ಸದಸ್ಯ:Harshitha Harshitha/sandbox

ವಿಕಿಪೀಡಿಯದಿಂದ, ಇದು ಮುಕ್ತ ಹಾಗೂ ಸ್ವತಂತ್ರ ವಿಶ್ವಕೋಶ

ಪಿ.ಲಂಕೇಶ್

ಪಿ.ಲಂಕೇಶ್, ಕನ್ನಡದ ಖ್ಯಾತ ಸಾಹಿತಿಗಳಲ್ಲೊಬ್ಬರು ಹಾಗೂ ಲಂಕೇಶ್ ಪತ್ರಿಕೆಯ ಸ್ಥಾಪಕ ಸಂಪಾದಕರು.[೧] ಕವಿ, ಕಥೆಗಾರ, ಕಾದಂಬರಿಕಾರ, ಅಂಕಣಕಾರ, ನಾಟಕಕಾರ, ನಟ, ನಿರ್ದೇಶಕ -ಹೀಗೆ ಬಹುಮುಖ ವ್ಯಕ್ತಿತ್ವವನ್ನು ಹೊಂದಿದವರು.

ಜನನ, ವಿದ್ಯಾಭ್ಯಾಸ

ಇವರು ಮಾರ್ಚ್ ೮, ೧೯೩೫ ರಂದು ಶಿವಮೊಗ್ಗ ಜಿಲ್ಲೆಯ ಕೊನಗವಳ್ಳಿ ಗ್ರಾಮದಲ್ಲಿ ಜನಿಸಿದರು. ಬೆಂಗಳೂರು ಸೆಂಟ್ರಲ್ ಕಾಲೇಜಿನಿಂದ ಬಿ.ಎ. ಪದವಿಯನ್ನು ಹಾಗು ಮೈಸೂರು ವಿಶ್ವವಿದ್ಯಾಲಯದಿಂದ ಎಂ.ಎ. ಇಂಗ್ಲಿಷ್ ಪದವಿಯನ್ನು ಪಡೆದರು. ವೃತ್ತಿ ಜೀವನ

ಶಿವಮೊಗ್ಗದ ಸಹ್ಯಾದ್ರಿ ಕಾಲೇಜಿನಲ್ಲಿ ಆಂಗ್ಲ ಭಾಷೆಯ ಅಧ್ಯಾಪಕರಾಗಿ ವೃತ್ತಿ ಜೀವನ ಪ್ರಾರಂಭಿಸಿದರು.[೨] ೧೯೬೨ರಲ್ಲಿ ಬೆಂಗಳೂರು ವಿಶ್ವವಿದ್ಯಾಲಯದಲ್ಲಿ ಪ್ರಾಧ್ಯಾಪಕರಾದರು. 1979ರ ಸುಮಾರಿಗೆ ಲಂಕೇಶರು ಅಧ್ಯಾಪಕ ವೃತ್ತಿಯನ್ನು ತ್ಯಜಿಸಿ ತಮ್ಮದೆ ಆದ ಲಂಕೇಶ್ ಪತ್ರಿಕೆ ಎಂಬ ವಾರಪತ್ರಿಕೆಯನ್ನು ಪ್ರಾರಂಭಿಸಿದರು. ಲಂಕೇಶ್ ಪತ್ರಿಕೆ

ರಾಜಕೀಯ ಸುದ್ದಿಗಳು, ವಿಮರ್ಶೆಗಳು, ಅಂಕಣಗಳು ಮುಂತಾದ ಅನೇಕ ವೈಶಿಷ್ಟ್ಯಗಳನ್ನು ಒಳಗೊಂಡ ಈ ಟ್ಯಾಬ್ಲಾಯ್ಡ್ ವಾರಪತ್ರಿಕೆ ಜನಪ್ರಿಯವಾಯಿತು. ಹೊಸ ಸಾಹಿತಿಗಳ ಸೃಷ್ಟಿಗೆ ಈ ಪತ್ರಿಕೆ ಕೊಡುಗೆ ನೀಡಿದೆ. ಕನ್ನಡ ಸಾಹಿತ್ಯ ಕ್ಷೇತ್ರದಲ್ಲಿ ಸಕ್ರಿಯವಾಗಿರುವ ಅಬ್ದುಲ್ ರಶೀದ್, ನಟರಾಜ್ ಹುಳಿಯಾರ್, ರವಿಬೆಳಗೆರೆ, ಹೆಚ್.ಎಲ್. ಕೇಶವಮೂರ್ತಿ, ಬಿ.ಚಂದ್ರೇಗೌಡ, ಬಾನು ಮುಸ್ತಾಕ್, ವೈದೇಹಿ, ಸಾರಾ ಅಬೂಬುಕರ್, ಇನ್ನೂ ಅನೇಕರು ಲಂಕೇಶ್ ಪತ್ರಿಕೆಯ ಕೊಡುಗೆ.