ಸದಸ್ಯ:Kiran kumari mandela/sandbox
1. ಎಲ್ಲರೂ ಪಾಪಮಾಡಿ ದೇವರ ಮಹಿಮೆಯನ್ನು ಕಳೆದುಕೊಂಡಿ ದ್ದಾರೆ. ತಿಳುವಳಿಕೆಯುಳ್ಳವನು ಇಲ್ಲ, ದೇವರನ್ನು ಹುಡುಕುವವನೂ ಇಲ್ಲ ಕರ್ತನು ಹೇಳುವದೇನಂದರೆ--ನೀವು ನನ್ನ ಸಾಕ್ಷಿಗಳಾಗಿದ್ದೀರಿ; ನಾನೇ ಆತನೆಂದು ನೀವು ತಿಳಿದು ನಂಬಿ ಗ್ರಹಿಸುವ ಹಾಗೆಯೇ ನಾನು ನಿನ್ನನ್ನು ಸೇವಕನನ್ನಾಗಿ ಆರಿಸಿಕೊಂಡಿದ್ದೇನೆ. ನನಗಿಂತ ಮುಂಚೆ ಯೂ ನನ್ನ ನಂತರದಲ್ಲಿಯೂ ಯಾವ ದೇವರೂ ಇರಲಿಲ್ಲ. ನಾನೇ, ನಾನೇ, ಕರ್ತನಾಗಿದ್ದೇನೆ, ನನ್ನ ಹೊರತು ಯಾವ ರಕ್ಷಕನೂ ಇಲ್ಲ. ನಾನು ಭೂಮಿಯನ್ನು ಉಂಟುಮಾಡಿ, ಅದರ ಮೇಲೆ ಮನು ಷ್ಯನನ್ನು ಸೃಷ್ಟಿಸಿದೆನು; ನನ್ನ ಕೈಗಳೇ ಆಕಾಶಗಳನ್ನು ವಿಸ್ತರಿಸಿದವು ಮತ್ತು ನಾನು ಅದರ ಸೈನ್ಯಕ್ಕೆಲ್ಲಾ ಅಪ್ಪಣೆ ಕೊಟ್ಟೆನು. ನಿನ್ನನ್ನು ನಿರ್ಮಾಣ ಮಾಡಿ ಗರ್ಭದಿಂದಲೂ ರೂಪಿಸುತ್ತಾ ಬಂದು ನಿನಗೆ ಸಹಾಯ ಮಾಡುವವನಾದ ಕರ್ತನು ಹೀಗೆನ್ನುತ್ತಾನೆ--ನನ್ನ ಸೇವಕನಾದ ಯಾಕೋಬೇ, ನಾನು ಆದುಕೊಂಡ ಯೆಶುರೂನೇ, ಭಯಪಡಬೇಡ. ನಾನಾಗಿ ನಾನೇ ನನಗೋಸ್ಕರ ನಿನ್ನ ದ್ರೋಹಗಳನ್ನು ಅಳಿಸಿಬಿಡುತ್ತೇನೆ. ನಿನ್ನ ಪಾಪ ಗಳನ್ನು ನನ್ನ ನೆನಪಿನಲ್ಲಿಡೆನು. ಆತನು ತನ್ನ ಸೇವಕನಾದ ದಾವೀದನ ಮನೆತನದಲ್ಲಿ ನಮಗಾಗಿ ರಕ್ಷಣೆಯ ಕೊಂಬನ್ನು ಎತ್ತಿ ದ್ದಾನೆ. ಮನುಷ್ಯನ ಮೂಲಕ ಮರಣವುಂಟಾದ ಕಾರಣ ಮನುಷ್ಯನ ಮೂಲಕವೇ ಸತ್ತವರಿಗೆ ಪುನರುತ್ಥಾನ ವುಂಟಾಗುವದು. ಯಾವ ಪ್ರಕಾರ ಆದಾಮನಲ್ಲಿ ಎಲ್ಲರೂ ಸಾಯುವವರಾದರೋ ಅದೇ ಪ್ರಕಾರ ಕ್ರಿಸ್ತನಲ್ಲಿ ಎಲ್ಲರೂ ಜೀವಿತರಾಗುವರು. ಇಗೋ, ಕರ್ತನು ಭೂಮಿಯ ಅಂತ್ಯದ ವರೆಗೆ ಪ್ರಕಟಿಸಿದ್ದಾನೆ. ಚೀಯೋನಿನ ಕುಮಾ ರಿಯೇ--ಇಗೋ, ನಿನ್ನ ರಕ್ಷಣೆಯು ಬರುತ್ತದೆ; ಆತನ ಬಹುಮಾನವು ಆತನ ಸಂಗಡವೂ ಆತನ ಕೆಲಸವು ಆತನ ಮುಂದೆಯೂ ಅದೆ ಎಂದು ಹೇಳಿರಿ. ಕರ್ತನು ತನ್ನ ಪರಿ ಶುದ್ಧವಾದ ಬಾಹುವನ್ನು ಸಕಲ ಜನಾಂಗಗಳ ಕಣ್ಣು ಗಳಿಗೆ ತೋರಮಾಡಿದ್ದಾನೆ. ಭೂಮಿಯ ಅಂತ್ಯದವ ರೆಲ್ಲಾ ನಮ್ಮ ದೇವರ ರಕ್ಷಣೆಯನ್ನು ನೋಡುವರು. ನನ್ನ ನೀತಿಯು ಸವಿಾಪಿ ಸಿತು; ನನ್ನ ರಕ್ಷಣೆಯು ಹೊರಟಿತು ಮತ್ತು ನನ್ನ ತೋಳುಗಳು ಜನರಿಗೆ ನ್ಯಾಯವನ್ನು ತೀರಿಸುವವು; ದ್ವೀಪಗಳವರು ನನ್ನ ತೋಳಿನ ಮೇಲೆ ಭರವಸವಿಟ್ಟು ನನಗೋಸ್ಕರ ಕಾದುಕೊಂಡಿರುತ್ತಾರೆ. ಅವನು ತನ್ನ ಕೈಕೆಲಸ ವಾದ ಬಲಿಪೀಠಗಳನ್ನು ದೃಷ್ಟಿಸನು ತನ್ನ ಬೆರಳುಗಳು ಮಾಡಿದ್ದನೂಅಥವಾ ತೋಪುಗಳನ್ನೂ ವಿಗ್ರಹ ಗಳನ್ನೂ ನೋಡನು. ಹುಳುವಾದ ಯಾಕೋಬೇ, ಮತ್ತು ಇಸ್ರಾಯೇಲ್ ಜನವೇ, ಭಯಪಡಬೇಡ; ನಾನೇ ನಿನಗೆ ಸಹಾಯ ಮಾಡುತ್ತೇನೆಂದು ಕರ್ತನೂ ನಿನ್ನ ವಿಮೋಚಕನೂ ಇಸ್ರಾಯೇಲಿನ ಪರಿಶುದ್ಧನೂ ಹೇಳುತ್ತಾನಲ್ಲಾ! 2, ಅದೇನಂದರೆ ಕಾಲವು ಪರಿಪೂರ್ಣವಾದ ಯುಗದಲ್ಲಿ ಆತನು ಪರಲೋಕದಲ್ಲಿರುವವುಗಳನ್ನೂ ಭೂ ಲೋಕದಲ್ಲಿರುವವುಗಳನ್ನೂ ಆತನಲ್ಲಿ ಅಂದರೆ ಕ್ರಿಸ್ತನಲ್ಲಿ ಎಲ್ಲವನ್ನು ಒಂದುಗೂಡಿಸಬೇಕೆಂದಿದ್ದನು. ಆತನೊಬ್ಬನೇ ಅಮರತ್ವವುಳ್ಳವನೂ ಯಾರೂ ಸವಿಾಪಿಸಲಾರದಂತ ಬೆಳಕಿನಲ್ಲಿ ವಾಸಿಸುವಾತನೂ ಆಗಿದ್ದಾನೆ; ಯಾವ ಮನುಷ್ಯನೂ ಆತನನ್ನು ಕಾಣಲಿಲ್ಲ; ಯಾರೂ ಕಾಣ ಲಾರರು; ಆತನಿಗೆ ಮಾನವೂ ನಿತ್ಯಾಧಿಕಾರವೂ ಇರಲಿ. ಆಮೆನ್. ಆತನ ಸ್ವಚಿತ್ತದ ಆಲೋಚನೆಗನುಸಾರವಾಗಿ ಎಲ್ಲಾ ಕಾರ್ಯ ಗಳನ್ನು ಸಾಧಿಸುವ ಆತನ ಉದ್ದೇಶದ ಮೇರೆಗೆ ಮೊದಲೇ ನೇಮಿಸಲ್ಪಟ್ಟವರಾದ ನಾವು ಆತನಲ್ಲಿ ಬಾಧ್ಯತೆಯನ್ನು ಸಹ ಹೊಂದಿದೆವು. ಕ್ರಿಸ್ತನ ಮಹಿಮೆಯು ಸ್ತುತಿಸಲ್ಪಡುವಂತೆ ಆತನಲ್ಲಿ ನಾವು ಮೊದಲು ನಂಬಿಕೆಯಿಟ್ಟೆವು. ಅವನು ತನ್ನ ಕೈಕೆಲಸ ವಾದ ಬಲಿಪೀಠಗಳನ್ನು ದೃಷ್ಟಿಸನು ತನ್ನ ಬೆರಳುಗಳು ಮಾಡಿದ್ದನೂಅಥವಾ ತೋಪುಗಳನ್ನೂ ವಿಗ್ರಹ ಗಳನ್ನೂ ನೋಡನು. ಹೇಗೆಂದರೆ--ನೀನು ನನ್ನ ಮಗನು; ನಾನೇ ಈ ಹೊತ್ತು ನಿನ್ನನ್ನು ಪಡೆದಿದ್ದೇನೆ ಎಂತಲೂ ತಿರಿಗಿ--ನಾನು ಅವನಿಗೆ ತಂದೆಯಾಗಿ ರುವೆನು; ಅವನು ನನಗೆ ಮಗನಾಗಿರುವನು ಎಂತಲೂ ಆತನು ತನ್ನ ದೂತರೊಳಗೆ ಯಾರಿಗಾದರೂ ಎಂದಾ ದರೂ ಹೇಳಿದ್ದುಂಟೋ? ಈ ಅಂತ್ಯದಿನಗಳಲ್ಲಿ ನಮ್ಮ ಸಂಗಡ ತನ್ನ ಮಗನ ಮುಖಾಂತರ ಮಾತನಾಡಿದ್ದಾನೆ. ಈತನನ್ನು ಎಲ್ಲಕ್ಕೂ ಬಾಧ್ಯನನ್ನಾಗಿ ನೇಮಿಸಿದನು, ಈತನ ಮೂಲಕವೇ ಲೋಕಗಳನ್ನು ಉಂಟು ಮಾಡಿದನು. ನಾನು ನಮ್ಮ ಕರ್ತನಾದ ಯೇಸು ಕ್ರಿಸ್ತನ ಮೂಲಕ ದೇವರಿಗೆ ಸ್ತೋತ್ರ ಮಾಡುತ್ತೇನೆ; ಹೀಗೆ ನನ್ನಷ್ಟಕ್ಕೆ ನಾನೇ ಮನಸ್ಸಿನಿಂದ ದೇವರ ನಿಯಮಕ್ಕೂ ಶರೀರದಿಂದ ಪಾಪವೆಂಬ ನಿಯಮಕ್ಕೂ ಆಳಾಗಿದ್ದೇನೆ. ಅಯ್ಯೋ, ನಾನು ಎಂಥ ನಿರ್ಗತಿಕನಾದ ಮನುಷ್ಯನು! ಇಂಥ ಮರಣಕ್ಕೆ ಒಳಗಾದ ಈ ದೇಹ ದಿಂದ ನನ್ನನ್ನು ಬಿಡಿಸುವವನು ಯಾರು? ನ್ಯಾಯ ಪ್ರಮಾಣವು ಆತ್ಮೀಕವಾದದ್ದೆಂದು ನಾವು ಬಲ್ಲೆವು; ಆದರೆ ನಾನು ಶರೀರಾಧೀನನೂ ಪಾಪದ ಅಧೀನದಲ್ಲಿ ರುವದಕ್ಕೆ ಮಾರಲ್ಪಟ್ಟವನೂ ಆಗಿದ್ದೇನೆ. ನಾವು ಶರೀರದಲ್ಲಿದ್ದಾಗ ಪಾಪಗಳ ಇಚ್ಛೆಗಳು ನ್ಯಾಯಪ್ರಮಾಣದಿಂದಲೇ ಮರಣಕ್ಕೆ ಫಲಫಲಿಸುವ ದಕ್ಕಾಗಿ ನಮ್ಮ ಅಂಗಗಳಲ್ಲಿ ಯತ್ನಿಸುತ್ತಿದ್ದವು. ಹೀಗೆ ಶರೀರಕ್ಕನುಸಾರ ವಾಗಿ ನಡೆಯದೆ ಆತ್ಮನಿಗನುಸಾರವಾಗಿ ನಡೆಯುವವ ರಾದ ನಮ್ಮಲ್ಲಿ ನ್ಯಾಯಪ್ರಮಾಣದ ನೀತಿಯು ನೆರ ವೇರುವದು. ಆಗ ನಿನ್ನ ಮಾರ್ಗವೂ ನಿನ್ನ ರಕ್ಷಣೆಯ ಸ್ವಸ್ಥತೆಯೂ, ಭೂಮಿಯಲ್ಲಿ, ಎಲ್ಲಾ ಜನಾಂಗಗಳಿಗೆ ತಿಳಿಯಲ್ಪಡು ವದು. ದೇವರು ನಮಗೆ ಕರುಣೆಯುಳ್ಳವನಾಗಿದ್ದು ನಮ್ಮನ್ನು ಆಶೀರ್ವದಿಸಲಿ; ಆತನು ತನ್ನ ಮುಖವನ್ನು ನಮ್ಮ ಮೇಲೆ ಪ್ರಕಾಶಿಸಮಾಡಲಿ. ಸೆಲಾ. ಆರಂಭದಲ್ಲೇ ಹಳೇ ಸಂಗತಿಗಳನ್ನು ನಾನು ಪ್ರಕಟಿಸಿದ್ದೇನೆ. ಅವು ನನ್ನ ಬಾಯಿಂದ ಹೊರಟವು ಮತ್ತು ನಾನು ಅವುಗಳನ್ನು ತೋರಿಸಿದ್ದೇನೆ. ನಾನು ತಟ್ಟನೆ ನಡೆಸಲು ಅವು ನೆರವೇರಿದವು. ಎಲ್ಲಾ ದಿಗಂತಗಳವರೇ, ನನ್ನ ಕಡೆಗೆ ನೋಡಿ ರಕ್ಷಣೆಯನ್ನು ಹೊಂದಿರಿ; ಯಾಕಂದರೆ ನಾನೇ ದೇವರು, ನನ್ನ ಹೊರತು ಯಾರೂ ಇಲ್ಲ. ಆತನೇ ಈಗ ಹೀಗನ್ನುತ್ತಾನೆ--ನೀನು ನನ್ನ ಸೇವಕನಾಗಿ ಮಾಡಬೇಕಾದವುಗಳಲ್ಲಿ ಯಾಕೋಬನ ಕುಲಗಳನ್ನು ಉನ್ನತಪಡಿ ಸುವದೂ ಇಸ್ರಾಯೇಲಿನಲ್ಲಿ ರಕ್ಷಿತರಾದವರನ್ನು ತಿರಿಗಿ ಬರಮಾಡುವದೂ ಅಲ್ಪ ಕಾರ್ಯವೇ; ನನ್ನ ರಕ್ಷಣೆಯು ಲೋಕದ ಕಟ್ಟಕಡೆಯ ವರೆಗೆ ವ್ಯಾಪಿಸುವಂತೆ ನಿನ್ನನ್ನು ಅನ್ಯಜನಾಂಗಗಳಿಗೆ ಬೆಳಕನ್ನಾಗಿ ದಯಪಾಲಿಸುವೆನು. ದೇವರೇ, ನಿನಗೋಸ್ಕರ ಕಾದುಕೊಳ್ಳುವವನಿಗೆ ನೀನು ಮಾಡು ವದನ್ನು, ಲೋಕದ ಉತ್ಪತ್ತಿಗೆ ಮುಂಚೆ ನಿನ್ನ ಹೊರ ತಾಗಿ ಯಾರೂ ಕೇಳಲಿಲ್ಲ ಇಲ್ಲವೆ ಯಾರ ಕಿವಿ ಯಲ್ಲಿಯೂ ಬೀಳಲಿಲ್ಲ, ಯಾರ ಕಣ್ಣು ನೋಡಲಿಲ್ಲಅವರ ಮಧ್ಯದಲ್ಲಿ ಒಂದು ಗುರುತನ್ನಿಟ್ಟು ಅವರಲ್ಲಿ ತಪ್ಪಿಸಿಕೊಂಡವರನ್ನು ಜನಾಂಗಗಳಿಗೂ ತಾರ್ಷೀಷಿಗೂ ಫೂಲಿಗೂ ಲೂದಿಗೂ ಬಿಲ್ಲು ಬೊಗ್ಗಿಸುವವರಿಗೂ ತೂಬಲಿಗೂ ಯಾವಾನಿಗೂ ನನ್ನ ಸಮಾಚಾರವನ್ನು ಕೇಳದೆ ನನ್ನ ಮಹಿಮೆಯನ್ನು ನೋಡದೆ ಇರುವ ದೂರದ ದ್ವೀಪ ಗಳಿಗೂ ಕಳುಹಿಸುವೆನು; ಅವರು ಅನ್ಯಜನಾಂಗಗಳಲ್ಲಿ ನನ್ನ ಮಹಿಮೆಯನ್ನು ತಿಳಿಸುವರು.. ನಾನು ಅವರ ಕ್ರಿಯೆಗಳನ್ನೂ ಅವರ ಆಲೋಚನೆಗಳನ್ನೂ ಬಲ್ಲೆನು. ಎಲ್ಲಾ ಜನಾಂಗ ಗಳನ್ನೂ ಭಾಷೆಯವರನ್ನೂ ಇನ್ನು ಮುಂದೆ ಒಟ್ಟಿಗೆ ಬರಮಾಡುವೆನು; ಆಗ ಅವರು ಬಂದು ನನ್ನ ಮಹಿ ಮೆಯನ್ನು ನೋಡುವರು. ಇದಾದ ಮೇಲೆ ಒಂದು ಅಮಾವಾಸ್ಯೆಯಿಂದ ಇನ್ನೊಂದಕ್ಕೂ ಒಂದು ಸಬ್ಬತ್ತಿನಿಂದ ಇನ್ನೊಂದಕ್ಕೂ ಮನುಷ್ಯರೆಲ್ಲಾ ನನ್ನ ಮುಂದೆ ಆರಾಧಿಸುವದಕ್ಕೆ ಬರುವರೆಂದು ಕರ್ತನು ಹೇಳುತ್ತಾನೆ. ಆದರೆ ನಾವು ಪಾಪಿಗಳಾಗಿದ್ದಾಗಲೂ ಕ್ರಿಸ್ತನು ನಮಗೋಸ್ಕರ ಪ್ರಾಣಕೊಟ್ಟದ್ದರಲ್ಲಿ ದೇವರು ನಮ್ಮ ಮೇಲೆ ತನಗಿರುವ ಪ್ರೀತಿಯನ್ನು ತೋರ್ಪಡಿಸಿದ್ದಾನೆ. ಈಗ ನಾವು ಆತನ ರಕ್ತದಿಂದ ನೀತಿವಂತ ರಾಗಿರಲಾಗಿ ಬರುವ ಕೋಪದಿಂದ ಆತನ ಮೂಲಕ ರಕ್ಷಿಸಲ್ಪಡುವದು ಮತ್ತೂ ನಿಶ್ಚಯವಲ್ಲವೇ. ಆದರೆ ಬರೆಯಲ್ಪಟ್ಟಂತೆ--ಯಾರಿಗೆ ಆತನ ವಿಷಯವಾಗಿ ಹೇಳಲಿಲ್ಲವೋ ಅವರು ನೋಡುವರು; ಯಾರು ಕೇಳಲಿಲ್ಲವೋ ಅವರು ಗ್ರಹಿಸುವರು ಎಂಬದೇ. 2. ಆದರೆ ಕಾಲವು ಪರಿಪೂರ್ಣವಾದಾಗ ದೇವರು ತನ್ನ ಮಗನನ್ನು ಸ್ತ್ರೀಯಿಂದ ಹುಟ್ಟಿದವನನ್ನಾಗಿಯೂ ನ್ಯಾಯ ಪ್ರಮಾಣಕ್ಕೆ ಒಳಗಾದವನನ್ನಾಗಿಯೂ ಮಾಡಿ ಕಳುಹಿಸಿದ್ದಲ್ಲದೆಕ್ರಿಸ್ತನಲ್ಲಿಯೇ ದೈವತ್ವ ಸರ್ವಸಂಪೂರ್ಣತೆಯು ಶಾರೀ ರಕವಾಗಿ ವಾಸಮಾಡುತ್ತದೆ. ನನ್ನ ಚಿಕ್ಕಮಕ್ಕಳೇ, ನೀವು ಪಾಪಮಾಡ ದಂತೆ ಇವುಗಳನ್ನು ನಾನು ನಿಮಗೆ ಬರೆಯು ತ್ತೇನೆ. ಯಾವನಾದರೂ ಪಾಪಮಾಡಿದರೆ ತಂದೆಯ ಬಳಿಯಲ್ಲಿ ನೀತಿವಂತನಾದ ಯೇಸು ಕ್ರಿಸ್ತನು ನಮಗೆ ಪಕ್ಷವಾದಿಯಾಗಿದ್ದಾನೆ. ಆತನು ನಮ್ಮ ಪಾಪಗಳಿಗಾಗಿ ಪ್ರಾಯಶ್ಚಿತ್ತವಾಗಿದ್ದಾನೆ; ನಮ್ಮ ಪಾಪಗಳಿಗೆ ಮಾತ್ರ ವಲ್ಲದೆ ಸಮಸ್ತ ಲೋಕದ ಪಾಪಗಳಿಗಾಗಿಯೂ ಪ್ರಾಯಶ್ಚಿತ್ತವಾಗಿದ್ದಾನೆ. ಆತನು ಬೆಳಕಿನಲ್ಲಿರು ವಂತೆಯೇ ನಾವೂ ಬೆಳಕಿನಲ್ಲಿ ನಡೆದರೆ ನಾವು ಒಬ್ಬರ ಸಂಗಡಲೊಬ್ಬರು ಅನ್ಯೋನ್ಯತೆಯಲ್ಲಿದ್ದೇವೆ; ಆತನ ಮಗನಾದ ಯೇಸುಕ್ರಿಸ್ತನ ರಕ್ತವು ನಮ್ಮನ್ನು ಸಕಲ ಪಾಪದಿಂದ ಶುದ್ಧಿಮಾಡುತ್ತದೆ. ಆಗ ಆತನು ಅವರಿಗೆ--ಇದು ಬಹು ಜನರಿಗೋಸ್ಕರ ಸುರಿಸಲ್ಪಡುವ ಹೊಸಒಡಂಬಡಿಕೆಯ ನನ್ನ ರಕ್ತ. ನಾವು ಅಶಕ್ತರಾಗಿದ್ದಾಗಲೇ ಕ್ರಿಸ್ತನು ನೇಮಿತ ಕಾಲ ದಲ್ಲಿ ಭಕ್ತಿಹೀನರಿಗೋಸ್ಕರ ಪ್ರಾಣಕೊಟ್ಟನು. ನಮ್ಮ ಸುದ್ಧಿಯನ್ನು ಯಾರು ನಂಬಿದ್ದಾರೆ? ಕರ್ತನ ತೋಳು ಯಾರಿಗೆ ಪ್ರಕಟವಾ ಯಿತು? ಆತನು ಚಿಗುರಿನಂತೆಯೂ ಒಣನೆಲದಿಂದ ಹುಟ್ಟಿಬರುವ ಬೇರಿನಂತೆಯೂ ಆತನ ಮುಂದೆ ಬೆಳೆ ಯುವನು. ಆತನಿಗೆ ಯಾವ ರೂಪವಾಗಲಿ ಅಂದವಾ ಗಲಿ ಇರಲಿಲ್ಲ; ನಾವು ಆತನನ್ನು ನೋಡಿದಾಗ ಅಲ್ಲಿ ನಾವು ಅಪೇಕ್ಷಿಸುವಂಥ ಯಾವ ಚಂದವೂ ಇರಲಿಲ್ಲ. ಆತನು ಮನುಷ್ಯರಿಂದ ತಳ್ಳಲ್ಪಟ್ಟವನೂ ತಿರಸ್ಕರಿಸ ಲ್ಪಟ್ಟವನೂ ದುಃಖಿತ ಮನುಷ್ಯನೂ ಕಷ್ಟವನ್ನು ಅರಿತ ವನೂ; ನಾವು ನಮ್ಮ ಮುಖಗಳನ್ನು ಆತನಿಂದ ಮರೆ ಮಾಡಿಕೊಳ್ಳುವ ಹಾಗೆ ಧಿಕ್ಕರಿಸಲ್ಪಟ್ಟವನೂ ಆಗಿದ್ದನು. ನಾವು ಆತನನ್ನು ಲಕ್ಷಕ್ಕೆ ತರಲಿಲ್ಲ. ನಿಶ್ಚಯವಾಗಿಯೂ ಆತನು ನಮ್ಮ ಸಂಕಟಗಳನ್ನು ಸಹಿಸಿಕೊಂಡು ನಮ್ಮ ದುಃಖಗಳನ್ನು ಹೊತ್ತನು; ಆದರೂ ನಾವು ಆತನನ್ನು ಪೆಟ್ಟು ತಿಂದವನು, ದೇವರಿಂದ ಹೊಡೆಯಲ್ಪಟ್ಟವನು, (ಶಿಕ್ಷಿಸಲ್ಪಟ್ಟವನು) ಹಿಂಸಿಸಲ್ಪಟ್ಟವನು ಎಂದು ಭಾವಿಸಿ ಕೊಂಡೆವು. ನಮ್ಮ ದ್ರೋಹಗಳ ನಿಮಿತ್ತ ಆತನಿಗೆ ಗಾಯವಾಯಿತು, ನಮ್ಮ ದುಷ್ಕೃತ್ಯಗಳ ನಿಮಿತ್ತ ಆತನು ಜಜ್ಜಲ್ಪಟ್ಟನು; ನಮ್ಮ ಸಮಾಧಾನಕ್ಕೆ ಕಾರಣವಾದ ಶಿಕ್ಷೆಯು ಆತನ ಮೇಲೆ ಬಿತ್ತು; ಆತನ ಬಾಸುಂಡೆ ಗಳಿಂದ ನಮಗೆ ಸ್ವಸ್ಥವಾಯಿತು. ಆದರೆ ಕ್ರಿಸ್ತನು ಬರಬೇಕಾಗಿದ್ದ ಮೇಲುಗಳ ಕುರಿತು ಮಹಾಯಾಜಕನಾಗಿ ಬಂದು ಕೈಯಿಂದ ಕಟ್ಟಲ್ಪಡದಂಥ ಅಂದರೆ ಈ ಕಟ್ಟಡಕ್ಕೆ ಸಂಬಂಧವಾ ಗಿರದೆ ಶ್ರೇಷ್ಠವಾಗಿಯೂ ಪರಿಪೂರ್ಣವಾಗಿಯೂ ಇರುವ ಗುಡಾರದ ಮೂಲಕ ಹೋತಗಳ ಮತ್ತು ಕರುಗಳ ರಕ್ತವನ್ನು ತೆಗೆದುಕೊಳ್ಳದೆ ತನ್ನ ಸ್ವಂತ ರಕ್ತವನ್ನೇ ತೆಗೆದುಕೊಂಡು ನಮಗೋಸ್ಕರ ನಿತ್ಯವಿಮೋಚನೆಯನ್ನು ಸಂಪಾದಿಸಿಕೊಂಡವನಾಗಿ ಒಂದೇ ಸಾರಿ ಪರಿಶುದ್ಧ ಸ್ಥಳದೊಳಗೆ ಪ್ರವೇಶಿಸಿದನು. 3. ದೇವರು ಆತ್ಮನಾಗಿದ್ದಾನೆ; ಆತನನ್ನು ಆರಾಧಿಸುವ ವರು ಆತ್ಮದಿಂದಲೂ ಸತ್ಯದಿಂದಲೂ ಆರಾಧಿಸತಕ್ಕದ್ದು ಅಂದನು. ಅದಕ್ಕೆ ಯೆಹೋ ಶುವನು ಜನರಿಗೆ--ನೀವು ಕರ್ತನನ್ನು ಸೇವಿಸಲಾರಿರಿ; ಯಾಕಂದರೆ ಆತನು ಪರಿಶುದ್ಧನಾದ ದೇವರು, ರೋಷ ವುಳ್ಳ ದೇವರು; ಆತನು ನಿಮ್ಮ ದ್ರೋಹಗಳನ್ನೂ ಪಾಪಗಳನ್ನೂ ಮನ್ನಿಸನು. ಯಾಕಂದರೆ ನಮ್ಮ ದೇವರು ದಹಿಸುವ ಅಗ್ನಿಯಾಗಿದ್ದಾನೆ. ಭೂಪರಲೋಕ ಗಳಲ್ಲಿರುವ ದೃಶ್ಯಾದೃಶ್ಯವಾದವುಗಳೆಲ್ಲವೂ ಸಿಂಹಾಸನ ಗಳಾಗಲಿ ಇಲ್ಲವೆ ಪ್ರಭುತ್ವಗಳಾಗಲಿ ಇಲ್ಲವೆ ದೊರೆ ತನಗಳಾಗಲಿ ಇಲ್ಲವೆ ಅಧಿಕಾರಗಳಾಗಲಿ ಆತನಲ್ಲಿ ಸೃಷ್ಟಿಸಲ್ಪಟ್ಟವು. ಸರ್ವವು ಆತನಿಂದಲೂ ಆತನಿ ಗೋಸ್ಕರವಾಗಿಯೂ ಸೃಷ್ಟಿಸಲ್ಪಟ್ಟಿತುಆತನಲ್ಲಿ ಸರ್ವ ಸಂಪೂರ್ಣತೆಯು ವಾಸವಾಗಿರುವದು ತಂದೆಗೆ ಇಷ್ಟ ವಾಗಿತ್ತು. ಆತನ ಶಿಲುಬೆಯ ರಕ್ತದಿಂದ ತಾನು ಸಮಾಧಾನವನ್ನು ಉಂಟುಮಾಡಿ ಆತನಿಂದ ಭೂಪರ ಲೋಕಗಳಲ್ಲಿರುವ ಎಲ್ಲವುಗಳನ್ನು ಆತನ ಮೂಲಕ ತನಗೆ ಸಂಧಾನಪಡಿಸಿಕೊಂಡನು. ಈ ಕಾರಣದಿಂದ ದೇವರು ಆತನನ್ನು ಅತ್ಯುನ್ನತವಾಗಿ ಏರಿಸಿ ಎಲ್ಲಾ ಹೆಸರುಗಳಿಗಿಂತ ಉನ್ನತವಾದ ಹೆಸರನ್ನು ಆತನಿಗೆ ದಯಪಾಲಿಸಿದ್ದಾನೆ. ಈ ಕಾರಣದಿಂದ ದೇವರು ಆತನನ್ನು ಅತ್ಯುನ್ನತವಾಗಿ ಏರಿಸಿ ಎಲ್ಲಾ ಹೆಸರುಗಳಿಗಿಂತ ಉನ್ನತವಾದ ಹೆಸರನ್ನು ಆತನಿಗೆ ದಯಪಾಲಿಸಿದ್ದಾನೆ. ಯಾಕಂದರೆ ಕ್ರಿಸ್ತನು ನಿಜವಾದವುಗಳಿಗೆ ಸಾಮ್ಯ ವಾಗಿದ್ದು ಕೈಯಿಂದ ಕಟ್ಟಿದ್ದ ಪರಿಶುದ್ಧ ಸ್ಥಳಗಳಲ್ಲಿ ಪ್ರವೇಶಿಸದೆ ದೇವರ ಸಮ್ಮುಖದಲ್ಲಿ ನಮಗೋಸ್ಕರ ಈಗ ಕಾಣಿಸಿಕೊಳ್ಳು ವದಕ್ಕೆ ಪರಲೋಕದಲ್ಲಿಯೇ ಪ್ರವೇಶಿಸಿದನು. ಆದರೆ ಕ್ರಿಸ್ತನು ಬರಬೇಕಾಗಿದ್ದ ಮೇಲುಗಳ ಕುರಿತು ಮಹಾಯಾಜಕನಾಗಿ ಬಂದು ಕೈಯಿಂದ ಕಟ್ಟಲ್ಪಡದಂಥ ಅಂದರೆ ಈ ಕಟ್ಟಡಕ್ಕೆ ಸಂಬಂಧವಾ ಗಿರದೆ ಶ್ರೇಷ್ಠವಾಗಿಯೂ ಪರಿಪೂರ್ಣವಾಗಿಯೂ ಇರುವ ಗುಡಾರದ ಮೂಲಕ ಹೋತಗಳ ಮತ್ತು ಕರುಗಳ ರಕ್ತವನ್ನು ತೆಗೆದುಕೊಳ್ಳದೆ ತನ್ನ ಸ್ವಂತ ರಕ್ತವನ್ನೇ ತೆಗೆದುಕೊಂಡು ನಮಗೋಸ್ಕರ ನಿತ್ಯವಿಮೋಚನೆಯನ್ನು ಸಂಪಾದಿಸಿಕೊಂಡವನಾಗಿ ಒಂದೇ ಸಾರಿ ಪರಿಶುದ್ಧ ಸ್ಥಳದೊಳಗೆ ಪ್ರವೇಶಿಸಿದನು. ಈ ಕಾರಣದಿಂದ ಮೊದಲನೇ ಒಡಂಬಡಿಕೆಯ ಅಧೀನದಲ್ಲಿದ್ದ ಅಕ್ರಮಗಳ ವಿಮೋಚನೆಗಾಗಿ ಕರೆಯಲ್ಪ ಟ್ಟವರು ನಿತ್ಯಬಾಧ್ಯತೆಯ ವಾಗ್ದಾನವನ್ನು ಹೊಂದು ವದಕ್ಕೆ ಮರಣದ ಮೂಲಕ ಆತನು ಹೊಸ ಒಡಂಬಡಿ ಕೆಗೆ ಮಧ್ಯಸ್ಥನಾಗಿದ್ದಾನೆ. ಮರಣಶಾಸನವು ಇರುವಲ್ಲಿ ಅದನ್ನು ಬರೆಯಿಸಿದವನ ಮರಣವಾಗುವದು ಅವಶ್ಯ. ಜನರ ಮರಣದ ನಂತರ ಮರಣ ಶಾಸನವು ನಡೆ ಯುವದೇ ಹೊರತು ಬರೆಯಿಸಿದವನು ಜೀವದಿಂದಿರು ವಾಗ ಎಂದಿಗೂ ಪರಿಣಾಮಕರವಾಗಿರುವದೇ ಇಲ್ಲ. ಇದ ಲ್ಲದೆ ಮಹಾಯಾಜಕನು ವರುಷ ವರುಷವೂ ಅನ್ಯರಕವನ್ನು ತೆಗೆದುಕೊಂಡು ಪರಿಶುದ್ಧ ಸ್ಥಳದಲ್ಲಿ ಪ್ರವೇಶಿಸುವ ಪ್ರಕಾರ ಆತನು ತನ್ನನ್ನು ಅನೇಕ ಸಾರಿ ಸಮರ್ಪಿಸುವದಕ್ಕೆ ಪ್ರವೇಶಿಸಲಿಲ್ಲ. ಹಾಗೆ ಸಮರ್ಪಿಸಬೇಕಾಗಿದ್ದ ಪಕ್ಷದಲ್ಲಿ ಆತನು ಲೋಕದ ಅಸ್ತಿವಾರದಿಂದ ಅನೇಕ ಸಾರಿ ಬಾಧೆಪಡಬೇಕಾಗಿತ್ತು; ಆದರೆ ಈಗ ಒಂದೇ ಸಾರಿ ಲೋಕಾಂತ್ಯದಲ್ಲಿ ಪಾಪನಿವಾರಣೆ ಮಾಡುವದಕ್ಕೆ ತನ್ನನ್ನು ತಾನೇ ಯಜ್ಞಮಾಡಿಕೊಳ್ಳುವವನಾಗಿ ಪ್ರತ್ಯಕ್ಷ ನಾದನು. ಒಂದೇ ಸಾರಿ ಸಾಯುವದೂ ತರುವಾಯ ನ್ಯಾಯತೀರ್ಪೂ ಮನುಷ್ಯರಿಗೆ ನೇಮಕವಾಗಿದೆ. ನೀನು ಮಣ್ಣಿಗೆ ತಿರುಗುವ ವರೆಗೆ ನಿನ್ನ ಹಣೆಯ ಬೆವರನ್ನು ಸುರಿಸಿ ರೊಟ್ಟಿಯನ್ನು ತಿನ್ನುವಿ. ಯಾಕಂದರೆ ನೀನು ಅದ ರೊಳಗಿಂದ ಅಂದರೆ (ಮಣ್ಣಿನೊಳಗಿಂದ) ತೆಗೆಯ ಲ್ಪಟ್ಟೆ; ನೀನು ಮಣ್ಣಾಗಿದ್ದಿ, ಮಣ್ಣಿಗೆ ತಿರುಗಿಕೊಳ್ಳುವಿ ಅಂದನು.
4. ಹೀಗೆ ಆತನು ಮಗನಾಗಿದ್ದರೂ ತಾನು ಅನುಭ ವಿಸಿದ ಬಾಧೆಗಳಿಂದಲೇ ವಿಧೇಯತೆಯನ್ನು ಕಲಿತು ಕೊಂಡನು. ಇದಲ್ಲದೆ ಸಿದ್ಧಿಗೆ ಬಂದು ತನಗೆ ವಿಧೇಯ ರಾಗಿರುವವರೆಲ್ಲರಿಗೂ ನಿರಂತರವಾದ ರಕ್ಷಣೆಗೆ ಆತನು ಕರ್ತನಾದನು. ಈತನು ದೇವರ ಮಹಿಮೆಯ ಪ್ರಕಾಶವೂ ಆತನ ವ್ಯಕ್ತಿತ್ವದ ಪ್ರತಿರೂಪವೂ ತನ್ನ ಬಲವುಳ್ಳ ವಾಕ್ಯದಿಂದ ಸಮಸ್ತಕ್ಕೆ ಆಧಾರವೂ ಆಗಿದ್ದು ತಾನೇ ನಮ್ಮ ಪಾಪಗಳನ್ನು ತೊಳೆದ ಮೇಲೆ ಉನ್ನತದೊಳಗೆ ಮಹೋನ್ನತನ ಬಲ ಗಡೆಯಲ್ಲಿ ಕೂತುಕೊಂಡನು. 1. ದೇವರು ಲೋಕವನ್ನು ಎಷ್ಟೋ ಪ್ರೀತಿಮಾಡಿ ತನ್ನ ಒಬ್ಬನೇ ಮಗನನ್ನು ಕೊಟ್ಟನು; ಆತನನ್ನು ನಂಬುವ ಯಾವನಾದರೂ ನಾಶವಾಗದೆ ನಿತ್ಯಜೀವ ವನ್ನು ಪಡೆದವನಾಗಿರುವನು. 2, ಪ್ರವಾದಿಯ ಮುಖಾಂತರ ಕರ್ತನು ಹೇಳಿದ ಮಾತು ನೆರವೇರುವಂತೆ ಇದೆಲ್ಲಾ ನಡೆಯಿತು. ಆಕೆಯು ಒಬ್ಬ ಮಗನನ್ನು ಹೆರುವಳು; ನೀನು ಆತನಿಗೆ ಯೇಸು ಎಂದು ಕರೆಯಬೇಕು; ಯಾಕೆಂದರೆ ಆತನು ತನ್ನ ಜನರನ್ನು ಅವರ ಪಾಪಗಳಿಂದ ರಕ್ಷಿಸುವನು ಅಂದನು. 3. ಅದಕ್ಕೆ ಆ ದೂತನು ಪ್ರತ್ಯುತ್ತರವಾಗಿ ಆಕೆಗೆ--ಪವಿತ್ರಾತ್ಮನು ನಿನ್ನ ಮೇಲೆ ಬರುವನು, ಮಹೋನ್ನತನ ಶಕ್ತಿಯು ನಿನ್ನನ್ನು ಆವರಿಸಿ ಕೊಳ್ಳುವದು; ಆದದರಿಂದ ನಿನ್ನಿಂದ ಹುಟ್ಟುವ ಆ ಪವಿತ್ರವಾದ ಶಿಶುವು ದೇವರ ಮಗನೆಂದು ಕರೆಯ ಲ್ಪಡುವನು. 4. ಪಿತೃಗಳು ಇವರಿಗೆ ಸಂಬಂಧಪಟ್ಟವರೇ; ಶರೀರ ಸಂಬಂಧವಾಗಿ ಕ್ರಿಸ್ತನು ಇವರಿಂದಲೇ ಬಂದನು; ಆತನು ಎಲ್ಲಾದರ ಮೇಲೆ ಇರುವಾತನಾಗಿದ್ದು ನಿರಂತರಕ್ಕೂ ಸ್ತುತಿ ಹೊಂದತಕ್ಕ ದೇವರಾಗಿದ್ದಾನೆ. ಆಮೆನ್. ಇಸ್ರಾಯೇಲಿನ ದೇವರಾದ ಕರ್ತನು ಸ್ತುತಿ ಹೊಂದಲಿ, ಯಾಕಂದರೆ ಆತನು ತನ್ನ ಜನರನ್ನು ಸಂಧಿಸಿ ಅವರನ್ನು ವಿಮೋಚಿ ಸಿದ್ದಾನೆ. 5. ಭೂಪರಲೋಕ ಗಳಲ್ಲಿರುವ ದೃಶ್ಯಾದೃಶ್ಯವಾದವುಗಳೆಲ್ಲವೂ ಸಿಂಹಾಸನ ಗಳಾಗಲಿ ಇಲ್ಲವೆ ಪ್ರಭುತ್ವಗಳಾಗಲಿ ಇಲ್ಲವೆ ದೊರೆ ತನಗಳಾಗಲಿ ಇಲ್ಲವೆ ಅಧಿಕಾರಗಳಾಗಲಿ ಆತನಲ್ಲಿ ಸೃಷ್ಟಿಸಲ್ಪಟ್ಟವು. ಸರ್ವವು ಆತನಿಂದಲೂ ಆತನಿ ಗೋಸ್ಕರವಾಗಿಯೂ ಸೃಷ್ಟಿಸಲ್ಪಟ್ಟಿತು 6. ದೇವರು ನಜರೇತಿನ ಯೇಸುವನ್ನು ಪವಿತ್ರಾತ್ಮನಿಂದಲೂ ಬಲದಿಂದಲೂ ಅಭಿಷೇಕಿಸಿದ ನೆಂಬದನ್ನೂ ಹೇಗೆ ಆತನು ಒಳ್ಳೇದನ್ನು ಮಾಡುತ್ತಾ ಸೈತಾನನಿಂದ ಬಾಧಿಸಲ್ಪಡುತ್ತಿರುವವರೆಲ್ಲರನ್ನು ಗುಣ ಮಾಡುತ್ತಾ ಸಂಚರಿಸಿದನೆಂಬದನ್ನು ನೀವು ತಿಳಿದಿದ್ದೀರಿ; ಯಾಕಂದರೆ ದೇವರು ಆತನ ಸಂಗಡ ಇದ್ದನು. ದೇವರಾದ ಕರ್ತನ ಆತ್ಮವು ನನ್ನ ಮೇಲೆ ಅದೆ; ದೀನರಿಗೆ ಶುಭಸಮಾಚಾರವನ್ನು ಸಾರುವದಕ್ಕೆ ಕರ್ತನು ನನ್ನನ್ನು ಅಭಿಷೇಕಿಸಿದ್ದಾನೆ; ಮುರಿದ ಹೃದಯವುಳ್ಳವರನ್ನು ಕಟ್ಟುವದಕ್ಕೂ ಸೆರೆಯವರಿಗೆ ಬಿಡುಗಡೆಯನ್ನು ಬಂಧಿಸಲ್ಪಟ್ಟವರಿಗೆ ಸೆರೆಮನೆಯ ಕದ ತೆರೆಯುವದನ್ನು ಪ್ರಸಿದ್ಧಿ ಮಾಡುವದಕ್ಕೂ 7. ಓ ದೇವರೇ, ನಿನ್ನ ಸಿಂಹಾಸ ನವು ಎಂದೆಂದಿಗೂ ಇರುವದು; ನಿನ್ನ ರಾಜ್ಯದಂಡವು ನ್ಯಾಯದಂಡವಾಗಿದೆ. ಮಗನ ವಿಷಯದಲ್ಲಿಯಾದರೋ--ಓ ದೇವರೇ, ನಿನ್ನ ಸಿಂಹಾಸನವು ಯುಗಯುಗಾಂತರಗಳಲ್ಲಿಯೂ ಇರುವದು; ನೀತಿದಂಡವೇ ನಿನ್ನ ರಾಜದಂಡವಾಗಿದೆ. 8. ದೇವಭಕ್ತಿಯ ಮರ್ಮವು ಮಹತ್ವವುಳ್ಳದ್ದೆಂಬದು ತರ್ಕವಿಲ್ಲದ್ದು, ಅದು ಯಾವದಂದರೆ--ದೇವರು ಶರೀರಧಾರಿಯಾಗಿ ಪ್ರತ್ಯಕ್ಷನಾದನು; ಆತ್ಮಸಂಬಂಧವಾಗಿ ನೀತಿವಂತನೆಂದು ನಿರ್ಣಯಿಸಲ್ಪಟ್ಟನು; ದೂತ ರಿಗೆ ಕಾಣಿಸಿಕೊಂಡನು; ಅನ್ಯಜನರಿಗೆ ಸಾರಲ್ಪಟ್ಟನು; ಲೋಕದಲ್ಲಿ ನಂಬಲ್ಪಟ್ಟನು; ಮಹಿಮೆಗೆ ಸೇರಿಸಲ 5. ಅವರು ಕಲ್ವಾರಿ ಎಂದು ಕರೆಯಲ್ಪಡುವ ಸ್ಥಳಕ್ಕೆ ಬಂದಾಗ ಅಲ್ಲಿ ಆತನನ್ನು ಮತ್ತು ಆ ದುಷ್ಕರ್ಮಿಗಳಲ್ಲಿ ಒಬ್ಬನನ್ನು ಬಲಗಡೆಯಲ್ಲಿ ಮತ್ತೊಬ್ಬನನ್ನು ಎಡಗಡೆ ಯಲ್ಲಿ ಶಿಲುಬೆಗೆ ಹಾಕಿದರು. ಯಾಕಂದರೆ ಇದು ಬಹು ಜನರ ಪಾಪಗಳ ಪರಿಹಾರಕ್ಕೋಸ್ಕರ ಸುರಿಸಲ್ಪಡುವ ಹೊಸಒಡಂಬಡಿಕೆ ಯ ನನ್ನ ರಕ್ತವಾಗಿದೆ ಅಂದನು. ಮನುಷ್ಯಕುಮಾರನು ಪಾಪಿಷ್ಠರ ಕೈಗಳಿಗೆ ಹೇಗೆ ಒಪ್ಪಿಸಲ್ಪಟ್ಟವನಾಗಿ ಶಿಲುಬೆಗೆ ಹಾಕಲ್ಪಟ್ಟು ಮೂರನೆಯ ದಿನದಲ್ಲಿ ತಿರಿಗಿ ಏಳುವನು ಎಂದು ನಿಮಗೆ ಹೇಳಿದ್ದನ್ನು ನೀವು ನೆನಪು ಮಾಡಿಕೊಳ್ಳಿರಿ ಅಂದರು.
6. ತರುವಾಯ ಅವರು ಒಂದು ಮುಳ್ಳಿನ ಕಿರೀಟವನ್ನು ಹೆಣೆದು ಅದನ್ನು ಆತನ ತಲೆಯ ಮೇಲಿಟ್ಟು ಬಲಗೈಯಲ್ಲಿ ಒಂದು ಬೆತ್ತವನ್ನು ಕೊಟ್ಟು ಆತನ ಮುಂದೆ ಮೊಣಕಾಲೂರಿ--ಯೆಹೂದ್ಯರ ಅರಸನೇ, ವಂದನೆ ಎಂದು ಹೇಳಿ ಆತನನ್ನು ಹಾಸ್ಯಮಾಡಿದರು. 7. ಎರಡು ದಿವಸಗಳಾದ ಮೇಲೆ ಪಸ್ಕ ಹಬ್ಬ ಇರುವ ದೆಂದು ನೀವು ಬಲ್ಲಿರಿ. ಆಗ ಮನುಷ್ಯಕುಮಾರನು ಶಿಲುಬೆಗೆ ಹಾಕಲ್ಪಡುವದಕ್ಕಾಗಿ ಹಿಡಿದುಕೊಡಲ್ಪಡು ವನು ಅಂದನು. ಆತನ ಎಲುಬು ಗಳನ್ನೆಲ್ಲಾ ಕಾಪಾಡುತ್ತಾನೆ; ಅವುಗಳಲ್ಲಿ ಒಂದಾದರೂ ಮುರಿಯಲ್ಪಡುವದಿಲ್ಲ. 8. ಸೈನಿಕರು ಯೇಸುವನ್ನು ಶಿಲುಬೆಗೆ ಹಾಕಿದ ಮೇಲೆ ಆತನ ವಸ್ತ್ರಗಳನ್ನು ತೆಗೆದು ಪ್ರತಿಯೊಬ್ಬ ಸೈನಿಕ ನಿಗೆ ಒಂದೊಂದು ಭಾಗದಂತೆ ನಾಲ್ಕು ಭಾಗಗಳನ್ನಾಗಿ ಮಾಡಿಕೊಂಡರು. ಆತನ ಮೇಲಂಗಿಯನ್ನು ಸಹ ತಕ್ಕೊಂಡರು; ಆದರೆ ಆ ಅಂಗಿಯು ಹೊಲಿಗೆ ಇಲ್ಲದೆ ಮೇಲಿನಿಂದ ಉದ್ದಕ್ಕೂ ನೇಯ್ದದ್ದಾಗಿತ್ತು. ಆದದ ರಿಂದ ಅವರು--ನಾವು ಅದನ್ನು ಹರಿಯುವದು ಬೇಡ; ಆದರೆ ಅದು ಯಾರಿಗಾಗುವದೋ ಎಂದು ಅದಕ್ಕೋಸ್ಕರ ಚೀಟು ಹಾಕಿಕೊಳ್ಳೋಣ ಎಂದು ತಮ್ಮತಮ್ಮೊಳಗೆ ಮಾತನಾಡಿಕೊಂಡರು; ಹೀಗೆ--ನನ್ನ ಬಟ್ಟೆಯನ್ನು ಅವರು ತಮ್ಮೊಳಗೆ ಪಾಲುಮಾಡಿ ಕೊಂಡರು; ನನ್ನ ಮೇಲಂಗಿಗೋಸ್ಕರ ಚೀಟು ಹಾಕಿ ದರ 9. ಇದಾದ ಮೇಲೆ ಯೇಸು ಆಗ ಎಲ್ಲವೂ ಪೂರೈಸಲ್ಪಟ್ಟಿತೆಂದು ತಿಳಿದು ಬರಹವು ನೆರವೇರು ವಂತೆ--ನನಗೆ ನೀರಡಿಕೆಯಾಗಿದೆ ಅಂದನು. ಆಗ ಅವರು ಆತನಿಗೆ ಕಹಿಬೆರಸಿದ ಹುಳಿರಸವನ್ನು ಕುಡಿಯಕೊಟ್ಟರು; ಮತ್ತು ಆತನು ಅದನ್ನು ರುಚಿ ನೋಡಿ ಕುಡಿಯಲೊಲ್ಲದೆ ಇದ್ದನು. ಇದಾದ ಮೇಲೆ ಯೇಸು ಆಗ ಎಲ್ಲವೂ ಪೂರೈಸಲ್ಪಟ್ಟಿತೆಂದು ತಿಳಿದು ಬರಹವು ನೆರವೇರು ವಂತೆ--ನನಗೆ ನೀರಡಿಕೆಯಾಗಿದೆ ಅಂದನು. ಆಗ ಅಲ್ಲಿ ಹುಳಿರಸ ತುಂಬಿದ ಪಾತ್ರೆಯಿತ್ತು; ಅವರು ಸ್ಪಂಜನ್ನು ಹುಳಿರಸದಿಂದ ತುಂಬಿಸಿ ಹಿಸ್ಸೋಪಿಗೆ ಸಿಕ್ಕಿಸಿ ಆತನ ಬಾಯಿಗೆ ಇಟ್ಟರು. 10. ಆತನು ಇಲ್ಲಿ ಇಲ್ಲ; ಯಾಕಂದರೆ ಆತನು ಹೇಳಿರುವ ಪ್ರಕಾರ ಆತನು ಎದ್ದಿದ್ದಾನೆ; ಕರ್ತನು ಮಲಗಿದ್ದ ಸ್ಥಳವನ್ನು ಬಂದು ನೋಡಿರಿ. ಮನುಷ್ಯಕುಮಾರನು ಪಾಪಿಷ್ಠರ ಕೈಗಳಿಗೆ ಹೇಗೆ ಒಪ್ಪಿಸಲ್ಪಟ್ಟವನಾಗಿ ಶಿಲುಬೆಗೆ ಹಾಕಲ್ಪಟ್ಟು ಮೂರನೆಯ ದಿನದಲ್ಲಿ ತಿರಿಗಿ ಏಳುವನು ಎಂದು ನಿಮಗೆ ಹೇಳಿದ್ದನ್ನು ನೀವು ನೆನಪು ಮಾಡಿಕೊಳ್ಳಿರಿ ಅಂದರು. ಯಾಕಂದರೆ ನಾನು ನನ್ನ ಪ್ರಾಣವನ್ನು ತಿರಿಗಿಪಡಕೊಳ್ಳುವಂತೆ ಅದನ್ನು ಕೊಡುತ್ತೇನೆ; ಆದದ ರಿಂದ ನನ್ನ ತಂದೆಯು ನನ್ನನ್ನು ಪ್ರೀತಿಸುತ್ತಾನೆ. ಯಾವ ಮನುಷ್ಯನಾದರೂ ಅದನ್ನು ನನ್ನಿಂದ ತೆಗೆಯುವದಿಲ್ಲ; ಆದರೆ ನನ್ನಷ್ಟಕ್ಕೆ ನಾನೇ ಅದನ್ನು ಕೊಡುತ್ತೇನೆ. ನಾನು ಅದನ್ನು ಕೊಡುವದಕ್ಕೆ ನನಗೆ ಅಧಿಕಾರವಿದೆ; ಅದನ್ನು ತಿರಿಗಿ ಪಡಕೊಳ್ಳುವದಕ್ಕೆ ನನಗೆ ಅಧಿಕಾರವಿದೆ. ಈ ಅಪ್ಪಣೆಯನ್ನು ನಾನು ನನ್ನ ತಂದೆ ಯಿಂದ ಹೊಂದಿದ್ದೇನೆ ಅಂದನು. ಯಾಕಂ ದರೆ--ನೀನು ನನ್ನ ಆತ್ಮವನ್ನು ಪಾತಾಳದಲ್ಲಿ ಬಿಡುವ ದಿಲ್ಲ. ನಿನ್ನ ಪರಿಶುದ್ಧನಿಗೆ ಕೊಳೆಯುವ ಅವಸ್ಥೆಯನ್ನು ನೋಡಗೊಡಿಸುವದಿಲ್ಲ. 11. ನಾನು ನಿಮಗೆ ಒಪ್ಪಿಸಿಕೊಟ್ಟ ಉಪದೇಶವನ್ನು ಕರ್ತನಿಂದ ಹೊಂದಿದೆನು. ಅದೇನಂದರೆ, ಕರ್ತನಾದ ಯೇಸು ತಾನು ಹಿಡಿದುಕೊಡಲ್ಪಟ್ಟ ರಾತ್ರಿಯಲ್ಲಿ ರೊಟ್ಟಿಯನ್ನು ತೆಗೆದುಕೊಂಡು ಸ್ತ್ರೋತ್ರಮಾಡಿ ಅದನ್ನು ಮುರಿದು--ತೆಗೆದುಕೊಳ್ಳಿರಿ, ತಿನ್ನಿರಿ; ಇದು ನಿಮಗೋಸ್ಕರ ಮುರಿಯಲ್ಪಟ್ಟ ನನ್ನ ದೇಹ; ನನ್ನನ್ನು ನೆನಸಿಕೊಳ್ಳುವದಕ್ಕೋಸ್ಕರ ಇದನ್ನು ಮಾಡಿರಿ ಅಂದನು. ಅದೇ ರೀತಿಯಾಗಿ ಊಟವಾದ ಮೇಲೆ ಆತನು ಪಾತ್ರೆಯನ್ನು ತೆಗೆದುಕೊಂಡು--ಈ ಪಾತ್ರೆಯು ನನ್ನ ರಕ್ತದಲ್ಲಿರುವ ಹೊಸಒಡಂಬಡಿಕೆ ಯಾಗಿದೆ; ನೀವು ಇದರಲ್ಲಿ ಪಾನಮಾಡುವಾಗೆಲ್ಲಾ ನನ್ನನ್ನು ನೆನಸಿಕೊಳ್ಳುವದಕ್ಕೋಸ್ಕರ ಇದನ್ನು ಮಾಡಿರಿ ಅಂದನು. ನೀವು ಈ ರೊಟ್ಟಿಯನ್ನು ತಿಂದು ಈ ಪಾತ್ರೆಯಲ್ಲಿ ಪಾನಮಾಡುವಷ್ಟು ಸಾರಿ ಕರ್ತನ ಮರಣ ವನ್ನು ಆತನು ಬರುವ ತನಕ ಪ್ರಸಿದ್ಧಿಪಡಿಸುತ್ತೀರಿ.
Written by, kiran kumari, Notifiable Efficient Warriors Solidarity (NEWS) Email: saviourofuniversetrinity@gmail.com Available in English & Hindi