ಸದಸ್ಯ:Nuthan123/sandbox
ರಾಘವಾಂಕ :
ರಾಘವಾಂಕ ಕವಿಯು ಕ್ರಿ.ಶ.೧೨ನೆಯ ಶತಮಾನದ ಉತ್ತರಾರ್ಧದಲ್ಲಿ ಹಾಗೂ ೧೩ನೆಯ ಶತಮಾನದ ಪೂರ್ವಾರ್ಧದಲ್ಲಿ ಜೀವಿಸಿದ್ದ ಕವಿ.ಈತನು ಹರಿಹರನ ಸೋದರಳಿಯ.ಹರಿಹರನೂ,ರಾಘವಾಂಕನೂ ಕನ್ನಡ ಸಾಹಿತ್ಯಚರಿತ್ರೆಯಲ್ಲಿ ನೂತನ ಯುಗಪ್ರವರ್ತಕರೆಂದು ಹೆಸರಾಗಿದ್ದಾರೆ.ಕನ್ನಡ ಸಾಹಿತ್ಯದಲ್ಲಿ ಷಟ್ಪದೀ ಪ್ರಕಾರವನ್ನು ಪ್ರವರ್ತನಗೊಳಿಸಿದ ಕೀರ್ತಿ ರಾಘವಾಂಕನಿಗೆ ಸಲ್ಲುತ್ತದೆ. ಕನ್ನಡದ ಅತ್ಯಂತ ಸ್ವತಂತ್ರ ಮನೋಧರ್ಮದ ಪ್ರಯೋಗಶೀಲನಾದ ವೀರಶೈವ ಕವಿ. ಹರಿಶ್ಚಂದ್ರಕಾವ್ಯ ಎಂಬ ಕಾವ್ಯದ ಕರ್ತೃ. ಈತನ ಜೀವನ ಹಾಗೂ ಕೃತಿಗಳು ಇವನ ಅನಂತರದ ಕೆಲವು ಕವಿಗಳಿಗೆ ಕುತೂಹಲದ, ಗೌರವದ ವಿಷಯಗಳಾಗಿದ್ದವು.ಇವನ ಜೀವನ ಸಂಗತಿಗಳು ತಕ್ಕಮಟ್ಟಿಗೆ ಚೆನ್ನಬಸವಪುರಾಣದಲ್ಲಿ , ಗುರುರಾಜ ಚಾರಿತ್ರದಲ್ಲಿ , ಭೈರವೇಶ್ವರಕಾವ್ಯ ಕಥಾಮಣಿ ಸೂತ್ರರತ್ನಾಕರದಲ್ಲಿ , ಪದ್ಮರಾಜ ಪುರಾಣದಲ್ಲಿ , ಹರಡಿಕೊಂಡಿವೆ.ಎಲ್ಲಕ್ಕೂ ಮಿಗಿಲಾಗಿ ರಾಘವಾಂಕನ ಕವಿಕಾವ್ಯ ಜೀವನವನ್ನೇ ವಸ್ತುವಾಗಿ ಮಾಡಿಕೊಂಡ ಸಿದ್ದನಂಜೇಶನ ರಾಘವಾಂಕ ಚಾರಿತ್ರ ಒಂದು ವಿಶೇಷ ರೀತಿಯ ಕೃತಿಯಾಗಿದೆ.
ಜೀವನ ರಾಘವಾಂಕ ಹಂಪೆಯಲ್ಲಿ ಹುಟ್ಟಿ ಬೆಳೆದವ. ಇವನ ತಂದೆ ಮಹಾದೇವಭಟ್ಟ , ತಾಯಿ ರುದ್ರಾಣಿ. ಹರಿಹರ ಇವನ ಸೋದರ ಮಾವ ಮತ್ತು ಗುರು. ಆತ ದೀಕ್ಷಾಗುರು, ಕಾವ್ಯಗುರುವೂ ಹೌದು. ಹರಿಹರನಂತೆ ರಾಘವಾಂಕನೂ ಪಂಪಾ ವಿರೂಪಾಕ್ಷನ ಪರಮಭಕ್ತ. ಹಂಪೆಯ ಶಂಕರಪ್ರಭು , ಹಂಪೆಯ ಮಾದಿರಾಜ, ಹಂಪೆಯ ಹರೀಶ್ವರ ಇದು ರಾಘವಾಂಕನ ಗುರುಪರಂಪರೆ.ತಾನು ಹರಿಹರನ ವರಸುತ ಎಂದು ಈತ ಹೇಳಿಕೊಂಡಿದ್ದಾನೆ.ಈತ ಸಂಸ್ಕೃತ ಭಾಷೆಗಳಲ್ಲಿಯೂ ಸಮಸ್ತ ಲೌಕಿಕ ವೈದಿಕ ವಿದ್ಯೆಗಳಲ್ಲಿಯೂ ಪರಿಣಿತನಾಗಿದ್ದ .