ವಿಷಯಕ್ಕೆ ಹೋಗು

ಸದಸ್ಯ:Sharath madure/sandbox

ವಿಕಿಪೀಡಿಯದಿಂದ, ಇದು ಮುಕ್ತ ಹಾಗೂ ಸ್ವತಂತ್ರ ವಿಶ್ವಕೋಶ

ಪರಿಚಯ

   ಇವರು ಹುಟ್ಟಿ ಬೆಳೆದದ್ದು ತಮಿಳುನಾಡಿನ ರಾಮೇಶ್ವರಂನಲ್ಲಿ. ಇವರು ಭೌತಶಾಸ್ತ್ರ ಮತ್ತು ಅಂತರಿಕ್ಷಯಾನ ಇಂಜಿನಿಯರಿಂಗ್‌|ಅಂತರಿಕ್ಷಯಾನ ಇಂಜಿನಿಯರಿಂಗ್ ಅಧ್ಯಯನ ಮಾಡಿದ್ದರು. ಅಧ್ಯಯನ ನಂತರ ನಾಲ್ಕು ದಶಕಗಳ ಕಾಲ ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ (ಡಿ.ಅರ್.ಡಿ.ಓ) ಮತ್ತು ಭಾರತೀಯ ಬಾಹ್ಯಾಕಾಶ ಸಂಶೋಧನೆ ಸಂಸ್ಥೆ|ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ)ದಲ್ಲಿ ವಿಜ್ಞಾನಿ ಮತ್ತು ವಿಜ್ಞಾನ ವ್ಯವಸ್ಥಾಪಕರಾಗಿ ಕಾರ್ಯ ನಿರ್ವಹಿಸಿದರು.
   ಭಾರತದ ನಾಗರಿಕ ಬಾಹ್ಯಾಕಾಶ ಕಾರ್ಯಕ್ರಮ ಮತ್ತು ಕ್ಷಿಪಣಿ ಅಭಿವೃದ್ಧಿ ಪ್ರಯತ್ನಗಳು|ಕ್ಷಿಪಣಿ ಅಭಿವೃದ್ಧಿ ಪ್ರಯತ್ನಗಳಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದರು. ಕ್ಷಿಪಣಿ ಮತ್ತು ಉಡಾವಣಾ ತಂತ್ರಜ್ಞಾನದ ಅಭಿವೃದ್ಧಿ|ಕ್ಷಿಪಣಿ ಮತ್ತು ಉಡಾವಣಾ ತಂತ್ರಜ್ಞಾನದ ಅಭಿವೃದ್ಧಿಯ ಅಧ್ಯಯನದಿಂದ, ಇವರು ಭಾರತದ ಕ್ಷಿಪಣಿ ಮಾನವ ಎಂಬ ಹೆಸರಿನಿಂದ ಚಿರಪರಿಚಿತರಾಗಿದ್ದರು.
   ೧೯೯೮ರಲ್ಲಿ ನೆಡೆದ ಭಾರತದ ಪೋಖ್ರಾನ್-೨ ಪರಮಾಣು ಪರೀಕ್ಷೆಯಲ್ಲಿ ಸಾಂಸ್ಥಿಕವಾಗಿ, ತಾಂತ್ರಿಕವಾಗಿ ಮತ್ತು ರಾಜಕೀಯವಾಗಿ ಒಂದು ಪ್ರಮುಖ ಪಾತ್ರ ವಹಿಸಿದರು. ಇದು ೧೯೭೪ರಲ್ಲಿ ನಡೆದ ಮೂಲ ಪರಮಾಣು ಪರೀಕ್ಷೆಯ ನಂತರ ನೆಡೆದ ಮೊದಲ ಪರಮಾಣು ಪರೀಕ್ಷೆಯಾಗಿದೆ. ಕಲಾಂ ಅವರು ೨೦೦೨ ರಲ್ಲಿ, ಆಡಳಿತ ಪಕ್ಷ ಭಾರತೀಯ ಜನತಾ ಪಕ್ಷ ಮತ್ತು ವಿರೋಧ ಪಕ್ಷ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್, ಎರಡು ಪಕ್ಷಗಳ ಬೆಂಬಲದೊಂದಿಗೆ ರಾಷ್ಟ್ರಪತಿಯಾಗಿ ಆಯ್ಕೆಯಾದರು.
   ಐದು ವರುಷಗಳ ಅವಧಿ ಪೂರೈಸಿದ ನಂತರ, ಅವರು ಶಿಕ್ಷಣ, ಬರವಣಿಗೆ ಮತ್ತು ಸಾರ್ವಜನಿಕ ಸೇವೆಯ ಜೀವನಕ್ಕೆ ಮರಳಿದರು. ಅವರು ಭಾರತದ ಅತ್ಯುನ್ನತ ನಾಗರಿಕ ಗೌರವ ಭಾರತ ರತ್ನ ಸೇರಿದಂತೆ ಅನೇಕ ಪ್ರತಿಷ್ಠಿತ ಪ್ರಶಸ್ತಿಗಳಿಗೆ ಭಾಜನರಾಗಿದ್ದಾರೆ. ಇವರು ಅವಿವಾಹಿತರಾಗಿದ್ದರು.

ಬಾಲ್ಯ ಮತ್ತು ವಿದ್ಯಾಭ್ಯಾಸ

   ಅವುಲ್ ಫಕೀರ್ ಜೈನುಲಬ್ದೀನ್ ಅಬ್ದುಲ್ ಕಲಾಂ ಅವರು  ತಮಿಳುನಾಡು ರಾಜ್ಯದ |ರಾಮೇಶ್ವರಂನಲ್ಲಿ, ೧೫ ಅಕ್ಟೋಬರ್ ೧೯೩೧ ರಂದು ತಮಿಳು ಮುಸ್ಲಿಂ ಕುಟುಂಬದಲ್ಲಿ ಜನಿಸಿದರು. ಅವರ ತಂದೆಯ ಹೆಸರು ಜೈನುಲಬ್ದೀನ್, ಅವರು ದೋಣಿ ಮಾಲೀಕರಾಗಿದ್ದರು. ತಾಯಿ ಅಶಿಮಾ ಗೃಹಿಣಿಯಾಗಿದ್ದರು. ಕಲಾಂ ಅವರ ತಂದೆ, ಈಗ ನಿರ್ನಾಮವಾದ ಧನುಷ್ಕೋಡಿ ಮತ್ತು ರಾಮೇಶ್ವರಂ ನಡುವೆ ತಮ್ಮ ದೋಣಿಯಲ್ಲಿ ಹಿಂದು ಭಕ್ತಾದಿಗಳನ್ನು ಕರೆದುಕೊಂಡು ಹೋಗುತ್ತಿದ್ದರು. *ಕಲಾಂ ಅವರು ಕುಟುಂಬದ ನಾಲ್ಕು ಜನ ಸಹೋದರರು ಮತ್ತು ಒಬ್ಬ ಸಹೋದರಿಯಲ್ಲಿ ಅತ್ಯಂತ ಕಿರಿಯರಾಗಿದ್ದರು. ಅವರು ಬಡ ಹಿನ್ನೆಲೆಯಿಂದ ಬಂದವರು ಮತ್ತು ತನ್ನ ಕುಟುಂಬಕ್ಕೆ ಆರ್ಥಿಕವಾಗಿ ಬೆಂಬಲಿಸುವ ಸಲುವಾಗಿ, ಕಿರಿಯ ವಯಸ್ಸಿನಲ್ಲೇ ಕೆಲಸ ಆರಂಭಿಸಿದರು. ತಮ್ಮ ತಂದೆ ಗೆ ಆರ್ಥಿಕವಾಗಿ ಸಹಾಯ ಮಾಡಲು, ಅವರು ಶಾಲೆಯ ನಂತರ ತಮ್ಮ ಸಂಸೂದ್ದಿನ ಕಲಾಂ ಜೊತೆಗೆ ಪತ್ರಿಕೆಗಳನ್ನು ವಿತರಣೆ ಮಾಡುತ್ತಿದ್ದರು. ಇವರ ಬಾಲ್ಯವು ಬಹಳ ಬಡತನದಿಂದ ಕೂಡಿತ್ತು.
   ಮುಂಜಾನೆ ೪:೦೦ ಘಂಟೆಗೆ ಎದ್ದು ದಿನದ ಪಾಠಗಳನ್ನು ಓದಿ ಶಾಲೆಗೆ ಹೋಗುತ್ತಿದ್ದರು. ಅವರು ಶಾಲೆಯಲ್ಲಿದ್ದಾಗ ಒಬ್ಬ ಸಾಧಾರಣ ವಿಧ್ಯಾರ್ಥಿಯಾಗಿದ್ದರು, ಆದರೆ ಚುರುಕಾದ ಮತ್ತು ಕಠಿಣ ಪರಿಶ್ರಮ ಪಡುವ ವಿಧ್ಯಾರ್ಥಿಯಾಗಿದ್ದರು. ಅವರಿಗೆ ಗಣಿತದಲ್ಲಿ ವಿಶೇಷ ಆಸಕ್ತಿ ಇತ್ತು, ಅವರು ಗಣಿತವನ್ನು ಗಂಟೆಗಳ ಅಧ್ಯಯನ ಮಾಡುತ್ತಿದ್ದರು.
   ಅವರು ರಾಮನಾಥಪುರಂ ಶ್ವಾರ್ಟ್ಜ್ ಮೆಟ್ರಿಕ್ಯುಲೇಷನ್]ಶಾಲೆಯಲ್ಲಿ ಶಿಕ್ಷಣ ಮುಗಿಸಿದ ನಂತರ ತಿರುಚಿರಾಪಳ್ಳಿ|ತಿರುಚಿರಾಪಳ್ಳಿಯಲ್ಲಿ ಕಲಾಂ ಸೇಂಟ್ ಜೋಸೆಫ್ಸ್ ಕಾಲೇಜಿಗೆ ಸೇರಿಕೊಂಡರು. ೧೯೫೪ರಲ್ಲಿ ಮದ್ರಾಸ್‌ ವಿಶ್ವವಿದ್ಯಾನಿಲಯ|ಮದ್ರಾಸ್ ವಿಶ್ವವಿದ್ಯಾನಿಲಯದಿಂದ ಭೌತಶಾಸ್ತ್ರದಲ್ಲಿ ಪದವಿಯನ್ನು ಪಡೆದರು.
   ಕೋರ್ಸ್ ಕೊನೆಯಲ್ಲಿ ಅವರಿಗೆ ವಿಷಯದ ಬಗ್ಗೆ ಉತ್ಸಾಹ ಕಡಿಮೆಯಾಗುತ್ತಾ ಬಂತು ಮತ್ತು ವಿಷಯವನ್ನು ನಾಲ್ಕು ವರುಷಗಳ ಕಾಲ ಅಧ್ಯಯನ ಮಾಡಿದಕ್ಕೆ ಆಮೇಲೆ ಪಶ್ಚಾತಾಪ ಪಟ್ಟರು. ಅವರು ಮದ್ರಾಸ್ ತಾಂತ್ರಿಕ ಮಹಾವಿದ್ಯಾಲಯದ ಲ್ಲಿ ಅಂತರಿಕ್ಷಯಾನ ಇಂಜಿನಿಯರಿಂಗ್‌|ಅಂತರಿಕ್ಷಯಾನ ಇಂಜಿನಿಯರಿಂಗ್ ಓದಲು ಮದ್ರಾಸ್ ಗೆ ತೆರಳಿದರು.
   ಕಲಾಂ ಅವರು ಕೆಲಸ ಮಾಢುತಿದ್ದಾಗ ಹಿರಿಯ ವರ್ಗದ ಯೋಜನೆಯ ಪ್ರಗತಿ ಬಗ್ಗೆ ಡೀನ್ ಅವರು ಅತೃಪ್ತಿ ವ್ಯಕ್ತಪಡಿಸಿ, ಇನ್ನೂ ಮೂರು ದಿನಗಳಲ್ಲಿ ಯೋಜನೆ ಮುಗಿಸದಿದ್ದರೆ, ಅವರ ವಿದ್ಯಾರ್ಥಿವೇತನ ರದ್ದು ಮಾಡುವ ಬೆದೆರಿಕೆ ಹಾಕಿದರು, ಕಲಾಂ ಅವರು ಡೀನ್ ಕೊಟ್ಟ ಗಡುವಿನಲ್ಲಿ ಯೋಜನೆ ಪೂರೈಸಿದರು.
   ಅವರ ಕೆಲಸದಿಂದ ಪ್ರಭಾವಿತರಾದ ಡೀನ್ ಅವರು "ನಾನು ನಿನ್ನ ಮೇಲೆ ಹೆಚ್ಚು ಒತ್ತಡ ಹಾಕಿ ಕಠಿಣವಾದ ಗಡುವಿನಲ್ಲಿ ಕೆಲಸ ಪೂರೈಸಲು ಹೇಳಿದ್ದೆ" ಎಂದು ಹೇಳಿದರು. ಎಂಟು ಸ್ಥಾನಗಳು ಖಾಲಿ ಇದ್ದ ಭಾರತೀಯ ವಾಯುಪಡೆಯಾ ಅರ್ಹತಾ ಸುತ್ತಿನಲ್ಲಿ ಒಂಬತ್ತನೆಯ ಸ್ಥಾನ ಪಡೆದದ್ದರಿಂದ, ಯುದ್ದ ವಿಮಾನ|ಯುದ್ದ ವಿಮಾನದ ಚಾಲಕನಾಗುವ ಅವರ ಕನಸಿನ ಅವಕಾಶ ತಪ್ಪಿಹೋಯಿತು.