ದಕ್ಷಿಣಕನ್ನಡ ಜಿಲ್ಲೆಯನ್ನು ಬಾಚಿ ತಬ್ಬಿಕೊಂಡಂತಿದೆ ಕಾಸರಗೋಡು. ಸುಳ್ಯದಿಂದ ಹರಿದು ಬರುವ ನದಿ ಪಯಸ್ವಿನಿ ಕಾಸರಗೋಡಿನ ಪರಿಸರದಲ್ಲಿ ಹಾದು ‘ಚಂದ್ರಗಿರಿ’ ಎಂಬ ಹೆಸರಿನಿಂದ ಸಾಗುತ್ತದೆ.