ಸದಸ್ಯ:Sushmitha B/ನನ್ನ ಪ್ರಯೋಗಪುಟ
ಗೋಚರ
ಹಣದ ಅಪಮೌಲೀಕರಣ
- ಭಾರತ ಸರ್ಕಾರ ಬುಧವಾರ 9 ನವೆಂಬರ್ 2016 ರಿಂದ ಎಲ್ಲಾ ರೂ..500 ಮತ್ತು ರೂ. 1000 ಬ್ಯಾಂಕ್-ನೋಟುಗಳ ಅನಾಣ್ಯೀಕರಣವನ್ನು ಘೋಷಣೆ ಮಾಡಿದ್ದು, ಭಾರತದಲ್ಲಿ ಕಾನೂನು ಬದ್ಧವಾಗಿ ಮಹಾತ್ಮ ಗಾಂಧಿ ಸರಣಿಯ ರೂ.1000 ಬ್ಯಾಂಕ್ ನೋಟುಗಳ ಮೌಲ್ಯವನ್ನು (ನವೆಂಬರ್ 08,2016 ಮದ್ಯರಾತ್ರಿಯಿಂದ) ರದ್ದುಗಳಿಸುತ್ತಿರುವುದಾಗಿ 8 ನವೆಂಬರ್ 2016 ರಲ್ಲಿ ಘೋಶಿಸಲಾಯಿತು.
- ಭಾರತ ಪ್ರಧಾನಿ ನರೇಂದ್ರ ಮೋದಿಯವರು 8:15 ರಾತ್ರಿ ಹೊಸದಿಲ್ಲಿಯಲ್ಲಿ ಈ ಪ್ರಕಟಣೆ ಮಾಡಿದರು. ಅದೇ ದಿನ ಮೋದಿಯವರಿಂದ ರಾಷ್ಟ್ರಕ್ಕೆ ಒಂದು ಅನಿಗದಿತ ನೇರ ಪ್ರಸಾರ ಭಾಷಣದಲ್ಲಿ ಮಹಾತ್ಮ ಗಾಂಧಿ ಸರಣಿಯ ಎಲ್ಲಾ ರೂ. 500 ಮತ್ತು ರೂ. 1000 ಬ್ಯಾಂಕ್ ನೋಟುಗಳ ಪರಿಚಲನೆ ಅಮಾನ್ಯವಾಗಿದೆ ಎಂದು ಘೋಷಿಸಿ ಈ ಪ್ರಕಟಣೆ ಮಾಡಲ್ಪಟ್ಟಿತು. ಹಳೆಯ ಬ್ಯಾಂಕ್‍ನೋಟುಗಳನ್ನು ಮಹಾತ್ಮ ಗಾಂಧಿ ಹೊಸ ಸರಣಿಯ, ಹೊಸ ರೂ.500 ಮತ್ತು ರೂ. 2000 ಬ್ಯಾಂಕ್ ನೋಟುಗಳ ನೀಡಿಕೆಯ ವಿನಿಮಯವನ್ನು ಘೋಷಿಸಿತು
- ಮುಂದಿನ ವರ್ಷವೂ ಅವಕಾಶ: ರೂ.500, ರೂ.1,000 ನೋಟುಗಳನ್ನು ನಿಗದಿತ ಡಿಸೆಂಬರ್ 30ರೊಳಗೆ ಬ್ಯಾಂಕ್ ಖಾತೆಗಳಿಗೆ ಜಮಾ ಮಾಡಲು ಸಾಧ್ಯವಾಗದವರು ಈ ನೋಟುಗಳನ್ನು ಮತ್ತೆಯೂ ಬ್ಯಾಂಕ್‌ಗೆ ಜಮಾ ಮಾಡುವುದಕ್ಕೆ ಅವಕಾಶ ಇದೆ. ಇವುಗಳನ್ನು ಮುಂದಿನ ಮಾರ್ಚ್ 31ರೊಳಗೆ ಭಾರತೀಯ ರಿಸರ್ವ್ ಬ್ಯಾಂಕ್‌ನ ನಿಯೋಜಿತ ಶಾಖೆಗಳಲ್ಲಿ ಜಮಾ ಮಾಡಬಹುದು. ಆದರೆ ಆ ಸಂದರ್ಭದಲ್ಲಿ ವಿಳಂಬಕ್ಕೆ ಕಾರಣವೇನು ಎಂಬ ಪ್ರಮಾಣಪತ್ರ ಸಲ್ಲಿಸಬೇಕು. ಜತೆಗೆ ಅದಕ್ಕೆ ಅಗತ್ಯ ಪುರಾವೆಗಳನ್ನೂ ಒದಗಿಸಬೇಕು.