ಸಾಲುಮರದ ತಿಮ್ಮಕ್ಕ
ಸಾಲುಮರದ ತಿಮ್ಮಕ್ಕ - ಇವರು ಕರ್ನಾಟಕದಲ್ಲಿ ಜನಿಸಿ ನೆಲೆಸಿರುವ ಒಬ್ಬ ಭಾರತೀಯ ಪರಿಸರವಾದಿ. ತಮಗೆ ಮಕ್ಕಳಿಲ್ಲದ ಕಾರಣಕ್ಕೆ ರಸ್ತೆಯ ಬದಿಯಲ್ಲಿ ಆಲದ ಸಸಿಗಳನ್ನು ನೆಟ್ಟು ಅವುಗಳನ್ನೇ ಮಕ್ಕಳಂತೆ ಭಾವಿಸಿ ಬೆಳೆಸಿದಾಕೆ. ಅನಕ್ಷರಸ್ಥೆಯಾಗಿದ್ದರೂ ಪರಿಸರ ಸಂರಕ್ಷಣೆಯಲ್ಲಿ ಮಹತ್ತರ ಕಾರ್ಯ ಮಾಡಿದುದನ್ನು ಹಲವಾರು ರಾಷ್ಟ್ರೀಯ ಮತ್ತು ಅಂತರರಾಷ್ಟ್ರೀಯ ಸಂಸ್ಥೆಗಳು ಗಮನಿಸಿ ಪುರಸ್ಕರಿಸಿವೆ ಅಲ್ಲದೆ ಈಕೆ ಮುಂದಿನ ಪೀಳಿಗೆಯ ಒಳಿತಿಗಾಗಿ ಮರಗಳಿಗೆ ನೀರುಣಿಸಿ ಬೆಳೆಸಿದ್ದಾಳೆ.[೧] ಅವರ ಈ ಕೆಲಸವನ್ನು ಭಾರತದ ರಾಷ್ಟ್ರೀಯ ಪೌರ ಪ್ರಶಸ್ತಿಯಿತ್ತು ಸನ್ಮಾನಿಸಲಾಗಿದೆ. ಅಮೇರಿಕ ಸಂಯುಕ್ತ ಸಂಸ್ಥಾನದ ಲಾಸ್ ಏಂಜಲೀಸ್ ಮತ್ತು ಓಕ್‌ಲ್ಯಾಂಡ್, ಕ್ಯಾಲಿಫೋರ್ನಿಯಗಳಲ್ಲಿ ಸ್ಥಿತವಾಗಿರುವ ಪರಿಸರ ಶಿಕ್ಷಣಕ್ಕಾಗಿ ತಿಮ್ಮಕ್ಕರವರ ಸಂಪನ್ಮೂಲಗಳು ಎಂಬ ಪರಿಸರವಾದಿ ಸಂಘಟನೆಯ ಹೆಸರನ್ನು ತಿಮ್ಮಕ್ಕ ಅವರನ್ನು ಆಧರಿಸಿ ಇಡಲಾಗಿದೆ.[೨]
ಜೀವನ
ತಿಮ್ಮಕ್ಕ ಅವರು ತುಮಕೂರು ಜಿಲ್ಲೆಯ ಗುಬ್ಬಿ ತಾಲ್ಲೂಕಿನಲ್ಲಿ ಜನಿಸಿದರು. ತಂದೆ ಚಿಕ್ಕರಂಗಯ್ಯ; ತಾಯಿ ವಿಜಯಮ್ಮ. ಇವರಿಗೆ ಯಾವುದೇ ಔಪಚಾರಿಕ ಶಿಕ್ಷಣ ಲಭ್ಯವಾಗದೆ ಹತ್ತಿರದ ಒಂದು ಕಲ್ಲು ಗಣಿಯಲ್ಲಿ ದಿನಗೂಲಿ ನೌಕರರಾಗಿ ಕೆಲಸ ಮಾಡಿದರು. ಇವರು ಚಿಕ್ಕಯ್ಯ ಎಂಬ ಒಬ್ಬ ದನಕಾಯುವವರನ್ನು ಮದುವೆಯಾಗಿದ್ದು, ಅವರು ರಾಮನಗರ ಜಿಲ್ಲೆಯ ಮಾಗಡಿ ತಾಲ್ಲೂಕಿನ ಹುಲಿಕಲ್ ಗ್ರಾಮದವರು. ದುರದೃಷ್ಟವಶಾತ್, ಇವರಿಗೆ ಮಕ್ಕಳಿರಲಿಲ್ಲ. ತಿಮ್ಮಕ್ಕ ಅವರು ತಮಗೆ ಮಕ್ಕಳಿರದ ದುಃಖವನ್ನು ಮರೆಯಲು ಆಲದ ಮರಗಳನ್ನು ನೆಡಲಾರಂಭಿಸಿದರು ಎಂದು ಹೇಳಲಾಗಿದೆ.
ಕುದೂರಿನಿಂದ ಹುಲಿಕಲ್ ತನಕವಿರುವ ರಾಜ್ಯ ಹೆದ್ದಾರಿ ೯೪ರಲ್ಲಿ ತಿಮ್ಮಕ್ಕರವರು ಬೆಳಸಿದ ಆಲದ ಮರಗಳು. ತಿಮ್ಮಕ್ಕ ಅವರ ಹಳ್ಳಿಯ ಬಳಿ ಆಲದ ಮರಗಳು ಹೇರಳವಾಗಿದ್ದವು. ತಿಮ್ಮಕ್ಕ ಮತ್ತು ಅವರ ಪತಿ ಈ ಮರಗಳಿಂದ ಸಸಿಗಳನ್ನು ಕಸಿಮಾಡಲು ಆರಂಭಿಸಿದರು. ಮೊದಲ ವರ್ಷದಲ್ಲಿ ಹತ್ತು ಸಸಿಗಳನ್ನು ನೆರೆಯ ಕುದೂರು ಹಳ್ಳಿಯ ಬಳಿ ೪ ಕಿ.ಮೀ. ಉದ್ದಳತೆಯ ದೂರ ನೆಡಲಾಯಿತು. ಹೀಗೆಯೇ ಎರಡನೇ ವರ್ಷ ಹದಿನೈದು ಮತ್ತು ಮೂರನೇ ವರ್ಷ ೨೦ ಸಸಿಗಳನ್ನು ನೆಡಲಾಯಿತು.
ಇವರು ಈ ಸಸಿಗಳನ್ನು ನೆಡಲು ತಮ್ಮ ಅತ್ಯಲ್ಪ ಆದಾಯವನ್ನೇ ಬಳಸಿದರು.[೩] ಈ ಗಂಡ-ಹೆಂಡಿರು ಸಸಿಗಳಿಗೆ ನೀರುಣಿಸಲು ಬಿಂದಿಗೆ ಕೊಳಗಗಳಲ್ಲಿ ನೀರನ್ನು ನಾಲ್ಕು ಕಿ.ಮೀ. ದೂರ ಸಾಗಿಸುತ್ತಿದ್ದರು. ಹಾಗೂ ಸಸಿಗಳನ್ನು ಮೇವಿನ ಜಾನುವಾರುಗಳ ಕಾಟದಿಂದ ತಪ್ಪಿಸಲು ಅವುಗಳ ಸುತ್ತ ಮುಳ್ಳು ಪೊದೆಗಳನ್ನು ಹೊದಿಸಿ ಕಾಪಾಡಿದರು. ಸಸಿಗಳು ಬೆಳೆಯಲು ನೀರಿನ ಅವಶ್ಯಕತೆಯಿರುವುದರಿಂದ, ಅವಗಳನ್ನು ಹೆಚ್ಚಾಗಿ ಮುಂಗಾರು ಮಳೆಯ ಕಾಲದಲ್ಲಿ ನೆಡಲಾಯಿತು.
ಮುಂದಿನ ಮುಂಗಾರಿನಷ್ಟು ಹೊತ್ತಿಗೆ ಈ ಎಲ್ಲ ಸಸಿಗಳು ಚೆನ್ನಾಗಿ ಬೇರು ಬಿಟ್ಟಿದ್ದವು.[೪] ಒಟ್ಟಾರೆ ೨೮೪ ಸಸಿಗಳನ್ನು ನೆಡಲಾಗಿ, ಇಂದಿಗೆ ಅವುಗಳ ಮೌಲ್ಯವು ಸುಮಾರು ೧೫ ಲಕ್ಷ ರೂಪಾಯಿಗಳೆಂದು ಅಂದಾಜು ಮಾಡಲಾಗಿದೆ.[೧] ಈ ಮರಗಳ ನಿರ್ವಹಣೆಯನ್ನು ಈಗ ಕರ್ನಾಟಕ ಸರ್ಕಾರವು ವಹಿಸಿಕೊಂಡಿದೆ.[೩]
ಪ್ರಶಸ್ತಿ, ಗೌರವ
ತಮ್ಮ ಸಾಧನೆಗಾಗಿ ತಿಮ್ಮಕ್ಕ ಅವರಿಗೆ ಈ ಕೆಳಗಿನ ಸನ್ಮಾನಗಳು ಮತ್ತು ಪ್ರಶಸ್ತಿಗಳನ್ನು ಪ್ರದಾನ ಮಾಡಲಾಗಿದೆ.
- ರಾಷ್ಟ್ರೀಯ ಪೌರ ಪ್ರಶಸ್ತಿ - ೧೯೯೫[೪]
- ಇಂದಿರಾ ಪ್ರಿಯದರ್ಶಿನಿ ವೃಕ್ಷಮಿತ್ರ ಪ್ರಶಸ್ತಿ - ೧೯೯೭[೪]
- ವೀರಚಕ್ರ ಪ್ರಶಸ್ತಿ - ೧೯೯೭
- ಮಹಿಳಾ ಮತ್ತು ಶಿಶು ಕಲ್ಯಾಣ ಇಲಾಖೆ, ಕರ್ನಾಟಕ ಸರ್ಕಾರ - ಇವರಿಂದ ಮಾನ್ಯತೆಯ ಪ್ರಮಾಣ ಪತ್ರ
- ಭಾರತೀಯ ವೃಕ್ಷ ವಿಜ್ಞಾನ ಮತ್ತು ತಂತ್ರಜ್ಞಾನ ಸಂಸ್ಥೆ, ಬೆಂಗಳೂರು - ಇವರಿಂದ ಶ್ಲಾಘನೆಯ ಪ್ರಮಾಣ ಪತ್ರ.
- ಕರ್ನಾಟಕ ಕಲ್ಪವಲ್ಲಿ ಪ್ರಶಸ್ತಿ - ೨೦೦೦
- ಗಾಡ್‌ಫ್ರಿ ಫಿಲಿಪ್ಸ್ ಧೀರತೆ ಪ್ರಶಸ್ತಿ - ೨೦೦೬
- ಪಂಪಾಪತಿ ಪರಿಸರ ಪ್ರಶಸ್ತಿ
- ಬಾಬಾಸಾಹೇಬ್ ಅಂಬೇಡ್ಕರ್ ಪ್ರಶಸ್ತಿ
- ವನಮಾತೆ ಪ್ರಶಸ್ತಿ
- ಮಾಗಡಿ ವ್ಯಕ್ತಿ ಪ್ರಶಸ್ತಿ
- ಶ್ರೀಮಾತಾ ಪ್ರಶಸ್ತಿ
- ಎಚ್.ಹೊನ್ನಯ್ಯ ಸಮಾಜ ಸೇವಾ ಪ್ರಶಸ್ತಿ
- ಕರ್ನಾಟಕ ಪರಿಸರ ಪ್ರಶಸ್ತಿ
- ಮಹಿಳಾರತ್ನ ಪ್ರಶಸ್ತಿ
- ನ್ಯಾಷನಲ್ ಸಿಟಿಜನ್ ಪ್ರಶಸ್ತಿ
- ರಾಜ್ಯೋತ್ಸವ ಪ್ರಶಸ್ತಿ
- ಹೂವಿನಹೊಳೆ ಪ್ರತಿಷ್ಠಾನ Archived 2021-05-18 ವೇಬ್ಯಾಕ್ ಮೆಷಿನ್ ನಲ್ಲಿ.ದ ವಿಶ್ವಾತ್ಮ ಪುರಸ್ಕಾರ ೨೦೧೫
- ಆರ್ಟ್ ಆಫ್ ಲಿವಿಂಗ್ ಸಂಸ್ಥೆಯಿಂದ ವಿಶಾಲಾಕ್ಷಿ ಪ್ರಶಸ್ತಿ.
- ೨೦೧೦ರ ಸಾಲಿನ ಪ್ರತಿಷ್ಠಿತ 'ನಾಡೋಜ' ಪ್ರಶಸ್ತಿ ಲಭಿಸಿದೆ.
- ೨೦೧೯ ರ ಗಣರಾಜ್ಯೋತ್ಸವ ಸಂದರ್ಭದಲ್ಲಿ ಅವರಿಗೆ ಪದ್ಮಶ್ರೀ ಪ್ರಶಸ್ತಿಯನ್ನು ಪ್ರಕಟಿಸಲಾಗಿದೆ.
- ೨೦೨೦ರಲ್ಲಿ ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದಿಂದ ಗೌರವ ಡಾಕ್ಟರೇಟ್ [೫]
ಪ್ರಸ್ತುತದ ಚಟುವಟಿಕೆಗಳು
ತಿಮ್ಮಕ್ಕ ಅವರ ಪತಿ ೧೯೯೧ರಲ್ಲಿ ಮೃತಪಟ್ಟರು.[೬] ಇಂದು, ಭಾರತದಲ್ಲಿ ಹಲವಾರು ಕಾಡು ಬೆಳೆಸುವ ಕಾರ್ಯಕ್ರಮಗಳಿಗೆ ತಿಮ್ಮಕ್ಕ ಅವರನ್ನು ಆಹ್ವಾನಿಸಲಾಗುತ್ತದೆ.[೧] ತಮ್ಮ ಹಳ್ಳಿಯ ವಾರ್ಷಿಕ ಜಾತ್ರೆಗಾಗಿ ಮಳೆ ನೀರು ಶೇಖರಿಸಲು ದೊಡ್ಡ ತೊಟ್ಟಿಯ ನಿರ್ಮಾಣವೂ ಸೇರಿದಂತೆ ಇವರು ಇತರೆ ಸಮಾಜ ಸೇವೆಯ ಕೆಲಸಗಳಲ್ಲಿ ತೊಡಗಿದ್ದಾರೆ. ಇವರು ತಮ್ಮ ಹಳ್ಳಿಯಲ್ಲಿ ಒಂದು ಆಸ್ಪತ್ರೆಯನ್ನು ಕಟ್ಟುವ ಆಸೆಯನ್ನಿಟ್ಟುಕೊಂಡಿದ್ದಾರೆ. ಇದಕ್ಕಾಗಿ ಒಂದು ನ್ಯಾಸ ನಿಧಿಯನ್ನು ನಿಯೋಜಿಸಲಾಗಿದೆ.[೧]
Saalumarada Thimmakka | |
---|---|
ಉಲ್ಲೇಖಗಳು
- ↑ ೧.೦ ೧.೧ ೧.೨ ೧.೩ A biography of Thimmakka is provided by B.R.Srikanth. making _a_difference.htm&subsubsec=Bangalore&synopsis=Environment&fodname=19990503&personname=Saalumarada+Thimmakka "Thimmakka's Green Crusade Transforms Heat-And-Dust Hulikal". Online Edition of The Outlook, dated 1999-05-03. © Outlook Publishing (India) Private Limited.
{{cite web}}
: Check|url=
value (help) - ↑ "About Thimmakka". Online Webpage of Thimmakka.org. Thimmakka's Resources for Environmental Education. Archived from the original on 2006-12-31.
- ↑ ೩.೦ ೩.೧ ಉಲ್ಲೇಖ ದೋಷ: Invalid
<ref>
tag; no text was provided for refs namedchild
- ↑ ೪.೦ ೪.೧ ೪.೨ ಉಲ್ಲೇಖ ದೋಷ: Invalid
<ref>
tag; no text was provided for refs namedplant
- ↑ https://kannada.asianetnews.com/state/saalumarada-thimmakka-among-5-selected-by-cuk-honorary-doctorate-rbj-qh0ipa
- ↑ Deepa Ganesh. "Mother of 400". Online webpage of The Hindu, dated 2003-12-01. 2003, The Hindu. Archived from the original on 2007-11-20.
- Pages with reference errors
- Pages using the JsonConfig extension
- CS1 errors: URL
- ವೆಬ್ ಆರ್ಕೈವ್ ಟೆಂಪ್ಲೇಟಿನ ವೇಬ್ಯಾಕ್ ಕೊಂಡಿಗಳು
- Articles using infobox templates with no data rows
- Articles with hCards
- Commons category link is on Wikidata
- ನಾಡೋಜ ಪ್ರಶಸ್ತಿ ಪುರಸ್ಕೃತರು
- ಕರ್ನಾಟಕದ ಪ್ರಸಿದ್ಧ ವ್ಯಕ್ತಿಗಳು
- ಪದ್ಮಶ್ರೀ ಪ್ರಶಸ್ತಿ ಪುರಸ್ಕೃತರು