ಸದಸ್ಯ:Prajwal mangalore/sandbox

ವಿಕಿಪೀಡಿಯದಿಂದ, ಇದು ಮುಕ್ತ ಹಾಗೂ ಸ್ವತಂತ್ರ ವಿಶ್ವಕೋಶ

ಇಂದಿರಾ ಪ್ರಿಯದರ್ಶಿನಿ ಗಾಂಧಿ (ಹಿಂದಿ:इंदिरा प्रियदर्शिनी गांधीಇಂದಿರಾ ಪ್ರಿಯದರ್ಶಿನಿ ಗಾಂಧಿ; ನಿ: ನೆಹರು; (೧೯ ನವೆಂಬರ್ ೧೯೧೭ – ೩೧ ಅಕ್ಟೋಬರ್ ೧೯೮೪) ೧೯೬೬ರಿಂದ ೧೯೭೭ರವೆಗೆ ಸತತ ಮೂರು ಬಾರಿ ಭಾರತ ಗಣತಂತ್ರದ ಪ್ರಧಾನ ಮಂತ್ರಿಯಾಗಿದ್ದರು ಮತ್ತು ನಾಲ್ಕನೇ ಬಾರಿ ೧೯೮೦ರಿಂದ ೧೯೮೪ರಲ್ಲಿ ನಡೆದ ಅವರ ಹತ್ಯೆಯವರೆಗೆ, ಒಟ್ಟು ಹದಿನೈದು ವರ್ಷಗಳ ಕಾಲ, ಪ್ರಧಾನ ಮಂತ್ರಿಯಾಗಿ ಅಧಿಕಾರದಲ್ಲಿದ್ದರು. ಅವರು ಭಾರತದ ಮೊದಲ ಮಹಿಳಾ ಪ್ರಧಾನ ಮಂತ್ರಿ. ಇಂದಿನವರೆಗೆ ಆ ಸ್ಥಾನ ಅವರ ಪಾಲಿನದ್ದೇ ಆಗಿದೆ. ಅವರು ಮಹಾತ್ಮ ಗಾಂಧಿ ಅವರ ಸಂಬಂಧಿಕಳಲ್ಲ. ರಾಜಕೀಯ ಪ್ರಭಾವವಿದ್ದ ನೆಹರು ಕುಟುಂಬದಲ್ಲಿ ಅವರ ಜನನ. ಬೆಳೆದದ್ದು ತೀಕ್ಷ್ಣ ರಾಜಕೀಯ ವಾತಾವರಣದಲ್ಲಿ. ಮೋತಿಲಾಲ್ ನೆಹರು ಈಕೆಯ ಅಜ್ಜ. ಅವರೊಬ್ಬ ಪ್ರಮುಖ ಭಾರತೀಯ ರಾಷ್ಟ್ರೀಯ ಮುಖಂಡ. ಭಾರತೀಯ ಸ್ವಾತಂತ್ರ್ಯ ಚಳವಳಿಯ ಪ್ರಮುಖ ಮುಂದಾಳು ಮತ್ತು ಸ್ವತಂತ್ರ ಭಾರತದ ಪ್ರಥಮ ಪ್ರಧಾನ ಮಂತ್ರಿ ಜವಾಹರ್‌ಲಾಲ್ ನೆಹರು ಇಂದಿರಾಗಾಂಧಿಯವರ ತಂದೆ. ೧೯೪೧ರಲ್ಲಿ ಆಕ್ಸ್‌ಫರ್ಡ್ನಿಂದ ಭಾರತಕ್ಕೆ ಹಿಂದಿರುಗಿದ ನಂತರ ಈಕೆ ಭಾರತೀಯ ಸ್ವಾತಂತ್ರ್ಯ ಚಳವಳಿಗೆ ಧುಮುಕಿದರು. ೧೯೫೦ರ ದಶಕದಲ್ಲ್ಲಿ, ಮೊದಲ ಭಾರತದ ಪ್ರಧಾನ ಮಂತ್ರಿಯಾಗಿದ್ದಾಗ ಅವರ ತಂದೆಗೆ ವೈಯಕ್ತಿಕ ಸಹಾಯಕರಾಗಿ ಅನಧಿಕೃತ ಸೇವೆ ಸಲ್ಲಿಸಿದರು.೧೯೬೪ರಲ್ಲಿ ಅವರ ತಂದೆಯ ನಿಧನ. ನಂತರ ಭಾರತದ ರಾಷ್ಟ್ರಪತಿಯಿಂದ ರಾಜ್ಯಸಭೆಯ ಸದಸ್ಯರಾಗಿ ಇವರ ನೇಮಕ. ಮುಂದೆ ವಾರ್ತಾ ಮತ್ತು ಪ್ರಸಾರ ಖಾತೆ ಮಂತ್ರಿಯಾಗಿ ಲಾಲ್ ಬಹಾದ್ದೂರ್ ಶಾಸ್ತ್ರಿ ಸಚಿವ ಸಂಪುಟದ ಸದಸ್ಯೆ.[೧]

ರಾಜಕೀಯ ವಲಯದಲ್ಲಿ[ಬದಲಾಯಿಸಿ] ಶಾಸ್ತ್ರಿಯವರ ಹಠಾತ್ ಮರಣಾನಂತರ ಇಂದಿರಾಗಾಂಧಿ ಪ್ರಧಾನ ಮಂತ್ರಿಯಾದರು. ಇವರನ್ನು ಪ್ರಧಾನಿ ಗದ್ದುಗೆಗೇರಿಸುವಲ್ಲಿ ಕಾಂಗ್ರೆಸ್ ಪಕ್ಷದ ಅಧ್ಯಕ್ಷ ಕೆ.ಕಾಮರಾಜ್ಅವರದ್ದು ಪ್ರಮುಖ ಪಾತ್ರ.[ಸೂಕ್ತ ಉಲ್ಲೇಖನ ಬೇಕು] ಗಾಂಧಿ ಯವರಿಂದ ಜನಾನುರಾಗಿ ರಾಜಕೀಯ ಸಿದ್ಧಾಂತಸ್ಥಾಪನೆ. ಚತುರ ಎದುರಾಳಿಗಳ ವಿರುದ್ಧ ಚುನಾವಣೆ ಗೆಲ್ಲುವಲ್ಲಿ ತನ್ನ ಸಾಮರ್ಥ್ಯದ ಪ್ರದರ್ಶನ. ಅವರಿಂದ ಹೆಚ್ಚು ಎಡ-ಪಕ್ಷೀಯ ಆರ್ಥಿಕ ನೀತಿಗಳ ಅನುಷ್ಠಾನ ಮತ್ತು ಕೃಷಿ ಉತ್ಪಾದಕತೆಗೆ ಬೆನ್ನು ತಟ್ಟಿ ಪ್ರೋತ್ಸಾಹ. ೧೯೭೧ರಲ್ಲಿ ಪಾಕಿಸ್ಥಾನದೊಂದಿಗೆ ನಡೆದ ಕದನದಲ್ಲಿ ಭಾರತದ್ದು ನಿರ್ಣಾಯಕ ಗೆಲುವು. ಈ ಸಂದರ್ಭದಲ್ಲಿ ಇಂದಿರಾ ಪ್ರಧಾನ ಮಂತ್ರಿ. ೧೯೭೫ ಅವರ ಪಾಲಿಗೆ ಒಂದು ಅಭದ್ರತೆಯ ಅವಧಿ. ಇದರಿಂದಾಗಿ ಆಗ ದೇಶದ ಮೇಲೆ ತುರ್ತು ಪರಿಸ್ಥಿತಿ ಹೇರಿಕೆ. ದೀರ್ಘ ಕಾಲೀನ ನಿರಂಕುಶ ಪ್ರಭುತ್ವ. ಪರಿಣಾಮವಾಗಿ, ಸೋಲರಿಯದ ಕಾಂಗ್ರೆಸ್ ಪಕ್ಷಕ್ಕೆ 1977ರ ಸಾರ್ವತ್ರಿಕ ಚುನಾವಣೆಯಲ್ಲಿ ಪರಾಭವ. 1980 ಚುನಾವಣೆ ಯಲ್ಲಿ ಕಾಂಗ್ರೆಸ್‌ಗೆ ಮತ್ತೆ ಜಯ. ಪ್ರಧಾನ ಮಂತ್ರಿ ಅಧಿಕಾರ ಮತ್ತೆ ಇಂದಿರಾ ಗಾಂಧಿ ಕೈಗೆ. ೧೯೮೪ ಜೂನ್‌ನಲ್ಲಿ, ದಂಗೆಕೋರರನ್ನು ಬಂಧಿಲೆಂದು ಗಾಂಧಿ ಆದೇಶದ ಮೇರೆಗೆ ಸಿಖ್‌ರ ಪವಿತ್ರ ಸ್ವರ್ಣ ಮಂದಿರದೊಳಕ್ಕೆ ಭಾರತೀಯ ಸೇನಾ ಪಡೆಯಿಂದ ಬಲವಂತ ಪ್ರವೇಶ. ಈ ಕಾರ್ಯಾಚರಣೆಯ ಪ್ರತೀಕಾರವಾಗಿ ೧೯೮೪ ಅಕ್ಟೋಬರ್ ೩೧ರಂದು ಇಂದಿರಾ ಗಾಂಧಿ ಹತ್ಯೆಗೆ ತುತ್ತಾದರು.

ಇಂದಿರಾ ಅವರ ವ್ಯಕ್ತಿತ್ವ[ಬದಲಾಯಿಸಿ] 1940ರ ಆರಂಭದಲ್ಲಿ ಇಂದಿರಾ ಅವರು ದೀರ್ಘಕಾಲೀನ ಶ್ವಾಸಕೋಶ ಕಾಯಿಲೆಯಿಂದ ಗುಣಮುಖರಾಗಲು ಸ್ವಿಜರ್‌ಲ್ಯಾಂಡ್‌ನ ಮನೆಯೊಂದರಲ್ಲಿ ಕೆಲವು ದಿನ ತಂಗಿದರು. ಇವರು ದೂರದಲ್ಲಿದ್ದ ತಂದೆಯೊಂದಿಗೆ ಉದ್ದುದ್ದ ಪತ್ರಗಳನ್ನು ಬರೆಯುವ ಹವ್ಯಾಸ ಇಟ್ಟುಕೊಂಡಿದ್ದರು. ಇದು ಬಾಲ್ಯದಲ್ಲೇ ಅವರು ರೂಢಿಸಿಕೊಂಡಿದ್ದರ ಮುಂದುವರಿಕೆ. ತಂದೆ ಮಗಳ ಮಧ್ಯೆ ರಾಜಕೀಯದ ಬಗ್ಗೆ ಚರ್ಚೆ ನಡೆಯುತ್ತಿತ್ತು.[೩] ಅವರು ಯುರೋಪ್ ಖಂಡ ಮತ್ತು UKಯಲ್ಲಿದ್ದಾಗ, ರಾಜಕೀಯದಲ್ಲಿ ಕ್ರಿಯಾಶೀಲವಾಗಿದ್ದ ಪಾರ್ಸಿ ತರುಣ ಫಿರೋಜ್ ಗಾಂಧಿಯನ್ನು ಭೇಟಿಯಾದರು (ಅವರು ಮೋಹನ್‌ದಾಸ್ ಗಾಂಧಿಅವರ ದತ್ತುಪುತ್ರ).[೪] ಭಾರತಕ್ಕೆ ಹಿಂದಿರುಗಿದ ನಂತರ, ಫಿರೋಜ್ ಗಾಂಧಿಯವರು ನೆಹರು ಕುಟುಂಬಕ್ಕೆ ತುಂಬಾ ಹತ್ತಿರವಾದರು, ವಿಶೇಷವಾಗಿ ಇಂದಿರಾರವರ ತಾಯಿ ಕಮಲಾ ನೆಹರುರವರಿಗೆ ಮತ್ತು ಇಂದಿರಾರವರಿಗೂ ಸಹ.

ಫಿರೋಜ್ ಗಾಂಧಿ ಜೊತೆ ಮದುವೆ[ಬದಲಾಯಿಸಿ] ಇಂದಿರಾ ಮತ್ತು ಫಿರೋಜ್ ಗಾಂಧಿಯವರು ಭಾರತಕ್ಕೆ ಹಿಂದಿರುಗಿದಾಗ, ಪರಸ್ಪರ ಪ್ರೀತಿಸುತ್ತಿದ್ದರು. ವೈದ್ಯರ ಸೂಚನೆಯನ್ನೂ ಮೀರಿ ಅವರು ಮದುವೆಯಾಗಲು ನಿರ್ಧರಿಸಿದರು.[೫] ಫಿರೋಜ್ ಗಾಂಧಿಯವರಲ್ಲಿದ್ದ ಮುಕ್ತ ಮನೋಭಾವ, ಹಾಸ್ಯ ಪ್ರಜ್ಞೆ ಮತ್ತು ಆತ್ಮ-ವಿಶ್ವಾಸವನ್ನು ಇಂದಿರಾ ಇಷ್ಟಪಟ್ಟರು. ತಮ್ಮ ಮಗಳು ಅಷ್ಟು ಬೇಗ ಮದುವೆಯಾಗುವ ಆಲೋಚನೆ ನೆಹರುಗೆ ಇಷ್ಟವಾಗಲಿಲ್ಲ. ಈ ಪ್ರೇಮ ವಿವಾಹವನ್ನು ತಪ್ಪಿಸಲು ಮಹಾತ್ಮಾಗಾಂಧಿಯವರ ಸಹಾಯವನ್ನು ಪಡೆಯಲು ಅವರು ಪ್ರಯತ್ನಿಸಿದರು. ಇಂದಿರಾ ಹಠ ಹಿಡಿದರು. 1942 ಮಾರ್ಚ್‌ನಲ್ಲಿ ಹಿಂದು ಆಚರಣೆಯಂತೆ ಮದುವೆ ನೆರವೇರಿತು.[೬] ಫಿರೋಜ್ ಮತ್ತು ಇಂದಿರಾ ಇಬ್ಬರೂ ಸಹ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್‌ನ ಸದಸ್ಯರಾಗಿದ್ದರು. 1942ರಲ್ಲಿ ನಡೆದ 'ಭಾರತ ಬಿಟ್ಟು ತೊಲಗಿ' ಚಳವಳಿಯಲ್ಲಿ ಭಾಗವಹಿಸಿದಾಗ ಅವರಿಬ್ಬರೂ ಬಂಧನಕ್ಕೊಳಗಾದರು.[೭] ಸ್ವಾತಂತ್ರ್ಯಾ ನಂತರ, ಫಿರೋಜ್‌ ಚುನಾವಣಾ ಕಣಕ್ಕೆ ಇಳಿದರು. ಉತ್ತರ ಪ್ರದೇಶದಿಂದ ಸಂಸತ್ ಸದಸ್ಯರಾಗಿ ಆಯ್ಕೆಯಾದರು. ಅವರ ಇಬ್ಬರು ಮಕ್ಕಳಾದ ರಾಜೀವ್ ಗಾಂಧಿ ಮತ್ತು ಸಂಜಯ್ ಗಾಂಧಿ ಹುಟ್ಟಿದ ನಂತರ, ಬಿಗಡಾಯಿಸಿದ ಅವರ ಸಂಬಂಧ ಬೇರ್ಪಡುವಷ್ಟರ ಮಟ್ಟಿಗೆ ಬಂತು. ಮರು-ಚುನಾಯಿತರಾದ ಸ್ವಲ್ಪ ದಿನಗಳಲ್ಲೇ ಫಿರೋಜ್‌ ಹೃದಯಾಘಾತಕ್ಕೆ ಈಡಾದರು. ಇದರಿಂದ ಮತ್ತೆ ರಾಜಿಯಾದರು. ಇವರಿಬ್ಬರ ಸಂಬಂಧ ಫಿರೋಜ್ ಗಾಂಧಿ 1960ರ ಸೆಪ್ಟೆಂಬರ್‌ನಲ್ಲಿ ನಿಧನರಾಗುವ ಕೆಲವು ವರ್ಷಗಳ ಮುಂದಿನವರೆಗೆ ಉಳಿದಿತ್ತು.