯಾತ್ರೆ) ಮತ್ತು ದಕ್ಷಿಣದ ತುದಿಯಲ್ಲಿರುವ ಕನ್ಯಾಕುಮಾರಿ(ದಕ್ಷಿಣ ಭಾರತ ತುತ್ತತುದಿ)ಯಿಂದ ಉತ್ತರದ ತುದಿಯಲ್ಲಿರುವ ಕಾಶ್ಮೀರದವರೆಗೆ ಯಾತ್ರೆ ನಡೆಸುವ ಗುರುತರ ಜವಾಬ್ದಾರಿಯನ್ನು ಮೋದಿಯವರು ಹೊತ್ತುಕೊಂಡರು. ೧೯೯೮ರಲ್ಲಿ ನವದೆಹಲಿಯಲ್ಲಿ ಬಿಜೆಪಿ ಅಧಿಕಾರ ಸ್ಥಾಪನೆಗೆ ಮೋದಿ ನಿಭಾಯಿಸಿದ ಇದೇ ಎರಡು ರಥಯಾತ್ರೆಗಳು ಕಾರಣ ಎನ್ನಲಾಗಿದೆ. ೧೯೯೫ರಲ್ಲಿ ಅವರು ರಾಷ್ಟ್ರೀಯ ಕಾರ್ಯದರ್ಶಿಯಾಗಿ ನೇಮಕವಾದ ನರೇಂದ್ರ ಮೋದಿ ಅವರಿಗೆ ಭಾರತದ ಐದು ರಾಜ್ಯಗಳ ಉಸ್ತುವಾರಿಯನ್ನು ನೀಡಲಾಯಿತು. ೧೯೯೮ರಲ್ಲಿ ಪ್ರಧಾನ ಕಾರ್ಯದರ್ಶಿ (ಸಂಘಟನೆ) ಹುದ್ದೆ ಅಲಂಕರಿಸಿದರು. ೨೦೦೧ರ ಅಕ್ಟೋಬರ್ ವರೆಗೂ ಈ ಹುದ್ದೆಯನ್ನು ನಿಭಾಯಿಸಿದರು. ರಾಷ್ಟ್ರ ಮಟ್ಟದಲ್ಲಿ ನರೇಂದ್ರ ಮೋದಿಯವರು ಕರ್ತವ್ಯ ನಿಭಾಯಿಸುತ್ತಿದ್ದಾಗ, ಅತ್ಯಂತ ಸೂಕ್ಷ್ಮ ಮತ್ತು ಪ್ರಮುಖ ರಾಜ್ಯವಾದ ಜಮ್ಮು ಮತ್ತು ಕಾಶ್ಮೀರ, ಮತ್ತು ಅಷ್ಟೇ ಸೂಕ್ಷ್ಮವಾಗಿದ್ದ ಈಶಾನ್ಯ ರಾಜ್ಯಗಳು ಸೇರಿದಂತೆ ಅನೇಕ ರಾಜ್ಯಗಳಲ್ಲಿನ ಪಕ್ಷದ ವ್ಯವಹಾರ ಉಸ್ತುವಾರಿಯನ್ನು ವಹಿಸಲಾಯಿತು. ಅನೇಕ ರಾಜ್ಯಗಳಲ್ಲಿ ಪಕ್ಷದ ಸಂಘಟನಾ ವ್ಯವಸ್ಥೆಯನ್ನು ಪುನರಾಚಿಸಿ ಪಕ್ಷದ ಬಲವರ್ಧನೆಗೆ ಮೋದಿ ಕಾರಣರಾದರು. ರಾಷ್ಟ್ರಮಟ್ಟದಲ್ಲಿ ಕಾರ್ಯನಿರ್ವಹಿಸುವಾಗ ನರೇಂದ್ರ ಮೋದಿ ಅವರು ಪಕ್ಷದ ರಾಷ್ಟ್ರೀಯ ವಕ್ತಾರರಾಗಿ ಅನೇಕ ಸಂದರ್ಭಗಳಲ್ಲಿ ಮಹತ್ವದ ಪಾತ್ರ ವಹಿಸಿದರು. ಈ ಅವಧಿಯಲ್ಲಿ ಮೋದಿ ಅವರು ವಿಶ್ವದಾದ್ಯಂತ ಪ್ರವಾಸ ಮಾಡಿ ವಿವಿಧ ದೇಶದ ಪ್ರಮುಖ ನಾಯಕರನ್ನು ಭೇಟಿ ಮಾಡಿದರು. ಈ ಪ್ರವಾಸ ಅನುಭವ ಹೊಸ ಜಾಗತಿಕ ದೃಷ್ಟಿಕೋನ ಬೆಳೆಸಿಕೊಳ್ಳಲು ಸಹಕಾರಿಯಾಯಿತು.