ವಿಷಯಕ್ಕೆ ಹೋಗು

ಸದಸ್ಯ:Namovenku/ನನ್ನ ಪ್ರಯೋಗಪುಟ

ವಿಕಿಪೀಡಿಯದಿಂದ, ಇದು ಮುಕ್ತ ಹಾಗೂ ಸ್ವತಂತ್ರ ವಿಶ್ವಕೋಶ

ನೀರನ್ನು ಕಳಸಾ-ಬಂಡೂರಿ ಎಂಬ ಎರಡು ನಾಲೆಗಳ ಮೂಲಕ ಜಲಾಶಯಕ್ಕೆ ಹರಿಸಲು ಯೋಜನೆ ರೂಪಿಸಲಾಗಿದೆ. ಆದ್ದರಿಂದ, ಕಳಸಾ-ಬಂಡೂರಿ ಎಂಬ ಹೆಸರೂ ಇದೆ. ಬೆಳಗಾವಿ ಜಿಲ್ಲೆಯ ಪಶ್ಚಿಮ ಘಟ್ಟದ ಸಾಲಿನಲ್ಲಿ ಹುಟ್ಟುವ ಮಹದಾಯಿ ನದಿಯು ಕರ್ನಾಟಕದಲ್ಲಿ 35 ಕಿ.ಮೀ ಹರಿಯುತ್ತದೆ. ಮುಂದೆ ಗೋವಾ ಪುಟ್ಟ ರಾಜ್ಯದಲ್ಲಿ 45 ಕಿ.ಮೀ ಹರಿಯುವ ಮಹದಾಯಿ (ಮಾಂಡೋವಿ) ನದಿ, ಕೊನೆಗೆ ಅರಬ್ಬಿ ಸಮುದ್ರವನ್ನು ಸೇರುತ್ತದೆ. 52.60 ಟಿಎಂಸಿ ಅಡಿ ನೀರು ಮಹಾದಾಯಿಯಿಂದ ಕರ್ನಾಟಕಕ್ಕೆ ಸಿಗುತ್ತಿದೆ. ಗೋವಾ ರಾಜ್ಯದ ಮೂಲಕ 159.07 ಟಿಎಂಸಿ ಅಡಿ ನೀರು ಅರೇಬಿಯನ್ ಸಮುದ್ರಕ್ಕೆ ಸೇರಿಕೊಳ್ಳುತ್ತದೆ. ಹೀಗೆ ರಾಜ್ಯದ ಮೂಲಕ ಅರೇಬಿಯನ್ ಸಮುದ್ರಕ್ಕೆ ಸೇರಿ ಪೋಲಾಗುವ ನೀರನ್ನು ಉತ್ತರ ಕರ್ನಾಟಕದ ಬೆಳಗಾವಿ, ಹುಬ್ಬಳ್ಳಿ-ಧಾರವಾಡ, ಗದಗ ಮತ್ತು ಬಾಗಲಕೋಟೆ ಜಿಲ್ಲೆಗಳಿಗೆ ಉಪಯೋಗವಾಗಲೆಂದು ಅಂದಿನ ಮುಖ್ಯಮಂತ್ರಿ ಆರ್. ಗುಂಡೂರಾವ್, ಎಸ್ ಆರ್ ಬೊಮ್ಮಾಯಿ ನೇತೃತ್ವದಲ್ಲಿ ಈ ಕಾರ್ಯವನ್ನು ಕೈಗೆತ್ತಿಕೊಂಡರು.