ಸದಸ್ಯ:Mohd sufaid/sandbox
ಪ್ರಾಣಿಗಳು ಮತ್ತು ಹಿಂದೂಗಳು ಎಲ್ಲರಿಗೂ ಪ್ರವೇಶವಿದೆ
‘ನಾಯಿಗಳಿಗೆ ಮತ್ತು ಭಾರತೀಯರಿಗೆ ಪ್ರವೇಶವಿಲ್ಲ’ ಎಂದು ಯುರೋಪಿ¬ಯನ್‌ರ ಕ್ಲಬ್‌ನ ಬಾಗಿಲುಗಳ ಮೇಲೆ ಬರೆ¬ದಿ¬ರುವ ಆ ಸಾಲುಗಳಾದರೂ ಪರವಾಗಿಲ್ಲ. ನಮ್ಮ ದೇಗುಲಗಳ ಬಾಗಿಲಲ್ಲಿ ದೇವರು, ಪ್ರಾಣಿಗಳು ಮತ್ತು ಹಿಂದೂಗಳು ಎಲ್ಲರಿಗೂ ಪ್ರವೇಶವಿದೆ. ಆದರೆ ಅಸ್ಪೃಶ್ಯರಿಗೆ ಮಾತ್ರ ಪ್ರವೇಶವಿಲ್ಲ ಎಂದಿ¬ರುತ್ತದೆ. ಹೀಗೆಂದು ದೇವಾಲಯ ಪ್ರವೇಶವನ್ನು ಕುರಿತು ಬರೆದ ಗಾಂಧೀಜಿಯವರಿಗೆ ಉತ್ತರ ನೀಡಿ¬ದವರು ಬಾಬಾ ಸಾಹೇಬ್ ಅಂಬೇಡ್ಕರ್. ಅಸಮಾನತೆಯ ನೆಲಗಟ್ಟಿನ ಮೇಲೆ ನಿಂತ ಹಿಂದೂ ಧರ್ಮವನ್ನು ತ್ಯಜಿಸಿ ಬೌದ್ಧ ಧರ್ಮ ವನ್ನು ಸ್ವೀಕರಿಸಿದಾಗ ಅದು ಅಂಬೇಡ್ಕರ್ ಒಬ್ಬರ ಬದುಕಿಗೆ ತಿರುವಾಗಿರಲಿಲ್ಲ. ಭಾರತದ ಭವಿಷ್ಯಕ್ಕೆ ಬರೆದ ತಿರುವಾಗಿತ್ತು. ಅಂಬೇಡ್ಕರ್ ಬೌದ್ಧ ಧರ್ಮವನ್ನು ಸ್ವೀಕರಿಸಿದ ಈ ದಿನ ಬುದ್ಧ ಮತ್ತು ಬೌದ್ಧ ಧರ್ಮದ ಜಾಡನ್ನು ಹಿಡಿದು ಚಿಂತಿಸುವಂತೆ ಮಾಡಿದೆ. ಬುದ್ಧ ಹಾಗೂ ಬೌದ್ಧ ಧರ್ಮವನ್ನು ವಿವರಿಸುವ ಶಾಲಾ ಪಠ್ಯಗಳು ಬುದ್ಧನ ಬದುಕಿನ ಬಗೆಗೆ ಬಂದಿರುವ ಸರಳವಾದ ಕಥೆಯನ್ನು ಹೇಳುತ್ತಾ ಬಂದಿವೆ. ಒಬ್ಬ ರೋಗಿ, ಮುದುಕ ಮತ್ತು ಭಿಕ್ಷುಕ¬ನನ್ನು ನೋಡಿ ಸಂಸಾರವನ್ನು ತೊರೆಯುವ ಈ ಪುರಾಣೀಕರಿಸಿದ ಕಥೆ ರೂಪಕ ಭಾಷೆಯದ್ದಾಗಿರ¬ಬೇಕು. ಚರಿತ್ರೆಯ ಆಳಕ್ಕಿಳಿದು ನೋಡುವ ಅಂಬೇಡ್ಕರ್ ನದಿ ವ್ಯಾಜ್ಯದಂತಹ ಎರಡು ರಾಜ್ಯಗಳ ನಡುವಿನ ಹೋರಾಟವನ್ನು ತಪ್ಪಿಸಲು ಸಿದ್ಧಾರ್ಥ ರಾಜ್ಯವನ್ನು ತೊರೆಯಬೇಕಾಯಿ¬ತೆಂದು ವಿವರಿಸುತ್ತಾರೆ. ಕ್ರಿ.ಪೂ. ಆರನೆಯ ಶತಮಾನ ಹಲವು ವೈಚಾ¬ರಿಕ ವಾದಗಳ ಹುಟ್ಟಿಗೆ ಕಾರಣವಾಗಿದೆ. ಈ ಎಲ್ಲಾ ಸಿದ್ಧಾಂತಗಳಲ್ಲಿ ಕಾಣುವ ಸಾಮಾನ್ಯ¬ವಾದ ವಿಚಾರವೆಂದರೆ ವೈದಿಕ ಪಾರಮ್ಯದ ವಿರೋಧ. ಈ ವಿರೋಧವನ್ನು ಕಂಡುಕೊಂಡ ಮಾರ್ಗ ಮಾತ್ರ ದೊಡ್ಡ ಸಿದ್ಧಾಂತದ ಹುಟ್ಟಿಗೆ ಕಾರಣವಾಯಿತು. ಸಮಾಜದ ಅಸಮಾನತೆ¬ಯನ್ನು ಒಪ್ಪುವ ಮತ್ತು ಅಮೂರ್ತದಲ್ಲಿ ತನ್ನ ವಿಚಾರವನ್ನು ಮಂಡಿಸುವ, ವಿಚಾರವನ್ನು ಪ್ರತಿ¬ಭ¬ಟಿಸದೆ ವೇದ ಸಮಾಜದ ಹೊರಗುಳಿದ ಜನ¬ರಿಗೆ ಬೇರೆ ಮಾರ್ಗವೇ ಇರಲಿಲ್ಲ. ಬುದ್ಧನ ವಿಚಾರ¬ಗಳು ಹೇಗೆ ಹರಿದು ಬಂದಿವೆ ಎಂಬ ಚಾರಿತ್ರಿಕ ಬೆಳವಣಿಗೆಯನ್ನು ಅಂಬೇಡ್ಕರ್ ‘ಬುದ್ಧ ಅಂಡ್ ಹಿಸ್ ಧಮ್ಮ’ ಕೃತಿಯಲ್ಲಿ ಸ್ಪಷ್ಟವಾದ ವಿವರಣೆ¬ಯನ್ನು ನೀಡುತ್ತಾರೆ. ಬುದ್ಧ ಕೊಟ್ಟ ವಿಚಾರ ವಾಸ್ತವದ ಬದುಕಿಗೆ ನೀಡಿದ ಮಾರ್ಗವಾಗಿತ್ತೇ ಹೊರತು ಕಣ್ಣಿಗೆ ಕಾಣದ, ಕೈಗೆಟುಕದ ಆತ್ಮ, ಪರಮಾತ್ಮನ ಚಿಂತೆ ಅದಾಗಿರಲಿಲ್ಲ. ಬುದ್ಧ ಎಲ್ಲೂ ತನ್ನನ್ನು ದೇವರೆಂದು ಹೇಳಿ¬ಕೊಳ್ಳ¬ಲಿಲ್ಲವೆಂದು ನಾಗಾರ್ಜುನ ತನ್ನ ‘ಮಧ್ಯ¬ಮಕ ಕಾರಿಕಾ’¬ದಲ್ಲಿ ಮತ್ತೆಮತ್ತೆ ಹೇಳುತ್ತಾನೆ. ಬೌದ್ಧ ಧರ್ಮವಾಗಲಿ ಅಥವಾ ಬೇರೆ ಯಾವುದೇ ಧರ್ಮವಾಗಲೀ ನಾವಿಂದು ಕೇಳಿ¬ಕೊಳ್ಳ¬ಬೇಕಾಗಿರುವುದು ಇವತ್ತಿನ ಬದುಕಿಗೆ ಎಷ್ಟು ಸಮಂಜಸ ಮತ್ತು ಎಷ್ಟರಮಟ್ಟಿಗೆ ಅದು ನಮ್ಮ ಬದುಕನ್ನು ನಿರ್ದೇಶಿಸುತ್ತದೆ. ಬುದ್ಧನ ತತ್ವ ಜನರು ತಮ್ಮ ಬದುಕನ್ನು ರೂಪಿಸಿ¬ಕೊಳ್ಳಲು ಹಲವು ರೀತಿಯಲ್ಲಿ ಕಾರಣವಾ¬ಗಿದ್ದು, ಗೊತ್ತಿದ್ದೋ ಗೊತ್ತಿಲ್ಲದೆಯೇ ಅದು ಭಾರತೀಯನ ಬದುಕಿನ ಭಾಗವಾಗಿದೆ. ಬೌದ್ಧ ಧರ್ಮದ ಅಧ್ಯಯನ ಮಾಡುವ ವಿದ್ವಾಂಸರು ಬೌದ್ಧ ಧರ್ಮದ ಬೆಳವಣಿಗೆಯನ್ನು ಗುರುತಿಸಿ ಅನಂತರದಲ್ಲಿ ಅದರ ಪತನವನ್ನು ಗುರುತಿ¬ಸುತ್ತಾ ಬಂದಿದ್ದಾರೆ. ಆದರೆ ಬೌದ್ಧ ಧರ್ಮ ಧಾರ್ಮಿಕ ಆಚರಣೆಯಾಗಿ ನಶಿಸಿಹೋಗಿದ್ದರೂ ಜನರ ಬದುಕಿನ ಭಾಗವಾಗಿ ಹರಿದುಬಂದಿದೆ ಎಂದು ಹೇಳಲು ಹಲವು ನಿದರ್ಶನಗಳು ದೊರೆ¬ಯುತ್ತವೆ. ಬೌದ್ಧರ ಹತ್ಯೆ ಬೌದ್ಧ ಧರ್ಮ¬ವನ್ನು ಮರೆಮಾಡಲು ಸಾಧ್ಯವಾಗಿದೆಯೇ ಹೊರತು ಜನಪದರ ಬದುಕಿನ ಭಾಗವೇ ಆಗಿಹೋದ ಬೌದ್ಧ ತತ್ವಗಳನ್ನು ಅಳಿಸಿ ಹಾಕಲು ಸಾಧ್ಯವಾ¬ಗಿಲ್ಲ. ಬೌದ್ಧ ಚಿಂತನೆ ಕಾಲದೇಶಗಳನ್ನು ಮೀರಿ ಹರಡುತ್ತಾ ಬಂದಿದೆ. ವೈಚಾರಿಕತೆ, ತರ್ಕ, ಅನುಭವ ವೇದ್ಯವಾದ ಸತ್ಯ, ಸಮಾನತೆ, ವ್ಯಕ್ತಿಯ ವಿಮೋಚನೆ ಇಂತಹ ಆಲೋಚನೆಯ ಮೇಲೆ ಚಿಂತನೆಯನ್ನು ಮಾಡಬಲ್ಲ ಯಾವುದೇ ತತ್ವಜ್ಞಾನಿ ಮರಳಿ ಬೌದ್ಧ ತತ್ವದ ಒಳಹೊಕ್ಕು ನೋಡಬೇಕಾಗುತ್ತದೆ.