ಸದಸ್ಯ:H r vaishu/sandbox
ನವರಾತ್ರಿ
[ಬದಲಾಯಿಸಿ]ನವರಾತ್ರಿ ಇದು ದೇವಿಯನ್ನು ಆರಾಧಿಸುವ ಹಿಂದೂ ಧರ್ಮದ ಹಬ್ಬ. ಇದನ್ನು ಕರ್ನಾಟಕದಲ್ಲಿ ದಸರ ಎಂದು ಕರೆಯಲಾಗುತ್ತದೆ. ಪಶ್ಚಿಮ ಬಂಗಾಳದಲ್ಲಿ ಈ ಹಬ್ಬವನ್ನು ದುರ್ಗಾ ಪೂಜಾ ಎಂದು ಆಚರಿಸಲಾಗುತ್ತದೆ. ನವರಾತ್ರಿಯೆಂದರೆ ಒಂಬತ್ತು (ನವ) ರಾತ್ರಿಗಳು, ದೇವಿಯ ಒಂಬತ್ತು ವಿಧದ ರೂಪಗಳನ್ನು ಆರಾಧಿಸಲಾಗುತ್ತದೆ. ಹತ್ತನೇಯ ದಿನ 'ವಿಜಯ ದಶಮಿ', ಈ ದಿನ ಶಮಿವೃಕ್ಷಕ್ಕೆ ಪೂಜೆಯನ್ನು ಸಲ್ಲಿಸಿ ಶಮಿ (ಬನ್ನಿ)ಯನ್ನು ವಿನಿಯೋಗ ಮಾಡುವದು ಕರ್ನಾಟಕದ ಆಚರಣೆಯ ಪದ್ಧತಿ. ಇದೇ ದಿನ ಚಿನ್ನದ ಅಂಬಾರಿಯಲ್ಲಿ ಚಾಮುಂಡೇಶ್ವರಿಯ ಮೂರ್ತಿಯ ಮೆರವಣಿಗೆಯು ಮೈಸೂರಿನಲ್ಲಿ ನಡೆಯುತ್ತದೆ. ಮೈಸೂರು ದಸರಾ ಉತ್ಸವವು ಜಗತ್ಪ್ರಸಿದ್ಧಿಯನ್ನು ಪಡೆದಿದೆ. ಈ ಹಬ್ಬವು ಹಿಂದು ಪಂಚಾಂಗದ ಅಶ್ವಯುಜ ಶುದ್ಧ ಪ್ರತಿಪದೆಯ ದಿನ ಪ್ರಾರಂಭವಾಗುತ್ತದೆ. ನವರಾತ್ರಿಯ ವೈಶಿಷ್ಟ್ಯತೆಗಳು ನವರಾತ್ರಿ ಒಂಭತ್ತು ರಾತ್ರಿಗಳ ಸಮೂಹ. ಹಿಂದೆ ಐದು ನವರಾತ್ರಿ ಆಚರಣೆ ವಿಶೇಷವಾಗಿತ್ತು. ಈಗ ಎರಡು ನವರಾತ್ರಿ ವಿಶೇಷವಾಗಿದ್ದು, ಆಚರಣೆಯಲ್ಲಿದೆ. ಒಂದು ಶರನ್ನವರಾತ್ರಿ ಇನ್ನೊಂದು ಚೈತ್ರ ನವರಾತ್ರಿ. ಈಗ ನಾವು ಆಚರಿಸುವುದು ಶರನ್ನವರಾತ್ರಿ. ನವರಾತ್ರಿ ಎಲ್ಲ ಜನರೂ ಆಚರಿಸುವ ಒಂದು ವಿಶಿಷ್ಟವಾದ ಹಬ್ಬ. ಕಾಶ್ಮೀರದಿಂದ ಕನ್ಯಾಕುಮಾರಿವರೆಗೆ ನವರಾತ್ರಿ ಯನ್ನು ವಿಶೇಷವಾಗಿ ಆಚರಿಸಲಾಗುತ್ತದೆ. ಶಕ್ತಿಯ ಆರಾಧನೆ ಈ ಹಬ್ಬದ ವೈಶಿಷ್ಟ್ಯ. ಮಂಗಳವಾರದಿಂದ 9 ದಿನಗಳ ಕಾಲ ಆಚರಿಸುವ ಈ ಪರ್ವಕ್ಕೆ ದುರ್ಗೋತ್ಸವ ಎಂದೂ ಕರೆಯುತ್ತಾರೆ. ವಿಜಯನಗರದ ಅರಸರು ಹಾಗೂ ಮೈಸೂರು ಅರಸರು ಜೈತ್ರಯಾತ್ರೆಯಲ್ಲಿ ಗೆಲುವು ಪಡೆದು ಸಂಭ್ರಮದಿಂದ ನಡೆಸುವ ವಿಶಿಷ್ಟ ಹಬ್ಬ ಎಂಬುದು ಇತಿಹಾಸದ ಉಲ್ಲೇಖ.ಪುರಾಣದ ಪ್ರಕಾರ ಜಗನ್ಮಾತೆ ರಾಕ್ಷಸರನ್ನು ಸಂಹಾರ ಮಾಡಲು ಒಂದೊಂದು ಅವತಾರವೆತ್ತಿ ರಾಕ್ಷಸರನ್ನು ಸಂಹರಿಸಿ ಲೋಕವನ್ನು ಕಾಪಾಡುತ್ತಾಳೆ. ನವರಾತ್ರಿಯ ಒಂದೊಂದು ದಿನವೂ ಬಹಳ ವಿಶೇಷವಾಗಿ ನಿಲ್ಲುತ್ತದೆ. 9 ದಿನಗಳ ಕಾಲ ಆದಿ ಶಕ್ತಿಯನ್ನು ನವ ವಿಧದಲ್ಲಿ ಪೂಜಿಸಲಾಗುತ್ತದೆ.