ಸದಸ್ಯ:Hrishikesh gowda/sandbox

ವಿಕಿಪೀಡಿಯದಿಂದ, ಇದು ಮುಕ್ತ ಹಾಗೂ ಸ್ವತಂತ್ರ ವಿಶ್ವಕೋಶ

ಭಾರತೀಯ ರೈಲ್ವೆ ಭಾರತ ಸರ್ಕಾರದ, ರೈಲ್ವೇ ಖಾತೆಯ ಅಧೀನದ, ಒಂದು ಇಲಾಖೆ. ಭಾರತ ಉದ್ದಗಲಕ್ಕೂ ಹರಡಿದ ರೈಲು ಮಾರ್ಗಗಳ ನಿರ್ವಹಣೆಯ ಜವಾಬ್ದಾರಿ ಈ ಇಲಾಖೆಯದಾಗಿದೆ. ರೈಲ್ವೇ ಖಾತೆಯ ಮುಖ್ಯಸ್ಥರು ಕ್ಯಾಬಿನೆಟ್ ದರ್ಜೆಯ ಮಂತ್ರಿಯಾಗಿದ್ರೆ, ರೈಲ್ವೇ ಇಲಾಖೆಯ ಆಡಳಿತ ವ್ಯವಸ್ಥೆ ರೈಲ್ವೇ ಮಂಡಳಿಯ ಅಧೀನದಲ್ಲಿದೆ. ಭಾರತದ ಸಂಪೂರ್ಣ ರೈಲು ಸಾಗಾಟದ ಏಕಸ್ವಾಮ್ಯ ಭಾರತೀಯ ರೈಲ್ವೆಯ ಕೈಯಲ್ಲಿದೆ. ಪ್ರತಿ ದಿನ ಸುಮಾರು ಒಂದು ಕೋಟಿ ನಲವತ್ತು ಲಕ್ಷ ಪ್ರಯಾಣಿಕರನ್ನೂ, ಒಂದು ಕೋಟಿ ಟನ್ನಿಗೂ ಹೆಚ್ಚು ಸರಕನ್ನೂ , ಸಾಗಾಟ ಮಾಡುವ ಭಾರತೀಯ ರೈಲ್ವೆಯು ಪ್ಪರಂಚದಲ್ಲಿಯೇ ಅತಿ ದೊಡ್ಡ ಹಾಗೂ ಅತಿ ಚಟುವಟಿಕೆಯ ರೈಲು ಜಾಲಗಳಲ್ಲಿ ಒಂದಾಗಿದೆ[1]. ಭಾರತೀಯರೈಲ್ವೇಯಲ್ಲಿ ೧೬ ಲಕ್ಷ ಜನ ನೌಕರರಿದ್ದು, ಇದು ಪ್ರಪಂಚದಲ್ಲಿಯೇ ಯಾವುದೇ ವಾಣಿಜ್ಯ ಅಥವಾ ಸಾರ್ವಜನಿಕರ ಬಳಕೆಯ ಸೇವಾ ಕ್ಷೇತ್ರದಲ್ಲಿ ಅತಿ ಹೆಚ್ಚು ಎಂದು ಪರಿಗಣಿತವಾಗಿದೆ. ಒಂದೇ ಸಂಸ್ಥೆಯಲ್ಲಿ ಇದಕ್ಕಿಂತ ಹೆಚ್ಚು ಜನರಿರುವುದು ಚೀನಾದ ಸೇನೆಯಲ್ಲಿ ಮಾತ್ರಾ ಎಂದೂ ಹೇಳಲಾಗುತ್ತದೆ. ಭಾರತೀಯ ರೈಲ್ವೆಯು ಭಾರತದಾದ್ಯಂತ ೬೩,೧೪೦ ಕಿ. ಮೀಗಳಷ್ಟು ಉದ್ದಕ್ಕೆ ಚಾಚಿಕೊಂಡಿದೆ. ಪ್ರತಿ ದಿನ ೮,೭೦೨ ಪ್ರಯಾಣಿಕ ರೈಲುಗಳನ್ನು ಸೇರಿದಂತೆ, ಒಟ್ಟು , ೧೪,೪೪೪ ರೈಲುಗಳು ಓಡುತ್ತವೆ (೨೦೦೨ರ ಅಂಕಿ ಅಂಶ) ಭಾರತದಲ್ಲಿ ಮೊದಲಬಾರಿಗೆ ರೈಲ್ವೇ ಪದ್ಧತಿಯ ಸ್ಥಾಪನೆಯಾದದ್ದು ೧೮೫೩ರಲ್ಲಿ. ಭಾರತಕ್ಕೆ ೧೯೪೭ರಲ್ಲಿ ಸ್ವಾತಂತ್ರ್ಯ ಬರುವ ವೇಳೆಯಲ್ಲಿ ೪೨ ರೈಲ್ವೇಗಳು ಅಸ್ತಿತ್ವದಲ್ಲಿದ್ದವು. ೧೯೫೧ರಲ್ಲಿ ಇವೆಲ್ಲವನ್ನೂ ರಾಷ್ಟ್ರೀಕರಿಸಿ ಒಂದುಗೂಡಿಸಲಾಯಿತು. ಈ ಮೂಲಕ ಭಾರತೀಯ ರೈಲ್ವೆಯು ಜಗತ್ತಿನಲ್ಲಿಯೇ ಅತಿದೊಡ್ದ ರೈಲ್ವೇಜಾಲಗಳಲ್ಲಿ ಒಂದಾಯಿತು. ರೈಲು ಸಾಗಿ ಬಂದ ಹಾದಿ-ಸಂಕ್ಷಿಪ್ತ ಇತಿಹಾಸ[ಬದಲಾಯಿಸಿ] • ಬಾಂಬೆ ಸರ್ಕಾರದ ಮುಖ್ಯ ಇಂಜಿನಿಯರ್‌ ಜಾರ್ಜ್‌ ಕ್ಲಾರ್ಕ್‌ ಕಲ್ಪನೆ ಕೂಸಾಗಿದ್ದ ಮೊದಲ ರೈಲು 1853ರಲ್ಲಿ ಮುಂಬೈ–ಠಾಣೆ ನಡುವೆ 21 ಮೈಲು ಸಂಚಾರ ನಡೆಸಿತು.

ಮುಂಬೈನ ಬೋರಿ ಬಂದರ್‌¬ನಿಂದ 14 ಬೋಗಿಗಳಲ್ಲಿ 400 ಅತಿಥಿಗಳನ್ನು ಹೊತ್ತ ರೈಲು ಏಪ್ರಿಲ್ 16ರಂದು ಮಧ್ಯಾಹ್ನ 3.30ಕ್ಕೆ ಸಂಚಾರ ಆರಂಭಿಸಿತು. ಅದರ ಸ್ಮರಣಾರ್ಥ 21 ಕುಶಾಲ ತೋಪು ಹಾರಿಸಲಾಗಿತ್ತು. ಸಾರ್ವಜನಿಕರಿಗೆ ಪ್ರಯಾಣಕ್ಕೆ ಈ ರೈಲಿನಲ್ಲಿ ಅವಕಾಶ ಇರದ ಕಾರಣ ಭಾರತದ ಮೊತ್ತ ಮೊದಲ ಪ್ರಯಾಣಿಕರ ರೈಲು ಎಂಬ ಪಟ್ಟದಿಂದ ಇದು ವಂಚಿತವಾಯಿತು. 1854ರ ಆಗಸ್ಟ್‌ 15ರಂದು ಕೋಲ್ಕತ್ತದ ಹೌರಾ ನಿಲ್ದಾಣದಿಂದ ಹೂಗ್ಲಿಗೆ 24 ಮೈಲು ಸಂಚರಿಸಿದ ಈಸ್ಟ್‌ ಇಂಡಿಯಾ ಕಂಪೆನಿಯ ರೈಲು ಭಾರತದ ಮೊದಲ ಪ್ರಯಾಣಿಕರ ರೈಲು ಎಂದು ಇತಿಹಾಸದಲ್ಲಿ ದಾಖಲಾಗಿದೆ. ಅದಾದ ಎರಡು ವರ್ಷಗಳ ನಂತರ ದಕ್ಷಿಣ ಭಾರತದಲ್ಲಿ ಮೊದಲ ಬಾರಿಗೆ ಮದ್ರಾಸ್‌ನಲ್ಲಿ ರೈಲು ಸಂಚಾರ ಆರಂಭವಾಯಿತು. 1856ರಲ್ಲಿ ಮದ್ರಾಸ್ ರೈಲು ಕಂಪೆನಿ ಪ್ರಯಾಣಿಕರ ರೈಲು ವೇಸರಪಾಂಡಿ– ಅರ್ಕಾಟ್‌ ನಡುವೆ 63 ಮೈಲು ಸಂಚರಿಸಿತು. ಇದಾದ ಮೂರು ವರ್ಷಗಳ ನಂತರ ಅಂದರೆ 1859ರಲ್ಲಿ ಉತ್ತರ ಭಾರತ¬ದಲ್ಲಿ ಮೊದಲ ರೈಲು ಸಂಚರಿಸಿತು. ಮಾರ್ಚ್‌ 3ರಂದು ಅಲಹಾಬಾದ್‌–ಕಾನ್ಪುರ ನಡುವೆ ಈ ರೈಲು 119 ಮೈಲು ಸಂಚರಿಸಿತು. 1875ರ ಅಕ್ಟೋಬರ್‌ 19ರಂದು ಹಥ್ರಾಸ್‌ ರಸ್ತೆಯಿಂದ ಮಥುರಾ ದಂಡು ರೈಲು ನಿಲ್ದಾಣಕ್ಕೆ ಸಂಚರಿಸಿದ ರೈಲು ಪಶ್ಚಿಮ ಭಾರತದ ಮೊದಲ ರೈಲು ಎಂಬ ಹೆಗ್ಗಳಿಕೆ ಪಡೆದಿದೆ.