ಸದಸ್ಯ:Janardhan619/ನನ್ನ ಪ್ರಯೋಗಪುಟ
ಭಗತ್ ಸಿಂಗ್
[ಬದಲಾಯಿಸಿ](೧೯೦೭–೧೯೩೧) ಭಾರತ ಸ್ವಾತಂತ್ರ್ಯ ಸಂಗ್ರಾಮದ ಕ್ರಾಂತಿಕಾರಿ.ಮಾರ್ಚ್ ೨೩, ೧೯೩೧ ಷಹೀದ್ ಭಗತ್ ಸಿಂಗ್, ರಾಜಗುರು ಮತ್ತು ಸುಖದೇವ್ ಅವರು ದೇಶದ ಸ್ವಾತಂತ್ರ್ಯಕ್ಕಾಗಿ ಪ್ರಾಣ ಅರ್ಪಿಸಿದ ದಿನ. ಕೇವಲ ೨೩ ವರ್ಷದವರಿದ್ದಾಗಲೇ ಭಗತ್ ಸಿಂಗ್ ಮಾಡಿದ ಸಾಧನೆ ಇಂದಿನ ಯುವಜನತೆಗೆ ಇಂದಿಗೂ ಪ್ರೇರಣೆಯಾಗಿದೆ. ಭಾರತ ಕಂಡ ಅಪ್ರತಿಮ ಕ್ರಾಂತಿಕಾರನ ಬಗ್ಗೆ ತಿಳಿಯದವರೇ ಇಲ್ಲ. ಆದರೂ, ಅವರ ಬಗ್ಗೆ ತಿಳಿಯದ ಸಣ್ಣಸಣ್ಣ ಸಂಗತಿಗಳನ್ನು ಐಬಿಎನ್ ಲೈವ್ ದಾಖಲಿಸಿದೆ. ಉತ್ತಮ ನಟರೂ ಆಗಿದ್ದ ಭಗತ್ ಕಾಲೇಜಿನಲ್ಲಿ ಅನೇಕ ನಾಟಕಗಳಲ್ಲಿ ಭಾಗವಹಿಸಿದ್ದರು. ರಾಣಾ ಪ್ರತಾಪ್, ಸಾಮ್ರಾಟ್ ಚಂದ್ರಗುಪ್ತ, ಭಾರತ ದುರ್ದಶ ಮುಂತಾದ ನಾಟಕಗಳಲ್ಲಿನ ಉತ್ತಮ ಅಭಿನಯಕ್ಕಾಗಿ ಶಿಕ್ಷಕರಿಂದ ಮೆಚ್ಚುಗೆ ಗಳಿಸಿದ್ದರು.ಏಪ್ರಿಲ್ ೧೩, ೧೯೧೯ರಂದು ನಡೆದ ಜಲಿಯನ್ ವಾಲಾ ಬಾಗ್ ದುರಂತ ನಡೆದ ದಿನ ಶಾಲೆಯಿಂದ ತಪ್ಪಿಸಿಕೊಂಡ ಹೋದ ಭಗತ್ ಸಿಂಗ್ ದುರಂತ ನಡೆದ ಸ್ಥಳಕ್ಕೆ ಹೋಗಿ ಖಾಲಿ ಬಾಟಲಿಯಲ್ಲಿ ರಕ್ತಸಿಕ್ತವಾಗಿದ್ದ ಮಣ್ಣನ್ನು ತುಂಬಿಕೊಂಡು ಬಂದಿದ್ದ. ನಂತರ ಅದನ್ನು ಪ್ರತಿದಿನವೂ ಪೂಜಿಸುತ್ತಿದ್ದ. ಆಗ ಅವನಿಗೆ ಕೇವಲ ೧೨ ವಯಸ್ಸು.ಚಿಕ್ಕವನಿದ್ದಾಗ ಭಗತ್ ಸಿಂಗ್ ಬ್ರಿಟಿಷರೊಂದಿಗೆ ಹೋರಾಟ ನಡೆಸಲು ಹೊಲಗದ್ದೆಗಳಲ್ಲಿ ಭತ್ತದ ಬದಲು ಬಂದೂಕುಗಳನ್ನು ಬೆಳೆಯಬೇಕೆಂದು ಎಲ್ಲರೆದಿರು ಹೇಳುತ್ತಿದ್ದ. ಲ್ಲೂಕಿನ ಬಂಗಾ ಎಂಬ ಹಳ್ಳಿಯಲ್ಲಿ ಜನಿಸಿದರು. ಅವರ ತಾಯಿ ಶ್ರೀಮತಿ ವಿದ್ಯಾವತಿ ಮತ್ತು ಜೀವ ವಿಮಾ ಕಂಪನಿಯಲ್ಲಿ ಏಜೆಂಟರಾಗಿ ವೃತ್ತಿ ಮಾಡುತ್ತಿದ್ದ ತಂದೆ ಕಿಶನ್ ಸಿಂಗ್. ಭಗತ್ ಮೇಲೆ ಅತೀವ ಪ್ರಭಾವವನ್ನು ಬೀರಿದ್ದವರೆಂದರೆ ಅವರ ಚಿಕ್ಕಪ್ಪ ಅಜಿತ್ ಸಿಂಗ್. ಈಗಾಗಲೇ ಅಜಿತ್ ಸಿಂಗರು ಉಗ್ರ ಭಾಷಣಕಾರರಾಗಿದ್ದು ರೈತರ ನಡುವೆ ಹಲವಾರು ಚಳುವಳಿಗಳನ್ನು ಸಂಘಟಿಸಿ ಬ್ರಿಟೀಷರು ಬಂಧನಕ್ಕೀಡು ಮಾಡಲು ಬಲೆ ನೇಯ್ದಿದ್ದರೂ ಸಿಗದೆ ಅವರಿಗೆ ಚಳ್ಳೆ ಹಣ್ಣು ತಿನ್ನಿಸುತ್ತಿದ್ದರು. ಇದರೊಂದಿಗೆ ಜಲಿಯನ್ ವಾಲಾಬಾಗ್ನಲ್ಲಿ ಬ್ರಿಟೀಷರು ನಡೆಸಿದ ಮಾರಣಹೋಮದಿಂದುಂಟಾದ ರಕ್ತದ ಕೆಂಪು ಕಲೆ ಅವರಲ್ಲಿ ಸ್ವಾತಂತ್ರ್ಯ ಹೋರಾಟದ ಕಿಚ್ಚನ್ನು ಹಬ್ಬಿಸಿ ಮನಸ್ಸಿನಲ್ಲಿ ಹೋರಾಟದ ಚಿತ್ತಾರ ಮೂಡಿಸಿತ್ತು. ಪಂಜಾಬಿನ ಕ್ರಾಂತಿಕಾರಿ ಚಟುವಟಿಕೆಗಳಲ್ಲಿ ನಿರತರಾಗಿದ್ದು, ಲಾಹೋರ್ ಪಿತೂರಿ ಪ್ರಕರಣದಲ್ಲಿ ಪ್ರಮುಖ ಆರೋಪಿಯಾಗಿದ್ದ ಕರ್ತಾರ್ ಸಿಂಗ್ ಸರಭ್ ರವರನ್ನು ೧೯೧೫ ರಲ್ಲಿ ಅವರ ೨೦ ನೇ ವಯಸ್ಸಿನಲ್ಲೇ ನೇಣಿಗೇರಿಸಲಾಗಿತ್ತು. "ರಾಷ್ಟ್ರ ವಿಮೋಚನೆಯೊಂದೇ ನನ್ನ ಗುರಿ. ಯಾವುದೇ ವ್ಯಕ್ತಿ, ರಾಷ್ಟ್ರ, ಧರ್ಮ ಅಥವಾ ಜನಾಂಗದ ಮೇಲೆ ದ್ವೇಷ ಸಾಧಿಸಲು ನಾನಾವುದನ್ನೂ ಮಾಡಿಲ್ಲ. ನನಗೆ ಬೇಕಾಗಿರುವುದೊಂದೆ - ಸ್ವಾತಂತ್ರ್ಯ. ಅದೊಂದೇ ನನ್ನ ಕನಸು" ಎಂ ಸರಭ್ರ ಕೊನೆಗಾಲದ ಮಾತುಗಳು ಅವರಲ್ಲಿ ಕ್ರಾಂತಿಯ ಉದ್ದೀಪನ ಹಚ್ಚಿದ್ದವು. ಇದು ಭಗತ್ರನ್ನು ಮೈನವಿರೇಳಿಸಿ ಸಾವಿಗೇ ಸವಾಲು ಹಾಕುವ ಗುಣವನ್ನು ಮೈಗೂಡುವಂತೆ ಮಾಡಿತ್ತು. [೧]