ಸದಸ್ಯ:Suhail cr7/sandbox
ಗೋಚರ
ಕೆ.ಎಸ್.ನಿಸರ್ ಅಹಮದ್
ಕೆ.ಎಸ್.ನಿಸಾರ್ ಅಹಮದ್ ಬೆಂಗಳೂರು ಜಿಲ್ಲೆಯ ದೇವನಹಳ್ಳಿಯಲ್ಲಿ ಫೆಬ್ರುವರಿ ೫,೧೯೩೬ರಲ್ಲಿ ಜನಿಸಿದರು. ೧೯೫೯ರಲ್ಲಿ ಭೂವಿಜ್ಞಾನದಲ್ಲಿ ಸ್ನಾತಕೋತ್ತರ ಪದವಿ ಪಡೆದರು. ೧೯೯೪ರ ವರೆಗೆ ವಿವಿಧ ಸರಕಾರಿ ಕಾಲೇಜುಗಳಲ್ಲಿ ಅಧ್ಯಾಪಕ ಹಾಗು ಪ್ರಾಧ್ಯಾಪಕರಾಗಿ ಕೆಲಸ ಮಾಡಿ ನಿವೃತ್ತರಾದರು.ನಿಸಾರ್ ಅಹಮದ್ , ಅವರ ಸಾಹಿತ್ಯಾಸಕ್ತಿ ೧೦ನೇ ವಯಸ್ಸಿನಲ್ಲೇ ಆರಂಭ.ಜಲಪಾತದ ಬಗ್ಗೆ ಬರೆದ ಕವನ ಕೈಬರಹದ ಪತ್ರಿಕೆಯಲ್ಲಿ ಅಚ್ಚಾಗಿತ್ತು. ಅವರು ಇಲ್ಲಿಯವರೆಗೆ ಸುಮಾರು ೫ ದಶಕಗಳಿಂದ ೨೫ ಕೃತಿಗಳನ್ನು ರಚಿಸಿದ್ದಾರೆ.