ಸದಸ್ಯ:Sachidananda79/sandbox೧
ಕನ್ನಡ ವರ್ಣಮಾಲೆ.
ಕನ್ನಡ ವರ್ಣಮಾಲೆಯಲ್ಲಿ ೪೯ಅಕ್ಷರಗಳಿವೆ.ಅವುಗಳನ್ನು ಮೂರು ಭಾಗಗಳಾಗಿ ವಿಂಗಡಿಸಲಾಗಿದೆ.
೧.ಸ್ವರಗಳು -೧೩
೨.ವ್ಯಂಜನಗಳು -೩೪
೩.ಯೋಗವಾಹಗಳು-೦೨
ಸ್ವರ ಎಂದರೇನು?
[ಬದಲಾಯಿಸಿ]ಬೇರೊಂದು ಅಕ್ಷರದ ಸಹಾಯವಿಲ್ಲದೆ ಸ್ವತಂತ್ರವಾಗಿ ಉಚ್ಛರಿಸಲು ಬರುವ ವರ್ಣಮಾಲೆಯ ಮೊದಲ ಹದಿಮೂರು ಅಕ್ಷರಗಳನ್ನು ಸ್ವರ ಎಂದು ಕರೆಯುತ್ತಾರೆ.
ಸ್ವರಗಳಲ್ಲಿ ಎಷ್ಟು ವಿಧ?ಅವು ಯಾವುವು?
[ಬದಲಾಯಿಸಿ]ಸ್ವರಗಳಲ್ಲಿ ಎರಡು ವಿಧ.ಅವು ಯಾವುವೆಂದರೆ ಹ್ರಸ್ವ ಸ್ವರಗಳು ಹಾಗೂ ದೀರ್ಘ ಸ್ವರಗಳು.
ಹ್ರಸ್ವ ಸ್ವರ ಎಂದರೇನು?ಅವು ಎಷ್ಟಿವೆ?
[ಬದಲಾಯಿಸಿ]ಹ್ರಸ್ವ ಸ್ವರಗಳು (೬)ಆರು. ಒಂದು ಮಾತ್ರೆಯ ಕಾಲದಲ್ಲಿ ಉಚ್ಛರಿಸಲ್ಪಡುವ ವರ್ಣಮಾಲೆಯ ಆರು ಅಕ್ಷರಗಳನ್ನು(ಅ,ಇ ಉ,ಋ,ಎ,ಒ) ಹ್ರಸ್ವ ಸ್ವರಗಳೆಂದು ಕರೆಯುವರು.
ದೀರ್ಘ ಸ್ವರ ಎಂದರೇನು?ಅವು ಎಷ್ಟಿವೆ?
[ಬದಲಾಯಿಸಿ]ಎರಡು ಮಾತ್ರೆಯ ಕಾಲದಲ್ಲಿ ಉಚ್ಛರಿಸಲ್ಪಡುವ ವರ್ಣಮಾಲೆಯ (೭)ಏಳು ಅಕ್ಷರಗಳನ್ನು (ಆ,ಈ,ಊ,ಏ.ಐ.ಓ,ಔ) ದೀರ್ಘ ಸ್ವರಗಳೆಂದು ಕರೆಯುವರು.
ವ್ಯಂಜನ ಎಂದರೇನು?ಎಷ್ಟು ವಿಧಗಳಾಗಿ ವಿಂಗಡಿಸಲಾಗಿದೆ? ಅವು ಯಾವುವು?
[ಬದಲಾಯಿಸಿ]ಬೇರೊಂದು ಅಕ್ಷರದ ಸಹಾಯವಿಲ್ಲದೆ ಸ್ವತಂತ್ರವಾಗಿ ಉಚ್ಛರಿಸಲು ಬಾರದ ವರ್ಣಮಾಲೆಯ(೩೪) ಮುವತ್ತು ನಾಲ್ಕು ಅಕ್ಷರಗಳನ್ನು ವ್ಯಂಜನಗಳೆಂದು ಕರೆಯುವರು. ಪ್ರಮುಖವಾಗಿ ವ್ಯಂಜನಗಳಲ್ಲಿ ಎರಡು ವಿಧ.ಅವು ಯಾವುವೆಂದರೆ
- ವರ್ಗೀಯ ವ್ಯಂಜನಗಳು(೨೫:ಕ,ಚ,ಟ,ತ,ಪ-ವರ್ಗಗಳು)
- ಅವರ್ಗೀಯ ವ್ಯಂಜನಗಳು(೯-ಯ ಇಂದ ಳ ವರೆಗೆ)
ವರ್ಗೀಯ ವ್ಯಂಜನ ಎಂದರೇನು?ಅವು ಎಷ್ಟು ವಿಧ? ಅವು ಯಾವುವು?
[ಬದಲಾಯಿಸಿ]ಒಂದು ವರ್ಗ ಅಥವಾ ಗುಂಪಿಗೆ ಸೇರಿಸಬಹುದಾದ ವರ್ಣಮಾಲೆಯ ಇಪ್ಪತ್ತೈದು(೨೫) ಅಕ್ಷರಗಳನ್ನು ವರ್ಗೀಯ ವ್ಯಂಜನ ಎಂದು ಕರೆಯುವರು. ಅವು ಯಾವುವೆಂದರೆ,
ಕ-ವರ್ಗ, = ಕ, ಖ, ಗ, ಘ, ಙ.
ಚ-ವರ್ಗ, = ಚ, ಛ, ಜ, ಝ, ಞ.
ಟ-ವರ್ಗ ,= ಟ, ಠ, ಡ, ಢ, ಣ.
ತ-ವರ್ಗ, = ತ, ಥ, ದ, ಧ, ನ.
ಪ-ವರ್ಗ,= ಪ, ಫ, ಬ, ಭ, ಮ.
ಅವರ್ಗೀಯ ವ್ಯಂಜನ ಎಂದರೇನು?ಅವು ಎಷ್ಟಿವೆ?
[ಬದಲಾಯಿಸಿ]ಒಂದು ಗುಂಪು ಅಥವಾ ಒಂದು ವರ್ಗಕ್ಕೆ ಸೇರಿಸಲು ಬಾರದ ವರ್ಣಮಾಲೆಯ ಕೊನೆಯ ಒಂಬತ್ತು ಅಕ್ಷರಗಳನ್ನು ಅವರ್ಗೀಯ ವ್ಯಂಜನಗಳೆಂದು ಕರೆಯುತ್ತಾರೆ. ಅವು ಯಾವುವೆಂದರೆ-ಯ,ರ,ಲ,ವ,ಶ,ಷ,ಸ,ಹ,ಳ.
ಕನ್ನಡ ಒತ್ತಕ್ಷರಗಳು ಎಷ್ಟಿವೆ? ಅವು ಯಾವುವು?
[ಬದಲಾಯಿಸಿ]ಕನ್ನಡ ಒತ್ತಕ್ಷರಗಳು (೩೪)ಮುವತ್ನಾಲ್ಕು. ಅವು ಯಾವುವೆಂದರೆ:
ಕ್ಕ ಖ್ಖ ಗ್ಗ ಘ್ಘ ಙ್ಙ
ಚ್ಚ ಛ್ಛ ಜ್ಜ ಝ್ಝ ಞ್ಞ
ಟ್ಟ ಠ್ಠ ಡ್ಡ ಢ್ಢ ಣ್ಣ
ತ್ತ ಥ್ಥ ದ್ದ ಧ್ಧ ನ್ನ
ಪ್ಪ ಫ್ಫ ಬ್ಬ ಭ್ಭ ಮ್ಮ
ಯ್ಯ ರ ಲ್ಲ ವ್ವ ಶ್ಶ ಷ್ಷ ಸ್ಸ ಹ್ಹ ಳ್ಳ
ಯೋಗವಾಹಗಳೆಂದರೇನು? ಅವು ಎಷ್ಟಿವೆ?
[ಬದಲಾಯಿಸಿ]ಸ್ವತಂತ್ರವಲ್ಲದ- ಹಾಗೂ ಸ್ವರವೂ ಅಲ್ಲದ,ವ್ಯಂಜನವೂ ಅಲ್ಲದ ಸ್ವರಾಕ್ಷರಗಳ ಅಂತ್ಯದಲ್ಲಿನ ಹಾಗೂ ವ್ಯಂಜನಗಳ ಆರಂಭಾಕ್ಷರಗಳ ನಡುವಿನ ಎರಡು ಅಕ್ಷರಗಳನ್ನು (ಅನುಸ್ವಾರ-೦,ವಿಸರ್ಗ-ಃ)ಯೋಗವಾಹಗಳೆಂದು ಕರೆಯುತ್ತಾರೆ.