ಸದಸ್ಯ:Muthappa prarthana/sandbox
ಕೊಡಗು ಹೆಸರಿನ ನಿಷ್ಪತ್ತಿ ಕೊಡಗಿಗೆ ಕೂರ್ಗ್ ಎಂಬ ಆಂಗ್ಲೀಯ ಬಳಕೆಯೂ ಇದೆ. ಭಾರತದ 'ಸ್ಕಾಟ್ ಲ್ಯಾಂಡ್' ಎಂಬ ಹೆಸರೂ ಇದಕಿದೆ
ಇಲ್ಲಿಯ ಜನ ಕೊಡವರು ಇಲ್ಲಿಯ ಮುಖ್ಯ ಜನರು. ಕೊಡವ ತಕ್ಕ್, ಅರೆಭಾಷೆ ಕೊಡಗಿನಲ್ಲಿ ಪ್ರಮುಖವಾಗಿ ಬಳಸಲಾಗುವ ಭಾಷೆ. ಕನ್ನಡ ಆಡಳಿತ ಭಾಷೆ. ಇದಲ್ಲದೆ ಮಲಯಾಳಂ,ತಮಿಳು, ಅರೆಗನ್ನಡ, ತುಳು, ಮುಂತಾದವನ್ನು ಆಡುವವರು ಇಲ್ಲಿರುವರು. ಕೊಡವ ಭಾಷೆ ಅಥವಾ ಕೊಡವ ತಕ್ಕ್ಗೆ ಲಿಪಿಯಿಲ್ಲ.
ಜನಸಂಖ್ಯೆ ೨೦೧೧ರ ಜನಗಣತಿಯ ಪ್ರಕಾರ ಕೊಡಗಿನ ಜನಸಂಖ್ಯೆ ೫,೫೪,೭೬೨. ಭೂಗೋಳ ಕೊಡಗು ತನ್ನ ಪಶ್ಚಿಮ ಸರಹದ್ದಿನಲ್ಲಿ ದಕ್ಷಿಣ ಕನ್ನಡದ ಜಿಲ್ಲೆಯನ್ನೂ, ಉತ್ತರಕ್ಕೆ ಹಾಸನ, ಪೂರ್ವಕ್ಕೆ ಮೈಸೂರು, ದಕ್ಷಿಣಕ್ಕೆ ಕೇರಳದ ಕಣ್ಣೂರು ಜಿಲ್ಲೆಗಳನ್ನೂ ಹೊಂದಿದೆ. ಈ ಜಿಲ್ಲೆಯ ರಾಜಧಾನಿ ಮಡಿಕೇರಿ . ಕೊಡಗು ಮೊದಲು ಬ್ರಿಟಿಷರ ಕಾಲದಲ್ಲಿ ಸ್ವತಂತ್ರ ರಾಜ್ಯವಾಗಿತ್ತು. ಸ್ವಾತಂತ್ರ್ಯಾನಂತರ ರಾಜ್ಯವಿಂಗಡನೆಯಾದಾಗ ಮೈಸೂರು ರಾಜ್ಯಕ್ಕೆ ಜಿಲ್ಲೆಯಾಗಿ ಸೇರಲ್ಪಟ್ಟಿತು.
ತಾಲೂಕುಗಳು ಕೊಡಗಿನಲ್ಲಿ ಮೂರು ತಾಲೂಕುಗಳಿವೆ.
ಮಡಿಕೇರಿ ವಿರಾಜಪೇಟೆ ಸೋಮವಾರಪೇಟೆ