ಸದಸ್ಯ:Sanjay 153414/ಬೇಲೂರು
ಬೇಲೂರು - ಹಾಸನ ಜಿಲ್ಲೆಯ ಪ್ರಮುಖ ಪ್ರವಾಸಿ ಸ್ಥಳಗಳಲ್ಲೊಂದು. ಶಿಲಾಬಾಲಿಕೆಯರ ಬೇಲೂರು ಎಂದು ಪ್ರಸಿದ್ಧವಾಗಿರುವ ಬೇಲೂರು ಶಿಲ್ಪಕಲೆಗೆ ಖ್ಯಾತಿ ಪಡೆದಿದೆ. ಹಳೇಬೀಡು, ಸೋಮನಾಥಪುರದ ಜೊತೆಗೆ ಬೇಲೂರು, ಹೊಯ್ಸಳ ಸಾಮ್ರಾಜ್ಯದ ಶಿಲ್ಪಕಲೆಯ ದೇವಾಲಯಗಳೆಂದು ಪ್ರಸಿದ್ಧವಾಗಿವೆ. ಪ್ರತಿ ವರ್ಷವೂ ದೇಶವಿದೇಶದ ಲಕ್ಷಾಂತರ ಪ್ರವಾಸಿಗರು ಈ ಪುಣ್ಯ ಕ್ಷೇತ್ರಗಳಿಗೆ ಭೇಟಿ ನೀಡುತ್ತಾರೆ. ಹಳೇಬೀಡಿಗೆ ಮುನ್ನ ಬೇಲೂರು ಹೊಯ್ಸಳ ಸಾಮ್ರಾಜ್ಯದ ರಾಜಧಾನಿಯಾಗಿತ್ತು. ಇತಿಹಾಸ[ಬದಲಾಯಿಸಿ] ಇದನ್ನು ಹಿ೦ದೆ 'ವೇಲುಪುರ'ಎ೦ದು ಕರೆಯುತ್ತಿದ್ದರು. ದೇವಾಲಯ ಕಟ್ಟುವ ಕಾರ್ಯ ಹೊಯ್ಸಳ ಚಕ್ರವರ್ತಿಯಾದ ವಿಷ್ಣುವರ್ಧನನ ಆಳ್ವಿಕೆಯಲ್ಲಿ ಶುರುವಾಯಿತು. ರಾಜಾ ವಿಷ್ಣುವರ್ಧನನು ತಲಕಾಡಿನಲ್ಲಿ ಚೋಳರ ಮೇಲಿನ ವಿಜಯೋತ್ಸವವನ್ನು ಆಚರಿಸುವ ಸಮಯವಾದ ೧೧೧೭ರಲ್ಲಿ ತನ್ನ ಗುರುಗಳಾದ ಶ್ರೀ ರಾಮಾನುಜಾಚಾರ್ಯರ ಆಶಿರ್ವಾದದೊಂದಿಗೆ ಚೆನ್ನಕೇಶವಸ್ವಾಮಿಯ ವಿಗ್ರಹವನ್ನು ಪ್ರತಿಷ್ಠೆ ಮಾಡಿದನು. ಈ ರೀತಿಯಾಗಿ ಈ ದೇವಸ್ಥಾನಕ್ಕೆ ವಿಜಯನಾರಾಯಣಸ್ವಾಮಿ ದೇವಸ್ಥಾನವೆಂದು ಹೆಸರು ಬಂದಿದೆ. ಸುಮಾರು ೧೦೩ ವರ್ಷಗಳ ಕಾಲ ನಡೆದಂತಹ ಈ ದೇವಾಲಯದ ಕಾರ್ಯ, ವಿಷ್ಣುವರ್ಧನನ ಮೊಮ್ಮಗನಾದ ಇಮ್ಮಡಿ ವೀರ ಬಲ್ಲಳನ ಆಳ್ವಿಕೆಯಲ್ಲಿ ರೂಪಗೊಂಡಿತು. ದೇವಾಲಯಕ್ಕೆ ಒಂದು ವಿಮಾನ ಗೋಪುರವಿದ್ದು, ಈ ಕಾರಣವಾಗಿ ಇದನ್ನು ಹೊಯ್ಸಳದ ಏಕಕೂಟ ಶೈಲಿಯ ದೇವಸ್ಥಾನವೆಂದು ಪರಿಗಣಿಸಲಾಗಿದೆ. ಈ ದೇವಾಲಯದ ಗೋಪುರವು ೭೦ ಅಡಿಗಳಿಗೂ ಎತ್ತರವಾಗಿದ್ದು ಧಾಳಿಕಾರರ ಹಾವಳಿಗೆ ಸಿಕ್ಕಿ ವಿರೂಪಗೊಂಡಿತ್ತು. ಇದನ್ನು ೧೩೯೭ರಲ್ಲಿ ವಿಜಯನಗರದ ಅರಸರಾದ ಕೃಷ್ಣದೇವರಾಯರ ಮುತ್ತಜ್ಜರಾದ ಹರಿಹರ ಮಹಾರಾಜರ ದಂಡಾಧಿಪತಿ ಸಾಲುವ ಗೊಂಡನೆಂಬವರು ಇದರ ಜೀರ್ಣೋದ್ಧಾರ ಕಾರ್ಯವನ್ನು ಕೈಗೊಂಡರು. ಈ ದೇವಾಲಯಕ್ಕೆ ಇನ್ನೊಂದು ಬಾಗಿಲಿದೆ. ಇದಕ್ಕೆ 'ಆನೆ ಬಾಗಿಲು' ಎಂದು ಕರೆಯುತ್ತಾರೆ. ದೇವಾಲಯದ ಆವರಣದಲ್ಲಿ ಮುಖ್ಯ ದೇವಸ್ಥಾನಗಳು[ಬದಲಾಯಿಸಿ] ಗೋಪುರದ ಮೂಲಕ ಒಳಗೆ ಬಂದ ಕೂಡಲೆ ಪ್ರದಕ್ಷಿಣಾಕಾರದಲ್ಲಿ ದೇವಾಲಯವನ್ನು ಸುತ್ತಿದರೆ ಕಾಣುವ ಮುಖ್ಯ ದೇವಸ್ಥಾನಗಳನ್ನು ಇಲ್ಲಿ ಪಟ್ಟಿ ಮಾಡಲಾಗಿದೆ. ಚೆನ್ನಕೇಶವಸ್ವಾಮಿ ದೇವಸ್ಥಾನ. ಕಪ್ಪೆ ಚೆನ್ನಿಗರಾಯ ದೇವಸ್ಥಾನ ಸೌಮ್ಯನಾಯಕಿ ಅಮ್ಮನವರ ದೇವಸ್ಥಾನ ಕಲ್ಯಾಣ ಮಂಟಪ ವೀರನಾರಾಯಣ ದೇವಸ್ಥಾನ ರಂಗನಾಯಕಿ ಅಮ್ಮನವರ ದೇವಸ್ಥಾನ